Home ಕರಾವಳಿ Archive by category ಕಾಸರಗೋಡು (Page 15)

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ : ತಲಪಾಡಿಯಲ್ಲಿ ಮರಗಳ ಮಾರಣ ಹೋಮ

 ಮಂಜೇಶ್ವರ : ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ಭಾಗದ ಮೊದಲ ಹಂತವಾಗಿ ರಾಷ್ಟ್ರೀಯ ಹೆದ್ದಾರಿ ಬದಿಗಳಲ್ಲಿರುವ ಮರಗಳನ್ನು ತೆರವುಗೊಳಿಸಲು ಸರಕಾರವು ಗುತ್ತಿಗೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ತಲಪಾಡಿಯಿಂದ ಮರಗಳ ಮಾರಣ ಹೋಮದದ ಪ್ರಕ್ರಿಯೆ ಆರಂಭಗೊಂಡಿತ್ತು. ಮರಗಳನ್ನು ಕಡಿದು ಅದರ ರೆಂಬೆಗಳನ್ನು ರಸ್ತೆ ಬದಿಗಳಲ್ಲಿ ಹಾಗೂ ಬಸ್ಸು ನಿಲ್ದಾಣ ಪರಿಸರಗಳಲ್ಲಿ ಮತ್ತು

ಕುಬಣೂರಿನ ಸೇತುವೆಯ ಒಂದು ಭಾಗ ಕುಸಿದು ಸಂಚಾರಕ್ಕೆ ತಡೆ

ಮಂಜೇಶ್ವರ: ಮಂಗಲ್ಪಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಕುಬಣೂರಿನಲ್ಲಿ 30 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಸೇತುವೆಯ ಒಂದು ಭಾಗ ಕುಸಿದು ಸಂಚಾರಕ್ಕೆ ತಡೆಯಾಗಿದ್ದು ನಿತ್ಯ ಸಂಚಾರಿಗಳು ಸಂಕಷ್ಟಕ್ಕೂಳಗಾಗಿದ್ದಾರೆ. ಇದು ಸುವರ್ಣಗಿರಿ ತೋಡಿಗೆ ಕೃಷಿಗಾಗಿ ನಿರ್ಮಿಸಲಾದ ಸೇತುವೆಯಾಗಿದ್ದು ಅಗಲ ಕಿರಿದಾಗಿ ಸುಗಮ ಸಂಚಾರಕ್ಕೂ ಅಡ್ಡಿಯಾಗಿತ್ತು. ಇದರ ಮೇಲೆ ಕೆಂಪು ಕಲ್ಲು ಹಾಗೂ ಜಲ್ಲಿ ಕಲ್ಲು ಮಾಫಿಯಾಗಳು ಲಾರಿಗಳಲ್ಲಿ ಅಧಿಕ ಭಾರಗಳನ್ನು ಹೇರಿ ಸಾಗಾಟ ನಡೆಸುತಿದ್ದದ್ದು

ಕೇರಳ ಕೋ-ಆಪರೇಟಿವ್ ಎಂಪ್ಲೋಯಿಸ್ ಕೌನ್ಸಿಲ್ ಮಂಜೇಶ್ವರ : ಬಸ್ಸು ತಂಗುದಾಣ ಕೊಡುಗೆ

ಮಂಜೇಶ್ವರ : ಕೇರಳ ಕೋ- ಆಪರೇಟಿವ್ ಎಂಪ್ಲೋಯೀಸ್ ಕೌನ್ಸಿಲ್ ಮಂಜೆಶ್ವರ ಯೂನಿಟ್ ಇವರ ವತಿಯಿಂದ ಕೊಡುಗೆಯಾಗಿ ಸುಮಾರು ಎರಡೂವರೆ ಲಕ್ಷ ರೂ. ವೆಚ್ಚದಲ್ಲಿ ಮಂಜೇಶ್ವರ ಒಳಪೇಟೆಯಲ್ಲಿ ನಿರ್ಮಿಸಲಾದ ಸುಸಜ್ಜಿತ ಹೈಟೆಕ್ ಸೂಪರ್ ಸ್ಪೆಷಾಲಿಟಿ ಬಸ್ಸು ತಂಗುದಾಣ ಸೋಮವಾರದಂದು ಸಂಜೆ ಲೋಕಾರ್ಪಣೆಗೊಂಡಿತು.   ಜನನಿಬಿಡ ಪ್ರದೇಶವಾದ ಮಂಜೇಶ್ವರ ಒಳಪೇಟೆಯಲ್ಲಿ ಮೂಲಭೂತ ಸೌಕರ್ಯಗಳಲ್ಲೊಂದಾದ ಹೈಟೆಕ್ ಮಾದರಿಯ ಶೌಚಾಲಯಗಳನ್ನೊಳಗೊಂಡ ಬಸ್ಸು ತಂಗುದಾಣ ಲೋಕಾರ್ಪಣೆಗೊಂಡಿರುವುದು

ಮಂಜೇಶ್ವರದಲ್ಲಿ ಕೇಂದ್ರದ ಜನವಿರೋಧಿ ನೀತಿ ಖಂಡಿಸಿ ಸಿಪಿಐಎಂನಿಂದ ಪ್ರತಿಭಟನೆ

ಮಂಜೇಶ್ವರ: ಕೇಂದ್ರ ಸರ್ಕಾರದ ಜನವಿರೋಧಿ ನೀತಿಗೆದುರಾಗಿ ರಾಜ್ಯ ವ್ಯಾಪಕವಾಗಿ ಕೇಂದ್ರ ಸರಕಾರದ ಕಚೇರಿಗಳ ಮುಂಭಾಗದಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಭಾಗವಾಗಿ ಮಂಜೇಶ್ವರದ ಹಲವೆಡೆಗಳಲ್ಲೂ ಪ್ರತಿಭಟನಾ ಧರಣಿ ನಡೆಯಿತು. ಸಿಪಿಐಎಂ ಕುಂಜತೂರು ಲೋಕಲ್ ಸಮಿತಿ ವತಿಯಿಂದ ಕುಂಜತ್ತೂರು ಅಂಚೆ ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನಾ ಧರಣಿಯನ್ನು ಸಿಪಿಐಎಂ ಮಂಜೇಶ್ವರ ಏರಿಯಾ ಸೆಕ್ರಟರಿ ಕೆ ವಿ ಕುಂಞಿರಾಮನ್ ಉದ್ಘಾಟಿಸಿ ಮಾತಾಡಿದರು. ಶ್ರೀಧರ ಅಧ್ಯಕ್ಷತೆ ವಹಿಸಿದ್ದರು.

ಇ.ಎಂ.ಎಸ್. ಗ್ರಂಥಾಲಯ ಸಮಿತಿಯಿಂದ ಓಣಂ ಆಚರಣೆ

ಕುಂಬಳೆ : ಬಲಿ ಚರ್ಕವರ್ತಿಯನ್ನು ಬರಮಾಡಿಕೊಳ್ಳುವ ಓಣಂ ಹಬ್ಬವು ಸಮೃದ್ಧಿ ಫಲವತ್ತಿನ ಸಂಕೇತವಾಗಿ ಎಲ್ಲಾ ವರ್ಗ , ಸಮುದಾಯವನ್ನು ಬೆಸೆಯುವ ಹಬ್ಬವಾಗಿದೆ. ಗಡಿನಾಡಿನಲ್ಲೂ ಓಣಂ ಸಂಭ್ರಮ ಮನೆ ಮಾಡಿದೆ. ಕಾಸರಗೋಡು ಜಿಲ್ಲೆಯು ಸಪ್ತ ಭಾಷೆಗಳ ಸಂಗಮ ನಾಡು , ಸರ್ವ ಭಾಷೆ, ಸಂಸ್ಕೃತಿಯ ಸೌಹಾರ್ಧತೆಯ ಬೀಡು , ಇದು ಮಂಜೇಶ್ವರ ಗೋವಿಂದ ಪೈ ಅವರಂತ ಕನ್ನಡದ ಶ್ರೇಷ್ಠ ಕವಿವರ್ಯರು ನಡೆದಾಡಿದ ನಾಡು, ಇ.ಎಂ.ಎಸ್. ನಂಬೂದೂರಿಪಾಡ್ ಅವರಂತಹ ಅಪ್ರತಿಮ ಹೋರಾಟಗಾರರಿಂದ ಪ್ರೇರಣೆ ಪಡೆದ

ಅಂತರ್ ರಾಜ್ಯ ಗಡಿ ನಿಯಂತ್ರಣ:ಕೆ.ಆರ್.ಜಯಾನಂದ ಸಲ್ಲಿಸಿದ್ದ ಅರ್ಜಿಯಲ್ಲಿ ಮಧ್ಯಂತರ ಆದೇಶ ಪ್ರಕಟ

ಮಂಜೇಶ್ವರ : ಕೇರಳದಿಂದ ಕರ್ನಾಟಕಕ್ಕೆ ಪ್ರಯಾಣಿಸಲು ಕರ್ನಾಟಕ ರಾಜ್ಯ ಸರ್ಕಾರ ಗಡಿಗಳಲ್ಲಿ ನಿಷೇಧ ಹೇರಿರುವುದಕ್ಕಾಗಿ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಕೆ.ಆರ್.ಜಯಾನಂದ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಆ.25 ಕ್ಕೆ ಮುಂದೂಡಿದ್ದು, ಈ ಮಧ್ಯೆ ದಕ್ಷಿಣ ಕನ್ನಡ ಪ್ರವೇಶಿಸಲು ಆಂಬುಲೆನ್ಸ್ ಗಳ ಹೊರತು ಇತರ ವಾಹನಗಳಲ್ಲೂ ಚಿಕಿತ್ಸೆಗೆ ತೆರಳುವವರನ್ನು ಯಾವುದೇ ಪರಿಶೋಧನೆಗೊಳಪಡಿಸದೆ(ಆರ್ ಟಿ ಪಿ ಸಿ ಆರ್ ) ತೆರಳಲು ಅವಕಾಶ ನೀಡಬೇಕು ಎಂದು ಮಂಗಳವಾರ ಹೈಕೋರ್ಟ್ ಮಧ್ಯಂತರ

ಸ್ವಾತಂತ್ರ್ಯದಿಂದಲೇ ಅಭಿವೃದ್ಧಿ : ಹರ್ಷಾದ್ ವರ್ಕಾಡಿ

ಮಂಜೇಶ್ವರ:ಎಲ್ಲಿಯವರೆಗೆ ಪ್ರಜೆಗಳು ಸ್ವಾತಂತ್ರ್ಯರಾಗಿರುತ್ತಾರೋ ಅಲ್ಲಿಯವರೆಗೆ ದೇಶದ ಅಭಿವೃದ್ಧಿ, ಪ್ರಜೆಗಳ ಅಭಿವೃದ್ಧಿ, ನಾಡಿನ ಅಭಿವೃದ್ಧಿ, ಒಂದು ಕುಟುಂಬದ ಅಭಿವೃದ್ಧಿ ಸಾಧ್ಯ, ಇದಕ್ಕೆ ಭಾರತದೇಶ ಸಾಕ್ಷಿಯಾಗಿದೆ, ಬ್ರಿಟಿಷರಿಂದ ಸ್ವಾತಂತ್ರ್ಯಗೊಂಡ ನಂತರ ಭಾರತ ದೇಶವು ಹಲವು ಹೊಸತುಗಳನ್ನು ಕಂಡಿದೆ. ಹಲವು ಸಾಧನೆಗಳಿಗೆ ಸಾಕ್ಷಿಯಾಗಿದೆ. ಈ ಸಾಧನೆ, ಅಭಿವೃದ್ಧಿಗಳ ಸಂಖ್ಯೆ ಸ್ವಾತಂತ್ರ್ಯ ಭಾರತದಲ್ಲಿ ಹೆಚ್ಚುತ್ತಲೇ ಇರುತ್ತದೆ ಹೊರತು, ಎಂದಿಗೂ ಇದಕ್ಕೆ ಅಂತ್ಯ

ತಲಪಾಡಿ: ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು

ಉಳ್ಳಾಲ: ಕೆರೆ ನೀರಿನಲ್ಲಿ ಈಜಲು ತೆರಳಿದ್ದ ವ್ಯಕ್ತಿಯೋರ್ವರು ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ  ತಲಪಾಡಿ ನಾರ್ಲಪಡೀಲಿನಲ್ಲಿ ಇಂದು ಸಂಜೆ ಸಂಭವಿಸಿದೆ. ನಾರ್ಲಪಡೀಲು ನಿವಾಸಿ ರಾಜೇಶ್ ಶೆಟ್ಟಿ (55) ಮೃತರು. ತಲಪಾಡಿ ಟೋಲ್ ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ರಾಜೇಶ್ ಅವರು ಎಂದಿನಂತೆ ಕಲ್ಲಿನ ಕೋರೆಯಲ್ಲಿ ಈಜಲು ತೆರಳಿದ್ದರು. ಇಂದು ಸಂಜೆ ಈಜುವಾಗ ಏಕಾಏಕಿ ಮುಳುಗಿ ಅಲ್ಲೇ ಸಾವನ್ನಪ್ಪಿದ್ದಾರೆ. ಕೂಡಲೇ ಸ್ಥಳೀಯರು ರಕ್ಷಿಸಲು

ಕೇರಳದ ವಿಧಾನಸಭೆಯಲ್ಲಿ ಪ್ರತಿಧ್ವನಿಗೊಂಡ ಕರ್ನಾಟಕ ಕೇರಳ ಗಡಿ ವಿವಾದ : ಶಾಸಕರ ಮನವಿಗೆ ಮುಖ್ಯಮಂತ್ರಿಯಿಂದ ಭರವಸೆ

ಮಂಜೇಶ್ವರ : ಕಳೆದ ಕೆಲವು ದಿವಸಗಳಿಂದ ಕರ್ನಾಟಕ ಸರಕಾರ ಕೇರಳ ಗಡಿ ಭಾಗಗಳಲ್ಲಿ ಕಠಿಣವಾದ ನಿಯಂತ್ರಣಗಳನ್ನು ಹೇರುತ್ತಿದ್ದು ಇದರಿಂದಾಗಿ ವಿದ್ಯಾರ್ಥಿಗಳು, ರೋಗಿಗಳು ಸೇರಿದಂತೆ ದಿನನಿತ್ಯ ಹೊಟ್ಟೆಪಾಡಿಗಾಗಿ ಮಂಗಳೂರನ್ನು ಆಶ್ರಯಿಸುತ್ತಿರುವ ಸಹಸ್ರಾರು ಮಂದಿ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ಕರ್ನಾಟಕದಲ್ಲಿ ಕೋವಿಡ್ ರೋಗಿಗಳ ಹೆಚ್ಚಳವಾಗುತ್ತಿರುವುದು ಅಲ್ಲಿಯಾ ಜನತೆ ಕೋವಿಡ್ ಮಾನದಂಡಗಳನ್ನು ಉಲ್ಲಂಘಿಸುವುದರಿಂದ ಹೊರತು ಕೇರಳದಿಂದ ಸಾಗುವ ಜನತೆಯಿಂದಲ್ಲ.

ಮಂಜೇಶ್ವರ: ಕಾವಲುಗಾರನ ತೆಲೆಗೆ ಹೊಡೆದು ಗೋಣಿಯಲ್ಲಿ ಕಟ್ಟಿ ಹಾಕಿ ದರೋಡೆ

ಕಾವಲುಗಾರನ ತಲೆಗೆ ಹೊಡೆದು ಗೋಣಿಯೊಯೊಳಗೆ ಕಟ್ಟಿ ಹಾಕಿ ಮಂಜೇಶ್ವರದ ಹೃದಯ ಭಾಗವಾದ ಹೊಸಂಗಡಿಯಲ್ಲಿ ಕಾರ್ಯಾಚರಿಸುತ್ತಿರುವ ರಾಜಧಾನಿ ಜ್ಯುವೆಲ್ಲರಿಯ ಬೀಗವನ್ನು ಮುರಿದು ಒಳನುಗ್ಗಿದ ಕಳ್ಳರು ಭಾರಿ ಮೌಲ್ಯದ ಬೆಳ್ಳಿ ಆಭರಣ ಹಾಗೂ ಲಕ್ಷಾಂತರ ರೂ. ನಗದನ್ನು ಕೊಂಡೊಯ್ದಿದ್ದಾರೆ. ಕಳೆದ ರಾತ್ರಿ ಎರಡು ಗಂಟೆಯ ಸುಮಾರಿಗೆ ಎರಡು ಕಾರಿನಲ್ಲಿ ಆಗಮಿಸಿದ ಎಂಟು ಮಂದಿಯ ತಂಡ ಈ ಕೃತ್ಯ ನಡೆಸಿದೆ. ಕಾವಲುಗಾರ ಕಡಂಬಾರ್ ನಿವಾಸಿ ಅಬ್ದುಲ್ಲ ದರೋಡೆಕೋರರ ಹಲ್ಲೆಯಿಂದ ಗಾಯಗೊಂಡು