ಬೈಂದೂರಿನ ವಿಹಿಂಪ ಮತ್ತು ಭಜರಂಗದಳದಿಂದ ಅಖಂಡ ಭಾರತ ಸಂಕಲ್ಪ ದಿನ ಪ್ರಯುಕ್ತ ಪಂಜಿನ ಮೆರವಣಿಗೆ

ವಿಶ್ವಹಿಂದೂ ಪರಿಷತ್ ಭಜರಂಗದಳ ಬೈಂದೂರು ಪ್ರಖಂಡ ಇದರ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನಾಚರಣೆಯ ಪ್ರಯುಕ್ತ ಪಂಜಿನ ಮೆರವಣಿಗೆ ಬೈಂದೂರಿನಲ್ಲಿ ನಡೆಯಿತು.

ಯೋಜನಾನಗರದ ನಾಗಬನ ಸಮಿತಿ ಅಧ್ಯಕ್ಷರಾದ ಕೃಷ್ಣದೇವಾಡಿಗ ಬೈಂದೂರು ಪಂಜಿನ ಮೆರವಣಿಗೆಗೆ ವಿದ್ಯುಕ್ತ ಚಾಲನೆ ನೀಡಿದರು.
ಸಭಾಕಾರ್ಯಕ್ರಮದಲ್ಲಿ ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಜಯಾನಂದ ಹೋಬಳಿದಾರ್ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿಕೊಂಡಿದ್ದರು.

ಈ ಸಂದರ್ಭದಲ್ಲಿ ದಿಕ್ಸುಚಿ ಭಾಷಣಕಾರರಾಗಿ ಆದರ್ಶ ಕೆಲ,ವಿಶ್ವಹಿಂದೂ ಪರಿಷತ್ ಜಿಲ್ಲಾ ಉಪಾಧ್ಯಕ್ಷ ಶ್ರೀಧರ್ ಬಿಜೂರು, ವಿಶ್ವಹಿಂದೂಪರಿಷತ್ ಬೈಂದೂರು ಪ್ರಖಂಡ ಅಧ್ಯಕ್ಷರಾದ ಜಗದೀಶ್ ಕೊಲ್ಲೂರು, ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ, ನವೀನ್ ಚಂದ್ರ ಉಪ್ಪುಂದ ಸೇರಿದಂತೆ ಅಸಂಖ್ಯಾತ ಕಾರ್ಯಕರ್ತರು ಉಪಸ್ಥಿತರಿದ್ದರು.
