ಬೈಂದೂರಿನ ವತ್ತಿನಣಿ ಅರಣ್ಯ ಪ್ರದೇಶದಲ್ಲಿ ಪ್ಲಾಂಟೇಶನ್‍ಗೆ ಬೆಂಕಿ
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ವತ್ತಿನಣಿ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿರುವ ಅರಣ್ಯ ಇಲಾಖೆ ಗೆ ಸಂಬಂಧಿಸಿದ ಪ್ಲಾಂಟೇಶನಿಗೆ ಬೆಂಕಿ ತಗುಲಿದ್ದು, ಧಗ ಧಗನೆ ಬೆಂಕಿ ಹೊತ್ತಿ ಉರಿಯಲಾರಂಭಿಸಿತು. ತಕ್ಷಣ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದು, ಅಗ್ನಿಶಾಮಕ ದಳದವರು ಮತ್ತು ಸ್ಥಳೀಯರು ಬೆಂಕಿ ನಂದಿಸುವಲ್ಲಿ ಹರಸಾಹಸ ಪಟ್ಟರು.