ಬೈಂದೂರು: ಗುಡ್ಡಮ್ಮಾಡಿ ಶ್ರೀ ಸುಬ್ರಹ್ಮಣ್ಯ ದೇವರ ಷಷ್ಠಿ ಮಹೋತ್ಸವ ಸಂಪನ್ನ

ಬೈಂದೂರು: ಸೌಪರ್ಣಿಕ ನದಿ ತಟದಲ್ಲಿರುವ ರಮ್ಯ ರಮಣೀಯ ತಾಣವೇ ಶ್ರೀ ಕ್ಷೇತ್ರ ಗುಡ್ಡಮ್ಮಾಡಿ.ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪ್ರಸಿದ್ಧ ಶ್ರೀ ಕ್ಷೇತ್ರ ಗುಡ್ಡಮ್ಮಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಷಷ್ಠಿ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಭಾನುವಾರ ನಡೆಯಿತು.

ಷಷ್ಠಿ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ಸಂತಾನ ಕಾರಕನಾದ ಶ್ರೀ ಸುಬ್ರಹ್ಮಣ್ಯ ದೇವರಿಗೆ ಹೂವಿನ ಅಲಂಕಾರ ಪೂಜೆ,ಕಲಶಾಭಿಷೇಕ,ಸಂಹಿತಾ ಪಾರಾಯಣ,ಹಣ್ಣುಕಾಯಿ,ಮಂಗಳಾರತಿ,ಹರಿವಾಣ ನೈವೇದ್ಯ ಸೇವೆ ಹಾಗೂ ಮಡೆ ಪ್ರದಕ್ಷಿಣೆ,ಶ್ರೀ ನಾಗ ದರ್ಶನ,ಸಾರ್ವಜನಿಕ ಪ್ರಸಾದ ವಿತರಣೆ ಕಾರ್ಯಕ್ರಮ ಜರುಗಿತು,ಕುಂದಾಪುರ ಮತ್ತು ಬೈಂದೂರು ತಾಲೂಕಿನ ಹಾಗೂ ಘಟ್ಟ ಪ್ರದೇಶದಿಂದ ಸಾವಿರಾರು ಭಕ್ತರು ಶ್ರೀಕ್ಷೇತ್ರಕ್ಕೆ ಆಗಮಿಸಿ ಶ್ರೀ ಸುಬ್ರಬಹ್ಮಣ್ಯ ದೇವರ ದರ್ಶನ ಪಡೆದರು,ಸರತಿ ಸಾಲಿನಲ್ಲಿ ನಿಂತು ದೇವರ ಅನ್ನ ಪ್ರಸಾದ ಸ್ವೀಕರಿಸಿದರು.

ಉಡುಪಿ ಜಿಲ್ಲೆ ಕುಂದಾಪುರ ಭಾಗದ ಜನತೆಗೆ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಷ್ಟೇ ಪುಣ್ಯಕ್ಷೇತ್ರ ಎನಿಸಿಕೊಂಡಿರುವ ಶ್ರೀ ಕ್ಷೇತ್ರ ಗುಡ್ಡಮ್ಮಾಡಿಯಲ್ಲಿ ವರ್ಷಂಪ್ರತಿ ಕಿರು ಷಷ್ಠಿ ನಡೆಯುವುದು ಪ್ರಸಿದ್ಧ. ಈ ದಿನದಂದು ಸಾವಿರಾರು ಭಕ್ತರು ಬೈಂದೂರು, ಶಿರೂರು ಹಾಗೂ ಕುಂದಾಪುರ ಮತ್ತು ರಾಜ್ಯದ ವಿವಿಧ ಭಾಗಗಳಿಂದ ಬಂದು ಭಾಗವಹಿಸಿ ಶ್ರೀ ದೇವರ ದರ್ಶನ ಪಡೆಯುತ್ತಾರೆ.

ಪ್ರತೀ ವರ್ಷಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬೆಳ್ಳಿ ಹರಕೆ ಸೇವೆಯನ್ನು ಸಲ್ಲಿಸಲು ಮುಂಜಾನೆಯಿಂದಲೇ ಭಕ್ತರು ಆಗಮಿಸಿದ್ದರಲ್ಲದೇ ಇತರೇ ವರ್ಷಕ್ಕೆ ಹೋಲಿಸಿದರೇ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.

ಗುಡ್ಡಮ್ಮಾಡಿ ಸುಬ್ರಹ್ಮಣ್ಯ ಸನ್ನಿದಿಯಲ್ಲಿ ಷಷ್ಟಿ ಸಂದರ್ಭದಲ್ಲಿ ಉರುಳು ಸೇವೆ ಪದ್ಧತಿ ಚಾಲನೆಯಲ್ಲಿತ್ತು. ಸಮೀಪದ ಸೌಪರ್ಣಿಕ ನದಿಯಲ್ಲಿ ಸ್ನಾನ ಮಾಡಿ ಬಂದ ಸಹಸ್ರಾರು ಭಕ್ತರು ಶ್ರೀ ದೇವರ ಪೌಳಿಯಲ್ಲಿ ಉರುಳುಸೇವೆ ಮಾಡುವ ಮೂಲಕ ಹರಕೆ ಸಮರ್ಪಿಸಿದರು.

ಸಾವಿರಾರು ಭಕ್ತರು ಸರದಿ ಸಾಲಲ್ಲಿ ಬಂದು ಸಂಜೆಯ ಸಾನಿಧ್ಯದಲ್ಲಿ ನೀಡುವ ಪ್ರಸಾದವನ್ನು ಸ್ವೀಕರಿಸಿ ಹೋಗುವುದೇ ಇಲ್ಲಿನ ವಿಶೇಷ..

ಈ ಸಂದರ್ಭದಲ್ಲಿ ದೇವಸ್ಥಾನದ ಆ ನುವಂಶಿಕ ಮೂಕ್ತೇಸರರಾದ ಬಿ.ಅರುಣ್ ಕುಮಾರ ಶೆಟ್ಟಿ ಅಭಿನಂದನ ಶೆಟ್ಟಿ ಅರ್ಚಕರು, ಗ್ರಾಮಸ್ಥರು, ಭಕ್ತಾಧಿಗಳು ಉಪಸ್ಥಿತರಿದ್ದರು.

Add - Clair veda ayur clinic

Related Posts

Leave a Reply

Your email address will not be published.