ಉಳ್ಳಾಲ : ಯುವಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ದೇರಳಕಟ್ಟೆ ಕಾನೆಕೆರೆ ಎಂಬಲ್ಲಿ ಇಂದು ನಸುಕಿನ ಜಾವ ಸಂಭವಿಸಿದೆ. ದೇರಳಕಟ್ಟೆ ಕಾನೆಕೆರೆ ನಿವಾಸಿ ಶಿವಾನಂದ ರೆಡ್ಡಿ ಎಂಬವರ ಪುತ್ರ ವಿನಯ್ ಕುಮಾರ್ (25) ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದವರು. ನಸುಕಿನ ಜಾವ ಹೃದಯ ಭಾಗದಲ್ಲಿ ನೋವುಂಟಾಗಿದ್ದು, ಕೆಲ ಕ್ಷಣಗಳಲ್ಲೇ ವಿನಯ್ ಸಾವನ್ನಪ್ಪಿದ್ದಾರೆ.ನಡುಪದವು
ಉಳ್ಳಾಲ: 12 ನೇ ಮಹಡಿಯಿಂದ ಬಿದ್ದು ಬಾಲಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರು ಸಿಲಿಕೋನಿಯಾ ವಸತಿ ಸಂಕೀರ್ಣದಲ್ಲಿ ತಡರಾತ್ರಿ ವೇಳೆ ಸಂಭವಿಸಿದೆ.ವೈದ್ಯರಾಗಿರುವ ಡಾ. ಮಮ್ತಾಝ್ ಅಹಮ್ಮದ್ ಎಂಬವರ ಪುತ್ರಿ ಹಿಬಾ(15) ಸಾವನ್ನಪ್ಪಿರುವ ಬಾಲಕಿ. 18ನೇ ಮಹಡಿ ಹೊಂದಿರುವ ಸಿಲಿಕೋನಿಯಾ ವಸತಿ ಸಂಕೀರ್ಣದ 12 ಮಹಡಿಯಲ್ಲಿ ವೈದ್ಯ ದಂಪತಿ ವಾಸವಿದ್ದರು. ತಡರಾತ್ರಿ ಏಕಾಏಕಿ ಬಾಲಕಿ ಹಿಬಾ ಮೇಲಿಂದ ಕೆಳಬಿದ್ದು ಸಾವನ್ನಪ್ಪಿದ್ದಾಳೆ.
ಅಂತಾರಾಷ್ಟ್ರೀಯ ಸಮ್ಮೇಳನದ ಪ್ರಯೋಜನ ಯುವಜನತೆಗೆ ಆಗಲಿ. ಜಾಗತಿಕ ಮಟ್ಟದಲ್ಲಿ ವ್ಯಕ್ತಿತ್ವ ವಿಕಾಸವಾಗಲಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಣದೀಪ್ ಐಎಎಸ್ ಹೇಳಿದರು. ಅವರು ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಯಿಂಡ್ಯೂರನ್ಸ್ ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಲಾದ ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನ ಐಕಾನ್ ಯೂತ್-೨೦೨೫ರ ಸಮಾರೋಪದಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಯುವ ಸಬಲೀಕರಣ
ಉಳ್ಳಾಲ: ಯುವತಿಯೋರ್ವಳು ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಉಳ್ಳಾಲ ಠಾಣಾ ವ್ಯಾಪ್ತಿಯ ಸರಹದ್ದಿನಲ್ಲಿ ಪತ್ತೆಯಾಗಿದ್ದು, ಮೈಪೂರ್ತಿ ಗಾಯದ ಗುರುತು ಪತ್ತೆ ಆಗಿದ್ದು, ಸಾಮೂಹಿಕ ಅತ್ಯಾಚಾರದ ಶಂಕೆ ಮೇಲೆ ಉಳ್ಳಾಲ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ.ತಡರಾತ್ರಿ ವೇಳೆ ಹೊರರಾಜ್ಯದ ಯುವತಿ ನಶೆಯಿಂದ ಸ್ಥಳೀಯ ಮನೆಬಾಗಿಲು ಬಡಿದಿದ್ದಾಳೆ. ನೀರು ಕೇಳುತ್ತಿದ್ದಂತೆ ಅಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಈ ಕುರಿತು 112 ಗೆ ಮನೆಮಂದಿ ಫೋನಾಯಿಸಿ ಮಾಹಿತಿ
ಉಳ್ಳಾಲ: ನಿನ್ನೆ ಸುರಿದ ಭಾರೀ ಗಾಳಿ ಮಳೆಗೆ ಇಲ್ಲಿನ ಬಸ್ತಿಪಡ್ಪು ಎಂಬಲ್ಲಿ ಮನೆ ಆವರಣದಲ್ಲಿದ್ದ ತೆಂಗಿನ ಮರ ಉರುಳಿಬಿದ್ದು ಮನೆಗೆ ಹಾನಿಯುಂಟಾಗಿದೆ. ಬಸ್ತಿಪಡ್ಪುವಿನಲ್ಲಿರುವ ಯು.ಪಿ ಮಲ್ಯ ರಸ್ತೆಯಲ್ಲಿರುವ ವಿಶ್ವನಾಥ್ ತೇವುಲ ಎಂಬವರಿಗೆ ಸೇರಿದ ಮನೆಗೆ ಹಾನಿಯುಂಟಾಗಿದೆ. ಬುಧವಾರ ಸಂಜೆಯಿಂದ ಭಾರೀ ಮಳೆಯಾಗಿದ್ದು, ಜೋರಾಗಿ ಬೀಸಿದ ಗಾಳಿಯಿಂದ ಆವಾಂತರ ಉಂಟಾಗಿದೆ. ಮನೆಯೊಳಗೆ ಮನೆಮಂದಿಯಿದ್ದರೂ ಯಾವುದೇ ಜೀವಹಾನಿಯಿಲ್ಲದೇ ಪಾರಾಗಿದ್ದಾರೆ. ಮರ ನೇರವಾಗಿ ಛಾವಣಿ
ರಾಜ್ಯದ ಅತಿ ದೊಡ್ಡ ದರೋಡೆ ಪ್ರಕರಣ ಎಂದು ಹೇಳಲಾದ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದ ಮತ್ತೊಬ್ಬ ಆರೋಪಿಗೆ ಪೊಲೀಸರು ಗುಂಡಿನ ರುಚಿ ತೋರಿಸಿದ ಘಟ ನೆ ನಡೆದಿದೆ. ಬ್ಯಾಂಕ್ ದರೋಡೆ ಪ್ರಕರಣದ ಪ್ರಮುಖ ಆರೋಪಿ ಮುಂಬಯಿ ಧಾರಾವಿಯ ಮುರುಗಂಡಿ ಎಂಬಾತನ ಕಾಲಿಗೆ ಪೊಲೀಸರು ಗುಂಡೇಟು ಇಳಿಸಿದ್ದಾರೆ. ಕೋಟೆಕಾರು ಅಜ್ಜಿನಡ್ಕ ಬಳಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಪೊಲೀಸರು ಸ್ಥಳ ಮಹಜರು ನಡೆಸಲು ಆರೋಪಿ ಮುರುಗಂಡಿಯನ್ನು ಕೋಟೆಕಾರಿಗೆ ಕರೆದುಕೊಂಡು ಬಂದಿದ್ದರು. ಈ ವೇಳೆ
ಉಳ್ಳಾಲದ ಸೋಮೇಶ್ವರದ ರುದ್ರಬಂಡೆಯಿಂದ ಹಾರಿದ ಯುವತಿಯನ್ನು ಈಜುಗಾರರು ರಕ್ಷಿಸಿದ ಘಟನೆ ಸಂಭವಿಸಿದೆ. ಮಾಡೂರು ಬಾಡಿಗೆ ಮನೆಯಲ್ಲಿ ವಾಸಿಸುವ ಯುವತಿ ಸಮುದ್ರಕ್ಕೆ ಹಾರಿದ್ದು, ಮಂಗಳೂರಿನ ಕಾಲೇಜೊಂದರ ಪದವಿ ವಿದ್ಯಾರ್ಥಿನಿ ಆಗಿರುವ ಈಕೆಯನ್ನು ಸ್ಥಳದಲ್ಲಿ ಸಿಕ್ಕ ರಕ್ಷಣಾ ಸಾಮಗ್ರಿಗಳನ್ನು ಬಳಸಿ ಯುವತಿಯನ್ನು ರಕ್ಷಿಸಲಾಗಿದೆ. ಯುವತಿ ಸುರಕ್ಷಿತವಾಗಿದ್ದು, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಳ್ಳಾಲ: ರೆಸಾರ್ಟ್‌ವೊಂದರ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಘಟನೆ ನಡೆದಿದೆ. ಸೋಮೇಶ್ವರದಲ್ಲಿ ಭಾನುವಾರ ಬೆಳಿಗ್ಗೆ ನಡೆದಿರುವ ಘಟನೆಯಲ್ಲಿ ಮೈಸೂರು ದೇವರಾಜ ಮೊಹಲ್ಲಾದ ನವೀನ್ ಕುಮಾರ್ ಅವರ ಪುತ್ರಿ ಕೀರ್ತನಾ ಎನ್ (21), ಮೈಸೂರು ಕುರುಬರ ಹಳ್ಳಿ 4ನೇ ಕ್ರಾಸ್ ನಿವಾಸಿ ಮಲ್ಲೇಶ್ ಅವರ ಪುತ್ರಿ ನಿಶಿತಾ ಎಂ.ಡಿ (21) ಹಾಗೂ ಮೈಸೂರು ಕೆ.ಆರ್.ಮೊಹಲ್ಲ ರಾಮಾನುಜ ರಸ್ತೆಯ 11ನೇ ಕ್ರಾಸ್ ನಿವಾಸಿ ಎಂ.ಎನ್ ಶ್ರೀನಿವಾಸ್ ಅವರ ಪುತ್ರಿ ಪಾರ್ವತಿ ಎಸ್ (20)
ಮುಡಿಪು: ಕೊಣಾಜೆ ಅಸೈಗೋಳಿ ನಿವಾಸಿ ನಾರಾಯಣ(54) ಎಂಬುವವರು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.ಅಸೈಗೋಳಿಯಲ್ಲಿ ರಿಕ್ಷಾಚಾಲಕರಾಗಿದ್ದ ಅವರಿಗೆ ಪತ್ನಿ ಹಾಗೂ ಮೂವರು ಪುತ್ರಿಯರು ಇದ್ದಾರೆ. ಅವರು ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಇವರು ಕೆಲವು ತಿಂಗಳಷ್ಟೇ ಹೊಸ ರಿಕ್ಷಾ ಖರೀದಿಸಿದ್ದರು.ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತೊಕ್ಕೊಟ್ಟು: ರೈಲ್ವೇ ಹಳಿಯ ಎರಡೂ ಬದಿಗಳಲ್ಲಿ ಆಗಂತುಕರಿಬ್ಬರು ಜಲ್ಲಿಕಲ್ಲುಗಳನ್ನಿಟ್ಟ ಪರಿಣಾಮ ಎರಡು ರೈಲುಗಳು ಚಲಿಸುವ ಸಂದರ್ಭ ದೊಡ್ಡ ಸದ್ದು ಸ್ಥಳೀಯರಿಗೆ ಕೇಳಿಬಂದಿದ್ದು, ಸ್ಥಳೀಯರು ರೈಲ್ವೇ ಹಳಿಯತ್ತ ದೌಡಾಯಿಸಿದ್ದಾರೆ. ತಡರಾತ್ರಿ 8.05 ರ ಸುಮಾರಿಗೆ ಕೊರಗಜ್ಜನ ಅಗೆಲು ಮುಗಿಸಿ ವಾಪಸ್ಸಾಗುತ್ತಿದ್ದ ತೊಕ್ಕೊಟ್ಟು ಓವರ್ ಬ್ರಿಡ್ಜ್ ನಿವಾಸಿ ಮಹಿಳೆಯರು ಹಳಿಯಲ್ಲಿ ಇಬ್ಬರು ಆಗಂತುಕರನ್ನು ಕಂಡಿದ್ದರು. ಅಲ್ಲಿಂದ ಮನೆಗೆ ತಲುಪುವಷ್ಟರಲ್ಲಿ ರೈಲೊಂದು ಕೇರಳ ಕಡೆಗೆ