Home ಕರಾವಳಿ Archive by category ಉಳ್ಳಾಳ (Page 3)

ಮಂಜೇಶ್ವರ: ಪೋಲಿಸರ ಮೇಲೆ ಹಲ್ಲೆ-ಜಿಲ್ಲಾ ಪಂಚಾಯತ್ ಸದಸ್ಯ ಅಬ್ದುರ್ ರಹ್ಮಾನ್ ಬಂಧನ

ಉಪ್ಪಳ ಹಿದಾಯತ್ ನಗರದಲ್ಲಿ ಪೋಲಿಸರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯನನ್ನು ಮಂಜೇಶ್ವರ ಪೋಲಿಸರು ಬಂಧಿಸಿದ್ದಾರೆ. ಮುಸ್ಲಿಂ ಲೀಗ್ ಮುಖಂಡ, ಯೂತ್ ಲೀಗ್ ಜಿಲ್ಲಾ ಕಾರ್ಯದರ್ಶಿ, ಉಪ್ಪಳ ಹಿದಾಯತ್ ಬಜಾರ್‍ನ ಗೋಲ್ಡನ್ ಅಬ್ದುಲ್ ರಹಮಾನ್ ಬಂಧಿತ ಆರೋಪಿಯಾಗಿದ್ದಾನೆ. ಉಪ್ಪಳ ಹಿದಾಯತ್ ನಗರದಲ್ಲಿ

ಉಳ್ಳಾಲ: ನಮ್ಮೂರ ಸನ್ಮಾನ ಸಮಿತಿಯಿಂದ ಸ್ಪೀಕರ್ ಯುಟಿ ಖಾದರ್‍ಗೆ ಸನ್ಮಾನ

ಉಳ್ಳಾಲ: ನಮ್ಮೂರ ಸನ್ಮಾನ ಸಮಿತಿ ದೇರಳಕಟ್ಟೆ ಆಶ್ರಯದಲ್ಲಿ ಸ್ಪೀಕರ್ ಯುಟಿ ಖಾದರ್ ಅವರಿಗೆ ಸನ್ಮಾನ ಕಾರ್ಯಕ್ರಮವು ದೇರಳಕಟ್ಟೆ ಸಿಟಿ ಗ್ರೌಂಡ್‍ನಲ್ಲಿ ನಡೆಯಿತು. ನಿಟ್ಟೆ ವಿವಿ ಸಹ ಕುಲಾಧಿಪತಿ ಡಾ.ಶಾಂತರಾಂ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ,ಒಬ್ಬ ಶಾಸಕನಾಗಿ, ಮಂತ್ರಿ ಆಗಿ ಜನರ ಒಳಿತಿಗಾಗಿ ಏನನ್ನು ಮಾಡಲು ಸಾಧ್ಯ ಎಂಬುದು ಖಾದರ್ ಅವರ ಮೂಲಕ ತಿಳಿದು ಕೊಳ್ಳಲು ಸಾಧ್ಯ. ಗ್ರಾಮ ಅಭಿವೃದ್ಧಿ ಆಗಲು ಸ್ಪೀಕರ್ ಯುಟಿ ಖಾದರ್ ಕಾರಣ ಎಂದು

ಸೂರಜ್ ಶಿಕ್ಷಣ ಸಂಸ್ಥೆಯಲ್ಲಿ ವಿ.ಎಮ್.ಎಸ್ ಆ್ಯಪ್ ಅಳವಡಿಕೆ : ಸ್ಪೀಕರ್ ಯು.ಟಿ. ಖಾದರ್ ಅವರಿಂದ ಉದ್ಘಾಟನೆ

ತಲಪಾಡಿಯಲ್ಲಿರುವ ಸೂರಜ್ ಕಾಲೇಜು ಮತ್ತು ಜ್ಞಾನ ದೀಪ ಶಾಲೆ ಮುಡಿಪು ವತಿಯಿಂದ ಶಾಲೆಯಲ್ಲಿ ಮಕ್ಕಳ ಚಲನವಲನಗಳ ನಿಗಾವಹಿಸುವ ವಿ.ಎಮ್.ಎಸ್ ಆ್ಯಪ್ ಅಳವಡಿಕೆಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ವಿಧಾನ ಸಭಾ ಸಭಾಪತಿ ಯು.ಟಿ.ಖಾದರ್ ಅವರು ವಿ.ಎಮ್.ಎಸ್ ಆ್ಯಪ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮಂಜುನಾಥ್ ರೇವಣ್ಕರ್ ಅವರು ಸೂರಜ್ ಸಿಕ್ಷಣ ಸಂಸ್ಥೆಯ ಮೂಲಕ ಗ್ರಾಮೀಣ ಮಟ್ಟದ ಮಕ್ಕಳಿಗೆ ಅತ್ತ್ಯುತ್ತಮ ಶಿಕ್ಷಣ ನೀಡುತ್ತಿದ್ದಾರೆ, ಇದು ಅವರದೇಶ ಪ್ರೇಮವಾಗಿದೆ, ಮಕ್ಕಳ

ತೊಕ್ಕೊಟ್ಟು: ಮೋಟೋ ವರ್ಲ್ಡ್ ಯಮಹಾ ಶೋರೂಂನಲ್ಲಿ ಹಬ್ಬಗಳ ಪ್ರಯುಕ್ತ ವಿಶೇಷ ಆಫರ್

ತೊಕೊಟ್ಟುವಿನಲ್ಲಿರುವ ಮೋಟೋ ವರ್ಲ್ಡ್ ಯಮಹಾ ಶೋರೂಂನಲ್ಲಿ ವಿವಿಧ ಹಬ್ಬಗಳ ಪ್ರಯುಕ್ತ ಡಿಸೆಂಬರ್ 31ರ ವರೆಗೆ ವಿಶೇಷ ಆಫರ್‍ಗಳನ್ನು ಘೋಷಿಸಿದ್ದಾರೆ. ಝೀರೋ ಡೌನ್ ಪೇಮೆಂಟ್, ಬೈಕ್‍ಗಳ ಖರೀದಿಗೆ ಅವಕಾಶ ನೀಡುತ್ತಿದ್ದಾರೆ. ಎಫ್‍ಜಡ್‍ಎಕ್ಸ್ ಮತ್ತು ಎಫ್‍ಜಡ್‍ಎಸ್‍ವಿ3 ಬೈಕ್‍ಗಳಿಗೆ 5 ಸಾವಿರದವರೆಗೆ ರಿಯಾಯಿತಿ ಇದೆ. ಅತೀ ಹೆಚ್ಚು ಮೈಲೇಜ್, ಫುಲ್ ಹೆಲ್ಮೆಟ್, ಫುಲ್ ಟ್ಯಾಂಕ್ ಪೆಟ್ರೋಲ್, 1 ಸಾವಿರ

ಉಳ್ಳಾಲ: ಬಟ್ಟಂಪಾಡಿ ಕಡಲ್ಕೊರೆತ ಸ್ಥಳ ಪರಿಶೀಲಿಸಿದ ಕಂದಾಯ ಸಚಿವ ಕೃಷ್ಣಭೈರೇಗೌಡ

ಉಳ್ಳಾಲ ತಾಲೂಕಿನ ಬಟ್ಟಂಪಾಡಿಯ ಕಡಲ್ಕೊರೆತ ಪ್ರದೇಶಕ್ಕೆ ಕಂದಾಯ ಸಚಿವರಾದ ಕೃಷ್ಣಭೈರೇಗೌಡ ಅವರು ಭೇಟಿ ನೀಡಿ ಕಡಲ್ಕೊರೆತದ ಹಾನಿಯನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್, ಕಂದಾಯ ಇಲಾಖೆಯ ಆಯುಕ್ತ ಸುನಿಲ್ ಕುಮಾರ್ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು

ಉಳ್ಳಾಲ: ಆ.27ಕ್ಕೆ ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಉದ್ಘಾಟನೆ

ಉಳ್ಳಾಲ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಉಳ್ಳಾಲ ತಾಲೂಕು ಘಟಕದ ಉದ್ಘಾಟನಾ ಸಮಾರಂಭ ಆ.27 ರಂದು ಭಾನುವಾರ ಸಂಜೆ 3.00 ಗಂಟೆಗೆ ತೊಕ್ಕೊಟ್ಟು ಅಂಬಿಕಾ ರೋಡಿನ ಗಟ್ಟಿ ಸಮಾಜ ಭವನದಲ್ಲಿ ನೆರವೇರಲಿದೆ ಎಂದು ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಸಂತ್ ಎನ್.ಕೊಣಾಜೆ ಹೇಳಿದ್ದಾರೆ. ಉಳ್ಳಾಲ ಪ್ರೆಸ್‍ಕ್ಲಬ್‍ನಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಕರ್ನಾಟಕ ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್

ಉಳ್ಳಾಲ|| ಆಧಾರ್ ಇಲ್ಲದ ವಿದ್ಯಾರ್ಥಿನಿಯರನ್ನು ಬಸ್‍ನಿಂದ ಕೆಳಗಿಳಿಸಿದ ನಿರ್ವಾಹಕ: ಸ್ಥಳೀಯರಿಂದ ತರಾಟೆ

ಉಳ್ಳಾಲ: ಆಧಾರ್ ಕಾರ್ಡ್ ಇಲ್ಲದೆ ಸರಕಾರಿ ನರ್ಮ್ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ಐವರು ಪ್ರಾಥಮಿಕ ಶಾಲಾ ವಿದ್ಯಾರ್ಥಿನಿಯರನ್ನ ಅರ್ಧ ದಾರಿಯಲ್ಲೇ ಇಳಿಸಿದ ಬಸ್ ನಿರ್ವಾಹಕನ್ನು ತರಾಟೆಗೆ ತೆಗೆದುಕೊಂಡ ಘಟನೆ ಕುಂಪಲದಲ್ಲಿ ನಡೆದಿದೆ. ಮಂಗಳೂರಿನಿಂದ ಕುಂಪಲ ನಡುವೆ ಓಡಾಟ ನಡೆಸುವ ಸರಕಾರಿ ನರ್ಮ್ ಬಸ್ಸಿನ ನಿರ್ವಾಹಕ ಹುಸೇನ್ ಸಾಬ್ ಐ ಹಳ್ಳೂರ ಎಂಬವರು ಎರಡನೇ ಮತ್ತು ಮೂರನೇ ತರಗತಿ ಓದುವ ಐದು ಮಂದಿ ವಿದ್ಯಾರ್ಥಿನಿಯರಲ್ಲಿ ಆಧಾರ್ ಕಾರ್ಡ್ ಇಲ್ಲದಕ್ಕೆ ನಿಮಗೆ

ಮುನ್ನೂರು ಗ್ರಾ.ಪಂ. : ಅಧ್ಯಕ್ಷರಾಗಿ ವಿಶಾಲಾಕ್ಷಿ ಮತ್ತು ಉಪಾಧ್ಯಕ್ಷರಾಗಿ ಮಹಾಬಲ ಟಿ.ದೆಪ್ಪೆಲಿಮಾರ್ ಆಯ್ಕೆ

ಮುನ್ನೂರು ಗ್ರಾಮ ಪಂಚಾಯಿತಿಯಲ್ಲಿ ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆದಿದ್ದು ಕಾಂಗ್ರೆಸ್ ಮತ್ತು ಸಿಪಿಐಎಂ ಮೈತ್ರಿ ಆಡಳಿತ ಮುಂದುವರಿದಿದೆ. ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ವಿಶಾಲಾಕ್ಷಿ ಮತ್ತು ಉಪಾಧ್ಯಕ್ಷರಾಗಿ ಸಿಪಿಐಎಂ ಬೆಂಬಲಿತ ಸದಸ್ಯ ಮಹಾಬಲ ಟಿ.ದೆಪ್ಪೆಲಿಮಾರ್ ಆಯ್ಕೆಯಾಗಿದ್ದಾರೆ. ಗ್ರಾಮ ಪಂಚಾಯಿತಿಯ 23 ಸ್ಥಾನಗಳಲ್ಲಿ ಕಾಂಗ್ರೆಸ್ 9, ಸಿಪಿಐಎಂ 3 ಸ್ಥಾನಗಳ ಪೈಕಿ ಓರ್ವ ಸದಸ್ಯ ಮೃತಪಟ್ಟಿದ್ದಾರೆ. ಬಿಜೆಪಿ 9,

ಉಳ್ಳಾಲ – ಪುತ್ರನ ಆತ್ಮಹತ್ಯೆ ಬೆನ್ನಲ್ಲೇ, ತಂದೆಯೂ ಆತ್ಮಹತ್ಯೆ

ಉಳ್ಳಾಲ : ಕೇರಳ ಕುಂಬಳೆ ಬಳಿಯ ಬಂಬ್ರಾಣ ಕಲ್ಕುಲ ನಿವಾಸಿ ಕಲ್ಲಿನ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಲೋಕೇಶ್ (52) ಎಂಬವರ ಮೃತದೇಹ ಸೋಮವಾರ ಬೆಳಿಗ್ಗೆ ಉಳ್ಳಾಲ ಕಡಲ ಕಿನಾರೆಯಲ್ಲಿ ಪತ್ತೆಯಾಗಿದೆ. ಪುತ್ರನೂ ಆತ್ಮಹತ್ಯೆ ನಡೆಸಿದ 32 ದಿನಗಳ ಅಂತರದಲ್ಲಿ ತಂದೆಯೂ ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ ಪುತ್ರ ರಾಜೇಶ್ (26) ಕಳೆದ ಜು. 10 ರಂದು ನಾಪತ್ತೆಯಾಗಿದ್ದು, ಬಳಿಕ ರಾಜೇಶ್ ನ ಮೃತದೇಹ 12 ರಂದು ಬೆಳಗ್ಗೆ ಮಂಗಳೂರು ಬೆಂಗರೆ ನೇತ್ರಾವತಿ ನದಿ ತೀರದಲ್ಲಿ

ಉಳ್ಳಾಲ : ಎಸ್‍ಡಿಪಿಐ ಅಭ್ಯರ್ಥಿಗಳನ್ನು ಬೆಂಬಲಿಸಿದ ಬಿಜೆಪಿ ಸದಸ್ಯರಿಬ್ಬರ ಉಚ್ಛಾಟನೆ

ತಲಪಾಡಿ ಗ್ರಾಮ ಪಂಚಾಯಿತಿನಲ್ಲಿ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಎಸ್‍ಡಿಪಿಐ ಅಭ್ಯರ್ಥಿಗಳನ್ನು ಬೆಂಬಲಿಸಿದ ಇಬ್ಬರು ಬಿಜೆಪಿ ಬೆಂಬಲಿತ ಸದಸ್ಯರನ್ನು ಜಿಲ್ಲಾಧ್ಯಕ್ಷರ ಆದೇಶದಂತೆ ತಕ್ಷಣದಿಂದ ಪಕ್ಷದ ಚಟುವಟಿಕೆಗಳಿಂದ ಉಚ್ಛಾಟಿಸಲಾಗುವುದು ಹಾಗೂ ಮುಂದಿನ ಆರು ವರ್ಷಗಳ ಕಾಲ ಪಕ್ಷಕ್ಕೆ ಬರದಂತೆ ನಿರ್ಭಂಧಿಸಲಾಗುವುದು ಎಂದು ಮಂಗಳೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್ ಹೇಳಿದ್ದಾರೆ. ಅವರು ಪಂಡಿತ್ ಹೌಸ್‍ನ ಚುನಾವಣಾ