HomeFresh Newsಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಓರಿಯಂಟೇಶನ್ ಕಾರ್ಯಾಗಾರ

ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಓರಿಯಂಟೇಶನ್ ಕಾರ್ಯಾಗಾರ

ಬ್ರಹ್ಮಾವರ :ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿ ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಾಗಾರ ನಡೆಯಿತು.

ಇಂದಿನ ಪ್ರಪಂಚದಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಹೆಚ್ಚಿನ ಶ್ರಮವಹಿಸಬೇಕಾಗಿದೆ. ಕಾಲಹರಣ ಮತ್ತು ಕೆಟ್ಟ ಅಭ್ಯಾಸಗಳಿಗೆ ತೊಡಗದೆ ವಿಚಾರಶೀಲವಾಗಿರಬೇಕೆಂದು ಹಾಗೂ ಹೆಚ್ಚು ಸಮಯ ಕಲಿಕೆಗಾಗಿ ಮೀಸಲಾಗಿರಬೇಕೆಂದು ಕಾರ್ಯಕ್ರಮವನ್ನು ಉದ್ಘಾಟಿಸಿ ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ ಮಾತನಾಡಿದರು.ಹಾಗೂ ಕಾಲೇಜಿನ ನೀತಿ ನಿಯಮದ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ವನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರವಿರಾಜ್ ಶೆಟ್ಟಿ ತಿಳಿಸಿದರು.

ಕಾರ್ಯಕ್ರಮದಲ್ಲಿ ನಿರ್ದೇಶಕಿ ಶ್ರೀಮತಿ ಮಮತಾ, ಉಪ ಪ್ರಾಂಶುಪಾಲರಾದ ಶ್ರೀಮತಿ ಸುಜಾತ, ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಎಲ್ಲಾ ಉಪನ್ಯಾಸಕರು, ಉಪನ್ಯಾಸಕೇತರರು ಹಾಗೂ ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕಿ ಅನುಪಮ ಪಿ ಭಟ್ ನಿರೂಪಿಸಿದರೆ, ಉಪನ್ಯಾಸಕಿ ಶ್ರೀಮತಿ ಗೀತಾ ಸ್ವಾಗತಿಸಿ ಹಾಗೂ ಉಪನ್ಯಾಸಕಿ ಶ್ರೀಮತಿ ಶೈಲಾ ವಂದಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments