ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ “ಮೇಕಪ್ ಅಂಡ್ ಹೇರ್ ಸ್ಟೈಲ್” ಕಾರ್ಯಾಗಾರ

ಫ್ಯಾಶನ್ ಉದ್ಯಮವು ಜನಪ್ರಿಯತೆಯನ್ನು ಗಳಿಸಿದೆ. ಫ್ಯಾಶನ್ ವಿನ್ಯಾಸದಲ್ಲಿ ವೃತ್ತಿ ಜೀವನದಲ್ಲಿ ಉತ್ತಮವಾದಂತಹ ಆಯ್ಕೆಯಾಗಿರುತ್ತದೆ ಇಂತಹ ಉತ್ತಮ ದೃಷ್ಟಿಕೋನ ಹೊಂದಿರುವ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಇಲ್ಲಿನ ಫ್ಯಾಶನ್ ಡಿಸೈನ್ ವಿಭಾಗದ ವತಿಯಿಂದ” ಮೇಕಪ್ ಅಂಡ್ ಹೇರ್ ಸ್ಟೈಲ್” ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕುಮಾರಿ ಆಶಿಕಾ ಫೌಂಡರ್ ಶಿಯಾ ಮೇಕ್ ಓವರ್ ಬೆಂಗಳೂರು ಇವರು ಆಗಮಿಸಿ ವಿದ್ಯಾರ್ಥಿಗಳಿಗೆ ಸೌಂದರ್ಯ ಪ್ರಜ್ಞೆ ಹಾಗೂ ಮೇಕಪ್ ನ ವಿವಿಧ ಶೈಲಿಯ ಕುರಿತಾಗಿ ಮಾಹಿತಿ ಪ್ರದರ್ಶನ ನೀಡಿದರು.

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ, ನಿರ್ದೇಶಕಿಯಾದ ಶ್ರೀಮತಿ ಮಮತಾ ಹಾಗೂ ಕಾಲೇಜಿನ ಉಪ ಪ್ರಾಂಶುಪಾಲರಾದ ಶ್ರೀಮತಿ ಸುಜಾತ, ಫ್ಯಾಶನ್ ಡಿಸೈನ್ ವಿಭಾಗದ ಮುಖ್ಯಸ್ಥೆ ಶ್ರೀಮತಿ ಮಧುವಿತಾ ಭಟ್ಟಾಚಾರ್ಯ ಉಪನ್ಯಾಸಕಿ ಶ್ರೀಮತಿ ಶ್ರೀ ಲಕ್ಷ್ಮೀ ಹಾಗೂ ಕುಮಾರಿ ಮಾನಸ ಮತ್ತು ಸಂಸ್ಥೆಯ ಎಲ್ಲಾ ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು, ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಪಂಚಮಿ ನಿರೂಪಿಸಿದರೆ, ವಿದ್ಯಾರ್ಥಿನಿ ಗಾಯತ್ರಿ ವಂದಿಸಿದರು.
