ಸಹ್ಯಾದ್ರಿ ಸೈನ್ಸ್ ಟ್ಯಾಲೆಂಟ್ ಹಂಟ್-2022 : ವೈಜ್ಞಾನಿಕ ಪ್ರದರ್ಶನ ಹಾಗೂ ವಿವರಣೆಗಳ ಮೂಲಕ ಗಮನಸೆಳೆದ ಮಕ್ಕಳು

ಮಂಗಳೂರಿನ ಹೊರವಲಯದ ಅಡ್ಯಾರ್‌ನ ಸಹ್ಯಾದ್ರಿ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ರಾಜ್ಯಮಟ್ಟದ, ಸಹ್ಯಾದ್ರಿ ಸೈನ್ಸ್ ಟ್ಯಾಲೆಂಟ್ ಹಂಟ್-೨೦೨೨ ನಡೆಯಿತು. ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ರಾಜ್ಯ ಹಾಗೂ ಜಿಲ್ಲೆಯ ವಿವಿಧ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ತಮ್ಮ ವೈಜ್ಞಾನಿಕ ಪ್ರದರ್ಶನ ಹಾಗೂ ವಿವರಣೆಗಳ ಮೂಲಕ ಗಮನ ಸೆಳೆದರು.  ಅಡುಗೆ ಅನಿಲ

ಮಂಗಳೂರು: ಮಂಗಳಾ ಆಸ್ಪತ್ರೆಯಲ್ಲಿ ನ್ಯೂರೊ ಉಪಕರಣ ಉದ್ಘಾಟನೆ

ನರರೋಗ ಮತ್ತು ಕಿವಿಮೂಗು ಗಂಟಲು ರೋಗ ಚಿಕಿತ್ಸೆಗಾಗಿ ಅತ್ಯಂತ ಸುಧಾರಿತ ಮೆಡ್ ಟ್ರೋನಿಕ್ ಸ್ಟೆಲ್ತ್ ಎಸ್-೮ ನಿರ್ಮಿತ ನ್ಯೂರೊ ಇಎನ್‌ಟಿ ನ್ಯಾವಿಗೇಶನ್ ಸಿಸ್ಟಂ ಉಪಕರಣವನ್ನು ನಗರದ ಮಂಗಳಾ ಆಸ್ಪತ್ರೆ ಮತ್ತು ಮಂಗಳಾ ಕಿಡ್ನಿ ಫೌಂಡೇಶನ್‌ನಲ್ಲಿ ಉದ್ಘಾಟಿಸಲಾಯಿತು.  ಖ್ಯಾತ ವೈದ್ಯರಾದ ಡಾ. ರಾಜ, ಡಾ. ಶಂಕರ್ ಅತ್ಯಾಧುನಿಕ ಉಪಕರಣವನ್ನು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಂಗಳ ಆಸ್ಪತ್ರೆ ಮತ್ತು ಕಿಡ್ನಿ ಫೌಂಡೇಶನ್‌ನ ನಿರ್ದೇಶಕರ ಡಾ. ಗಣಪತಿ

ಬೆಳ್ತಂಗಡಿಯಲ್ಲಿ ಸ್ಯಾಟಲೈಟ್ ಕರೆ ಹೋಗಿರುವುದು ದೃಢಪಟ್ಟಿಲ್ಲ: ಎಸ್ಪಿ ರಿಷಿಕೇಶ್ ಸೋನಾವಣೆ

ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ಬೆಂದ್ರಾಳ ಅರಣ್ಯ ಪ್ರದೇಶದಿಂದ ಸ್ಯಾಟ್ ಲೈಟ್ ಕರೆ ಹೋಗಿದೆ ಎಂಬ ವಿಚಾರವಾಗಿ ಧರ್ಮಸ್ಥಳ ಪೊಲೀಸರು ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಯಾವುದೇ ನಿರ್ದಿಷ್ಟ ಮಾಹಿತಿ ದೃಢೀಕರಿಸಲ್ಪಟ್ಟಿಲ್ಲ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಭಗವಾನ್ ಸೋನಾವಣೆ ತಿಳಿಸಿದ್ದಾರೆ. ಬೆಂದ್ರಾಳ ಅರಣ್ಯ ಪ್ರದೇಶದಿಂದ ಸ್ಯಾಟ್ ಲೈಟ್ ಕರೆ ಹೋಗಿದೆ, ಭಾರೀ ಸ್ಫೋಟದ ಸದ್ದು ಕೇಳಿಸಿದೆ ಎನ್ನುವ ವದಂತಿ ಹರಡಿದ ಹಿನ್ನೆಲೆಯಲ್ಲಿ

ಬೆಳ್ತಂಗಡಿ : ನೇತ್ರಾವತಿ ಬಚಾವೋ ಆಂದೋಲನ ಸಮಿತಿ ಸಮಾವೇಶ

ನೇತ್ರಾವತಿ ಬಚಾವೋ ಆಂದೋಲನ ಸಮಿತಿ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಸಮಾವೇಶವು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನದಲ್ಲಿ ಶನಿವಾರ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಮಿತಿಯ ಪ್ರಧಾನ ಸಂಚಾಲಕ , ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ರಕ್ಷಿತ್ ಶಿವರಾಂ ರವರು ” ನಮ್ಮ ಜಿಲ್ಲೆಯ ಜೀವನದಿ ನೇತ್ರಾವತಿ ನದಿಯ ಮೇಲೆ ವ್ಯವಸ್ಥಿತವಾಗಿ ಅತ್ಯಾಚಾರ ನಡೆಯುತ್ತಿದ್ದಾಗ ಸುಮ್ಮನಿರುವುದು ಸರಿಯಲ್ಲ , ಇದರ

ಜಿ-20 ಶೃಂಗಸಭೆ ಅಂಗವಾಗಿ ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ಹಣಕಾಸು ಸಚಿವರು, ಕೇಂದ್ರೀಯ ಬ್ಯಾಂಕ್ ಗೌರ್ನರ್ ಗಳ ಸಭೆ – ಸಚಿವೆ ನಿರ್ಮಲಾ ಸೀತಾರಾಮನ್

ಬೆಂಗಳೂರು, ನ, 26; ಭಾರತ ಜಿ-20 ರಾಷ್ಟ್ರಗಳ ಅಧ್ಯಕ್ಷತೆ ವಹಿಸಿಕೊಂಡಿದ್ದು, ಬರುವ ಫ್ರಬ್ರವರಿಯಲ್ಲಿ ಬೆಂಗಳೂರಿನಲ್ಲಿ ಹಣಕಾಸು ಸಚಿವರು ಮತ್ತು ಕೇಂದ್ರೀಯ ಬ್ಯಾಂಕ್ ಗಳ ಗೌರ್ನರ್ ಗಳ ಮಹತ್ವದ ಸಭೆ ನಡೆಯಲಿದ್ದು, ಈ ಅವಕಾಶವನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳುವಂತೆ ಕೇಂದ್ರ ಹಣಕಾಸು ಮತ್ತು ಸಾಂಸ್ಥಿಕ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ನವೋದ್ಯಮಗಳಿಗೆ ಸೂಚಿಸಿದ್ದಾರೆ. ಕೋರ್ ಡಿಸ್ಕವರಿ ಯುವರ್ ಕೋರ್, ವನನಂ ಹಾಗೂ ಟೆನ್ ಥೌಸಂಡ್ ಎಕೋ ಸಿಸ್ಟಮ್ ಪಾರ್ಟರ್

ಧರ್ಮಸ್ಥಳದ ಲಕ್ಷದೀಪೋತ್ಸವದ ಹತ್ತನೇ ವರ್ಷದ ಪಾದಯಾತ್ರೆ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಹತ್ತನೇ ವರ್ಷದ ಪಾದಯಾತ್ರೆಗೆಇಪ್ಪತೈದು ಸಾವಿರಕ್ಕೂಅಧಿಕ ಭಕ್ತರು ಪಾಲ್ಗೊಂಡಿದ್ದರು. ಶ್ರೀ ಜನಾರ್ಧನ ಸ್ವಾಮಿದೇವಾಲಯದಿಂದಆರoಭಗೊoಡ ಪಾದಯಾತ್ರೆಗೆ ದೀಪ ಬೆಳಗಿಸುವುದರ ಮೂಲಕ ದೇವಾಲಯದ ಮುಖ್ಯಸ್ಥ ಶರತ್‌ಕೃಷ್ಣ ಪಡುವೆಟ್ನಾಯ ಚಾಲನೆ ನೀಡಿದರು. ಕೊರೋನಾಕಾರಣದಿಂದ ಸರಳವಾಗಿ ನಡೆದಿದ್ದ ಪಾದಯಾತ್ರೆ ಈ ಬಾರಿ ವಿಜೃಂಭಣೆಯಿoದ ನಡೆದಿದ್ದು ಸಾಗರೋಪಾದಿಯಲ್ಲಿಜನರು ಮಂಜುನಾಥ ಸ್ವಾಮಿಯ ಸನ್ನಿಧಿಗೆ ಭಕ್ತಿ ಭಾವದೊಂದಿಗೆ

ನ.27 ವಿಐಪೀಸ್ ಲಾಸ್ಟ್ ಬೆಂಚ್ ಸಿನಿಮಾದ ಆಂಥಮ್ ಸಾಂಗ್ ಡಿ ಬೀಟ್ಸ್ ಯೂಟ್ಯೂಬ್ ಚಾನಲ್‍ನಲ್ಲಿ ಬಿಡುಗಡೆ

ಎ.ಎಸ್. ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ಆಶೀಕಾ ಸುವರ್ಣ ನಿರ್ಮಾಣದಲ್ಲಿ ಪ್ರಧಾನ್ ಎಂಪಿ ನಿರ್ದೇಶನದಲ್ಲಿ ತಯಾರಾದ ವಿಐಪೀಸ್ ಲಾಸ್ಟ್ ಬೆಂಚ್ ತುಳು-ಕನ್ನಡ ಸಿನಿಮಾ ಇನ್ನೇನು ಕೆಲವೇ ದಿನಗಳಲ್ಲಿ ತೆರೆಕಾಣಲಿದ್ದು, ಸಿನಿಮಾದ ಆಂಥಮ್ ಸಾಂಗ್ ನವೆಂಬರ್ 27ರ ಭಾನುವಾರದಂದು ಬೆಳಿಗ್ಗೆ 11.11 ನಿಮಿಷಕ್ಕೆ ಬಿಡುಗಡೆಗೊಳ್ಳಲಿದೆ. ಡಿ ಬೀಟ್ಸ್ ಯೂಟ್ಯೂಬ್ ಚಾನೆಲ್‍ನಲ್ಲಿ ಸಿನಿಮಾದ ಆಂಥಮ್ ಸಾಂಗ್ ಬಿಡುಗಡೆಗೊಳ್ಳಲಿದೆ. ನಟ ಬೋಜರಾಜ ವಾಮಂಜೂರು ಈ

ನ.28 ರಂದು ಎಸ್.ಡಿ.ಎಂ ಓರಿಯೆಂಟೇಶನ್ ಕಾರ್ಯಕ್ರಮ

ಉಜಿರೆ, ನ. 22: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ನೂತನ ಶೈಕ್ಷಣ ಕ ವರ್ಷದ ಕಾರ್ಯಚಟುವಟಿಕೆಗಳು ನವೆಂಬರ್ 28ರಂದು ಎಸ್‍ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿತವಾದ ಓರಿಯೆಂಟೇಶನ್ ಕಾರ್ಯಕ್ರಮದ ಮೂಲಕ ವಿದ್ಯುಕ್ತವಾಗಿ ಚಾಲನೆ ಕಾಣಲಿವೆ. ಈ ಕಾರ್ಯಕ್ರಮಕ್ಕೆ ಕೇಂದ್ರದ ವಿವಿಧ ಸ್ನಾತಕೋತ್ತರ ವಿಭಾಗಗಳಿಗೆ ನೂತನವಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳು ಸಾಕ್ಷಿಯಾಗಲಿದ್ದಾರೆ.ನೂತನ ವಿದ್ಯಾರ್ಥಿಗಳನ್ನು

ವಾಮದಪದವು : ಮಕ್ಕಳಿಗೆ, ಯುವಕರಿಗೆ ಅಡಿಕೆ ಸಿಪ್ಪೆ ಸುಲಿಯುವ ತರಬೇತಿ

ಕೃಷಿ ಕಸುಬುಗಳ ಕೌಶಲ್ಯವನ್ನು ಕಲಿಯುವ ಮೂಲಕ ಗ್ರಾಮೀಣ ಭಾಗದ ಯುವಜನತೆ ಕೃಷಿ ಕಾರ್ಯದಲ್ಲಿ ತೊಡಗಿಸಿಕೊಂಡು ಸ್ವಾವಲಂಬಿ ಜೀವನ ನಡೆಸುವಂತಾಗಬೇಕು ಎನ್ನುವ ಸದುದ್ಧೇಶದಿಂದ ಅಡಿಕೆ ಸಿಪ್ಪೆ ಸುಲಿಯುವ ವಿನೂತನ ತರಬೇತಿ ಕಾರ್ಯಕ್ರಮವೊಂದು ವಾಮದಪದವು ಸಮೀಪದ ಮಾವಿನಕಟ್ಟೆಯಲ್ಲಿ ನಡೆಯಿತು. ಹಲವು ವರ್ಷದಿಂದ ಪಕ್ಷಿಗಳ ಸಂರಕ್ಷಣೆಗಾಗಿ ಜಾಗೃತಿ ಅಭಿಯಾನವನ್ನು ನಡೆಸಿಕೊಂಡು ಬಂದಿರುವ ಗುಬ್ಬಚ್ಚಿ ಗೂಡು ಬಳಗ ಈ ಹೊಸ ಯೋಜನೆಯೊಂದಕ್ಕೆ ಚಾಲನೆ ನೀಡಿದ್ದು ಕೃಷಿಕರ ಮೆಚ್ಚುಗೆಗೆ

ಬಲ್ಮಠ ಜ್ಯೂಸ್ ಜಂಕ್ಷನ್ ಬಳಿ ಬೆಂಕಿಗೆ ಸುಟ್ಟು ಕರಕಲಾದ ಕಾರು

ಮಂಗಳೂರು: ಕಾರೊಂದು ಹೊತ್ತಿ ಉರಿದ ಘಟನೆ ನಗರದ ಜ್ಯೋತಿ ಬಳಿ ನಡೆದಿದೆ. ಇಂದು ಮಧ್ಯಾಹ್ನ ಜ್ಯೋತಿ ಬಳಿಯ ಜ್ಯೂಸ್ ಜಂಕ್ಷನ್ ಬಳಿ ಈ ಘಟನೆ ನಡೆದಿದ್ದು, ಸ್ಥಳೀಯರು ಬೆಂಕಿ ನಂದಿಸಿದ್ದಾರೆ. ಬೆಂಕಿ ಯಾವ ಕಾರಣಕ್ಕೆ ತಗುಲಿತ್ತು ಎಂದು ಇನ್ನಷ್ಟೇ ತಿಳಿದು ಬರಬೇಕಿದೆ.