Home ಕರಾವಳಿ Archive by category ಪುತ್ತೂರು (Page 10)

ಕಡಬ: ಆನೆ ತುಳಿತಕ್ಕೊಳಗಾಗಿದ್ದ ವ್ಯಕ್ತಿ ಮೃತ್ಯು

ಕಡಬ, ನ.07. ತಿಂಗಳ ಹಿಂದೆ ಕಡಬ ತಾಲೂಕಿನ ಐತ್ತೂರು ಗ್ರಾಮದ ಕೊಣಾಜೆ ರಸ್ತೆಯಲ್ಲಿ ಆನೆ ತುಳಿತ್ತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರದಂದು ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು ಕೊಣಾಜೆ ಸಮೀಪದ ಗೇರ್ತಿಲ ನಿವಾಸಿ ಚೋಮ ಎಂದು ಗುರುತಿಸಲಾಗಿದೆ. ಚೋಮ ಅವರು ಮರ್ದಾಳದಿಂದ ಮನೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದ

ರೈಲ್ವೇ ಖಾಸಗೀಕರಣದ ವಿರುದ್ಧ ದೇಶಾದ್ಯಂತ ಪ್ರತಿಭಟನೆ

ಪುತ್ತೂರು: ದೇಶದ ಆರ್ಥಿಕತೆಯ ಜೀವಾಳ, ಜನರ ಜೀವನಾಡಿ ರೈಲ್ವೇ ಖಾಸಗೀಕರಣದ ವಿರುದ್ಧ ದೇಶದಾದ್ಯಂತ ಎಲ್ಲಾ ರೈಲ್ವೇ ನಿಲ್ದಾಣಗಳ ಎದುರು ಬೃಹತ್ ಪ್ರತಿಭಟನೆ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್, ದ.ಕ.ಜಿಲ್ಲಾ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ, ವಿವಿಧ ರೈತ ಸಂಘಟನೆಗಳ ಒಕ್ಕೂಟ ಹಾಗೂ ವಿದ್ಯಾರ್ಥಿ ಯುವಜನ ಮಹಿಳಾ ದಲಿತ ಆದಿವಾಸಿ ಹಾಗೂ ಜನಪರ ಸಂಘಟನೆಗಳ ವೇದಿಕೆ ಆಶ್ರಯದಲ್ಲಿ ಬೃಹತ್ ಪ್ರತಿಭಟನಾ ಸಭೆ ಪುತ್ತೂರಿನ ರೈಲ್ವೇ

ಕಡಬ :ಅಕ್ಕಿ ಕಾಳಿನಲ್ಲಿ ನಾಡಗೀತೆ ಬರೆದು ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ ಸುಬ್ರಹ್ಮಣ್ಯ ಮೈಕ್ರೋ ಪರಮೇಶ್

ಅಕ್ಕಿ ಕಾಳಿನಲ್ಲಿ ಬರೆಯುವ ಸೂಕ್ಷ್ಮ ಕಲೆಯನ್ನು ಕರಗತ ಮಾಡಿಕೊಡಿರುವ ಕಲಾ ಸಾಧಕ, ಕಡಬ ತಾಲೂಕಿನ ಕುಕ್ಕೇ ಸುಬ್ರಹ್ಮಣ್ಯದ ಮೈಕ್ರೋ ಪರಮೇಶ್ ಅವರು ನಾಡಗೀತೆಯನ್ನು ಅಕ್ಕಿ ಕಾಳಿನಲ್ಲಿ ಬರೆದು ಇಂಡಿಯಾ ಬುಕ್ ಆಫ್ ರೆಕಾರ್ಡ್ ದಾಖಲೆ ಮಾಡಿದ್ದಾರೆ. 120 ನಿಮಿಷದಲ್ಲಿ 136 ಅಕ್ಕಿ ಕಾಳನ್ನು ಬಳಸಿಕೊಂಡು ನಾಡಗೀತೆ ಜೈ ಭಾರತ ಜನನಿಯ ತನುಜಾತೆ ಜಯ ಹೇ ಕರ್ನಾಟಕ ಮಾತೆ ಪದ್ಯವನ್ನು ಬರೆದು ಈ ಸಾಧನೆ ಮಾಡಿದ್ದಾರೆ. ಅತೀ ಕಡಿಮೆ ಅವಧಿಯಲ್ಲಿ ಕನಿಷ್ಠ ಅಕ್ಕಿ ಕಾಳಿನಲ್ಲಿ ನಾಡಗೀತೆ

ಪುತ್ತೂರು: ಕ್ಯೊಲದಲ್ಲಿ ಅಡಿಕೆ ತುಂಬಿದ ಗೋಣಿ ಕಳವು ಪ್ರಕರಣ: ನಾಲ್ವರ ಬಂಧನ

ಪುತ್ತೂರು: ಬಡಗನ್ನೂರು ಗ್ರಾಮದ ಕ್ಯೂಲ ದ ಹಳೆಯ ಮನೆಯೊಂದರ ಅಟ್ಟದಲ್ಲಿದ್ದ ಅಡಿಕೆ ತುಂಬಿದ ಗೋಣಿಗಳನ್ನು ಕಳವು ಮಾಡಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೃತ್ಯಕ್ಕೆ ಸಂಬಂಧಿಸಿದಂತೆ 4 ಮಂದಿಯನ್ನು ಪೊಲೀಸ್ರು ಬಂಧಿಸಿದ್ದಾರೆ. ಪುತ್ತೂರು ತಾಲೂಕು ಬಡಗನ್ನೂರು ಗ್ರಾಮದ ನಿವಾಸಿಗಳಾದ ಶ್ರವಣ್ ಕೆ, (20) ಹಾಗೂ ಜಯಚಂದ್ರ, (21) ಮತ್ತು ನಿಡ್ಪಳ್ಳಿ ಗ್ರಾಮದ ನಿವಾಸಿಗಳಾದ ಅಶೋಕ, (24) ಮತ್ತು ಪುನೀತ್ (20) ಬಂಧಿತರು ಕ್ಯೋಲ ಸಮೀಪದ ನವೀನ್ ರೈ ಎಂಬವರ ಹಳೆಯ ಮನೆಯ

ಪುತ್ತೂರು: ಉದ್ಯಮಿ ಪ್ರಶಾಂತ್ ಪಲ್ಲತ್ತಡ್ಕ ನಿಧನ

ಪುತ್ತೂರು: ಉದ್ಯಮಿ ಪ್ರಶಾಂತ್ ಪಲ್ಲತ್ತಡ್ಕ (32ವರ್ಷ )ಇವರು ಅಲ್ಪಕಾಲದ ಅನಾರೋಗ್ಯದಿಂದ ನಿಧನ ಹೊಂದಿದರು. ಮೃತರು ಪತ್ನಿ, ತಂದೆ ತಾಯಿ ಅಕ್ಕಂದಿರು, ಸಿಬ್ಬಂದಿ ವರ್ಗ ಹಾಗೂ ಅನೇಕ ಬಂಧು ಮಿತ್ರರನ್ನು ಅಗಲಿದ್ದಾರೆ

ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ‘ಪಾರ್ಥ’ ಪುರುಷರ ಆಭರಣಗಳ ವಿಶೇಷ ಸಂಗ್ರಹ ಅನಾವರಣ

ಪ್ರತಿಷ್ಟಿತ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನ ‘ಪಾರ್ಥ’ ಪುರುಷರ ಆಭರಣಗಳ ಅತೀ ದೊಡ್ಡ ಹಾಗೂ ವಿಶೇಷ ಸಂಗ್ರಹವನ್ನು ನಾಯರ್ ಕನ್ಸ್ಟ್ರಕ್ಷನ್ ಮಾಲಕರಾದ ಸೂರಜ್ ನಾಯರ್ ಅವರು ಅನಾವರಣಗೊಳಿಸಿದರು. ಬಳಿಕ ಮಾತನಾಡಿ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಉತ್ತಮ ಸೇವೆ ಹಾಗೂ ವಿಫುಲವಾದ ಸಂಗ್ರಹ ಇದೆ. ನಾನು ಇಲ್ಲಿನ ಸಂತೃಪ್ತ ಗ್ರಾಹಕನಾಗಿದ್ದೇನೆ. ‘ಪಾರ್ಥ ಸಂಗ್ರಹದಿಂದ ಜಿಎಲ್ ಸಂಸ್ಥೆಯು ಯಶಸ್ವಿಯಾಗಲಿ ಎಂದು‌ ಶುಭಹಾರೈಸಿದ್ರು. ಈ ವೇಳೆ ಜಿಎಲ್

ಪುತ್ತೂರು: ನಗರಸಭೆ ವ್ಯಾಪ್ತಿಯ ರಾಜಕಾಲುವೆ, ಚರಂಡಿ ಹೂಳೆತ್ತುವ ಕಾಮಗಾರಿಯಲ್ಲಿ ಅವ್ಯವಹಾರ: ಲೋಕಾಯುಕ್ತದಿಂದ ತನಿಖೆಗೆ ಆದೇಶ

ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ರಾಜಕಾಲುವೆ, ಚರಂಡಿ ಹೂಳೆತ್ತುವ ಕಾಮಗಾರಿಯಲ್ಲಿ ಭಾರೀ ಅವ್ಯವಹಾರ.ತನಿಖೆ ನಡೆಸುವಂತೆ ಲೋಕಾಯುಕ್ತರಿಂದ ಆದೇಶ. ಪುತ್ತೂರು: ನಗರಸಭೆ ವ್ಯಾಪ್ತಿಯಲ್ಲಿ ರಾಜಕಾಲುವೆ ಹಾಗೂ ಚರಂಡಿಗಳ ಹೂಳೆತ್ತುವ ಕಾಮಗಾರಿಯಲ್ಲಿ ಭಾರೀ ಅವ್ಯವಹಾರ ನಡೆದಿದ್ದು, ಈ ಕುರಿತು ನಗರಸಭೆ ಹಿಂದಿನ ಪೌರಾಯುಕ್ತೆ ರೂಪಾ ಶೆಟ್ಟಿ, ಇಂಜಿನಿಯರ್ ದಿವಾಕರ್ ಹಾಗೂ ಅಕೌಂಟೆಂಟ್ ಚಂದ್ರರಾಮ ದೇವಾಡಿಗ ವಿರುದ್ಧ ತನಿಖೆ ನಡೆಸಲು ಲೋಕಾಯುಕ್ತಕ್ಕೆ ದೂರು ನೀಡಲಾಗಿದ್ದು,

ಪುತ್ತೂರು: ಜಿ.ಎಲ್. ಮಹಲ್ ನ ಭಾರತ್ ಸಿನಿಮಾದಲ್ಲಿ ಕಣ್ಣೂರು ಸ್ಕ್ವಾಡ್ ಸಿನಿಮಾ ವೀಕ್ಷಿಸಿದ ಪೊಲೀಸ್ ಅಧಿಕಾರಿಗಳು

ಪುತ್ತೂರು ಜಿಎಲ್ ಮಹಲಿನ ಭಾರತ್ ಸಿನಿಮಾ ಮಂದಿರದಲ್ಲಿ ಪೊಲಿಸ್ ಇಲಾಖೆಯ ವಿನಂತಿ ಮೇರೆಗೆ ಕಣ್ಣೂರ್ ಸ್ಕ್ವಾಡ್ ಸಿನಿಮಾ ವೀಕ್ಷಣೆಗೆ ಜಿಎಲ್ ಸಂಸ್ಥೆ ಅವಕಾಶ ಮಾಡಿಕೊಟ್ಟಿದೆ. ಜಿ ಎಲ್ ಸಂಸ್ಥೆಯ ಮಾಲಕರಾದ ಬಲರಾಮ ಆಚಾರ್ಯ ಅವರ ಕಾರ್ಯವನ್ನು ಮೆಚ್ಚಿ ಪೊಲೀಸ್ ಇಲಾಖೆ ಅಭಿನಂದನಾ ಪತ್ರವನ್ನು ನೀಡಿ ಅಭಿನಂದಿಸಿದರು. ಇದೇ ವೇಳೆ ಜಿಎಲ್ ಸಂಸ್ಥೆಯ ಮಾಲಕರಾದ ಬಲರಾಮ ಆಚಾರ್ಯರವರು ಮಾತನಾಡಿ, ಈ ಸಿನಿಮಾದ ವೀಕ್ಷಣೆ ಮೂಲಕ ಕರ್ನಾಟಕದ ದಕ್ಷ ಪೊಲೀಸ್ ಅಧಿಕಾರಿಗಳಿಗೆ ಇನ್ನಷ್ಟು

ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಚಿನ್ನದ ಪ್ರಭಾವಳಿ ಸಮರ್ಪಿಸಿದ ಪಾಟ್ನಾ ದ ಖ್ಯಾತ ವೈದ್ಯ ಡಾ.ರಾಹುಲ್

ಕುಕ್ಕೆ ಸುಬ್ರಹ್ಮಣ್ಯ ದೇವರ ಭಕ್ತರು ಹಾಗೂ ದೇವಸ್ಥಾನದ ಶಿಷ್ಟಾಚಾರ ವಿಭಾಗದ ನೌಕರ ಹರೀಶ್ ರವರ ಮಿತ್ರರಾದ ಪಾಟ್ನಾ ದ ಖ್ಯಾತ ವೈದ್ಯ ಡಾ.ರಾಹುಲ್ ರವರು ಕುಕ್ಕೆಸುಬ್ರಹ್ಮಣ್ಯ ದೇವರಿಗೆ ಅಂದಾಜು ಸುಮಾರು 30 ಲಕ್ಷ ಮೌಲ್ಯದ ಚಿನ್ನದ ಪ್ರಭಾವಳಿ ಸಮರ್ಪಿಸಿದರು. ಸದ್ರಿ ಭಕ್ತರು ಈ ಹಿಂದೆ ಅನ್ನ ದಿನಕ್ಕಾಗಿ 20 ಲಕ್ಷ ರೂಪಾಯಿ ನೀಡಿದ್ದರು. ಸಂತಾನ ಭಾಗ್ಯ ಲಭಿಸದ ಕಾರಣ ಈ ಹಿಂದೆ ಸುಬ್ರಹ್ಮಣ್ಯ ದೇವರಲ್ಲಿ ಪ್ರಾರ್ಥನೆ ಮಾಡಿ ಹರಕೆ ಹೊತ್ತು ಸಂತಾನ ಪ್ರಾಪ್ತಿಯಾದ

ಪುತ್ತೂರು: ಅ.22ರಂದು ಪುತ್ತೂರುದ ಪಿಲಿಗೊಬ್ಬು -2023 ಹಾಗೂ ಫುಡ್ ಫೆಸ್ಟ್

ಪುತ್ತೂರು: ತುಳು ನಾಡಿನ ಧಾರ್ಮಿಕ ಹಿನ್ನೆಲೆ ಇರುವ ಜಾನಪದ ಕಲೆಯಾದ ಹುಲಿವೇಷ ಕುಣಿತವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಅ. 22ರಂದು ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು -2023 ಹಾಗೂ ಫುಡ್ ಫೆಸ್ಟ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪುತ್ತೂರುದ ಪಿಲಿಗೊಬ್ಬು ಸಮಿತಿಯ ಗೌರವಾಧ್ಯಕ್ಷ ಸಹಜ್ ರೈ ಬಳಜ್ಜ ತಿಳಿಸಿದ್ದಾರೆ. ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ