ಬೈಂದೂರು: ರಾಷ್ಟ್ರೀಯ ದಾಖಲೆ ಗೈದ ಮಣಿಕಂಠ ಹೋಬಳಿದಾರ್ ಅವರಿಗೆ ಹುಟ್ಟೂರ ಸನ್ಮಾನ ಕಾರ್ಯಕ್ರಮ
ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಅಥ್ಲೆಟಿಕ್ ಫೆಡರೇಷನ್ ಆಫ್ ಇಂಡಿಯಾ ನೇತೃತ್ವದಲ್ಲಿ 62ನೇ ರಾಷ್ಟ್ರೀಯ ಮುಕ್ತ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‍ನಲ್ಲಿ ಸರ್ವಿಸಸ್ ತಂಡವನ್ನು ಪ್ರತಿನಿಧಿಸಿ 100ಮೀ ಓಟದಲ್ಲಿ ಭಾರತದ ಅತ್ಯಂತ ವೇಗದ ಓಟಗಾರರಾಗಿ ದಾಖಲೆ ಮಾಡಿ ಚಿನ್ನದ ಪದಕ ಪಡೆದ ಮಣಿಕಂಠ ಹೋಬಳಿದಾರ್ ಇವರಿಗೆ ಹುಟ್ಟೂರ ಸನ್ಮಾನ ಕಾರ್ಯಕ್ರಮ ಬೈಂದೂರು ಶಾರದಾ ವೇದಿಕೆಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೌರಿ ದೇವಾಡಿಗ, ಸುರೇಶ್ ಬಟ್ವಾಡಿ, ತಾ.ಪಂ ಮಾಜಿ ಸದಸ್ಯೆ ಮಾಲಿನಿ ಕೆ, ಪ್ರಥಮ ದರ್ಜೆ ಗುತ್ತಿಗೆದಾರ ನಾಕಟ್ಟೆ ಜಗನ್ನಾಥ ಶೆಟ್ಟಿ, ಬೈಂದೂರು ರಾಮಕ್ಷತ್ರೀಯ ಸಂಘದ ಅಧ್ಯಕ್ಷ ರಾಮಕೃಷ್ಣ ಸಿ, ಬೈಂದೂರು ಲಾವಣ್ಯ ರಿ ಅಧ್ಯಕ್ಷ ಬಿ.ನರಸಿಂಹ ನಾಯಕ್, ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಪ್ರಸಾದ್ ಪ್ರಭು ಶಿರೂರು, ಜೇಸಿಐ ಬೈಂದೂರು ಸಿಟಿ ಅಧ್ಯಕ್ಷ ಕೆ ನರೇಂದ್ರ ಶೇಟ್, ಬೈಂದೂರು ಅಂಬೇಡ್ಕರ್ ಸಂಘದ ಅಧ್ಯಕ್ಷ ರಂಗ ಎಸ್ ಯಡ್ತರೆ, ಶಂಕರ್ ಹೋಬಳಿದಾರ್, ಜೇಸಿಐ ಉಪ್ಪುಂದ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆ, ಬೈಂದೂರು ರಾಮಕ್ಷತ್ರೀಯ ಯುವಕ ಸಂಘದ ಅಧ್ಯಕ್ಷ ಸುರೇಂದ್ರ ಬಾಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕೊಲ್ಲೂರು ದೇಳವದ ವ್ಯವಸ್ಥಾಪನಾ ಸಮಿತಿ ಸದಸ್ಯ ಜಯಾನಂದ ಹೋಬಳಿದಾರ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕ ಗಣಪತಿ ಹೋಬಳಿದಾರ್ ಕಾರ್ಯಕ್ರಮ ನಿರೂಪಿಸಿದರು. ಸುರಭಿ ರಿ ಬೈಂದೂರು ಅಧ್ಯಕ್ಷ ನಾಗರಾಜ್ ಪಿ ಯಡ್ತರೆ ವಂದಿಸಿದರು.