ಆಮದು ಬೆಲೆ ಏರಿಕೆಯಿಂದ ವಿದೇಶಿ ಅಡಿಕೆಗೆ ಹೊಡೆತ : ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ

ಅಡಿಕೆಯ ಉತ್ಪಾದನಾ ವೆಚ್ಚಕ್ಕೆ ಅನುಗುಣವಾಗಿ ಕೇಂದ್ರ ಸರಕಾರ ಅಡಿಕೆಯ ಕನಿಷ್ಠ ಆಮದು ಬೆಲೆಯನ್ನು ಈಗ ಇರುವ ಧಾರಣೆ ಕೆ.ಜಿ.ಗೆ 251 ರೂ.ಗಳಿಂದ 351 ರೂಪಾಯಿಗಳಿಗೆ ಪರಿಷ್ಕರಿಸಿ ಆದೇಶ ಹೊರಡಿಸಿದ್ದು, ಇದರಿಂದಾಗಿ ವಿದೇಶಿ ಅಡಿಕೆಯ ಆಮದಿನ ಮೇಲೆ ದೊಡ್ಡ ಹೊಡೆತ ಬೀಳಲಿದೆ ಎಂದು ಕ್ಯಾಂಪೆÇ್ಕ ಅಧ್ಯಕ್ಷ ಎ.ಕಿಶೋರ್ ಕುಮಾರ್ ಕೊಡ್ಗಿ ಅಭಿಪ್ರಾಯಪಟ್ಟಿದ್ದಾರೆ
ಕ್ಯಾಂಪೆÇ್ಕ ಸಂಸ್ಥೆಯ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದೇಶದಿಂದ ಅಡಿಕೆ ಆಮದಿಗೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಕೆಲವು ತಿಂಗಳುಗಳಿಂದ ಮಾರುಕಟ್ಟೆಯಲ್ಲಿ ಧಾರಣೆ ಏರಿಳಿತದ ಮೂಲಕ ಅಡಿಕೆಯ ದರ ಅನಿಶ್ಚಿತತೆಯಿಂದ ಕೂಡಿತ್ತು. ಇದರಿಂದ ರೈತರಲ್ಲಿ ಹತಾಶೆಯ ಭಾವನೆಯನ್ನು ಮೂಡಿಸಿತ್ತು ಎಂದರು.
ಕೇಂದ್ರ ಸರಕಾರದ ಕ್ರಮದಿಂದಾಗಿ ಕಳಪೆ ಗುಣಮಟ್ಟದ ವಿದೇಶಿ ಅಡಿಕೆಯ ಆಮದಿನ ಮೇಲೆ ಭಾರಿ ಹೊಡೆತ ಬೀಳಲಿದ್ದು, ಉತ್ತಮ ಗುಣಮಟ್ಟದ ದೇಶೀ ಅಡಿಕೆಗೆ ಬೇಡಿಕೆ ಬರಲಿದೆ ಮತ್ತು ದರದಲ್ಲಿ ಸ್ಥಿರತೆ ಕಾಣಲಿದ್ದು, ಅಡಿಕೆ ಮಾರುಕಟ್ಟೆ ಚೇತರಿಕೆಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಕ್ಯಾಂಪೆÇ್ಕ ಉಪಾಧ್ಯಕ್ಷ ಶಂಕರನಾರಾಯಣ ಭಟ್ ಕೆ, ವ್ಯವಸ್ಥಾಪಕ ನಿರ್ದೇಶಕ ಎಚ್.ಎಂ.ಕೃಷ್ಣ ಕುಮಾರ್, ನಿರ್ದೇಶಕರಾದ ಕೃಷ್ಣ ಪ್ರಸಾದ್ ಮಡ್ತಿಲ, ರಾಘವೇಂದ್ರ ಭಟ್ ಕೆದಿಲ, ಜಯಪ್ರಕಾಶ್ ಟಿ.ಕೆ, ಜನರಲ್ ಮ್ಯಾನೇಜರ್ ರೇಷ್ಮಾ ಮಲ್ಯ, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಗೋವಿಂದ ಭಟ್ ಉಪಸ್ಥಿತರಿದ್ದರು.
