ಕಾರು-ಬೈಕ್ ಡಿಕ್ಕಿ : ಗಾಯಗೊಂಡಿದ್ದ ವಿದ್ಯಾಥಿ೯ ಸಾವು

ಮೂಡುಬಿದಿರೆ: ಗುರುವಾರ ರಾತ್ರಿ ಬನ್ನಡ್ಕದಲ್ಲಿ ನಡೆದ ಕಾರು-ಬೈಕ್ ಢಿಕ್ಕಿಯಲ್ಲಿ ತೀವೃವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸಹ ಸವಾರ ರೋಟರಿ ಪಿಯುಸಿ ಕಾಲೇಜಿನ ವಿದ್ಯಾಥಿ೯ ಚಿಕಿತ್ಸೆಗೆ ಫಲಕಾರಿಯಾಗದೆ ಮೃತಪಟ್ಟ ದುಘ೯ಟನೆ ನಡೆದಿದೆ.

ಮರ‍್ಪಾಡಿ ಗ್ರಾಮದ ಕೋಟೆಬಾಗಿಲಿನ ಸದಾನಂದ ಸುರ‍್ಣ- ರಾಜಶ್ರೀ ದಂಪತಿಯ ಪುತ್ರ ಶ್ರವಣ್ ಮೃತ ದರ‍್ದೈವಿ.

ಕಾಮಗಾರಿ ಹಂತದಲ್ಲಿರುವ ಕರ‍್ಕಳ–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕದಲ್ಲಿ ಘಟನೆ ಸಂಭವಿಸಿತ್ತು. ಖ್ಯಾತ ಕಂಟೆಂಟ್ ಕ್ರಿಯೇಟರ್ ಸೂರಜ್ ಅಂಚನ್ ಜತೆ ಸಹ ಸವಾರರಾಗಿದ್ದರು.

ಬನ್ನಡ್ಕ ದೈವಸ್ಥಾನದ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ಕರ‍್ಕಳ ಕಡೆಯಿಂದ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಇಬ್ಬರೂ ಗಂಭೀರವಾಗಿ ಗಾಯಗೊಂಡು ಮೊದಲು ಮೂಡುಬಿದಿರೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಸ್ಥಿತಿ ಗಂಭೀರವಾಗಿದ್ದ ಕಾರಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರ‍್ಗಾಯಿಸಲಾಯಿತು. ಆದರೆ ಶ್ರವಣ್ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

Related Posts

Leave a Reply

Your email address will not be published.