ಬೈಂದೂರು : 71ನೇ ಅಖಿಲ ಭಾರತ ಸಹಕಾರ ಸಪ್ತಾಹ
ಕರ್ನಾಟಕ ಸಹಕಾರಿ ಮಹಾಮಂಡಲ ಬೆಂಗಳೂರು, ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ ಕಂಬದಕೊಣೆ ರೈತರ ಸೇವಾ ಸಹಕಾರಿ ಸಂಘದ ಸಂಯುಕ್ತ ಆಶ್ರಯದಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಹಾಗೂ ಪ್ರತಿಭಾ ಪುರಸ್ಕಾರ, ಸನ್ಮಾನ, ಗೌರವಧನ ವಿತರಣಾ ಸಮಾರಂಭ ನಾಗೂರು ನಲ್ಲಿ ನೆಡೆಯಿತು.
ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ
ಇಂದು ಬ್ಯಾಂಕಿಂಗ್ ಕ್ಷೇತ್ರ ದೊಡ್ಡಮಟ್ಟದಲ್ಲಿ ವಿಸ್ತರಣೆಗೊಂಡರೂ ಅವುಗಳಿಗೆ ಸವಾಲೆಸೆಯುವ ರೀತಿಯಲ್ಲಿ ಸಹಕಾರಿ ಕ್ಷೇತ್ರ ಬೆಳೆದಿದೆ. ಸಹಕಾರಿ ರಂಗ ಗ್ರಾಮೀಣ ಜನರ ಒಡನಾಡಿಯಾಗಿ ಕೆಲಸ ಮಾಡುತ್ತಿದ್ದು, ಇದು ಸಾಲಶೂಲಕ್ಕೆ ಬದಲಾಗಿ ಉದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಹೊಸತನದೊಂದಿಗೆ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಜನರಿಗೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಹೇಳಿದರು.
ಸಂಘದ ಉಪಾಧ್ಯಕ್ಷ ಈಶ್ವರ ಹಕ್ಲತೋಡ್ ಅಧ್ಯಕ್ಷತೆ ವಹಿಸಿದ್ದರು.
ಕೋಟ ಶ್ರೀ ವಿವೇಕ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕ ನರೇಂದ್ರಕುಮಾರ್ ಕೋಟ ದಿಕ್ಕೂಚಿ ಭಾಷಣಗೈದರು.
ಸಂಘದ ವತಿಯಿಂದ ಮಹಾಮಂಡಲದ ಶಿಕ್ಷಣ ನಿಧಿಗೆ 9,02,172 ರೂ. ಚೆಕ್ ಹಸ್ತಾಂತರಿಸಲಾಯಿತು. ನಿವೃತ್ತರಾದ ಶಿಕ್ಷಕ ಗಿರೀಶ ಶ್ಯಾನುಭಾಗ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಿಬ್ಬಂದಿ ಗೋವಿಂದ ಗಾಣಿಗ ಅವರನ್ನು ಸನ್ಮಾನಿಸಲಾಯಿತು SSLC ಪರೀಕ್ಷೆಯಲ್ಲಿ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಂಘದ ವ್ಯಾಪ್ತಿಯ ಸರಕಾರಿ ಶಾಲೆಗಳಿಗೆ ಗೌರವಧನ ವಿತರಿಸಲಾಯಿತು.
ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಪ್ರತಿಭಾ ಪುರಸ್ಕಾರ ವಿತರಿಸಿ ಸಾಧಕರನ್ನು ಸನ್ಮಾನಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಸಂಘದ ಸಿಇಒ ವಿಷ್ಣು ಆರ್. ಪೈ ಸ್ವಾಗತಿಸಿ, ಸಂಘದ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದರು.
ಈ ಸಂದರ್ಭದಲ್ಲಿದ.ಕ ಜಿಲ್ಲಾ ಕೇಂದ್ರ ಸಹಕಾರಿ ಶೆಟ್ಟ ಬ್ಯಾಂಕ್ ನಿರ್ದೇಶಕರಾದ ಎಸ್.ರಾಜ ಪೂಜಾರಿ, ಎಂ.ಮಹೇಶ್ ಹೆಗ್ಡೆ ಹೆಗ್ಡೆ, ಕಿರಿಮಂಜೇಶ್ವರ ಗ್ರಾಪಂ ಅಧ್ಯಕ್ಷ ಶೇಖರ ಖಾರ್ವಿ, ಸಹಕಾರಿ ಸಂಘಗಳ ಉಪನಿಬಂಧಕಿ ಲಾವಣ್ಯ ಕೆ.ಆರ್, ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕಿ ಲಲಿತಾಕ್ಷಿ, ವ್ಯವಸ್ಥಾಪಕ ವಿಶ್ವನಾಥ, ಕಂಬದಕೋಣೆ ಸಂಘದ ನಿರ್ದೇಶಕರಾದ ಬಿ.ಎಸ್.ಸುರೇಶ ಶೆಟ್ಟಿ,
ಬಿ. ರಘುರಾಮ ಶೆಟ್ಟಿ,ಮೋಹನ್ ಪೂಜಾರಿ, ಗುರುರಾಜ್ ಹೆಬ್ಬಾರ್, ವೀರೇಂದ್ರ ಶೆಟ್ಟಿ, ಮಂಜು ದೇವಾಡಿಗ, ನಾಗರಾಜ ಖಾರ್ವಿ, ಭರತ್ ದೇವಾಡಿಗ, ಹೂವ ನಾಯ್ಕ, ದಿನಿತಾ ಶೆಟ್ಟಿ, ಜಲಜಾಕ್ಷಿ ಪೂಜಾರಿ ಮತ್ತು ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವ್ಯವಸ್ಥಾಪಕ ಚಂದ್ರಯ್ಯ ಶೆಟ್ಟಿ ವಂದಿಸಿದರು. ಸುಬ್ರಹ್ಮಣ್ಯ ಪಡುಕೋಣೆ ನಿರೂಪಿಸಿದರು.