ಆರ್.ಟಿ.ಐ ಕಾರ್ಯಕರ್ತ ವಿನಾಯಕಾ ಬಾಳಿಗಾ ಹತ್ಯೆ ನಡೆದು 7 ವರುಷ ಸಂದಿದೆ. ಆದರೆ ಬಿಜೆಪಿ ಸರಕಾರದ ಒಬ್ಬನೇ ಒಬ್ಬ ಜನಪ್ರತಿನಿಧಿ ಈವರೆಗೂ ಬಾಳಿಗಾ ಮನೆಗೆ ಭೇಟಿ ನೀಡಲಿಲ್ಲ, ಬಾಳಿಗಾ ಸಹೋದರಿಯರಿಗೆ ಧೈರ್ಯ ತುಂಬಲಿಲ್ಲ, ಸರಕಾರದಿಂದ ಕನಿಷ್ಟ ಪರಿಹಾರವನ್ನೂ ಒದಗಿಸಿಕೊಡಲಿಲ್ಲ. ಇತ್ತೀಚೆಗೆ ಹರ್ಷ ಮತ್ತು ಪ್ರವೀಣ್ ನೆಟ್ಟಾರ್ ಸಾವಿಗೆ ಸ್ಪಂದಿಸಿದ ಸಂಘಪರಿವಾರ, ಬಿಜೆಪಿ
ಬಂಟ್ವಾಳ: ತಾಲೂಕು ಕಚೇರಿಯಲ್ಲಿ ಕಡತಗಳು ಕಾಣೆಯಾಗುತ್ತಿರುವುದು ಏಕೆ ಎಂದು ಲೋಕಾಯುಕ್ತ ಎಸ್ಪಿ ಸೈಮನ್ ಗರಂ ಆದ ಘಟನೆ ಮಂಗಳವಾರ ಬಂಟ್ವಾಳ ತಾಲೂಕಿನಲ್ಲಿ ಕರೆದ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ನಡೆಯಿತು. ಎಸ್ಪಿ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳು ನಡೆಸಿದ ಕಾರ್ಯಕ್ರಮದಲ್ಲಿ ಸುಮಾರು ಹದಿನೈದರಷ್ಟು ಮಂದಿ ತಮ್ಮ ದೂರು, ದುಮ್ಮಾನ ಸಲ್ಲಿಸಿದರು. ಈ ಸಂದರ್ಭ ಕರೋಪಾಡಿ ಗ್ರಾಮದ ವಿಕ್ಟರ್ ವೇಗಸ್ ಎಂಬವರು ದೂರು ನೀಡಿ, ತನ್ನ ಕಡತಗಳ
ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರಿಪೇಟೆಯ ಕುದ್ರೊಟ್ಟುವಿನ ಪಾಲ್ದಡಿ ಎಂಬಲ್ಲಿ ನಿನ್ನೆ ಸಾಯಂಕಾಲ ಆಕಸ್ಮಿಕವಾಗಿ ಕೃಷಿ ತೋಟಕ್ಕೆ ಬೆಂಕಿ ಬಿದ್ದು ಅಪಾರ ಹಾನಿಯಾಗಿದೆ. ಬೈಹುಲ್ಲಿನ ಬೃಹತ್ ರಾಶಿಯೊಂದು ಬೆಂಕಿಯಲ್ಲಿ ಸುಟ್ಟು ಹೋಗಿದ್ದು, ಕೃಷಿ ತೋಟಕ್ಕೆ ಬಳಸುತ್ತಿದ್ದ ಪಂಪ್‍ಶೆಡ್ ಕೂಡ ಸುಟ್ಟು ಕರಕಲಾಗಿದೆ. ಅಲ್ಲದೇ ತೆಂಗು, ಹಲಸು, ಮಾವಿನ ಮರಗಳು ಕೂಡಾ ಬೆಂಕಿಗೆ ಆಹುತಿಯಾಗಿದೆ. ಮೇಯಲು ಕಟ್ಟಿದ್ದ ಹಲವು ಜಾನುವಾರುಗಳನ್ನು ಕೂಡಲೇ ಸ್ಥಳೀಯರು
ಪುತ್ತೂರು. ಕೋಳ್ತಿಗೆ ಗ್ರಾಮದ ಮಣಿಕಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಶಾಲಾ ಕೊಠಡಿಗಳ ಹಾಗೂ ಶಾಲಾ ಮಕ್ಕಳಿಗೆ ಆಧುನಿಕ ಶಿಕ್ಷಣಕ್ಕಾಗಿ ಸ್ಮಾರ್ಟ್ ಕ್ಲಾಸ್ ಹಾಗೂ ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಪುತ್ತೂರಿನ ಜನಪ್ರಿಯ ಶಾಸಕರಾದ ಸಂಜೀವ ಮಠದೂರ್ ಉದ್ಘಾಟಿಸಿದರು. ಮಣಿಕರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ಥಳ ದಾನಗೈದ ಮೇನಾಳ ದಿ. ಮೀಯಕ್ಕೆ ರೈ, (ಪಾಲ್ತಾಡು ಪಟೇಲ್ ದಿವಂಗತ ವೆಂಕಪ್ಪ ರೈ ಯವರ ಧರ್ಮಪತ್ನಿ ) ಇವರ ಭಾವಚಿತ್ರವನ್ನು
ಉಳ್ಳಾಲ: ಕೇರಳದ ಕೊಚ್ಚಿಯಿಂದ ಬೈಕಂಪಾಡಿ ಪೈಂಟ್ ತಯಾರಿಕಾ ಇಂಡಸ್ಟ್ರಿ ಗೆ ರಾಸಾಯನಿಕ ಸಾಗಾಟ ನಡೆಸುತ್ತಿದ್ದ ಟ್ಯಾಂಕರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಬಳಿ ತಡರಾತ್ರಿ ವೇಳೆ ಸಂಭವಿಸಿದೆ. ಹೆದ್ದಾರಿ ಮದ್ಯೆಯೇ ಪಲ್ಟಿಯಾಗಿ ಬಿದ್ದು ಚಾಲಕ ಮಯೂರ್ (40) ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಅವರನ್ನು ಕಂಕನಾಡಿ ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತಡರಾತ್ರಿ 1ರ ವರೆಗೆ ನಡೆದ ತೆರವು ಕಾರ್ಯಾಚರಣೆ !ಲಾರಿ ಹಾಗೂ
ಕಡಬದ ನೂತನ ತಾಲೂಕು ಪಂಚಾಯತ್ ಕಟ್ಟಡ, ಮಿನಿ ವಿಧಾನ ಸೌಧ ಕಟ್ಟಡ, ಕೊಯಿಲ ಪಶು ವೈದ್ಯಕೀಯ ಕಾಲೇಜಿನ ಉದ್ಘಾಟನೆ ಮತ್ತು ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್ ಪ್ಲಾನ್ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ, ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮಗಳು ಮಾ.24ರಂದು ನಡೆಯಲಿದ್ದು ಈ ಬಗ್ಗೆ ಕಡಬ ಅಂಬೇಡ್ಕರ್ ಭವನದಲ್ಲಿ ಪೂರ್ವಭಾವಿಯಾಗಿ ಸಚಿವ ಎಸ್.ಅಂಗಾರ ಅವರು ಅಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಸಚಿವ ಎಸ್.ಅಂಗಾರ ಅವರು, ಕಡಬ ತಾಲೂಕಿಗೆ
ಉಜಿರೆ, ಮಾ.20: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳು ಹೊರತಂದ ‘ಇಲಿಬೋನು’ ಕಿರುಚಿತ್ರವು ಮೈಸೂರಿನ ಅಮೃತ ವಿಶ್ವ ವಿದ್ಯಾಪೀಠದ ದೃಶ್ಯ ಸಂವಹನ ವಿಭಾಗ ಆಯೋಜಿಸಿದ್ದ ‘ಸಿನಿರಮಾ 2023’ ರಾಷ್ಟ್ರಮಟ್ಟದ ಕಿರುಚಿತ್ರೋತ್ಸವದಲ್ಲಿ ತೃತೀಯ ಬಹುಮಾನ ಪಡೆದಿದೆ. ಮೈಸೂರಿನ ಬೋಗಾದಿಯಲ್ಲಿರುವ ಸಂಸ್ಥೆಯ ಆವರಣದಲ್ಲಿ ಮಾ.10, 11 ರಂದು ಕಿರುಚಿತ್ರೋತ್ಸವ ನಡೆದಿದ್ದು, ಸಮಾರೋಪ
ಮಂಗಳೂರು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪುರಸ್ಕೃತರಾದ ಹಾಜಿ ಯು.ಕೆ. ಮೋನು ಕಣಚೂರು ಇವರಿಗೆ ಹುಟ್ಟೂರ ನಾಗರಿಕ ಸನ್ಮಾನ ಮತ್ತು ಸೌಹಾರ್ದ ಇಫ್ತಾರ್ ಕೂಟವು ಇದೇ ಮಾರ್ಚ್ 26 ರವಿವಾರ ಸಂಜೆ ನಾಲ್ಕು ಗಂಟೆಗೆ ದೇರಳಕಟ್ಟೆ ಸಿಟಿ ಗ್ರೌಂಡ್ ನಲ್ಲಿ ನಡೆಯಲಿದೆ. ಸೌಹಾರ್ದ ಇಫ್ತಾರ್ ಕೂಟವನ್ನು ದೇರಳಕಟ್ಟೆ ಬಿಬಿಸಿ ಹಾಲ್ ನಲ್ಲಿ ಆಯೋಜಿಸಲಾಗುತ್ತದೆ. ಈ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಇಂದಿಲ್ಲಿ ಹಿರಿಯ ಸಾಮಾಜಿಕ ಧುರೀಣ ಶ್ರೀ ಪ್ರಸಾದ್ ರೈ ಕಲ್ಲಿಮಾರ್
ಕಳೆದ 9 ದಿನಗಳಿಂದ ರಾಜ್ಯಾದ್ಯಂತ ಪೌರ ಕಾರ್ಮಿಕರು,ಮುನ್ಸಿಪಲ್ ಕಾರ್ಮಿಕರು ತಮ್ಮ ಬೇಡಿಕೆಗಳನ್ನು ಮುಂದಿಟ್ಟು ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದರೂ,ಡಬ್ಬಲ್ ಇಂಜಿನ್ ಸರಕಾರವೆಂದು ಬೀಗುತ್ತಿರುವ BJP ಸರಕಾರವು ಯಾವುದೇ ರೀತಿಯ ಸ್ಪಂದನ ಮಾಡದೆ ತನ್ನ ಕ್ರೌರ್ಯವನ್ನು ಪ್ರದರ್ಶಿಸಿದೆ.ನಗರ ಪಟ್ಟಣ ಪ್ರದೇಶದ ಸುಂದರೀಕರಣ ಹಾಗೂ ಸ್ವಚ್ಛತೆಗಾಗಿ ತನ್ನ ಸರ್ವಸ್ವವನ್ನೂ ಮುಡಿಪಾಗಿಟ್ಟ ಪೌರ ಕಾರ್ಮಿಕರ ಉತ್ತಮ ಬದುಕಿಗಾಗಿ ಎಳ್ಳಷ್ಟೂ ಕಾಳಜಿ ವಹಿಸದ ರಾಜ್ಯ ಸರಕಾರ
ಆರ್.ಟಿ.ಐ ಹಾಗೂ ಬಿಜೆಪಿ ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಕೊಲೆ ನಡೆದು7 ವರ್ಷಗಳಾದರೂ ನಿಧಾನಗತಿಯಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ಪ್ರತಿಭಟಿಸಿ ಮಂಗಳವಾರ ಸಂಜೆ ಮಂಗಳೂರಿನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ದೇಶಪ್ರೇಮಿ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ಮಂಗಳೂರು ಶ್ರೀ ವೆಂಕಟರಮಣ ದೇವಸ್ಥಾನದ ಎದುರಿನಿಂದ ವಿನಾಯಕ ಬಾಳಿಗರ ಮನೆ ತನಕ ಮೆರವಣಿಗೆ ಸಾಗಿತು.ಮೆರವಣಿಗೆಯಲ್ಲಿ ವಿನಾಯಕ ಬಾಳಿಗಾ ಸಹೋದರಿ ರಾಧಾ ಬಾಳಿಗಾ , ಪ್ರೊ.ನರೇಂದ್ರ ನಾಯಕ್ , ಎಂ.ದೇವದಾಸ್