ಬೈಂದೂರು: ಕೋಟಿ ಕಂಠ ಗಾಯನ

ಬೈಂದೂರು : ಇತಿಹಾಸ ಪ್ರಸಿದ್ಧ ಪ್ರವಾಸಿ ತಾಣ ತ್ರಾಸಿ ಮರವಂತೆ ಬೀಚ್ ನಲ್ಲಿ ಕೋಟಿ ಕಂಠ ಗಾಯನ ಶುಕ್ರವಾರ ಕಾರ್ಯಕ್ರಮ ಶಾಸಕ ಬಿ,ಎಮ್ ಸುಕುಮಾರ್ ಶೆಟ್ಟಿ ಮುಂದಾಳತ್ವದಲ್ಲಿ ಕಾರ್ಯಕ್ರಮ ಜರಗಿತು.
ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡ ನೆಲದ ಸಂಸ್ಕೃತಿ ಮತ್ತು ಭಾಷೆಯನ್ನು ಕೋಟಿ ಕಂಠ ಗಾಯನದ ಮೂಲಕ ರಾಜ್ಯ ಹಾಗೂವಿಶ್ವಾದ್ಯಂತ ಆಚರಿಸಲಾಗುತ್ತಿದೆ ನಾಡು ಜಲ, ನೆಲದ , ಸಂಸ್ಕೃತಿಯನ್ನು ಗೌರವಿಸುವುದು ಪ್ರತಿ ಯೊಬ್ಬರ ಕರ್ತವ್ಯ ಎಂದು ಬೈಂದೂರು ಕ್ಷೇತ್ರದ ಶಾಸಕ ಬಿಎಂ ಸುಕುಮಾರ್ ಶೆಟ್ಟಿ ಹೇಳಿದರು .
ಹೌದು ಈ ಕೋಟಿ ಕಂಠ ಗಾಯನಕ್ಕೆ ಬಿ,ಬಿ ಹೆಗ್ದೆ ವಿದ್ಯಾರ್ಥಿಗಳ ಜೊತೆ ಅಕ್ಷಯ್ ಬಡಾಮನೆ, ಮತ್ತು ವಿಜಯಲಕ್ಷ್ಮಿ ಮೆಟ್ಟಿನಹೊಳೆ, ಅಭಿಷೇಕ್ಷ ಬಡಾಮನೆ ವಿದ್ಯಾರ್ಥಿಗಳೊಂದಿಗೆ ಧ್ವನಿ ಗೂಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ವಿಖ್ಯಾತ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ ಉಪ್ಪುಂದ, ಬೈಂದೂರು ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಅಭಿರಾಜ್ ಸುವರ್ಣ, ಬೈಂದೂರು ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ, ಬೈಂದೂರು ಮಹಿಳಾ ಮೋರ್ಚಾದ ಅಧ್ಯಕ್ಷೆ ಭಾಗಿರಥಿ ಸುರೇಶ್, ಬೈಂದೂರು ತಾಪಂ ಮಾಜಿ ಉಪಾಧ್ಯಕ್ಷೆ ಮಾಲಿನಿ ಕೆ, ಕುಂದಾಪುರ ತಾಪಂ ಮಾಜಿ ಅಧ್ಯಕ್ಷೆ ಶ್ಯಾಮಲಾ ಕುಂದರ್, ಮಹಿಳಾ ಪ್ರಧಾನ ಕಾರ್ಯದರ್ಶಿ ದೀಪಾ ಶೆಟ್ಟಿ,
ಬಿಬಿ ಹೆಗ್ಡೆ ಕಾಲೇಜಿನ ಉಪ ಪ್ರಾಂಶುಪಾಲ ಚೇತನ್ ಶೆಟ್ಟಿ ಕವ್ರಾಡಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
