ಬೈಂದೂರು: ಆ.25 ರಂದು “ಕೆಸರಲ್ಲೊಂದು ದಿನ -ಗಮ್ಮತ್ತ್

ಬೈಂದೂರು: ಕುಂದಾಪ್ರ ಕನ್ನಡ ಭಾಷೆಯ ಬಗೆಗಿನ ಅಭಿಮಾನದಿಂದ . ಈ ಭಾರಿ ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಸಂಸ್ಥೆಯ ಮೂಲಕ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಗ್ರಾಮೀಣ ಹಾಗೂ ಕೆಸರುಗದ್ದೆ ಕ್ರೀಡಾಕೂಟ “ಕೆಸರಲ್ಲೊಂದು ದಿನ -ಗಮ್ಮತ್ತ ಕಾರ್ಯಕ್ರಮ ಅಗಸ್ಟ್ 25ರ ಭಾನುವಾರ ಬೆಳಿಗ್ಗೆ 9 ರಿಂದ ಬೈಂದೂರು ಯಡ್ತರೆಯ ನೆಲ್ಯಾಡಿ ಬೈಲ್ ಹಾಗೂ ಅದರ ಪಕ್ಕದ ಜೆ.ಎನ್.ಆರ್ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಸಂಸ್ಥೆಯ ಮುಂದಾಳು, ಉದ್ಯಮಿ ಶರತ್ ಶೆಟ್ಟಿ ಉಪ್ಪುಂದ ಹೇಳಿದರು.

ಅವರು ಬೈಂದೂರು ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಯನ್ನು ಉದ್ದೇಶಿಸಿ ಮಾತನಾಡಿ, ಸಾರ್ವಜನಿಕರಿಗೆ ವಿವಿಧ
ಸ್ಪರ್ಧೆಗಳು: ಪುರುಷರಿಗೆ ಹಗ್ಗಜಗ್ಗಾಟ ಸ್ಪರ್ಧೆ, ವಾಲಿಬಾಲ್‌ ಸ್ಪರ್ಧೆ, ಕೆಸರ್‌ಗದ್ದೆ ಓಟದ ಸ್ಪರ್ಧೆ, ಅಡಿಕೆ ಹಾಳಿಯಲ್ಲಿ ಎಳೆಯುವುದು ಸ್ಪರ್ಧೆಗಳು ಇರಲಿದ್ದು, ಮಹಿಳೆಯರಿಗೆ ಹಗ್ಗಜಗ್ಗಾಟ ಸ್ಪರ್ಧೆ, ಥ್ರೋ ಬಾಲ್ ಸ್ಪರ್ಧೆ, ಕೆಸರ್‌ಗದ್ದೆ ಓಟ, ಮಡ್ಲ ನೇಯುವ ಸ್ಪರ್ಧೆ, ಅಡಿಕೆ ಹಾಳಿಯಲ್ಲಿ ಎಳೆಯುವ ಸ್ಪರ್ಧೆ ಆಯೋಜಿಸಲಾಗಿದೆ. ಮಕ್ಕಳಿಗೆ ಕೆಸರ್‌ಗದ್ದೆ ಓಟ ಸ್ಪರ್ಧೆ, ಬೆನ್‌ಚೆಂಡ್ ಆಟದ ಸ್ಪರ್ಧೆ, ಲಿಂಬೆ ಚಮಚ ಓಟ ಸ್ಪರ್ಧೆ, ಗೂಟಕ್ಕೆ ಸುತ್ತಿ ಓಡುವುದು ಸ್ಪರ್ಧೆ, ಕುಂದಾಪ್ರ ಕನ್ನಡ ಭಾಷಣ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿದ್ದು ಬೈಂದೂರು ವಿಧಾನಸಭಾಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕರಿಗೆ ಮುಕ್ತ ಪ್ರವೇಶ ಇರಲಿದೆ. ಸಾಂಪ್ರದಾಯಿಕ ಶೈಲಿಯಲ್ಲಿ ಕಾರ್ಯಕ್ರಮದ ಉದ್ಘಾಟನೆ ಇರಲಿದ್ದು, ಇದಕ್ಕೂ ಮೊದಲು ಯಡ್ತರೆ ಬೈಪಾಸಿನಿಂದ ಮೆರವಣಿಗೆ, 5 ಜೊತೆ ಕಂಬಳ ಕೋಣಗಳ ಆಕರ್ಷಕ ಓಟ, ಸಾಂಕೇತಿಕ ಕಬ್ಬಡಿ ಆಟ, ರವಿ ಬಸ್ರೂರು ನಟ ಪ್ರಮೋದ್‌ ಶೆಟ್ಟಿ ಸೇರಿದಂತೆ ಸಿನಿ ತಾರೆಯರು, ವಿವಿಧ ಕ್ಷೇತ್ರಗಳ ಗಣ್ಯರ ಉಪಸ್ಥಿತಿ, ಮನು ಹಂದಾಡಿ, ಚೇತನ್ ನೈಲಾಡಿ ಅವರ ಹಾಸ್ಯ ನಿರೂಪಗೆ,ಕುಂದಾಪ್ರ ಕನ್ನಡ ಶೈಲಿಯ ಊಟ, ವಿವಿಧ ಖಾದ್ಯಗಳು, ಸೆಲ್ಪಿ ಪಾಯಿಂಟ್, ಪಕ್ಕದ ಹೊಳೆಯಲ್ಲಿ ಬೋಟಿಂಗ್ ಸೇರಿದಂತೆ ಹಲವು ವಿಶೇಷತೆಗಳನ್ನು ಒಳಗೊಂಡಿದ್ದು ಹಬ್ಬದ ವಾತಾವರಣ ನಿರ್ಮಾಣವಾಗಲಿದೆ ಎಂದರು

ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೈಂದೂರು ತಾಲೂಕು, ಪ್ರಥ್ವಿ ಕ್ರೀಡಾ ಮತು ಯುವಕ ಸಂಘ ರಿ. ಬೈಂದೂರು, ಫ್ರೆಂಡ್ಸ್ ಕ್ಲಬ್ ಉಪ್ಪುಂದ, ಬೈಂದೂರು ಸರಕಾರಿ ಪ್ರಥಮ ದರ್ಜೆಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕವು ಸಹಯೋಗ ನೀಡಿದ್ದು, ಅದ್ದೂರಿ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದೆ.ಬೆಳಿಗ್ಗೆ 9 ಗಂಟೆಗೆ ಮೆರವಣಿಗೆ ಹಾಗೂ ಸಾಂಪ್ರದಾಯಿಕ ಶೈಲಿಯಲ್ಲಿ ಚಾಲನೆ ನೀಡಿದ ಬಳಿಕ ನೇರವಾಗಿ ಸ್ಪರ್ಧೆಗಳು ಆರಂಭಗೊಳ್ಳಲಿದೆ.ಮಕ್ಕಳ ಸ್ಪರ್ಧೆಗಳಿಗೆ ಬೆಳಿಗ್ಗೆ 9ರ ತನಕ ಸ್ಥಳದಲ್ಲಿಯೇ ನೊಂದಣಿ ಇರಲಿದೆ.ಬೆಳಿಗ್ಗೆಯಿಂದಲೇ ಎಲ್ಲಾ ಸ್ಪರ್ಧೆಗಳು ಆರಂಭವಾಗುವುದರಿಂದ ಸ್ಪರ್ಧಿಗಳು ಆರಂಭದಲ್ಲಿಯೇ ಹಾಜರಿರುವಂತೆ ಕೋರಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಕುಂದಾಪುರ ಕನ್ನಡ ಪ್ರತಿಷ್ಠಾನದ ಮುಂದಾಳಗಳಾದ ಸುಬ್ರಹ್ಮಣ್ಯ ಜಿ, ಸುನಿಲ್ ಬೈಂದೂರು, ದಿವಾಕರ್ ಶೆಟ್ಟಿ, ಪ್ರಸಾದ್ ಪ್ರಭು, ಪ್ರಿಯದರ್ಶಿನಿ ಬೆಸ್ಕೂರು, ರಾಮ ಬಿಜೂರು, ಅರುಣ್ ಕುಮಾರ್ ಶಿರೂರು, ಕಿಶೋರ್ ಪೂಜಾರಿ ಸಸಿಹಿತ್ಲು, ಪ್ರದೀಪ್ ಶೆಟ್ಟಿ ಕಾರಿಕಟ್ಟೆ ಮತ್ತಿತರರು ಉಪಸ್ಥಿತರಿದ್ದರು.

add - Anchan ayurvedic

Related Posts

Leave a Reply

Your email address will not be published.