Home Blog Left SidebarPage 996

ಸುದ್ದಿ ಬಿತ್ತರಿಸುವ ಭರದಲ್ಲಿ ಸುದ್ದಿಯ ಸಾರ ಮರೆಯದಿರಿ: ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು: ಬೆರಳ ತುದಿಯಲ್ಲಿ ಮಾಹಿತಿ ಲಭ್ಯವಾಗಿಸುವ ತಂತ್ರಜ್ಞಾನದ ಯುಗದಲ್ಲಿ ಸುದ್ದಿ ಬಿತ್ತರಿಸುವ ರಭಸದಲ್ಲಿ ಸುದ್ದಿಯ ಸಾರವನ್ನು ಮರೆಯುವಂತಾಗಬಾರದು ಎಂಬ ಎಚ್ಚರವೂ ಇಂದು ಅಗತ್ಯ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.ಅವರು ಬೆಂಗಳೂರಿನಲ್ಲಿ ನಡೆದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ

ಬೇಲೂರಿನಲ್ಲಿ ಅನಾಥ ಶವ ಅಂತ್ಯಸಂಸ್ಕಾರ

ಬೇಲೂರು ಪಟ್ಟಣ ಜೂನಿಯರ್ ಕಾಲೇಜು ಮೈದಾನದ ರಂಗ ಮಂಟಪದ ಜಗಲಿಯ ಮೇಲೆ ಮರಣ ಹೊಂದಿದ್ದ ಅನಾಥ ಶವವನ್ನು ಬೇಲೂರು ಸರಕಾರಿ ಆಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆ ನಡೆಸಿ ಬೇಲೂರು ಪಟ್ಟಣದ ಹಿಂದೂ ರುದ್ರಭೂಮಿಯಲ್ಲಿ, ಹಿಂದೂ ಸಂಪ್ರದಾಯದಂತೆ ತಾಲೂಕು ಆಡಳಿತ ಸಹಕಾರದೊಂದಿಗೆ ಪುರಸಭೆ, ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜತೆ ಸೇರಿ ’ಗೌರವಯುತ’ ಶವಸಂಸ್ಕಾರ ನಡೆಸಲಾಯಿತು. ಈ ಸಂದರ್ಭದಲ್ಲಿ ಡಾ. ರಮೇಶ್, ಸಂಪತ್ ಮಾಸ್ಟರ್, ಸಾಮಾಜಿಕ ಹೋರಾಟಗಾರ ಪತ್ರಕರ್ತ ನೂರ್ ಅಹಮದ್

ವಿಟ್ಲದಲ್ಲಿ ಕಾಲೇಜ್ ಬಸ್ ಮತ್ತು ಬೈಕ್ ನಡುವೆ ಅಪಘಾತ

ವಿಟ್ಲ: ಮಡಿಕಲ್ ಕಾಲೇಜಿನ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬಸ್ಸಿನಲ್ಲಿದ್ದ ಮಹಿಳಾ ಸಿಬ್ಬಂದಿಗಳು ಹಾಗೂ ಬೈಕ್ ಸವಾರ ಗಾಯಗೊಂಡ ಘಟನೆ ಮಂಗಳಪದವು ಅನಂತಾಡಿ ರಸ್ತೆಯ ಸುರುಳಿಮೂಲೆ ಎಂಬಲ್ಲಿ ನಡೆದಿದೆ. ಆಸ್ಪತ್ರೆಯ ಸಿಬ್ಬಂದಿಗಳನ್ನು ಕರೆದುಕೊಂಡು ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದು ಬಸ್ ರಸ್ತೆ ಬದಿಯ ಪ್ರಪಾತದ ಬಳಿ ಸಿಕ್ಕಿಹಾಕಿಕೊಂಡಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಮೂವರು ಸ್ಟಾಪ್ ನರ್ಸ್ ಮತ್ತು ಬೈಕ್ ಸವಾರ

ದ.ಕ. ಜಿಲ್ಲೆಯಲ್ಲಿ ಜುಲೈ 2ರಿಂದ ಮತ್ತಷ್ಟು ಅನ್‍ಲಾಕ್: ಸಂಜೆ 5ರ ವರೆಗೆ ಖರೀದಿ, ಸಂಚಾರಕ್ಕೆ ಅವಕಾಶ: ಜಿಲ್ಲಾಧಿಕಾರಿ

ದ.ಕ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿ ದರ ಇಳಿಕೆಯಾದ ಹಿನ್ನೆಲೆಯಲ್ಲಿ ಲಾಕ್‍ಡೌನ್ ಸಡಿಲಿಕೆಯನ್ನು ಜು.2ರಿಂದ ಬೆಳಗ್ಗೆ 7ರಿಂದ ಸಂಜೆ 5ರವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಮತ್ತು ಸಂಚಾರಕ್ಕೆ ಅನುಮತಿ ನೀಡಿ ರಾಜ್ಯ ಸರಕಾರ ಆದೇಶಿಸಿದೆ. ಸರಕಾರದ ಆದೇಶವನ್ನು ಯಥಾವತ್ತಾಗಿ ಪಾಲಿಸುವುದಾಗಿ ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 2ರಿಂದ ಮತ್ತಷ್ಟು ಅನ್‍ಲಾಕ್ ಜಾರಿಯಾಗಲಿದ್ದು, ಬೆಳಗ್ಗೆ 5ರಿಂದ

ದ.ಕ. ಜಿಲ್ಲೆಯಲ್ಲಿ ಲಾಕ್‌ಡೌನ್ ಸಡಿಲಿಕೆ: ಜುಲೈ2ರಿಂದ ಸಂಜೆ 7 ರ ತನಕ ಅವಕಾಶ: ಸಚಿವ ಕೋಟ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್ ಕಡಿಮೆಯಾದ ಹಿನ್ನೆಲೆಯಲ್ಲಿ ಜುಲೈ 2ರಿಂದ ಬೆಳಗ್ಗೆ 6 ಗಂಟೆಯಿಂದ ಸಂಜೆ 7 ರ ವರಗೆ ಅವಕಾಶಗಳನ್ನು ನೀಡಲಾಗಿದೆ ಎಂದು ವಿ4 ನ್ಯೂಸ್‌ಗೆ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.ಬಸ್, ಮಾರ್ಕೆಟ್, ಸೂಚಿತ ಮಳಿಗೆಗಳಿಗೆ ಅವಕಾಶವನ್ನು ನೀಡಲಾಗಿದೆ. ಶನಿವಾರ ಮತ್ತು ಭಾನುವಾರ ವೀಕೆಂಡ್ ಕರ್ಫ್ಯೂ ಮುಂದುವರಿಯಲಿದೆ. ಜುಲೈ 5ರ ವರೆಗೆ ಮಾರ್ಗಸೂಚಿ ಜಾರಿಯಲ್ಲಿರಲಿದೆ ಎಂದು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ

ಪುತ್ತೂರಿನಲ್ಲಿ ಗಾಂಧಿ ಪ್ರತಿಮೆಗೆ ಅವಮಾನ

ಪುತ್ತೂರು: ಪುತ್ತೂರಿನ ಹೃದಯಭಾಗದಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿಯಿರುವ ಗಾಂಧಿ ಪ್ರತಿಮೆಯನ್ನು ವಿಕೃತಗೊಳಿಸಿರುವ ಘಟನೆ ಜು.೧ರಂದು ಬೆಳಕಿಗೆ ಬಂದಿದೆ. ಕಿಡಿಗೇಡಿಗಳು ಗಾಂಧಿ ಪ್ರತಿಮೆಯ ಕನ್ನಡಕ ತೆಗೆದು ಪ್ರತಿಮೆಯ ತಲೆಗೆ ಇಟ್ಟು ಹಾಗೂ ಪ್ರತಿಮೆಯ ತಲೆಗೆ ಟೀ ಶರ್ಟ್‌ನ್ನು ಇಟ್ಟು ಗಾಂಧೀಜಿಯನ್ನು ಅವಮಾನಗೊಳಿಸಿದ್ದಾರೆ. ಪುತ್ತೂರಿನ ಗಾಂಧಿ ಕಟ್ಟೆ ಸಮಿತಿಯವರು ಪುತ್ತೂರು ನಗರ ಪೊಲೀಸ್ ಠಾಣೆಗೆ ಘಟನೆಯ ಬಗ್ಗೆ ಸಂಬಂಧಿಸಿದಂತೆ ದೂರು ನೀಡಿದ್ದಾರೆ.

ಜನದಟ್ಟಣೆ ನಿಯಂತ್ರಿಸಲು ಗಿಲ್ಬರ್ಟ್ ಡಿಸೋಜಾರವರ ಸರಳ ಸೂತ್ರ….!

ಜನದಟ್ಟಣೆ ನಿಯಂತ್ರಣ ಹಾಗೂ ಕೊರೋನಾ ಹರಡುವಿಕೆಯನ್ನು ತಡೆಯುವಲ್ಲಿ ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು ಅತೀ ಮುಖ್ಯವಾಗಿದ್ದು, ಅದನ್ನು ಸರಳ ಸೂತ್ರ ಅನುಸರಿಸುವ ಮೂಲಕ ಪಾಲಿಸಬಹುದು ಎಂಬ ಸರಳ ಸೂತ್ರವೊಂದನ್ನು ಸಾಮಾಜಿಕ ಕಾರ್ಯಕರ್ತ ಗಿಲ್ಬರ್ಟ್ ಡಿಸೋಜಾ ನೇತೃತ್ವದ ತಂಡ ಪ್ರಸ್ತಾಪಿಸಿದೆ. ಕಳೆದ ವರ್ಷ ಹಂಪನಕಟ್ಟೆ, ಕಂಕನಾಡಿ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿನ ಗುಂಡಿಗಳನ್ನು ತಮ್ಮ ಸ್ವಂತ ಖರ್ಚಿನಲ್ಲಿ ಮುಚ್ಚುವ ಮೂಲಕ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದ್ದ

ಉಡುಪಿಯಲ್ಲಿ ನಾಗರಿಕ ಸಮಿತಿಯಿಂದ ಅನಾಥ ಶವಗಳ ಅಂತ್ಯಸಂಸ್ಕಾರ

ಉಡುಪಿ ; ಉಡುಪಿ ಜಿಲ್ಲಾ ನಾಗರಿಕ ಸಮಿತಿಯವರು, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅನಾಥ ಶವಗಳ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ದಫನ ಭೂಮಿಯಲ್ಲಿ ಕಾನೂನಿನ ಪ್ರಕ್ರಿಯೆಗಳು ನಡೆದ ಬಳಿಕ, ತನಿಖಾ ಸಹಾಯಕ ವಿಶ್ವನಾಥ್ ಶೆಟ್ಟಿ ಅಮಾಸೆಬೈಲು ಅವರ, ಸಮಕ್ಷಮದಲ್ಲಿ ನಡೆಸಿದರು. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವ, ಅಪರಿಚಿತ ಮಹಿಳೆಯ ಶವ, ಮತ್ತು ನಗರದ ಸಾರ್ವಜನಿಕ ಸ್ಥಳದಲ್ಲಿ ಮೃತಪಟ್ಟಿರುವ ಅಪರಿಚಿತ

ಪತ್ರಿಕಾ ದಿನಾಚರಣೆ : ಮ್ಯೋಗ್ಲಿಂಗ್ ಸ್ಮರಣೆ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ಕರ್ನಾಟಕ ತಿಯೋಲಾಜಿಕಲ್ ಕಾಲೇಜಿನ ವತಿಯಿಂದ ಪತ್ರಿಕಾ ದಿನಾಚರಣೆ ಆಚರಿಸಲಾಯಿತು. ಕನ್ನಡ ಪತ್ರಿಕೋದ್ಯಮದ ಮೂಲಪುರುಷ “ಮಂಗಳೂರ ಸಮಾಚಾರ “ಪತ್ರಿಕೆಯ ಸಂಸ್ಥಾಪಕ ಸಂಪಾದಕ ಹೆರ್ಮನ್ ಫ್ರೆಡ್ರಿಕ್ ಮ್ಯೋಗ್ಲಿಂಗ್‌ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಪತ್ರಿಕಾ ದಿನಾಚರಣೆ ಹಾಗೂ ಮ್ಯೋಗ್ಲಿಂಗ್ ಅವರಿಗೆ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್