ಕಾರ್ಕಳದ ಅನಂತಶಯನ ರಸ್ತೆಯ ಧರ್ಮಶ್ರೀ ಜೆರಾಕ್ಸ್ ಬಳಿ ಇರುವ ಕಟ್ಟಡದ ಹತ್ತಿರ ಬೈದೆರ್ಲೆ ನೈಸರ್ಗಿಕ ಗಿಡಮೂಲಿಕಾ ಕೇಂದ್ರದ ಶುಭಾರಂಭವು ಜ.24ರಂದು ನಡೆಯಲಿದೆ. ಈ ಕಾರ್ಯಕ್ರಮಕ್ಕೆ ತಾವೆಲ್ಲರೂ ಆಗಮಿಸಿ, ಶುಭಕೋರುವಂತೆ ಶ್ರೀಮತಿ ಮತ್ತು ಶ್ರೀ ಸುಧಾಕರ್ ಎಂ. ಪೂಜಾರಿ ಹಾಗೂ ಮಕ್ಕಳು ರೆಂಜಾಳ ಕಾರ್ಕಳ ಅವರು ವಿನಂತಿಸಿಕೊಂಡಿದ್ದಾರೆ.
ಉಡುಪಿಯ ಪ್ರತಿಷ್ಠಿತ ನೇತ್ರಜ್ಯೋತಿ ಪ್ಯಾರಮೆಡಿಕಲ್ ಹಾಗೂ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜು ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಮತ್ತು ಯುವ ದಿನಾಚರಣೆಯ ಪ್ರಯುಕ್ತ ಅಂತರ್ ಕಾಲೇಜು ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉಧ್ಘಾಟಿಸಿದ ಭಾರತೀಯ ರೆಡ್ ಕ್ರಾಸ್ ಉಡುಪಿ ಘಟಕದ ಸಭಾಪತಿ ಶ್ರೀ ಬಸ್ರೂರು ರಾಜೀವ್ ಶೆಟ್ಟಿಯವರು ಮಾತನಾಡಿ ಸ್ವಾಮಿ ವಿವೇಕಾನಂದರ
ಬೈಂದೂರು ವಿಧಾನ ಸಭಾ ಕ್ಷೇತ್ರದ ಬೈಂದೂರು ತಾಲೂಕಿನ ನಾಡ ಗ್ರಾಮದಲ್ಲಿ ಈಗಾಗಲೇ ಗ್ರಾಮ ಪಂಚಾಯತ್ ಮೂಲಕ ಕೇಂದ್ರ ಸರಕಾರದ ನರೇಗಾ ಯೋಜನೆ ಹಾಗೂ ಇತರೆ ಅನುದಾನದಡಿ ಗೋಮಾಳ ಅಭಿವೃದ್ಧಿ ಕಾಮಗಾರಿ ನಡೆದಿದ್ದು, ಇದೀಗ ಕಂಬದಕೋಣೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕ್ಷೇತ್ರದ 2 ನೇ ಗೋಮಾಳ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಗೋಮಾಳ ಜಾಗದ ಸುತ್ತ ಕಂದಕ ನಿರ್ಮಾಣ ಮಾಡಲಾಗುತ್ತಿದ್ದು, ಒಟ್ಟು 13 ಮಂದಿ ನರೇಗಾ ಕೂಲಿ ಕಾರ್ಮಿಕರು ಕಾಮಗಾರಿಯಲ್ಲಿ ತೊಡಗಿಕೊಂಡಿದ್ದಾರೆ.
ಬೈಂದೂರು: ಇತ್ತೀಚಿಗೆ ಮೀನುಗಾರಿಕೆ ವೇಳೆ ನಾಪತ್ತೆಯಾಗಿರುವ ನಾರಾಯಣ ಮೋಗವೀರ ಅವರ ಕುಟುಂಬಕ್ಕೆ ಮೀನುಗಾರ ಸಂಕಷ್ಟ ಪರಿಹಾರ ನಿಧಿಯಡಿ ತಕ್ಷಣವೇ ಪರಿಹಾರ ಒದಗಿಸಬೇಕು ಹಾಗೂ ಅಧಿಕಾರಿಗಳು ಯಜಮಾನನನ್ನು ಕಳೆದುಕೊಂಡ ಆ ಕುಟುಂಬದ ನೋವನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಶಾಸಕ ಗುರುರಾಜ್ ಗಂಟಿಹೊಳೆ ಆಕ್ರೋಶ ಹೊರ ಹಾಕಿದ್ದಾರೆ.ಜಿಲ್ಲಾ ಪಂಚಾಯತ್ ನಲ್ಲಿ ನಡೆದ ಕ್ಷೇತ್ರದ ಮೀನುಗಾರಿಕೆ ಹಾಗೂ ಬಂದರು ಯೋಜನೆಗಳ ಬಗೆಗಿನ ಚರ್ಚೆ ವೇಳೆ ಶಾಸಕ ಗುರುರಾಜ್ ಗಂಟಿಹೊಳೆ ಆಕ್ರೋಶ
ಉದ್ಯಾವರ ಗುಡ್ಡೆ ಅಂಗಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ನಸುಕಿನ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಈಚರ್ ಲಾರಿ ಹೊತ್ತಿ ಉರಿದಿದ್ದು ಬೈಕ್ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಬೈಕ್ ಸವಾರ ಕೊರಂಗ್ರಪಾಡಿ ನಿವಾಸಿ ಅವಿನಾಶ್ ಆಚಾರ್ಯ( 19 ) ಎಂದು ಗುರುತಿಸಲಾಗಿದೆ. ಗುಜರಾತ್ ಕಡೆಯಿಂದ ಕೇರಳ ಕಡೆಗೆ ಬರುತ್ತಿದ್ದ ಈಚರ್ ಲಾರಿ ಎದುರಿನಲ್ಲಿ ಹೋಗುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ
ಬೈಂದೂರು: ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿಯಲ್ಲಿ ಹಾಲಿ ಇರುವ ಮೀನುಗಾರಿಕೆ ಬಂದರುಗಳು ಆಧುನಿಕರಣ ಹಾಗೂ ಇನ್ನಿತರ ನಿರ್ವಹಣೆ ಕಾಮಗಾರಿಗಳಿಗೆ ರಾಜ್ಯ ಸರ್ಕಾರದಿಂದ ಆಡಳಿತ ಅನುಮೋದನೆ ನೀಡಲಾಗಿದೆ ಎಂದು ಶಾಸಕ ಗುರುರಾಜ್ ಗಂಟಿಹೊಳೆ ತಿಳಿಸಿದರು.ಕುಂದಾಪುರ ತಾಲೂಕಿನ ಗಂಗೊಳ್ಳಿ ಮೀನುಗಾರಿಕಾ ಬಂದರಿನ 22.18 ಕೋಟಿ ರೂ. ಅಂದಾಜು ಮೊತ್ತದ ಮೂಲ ಸೌಕರ್ಯ ಕಾಮಗಾರಿಗಳಿಗೆ ಕೇಂದ್ರದ ಅನುಮೋದನೆ ಆಗಿದ್ದು ರಾಜ್ಯ ಸರ್ಕಾರದ ಆಡಳಿತ ಅನೋಮೋದನೆ ಬಾಕಿ
ಬೈಂದೂರು: ಪತ್ರಿಕೆ ಗಳಲ್ಲಿ ವರದಿ ಆದಂತೆ ಗೋಶಾಲೆ ಗಳಿಗೆ ಅಗತ್ಯ ಪ್ರಮಾಣದಲ್ಲಿ ಗೋವುಗಳು ಬರುತ್ತಿಲ್ಲ ಹಾಗಾಗಿ ಹೊಸ ಗೋಶಾಲೆ ಗಳನ್ನು ನಿರ್ಮಿಸುವ ಬದಲು ಈಗಿರುವ ಗೋಶಾಲೆ ಗಳನ್ನು ಬಲವರ್ಧನೆ ಮಾಡುತ್ತೇವೆ ಎಂಬ ಸಚಿವರು ನೀಡಿರುವ ಹೇಳಿಕೆ ಹಾಗೂ ಸ್ಪಷ್ಟೀಕರಣಕ್ಕೆ ಶಾಸಕ ಗುರುರಾಜ್ ಗಂಟೊಹೊಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈಗಾಗಲೇ ಇರುವ ಗೋಶಾಲೆ ಗಳಿಗೆ ಗೋವುಗಳು ಬರುತ್ತಿಲ್ಲ ಎಂದು ಎಲ್ಲಾ ಜಿಲ್ಲೆಗಳಿಗೂ ಅನ್ವಯವಾಗುವಂತೆ ಹೇಳಿಕೆ ಸರಿಯಲ್ಲ ಉಡುಪಿ ಜಿಲ್ಲೆಯಲ್ಲಿ
ಬೈಂದೂರು: ಸೌಪರ್ಣಿಕ ನದಿ ತಟದಲ್ಲಿರುವ ರಮ್ಯ ರಮಣೀಯ ತಾಣವೇ ಶ್ರೀ ಕ್ಷೇತ್ರ ಗುಡ್ಡಮ್ಮಾಡಿ.ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪ್ರಸಿದ್ಧ ಶ್ರೀ ಕ್ಷೇತ್ರ ಗುಡ್ಡಮ್ಮಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಷಷ್ಠಿ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಭಾನುವಾರ ನಡೆಯಿತು. ಷಷ್ಠಿ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ಸಂತಾನ ಕಾರಕನಾದ ಶ್ರೀ ಸುಬ್ರಹ್ಮಣ್ಯ ದೇವರಿಗೆ ಹೂವಿನ ಅಲಂಕಾರ
ಉಡುಪಿ: ಜೀವನದಲ್ಲಿ ಜಿಗುಪ್ಸೆಗೊಂಡ ಆಟೋ ಚಾಲಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಟಪಾಡಿ ಪಳ್ಳಿಗುಡ್ಡೆಯಲ್ಲಿ ನಡೆದಿದೆ.ಪಳ್ಳಿಗುಡ್ಡೆ ನಿವಾಸಿ ದೀಪಕ್ ಆರ್ (34) ಆತ್ಮಹತ್ಯೆಗೆ ಶರಣಾದ ಆಟೋ ಚಾಲಕ. ಇವರು ಜ.1ರಂದು ರಾತ್ರಿ ಮನೆಯ ಕೊಠಡಿಯ ಕಬ್ಬಿಣದ ಹುಕ್ಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಉಡುಪಿಯ ಕಲ್ಸಂಕ ಆಟೋ ನಿಲ್ದಾಣದಲ್ಲಿ ಚಾಲಕರಾಗಿ ದುಡಿಯುತ್ತಿದ್ದ ದೀಪಕ್
ಬೈಂದೂರು: ಬೇಲುಗ ವಾಟರ್ ಸ್ಪೋರ್ಟ್ಸ್ ಜಸ್ಕಿ ರೈಡರ್ ಶನಿವಾರ ಸಂಜೆಯ ವೇಳೆ ಪ್ರವಾಸಿಗರನ್ನು ಸಮುದ್ರದಲ್ಲಿ ರೈಡಿಗೆ ಕರೆದುಕೊಂಡು ಹೋದಾಗ ಅಬ್ಬರದ ಸಮುದ್ರದ ಅಲೆಗೆ ಜಸ್ಕಿ ಪಲ್ಟಿ ಪಡೆದ ಪರಿಣಾಮ ಜಸ್ಕಿ ರೈಡರ್ ರವಿ ಎಂಬ ವ್ಯಕ್ತಿ ನೀರಿನಲ್ಲಿ ಮುಳುಗಿ ನಾಪತ್ತೆಯಾದ ಪ್ರಕರಣ ನಡೆದಿದೆ. ಸಮುದ್ರದಲ್ಲಿ ಜಸ್ಕಿ ರೈಡಿಗೆ ಹೋದ ಪ್ರವಾಸಿಗ ಪ್ರಾಣಅಪಾಯದಿಂದ ಪಾರಾಗಿ ಬಂದಿದ್ದಾರೆ, ಸ್ಥಳಕ್ಕೆ ಗಂಗೊಳ್ಳಿ ಕರಾವಳಿ ಕಾವಲು ಪಡೆ ಪೊಲೀಸ್, ಗಂಗೊಳ್ಳಿ ಪೊಲೀಸ್ ಠಾಣಾಧಿಕಾರಿ ಹರೀಶ್