ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಇಶಾ ಹಠ ಯೋಗ ಫೌಂಡೇಶನ್ ವತಿಯಿಂದ ಉಪನ್ಯಾಸ ಹಾಗೂ ತರಬೇತಿ
ಉತ್ತಮ ಆರೋಗ್ಯಕ್ಕಾಗಿ ದಿನನಿತ್ಯದ ಜೀವನದಲ್ಲಿ ಯೋಗ ಒಂದು ಆರೋಗ್ಯ ಪೂರ್ಣವಾದ ಅಭ್ಯಾಸ ಮಾರ್ಗವಾಗಿದೆ. ವಿದ್ಯಾರ್ಥಿಗಳಿಗೆ ಉತ್ತಮ ಮನಸ್ಥಿತಿ ಹೊಂದುವ ಉದ್ದೇಶದಿಂದ ಕಾಲೇಜಿನಲ್ಲಿ ಉಪನ್ಯಾಸ, ತರಬೇತಿ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪ್ರವೀಣ್ ಕುಮಾರ್ ಈಶ ಫೌಂಡೇಶನ್ ಶಿಕ್ಷಕರು ಮಂಗಳೂರು, ಸುಬ್ರಹ್ಮಣ್ಯ ಕಾರ್ಯಕರ್ತರು ಇಶಾ ಫೌಂಡೇಶನ್ ಉಡುಪಿ, ಕಾಲೇಜಿನ ಸಂಸ್ಥಾಪಕರಾದ ಸುಬ್ರಹ್ಮಣ್ಯ, ನಿರ್ದೇಶಕಿಯಾದ ಮಮತಾ, ಕಾಲೇಜಿನ ಪ್ರಾಂಶುಪಾಲರಾದ ಡಾ. ಸೀಮಾ ಜಿ ಭಟ್ ಹಾಗೂ ಸಂಸ್ಥೆಯ ಎಲ್ಲಾ ಉಪನ್ಯಾಸಕರು, ಉಪನ್ಯಾಸಕೇತರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಉಪನ್ಯಾಸಕ ಗ್ಲಾನೆಲ್ ಅತಿಥಿಗಳನ್ನು ಪರಿಚಯಿಸಿದರು. ಹೀನಾ ಕೌಸರ್ ಸ್ವಾಗತಿಸಿ, ಉಪನ್ಯಾಸಕಿ ಸೋಫಿಯಾ ವಂದಿಸಿ, ಅನುಪಮ ಪಿ ಭಟ್ ಕಾರ್ಯಕ್ರಮವನ್ನು ನಿರೂಪಿಸಿದರು.