ಬೈಂದೂರು: ಹೊಸಂಗಡಿ, ನಾಡ ಹಾಗೂ ಹೇರೂರು ಗ್ರಾಮದಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡಕೆ ಜಾಗ ಮಂಜೂರು ಶೀಘ್ರದಲ್ಲೇ ಕಟ್ಟಡ ನಿರ್ಮಾಣಕ್ಕೆ ಚಾಲನೆ : ಶಾಸಕ ಗಂಟಿಹೊಳೆ

ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆರೋಗ್ಯ ಕ್ಷೇತ್ರವನ್ನು ಬಲ ವರ್ಧನೆ ಮಾಡುವ ನಿಟ್ಟಿನಲ್ಲಿ 2023-24 ನೇ ಸಾಲಿನಲ್ಲಿ 15 ನೇ ಹಣಕಾಸು ಆಯೋಗದಡಿ ರಾಜ್ಯದ ಆರೋಗ್ಯ ವಲಯದ ಕಾರ್ಯಕ್ರಮ ಗಳಿಗೆ ಕೇಂದ್ರ ಸರಕಾರ ಅನುಮೋದನೆ ನೀಡಿದ ಕಾರ್ಯಕ್ರಮ ಇದಾಗಿದೆ. ಕ್ಷೇತ್ರದ 3 ಕಡೆ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡಕ್ಕೆ ಸರಕಾರಿ ಜಾಗ ಮಂಜೂರಾತಿ ಮಾಡಲಾಗಿದ್ದು ಶೀಘ್ರದಲ್ಲೇ ಹೊಸದಾಗಿ 1.95 ಕೋಟಿ ವೆಚ್ಚದಲ್ಲಿ 3 ಕಡೆ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆಯವರು ತಿಳಿದ್ದಾರೆ.

ಕುಂದಾಪುರ ತಾಲೂಕು ಹೊಸಂಗಡಿ ಗ್ರಾಮದ ಸರ್ವೇ ನಂಬ್ರ 49/1 ರಲ್ಲಿ 0.29 ಎಕ್ರೆ ವಿಸ್ತೀರ್ಣ, ಬೈಂದೂರು ತಾಲೂಕು ನಾಡ ಗ್ರಾಮದ ಸರ್ವೇ ನಂಬ್ರ 185 ರಲ್ಲಿ 0.05 ಎಕ್ರೆ ಹಾಗೂ ಹೇರೂರು ಗ್ರಾಮದ ಸರ್ವೇ ನಂಬ್ರ 83 ರಲ್ಲಿ 0.10 ಎಕ್ರೆ ಜಾಗವನ್ನು ಆರೋಗ್ಯ ಮತ್ತು ಕ್ಷೇಮ ಕೇಂದ್ರದ( ಹೆಲ್ತ್ & ವೆಲ್ ನೆಸ್ ಸೆಂಟರ್) ಉದ್ದೇಶಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಸರಿಗೆ ಮಂಜೂರು ಮಾಡಿಸಲಾಗಿದೆ ಎಂದು ಶಾಸಕರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

add - LED Zone

Related Posts

Leave a Reply

Your email address will not be published.