Home ಕರಾವಳಿ Archive by category ಪುತ್ತೂರು (Page 14)

ಚಂದ್ರಯಾನ 3ರ ಯಶಸ್ವಿಗಾಗಿ ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನಿಂದ ಪ್ರಾರ್ಥನೆ

ಭಾರತೀಯರ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಯಶಸ್ವಿಯಾಗಲಿ ಎಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭ ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್, ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ, ಪ್ರಮುಖರಾದ ಎಂ.

ಪುತ್ತೂರು: ಲೈವ್ ವೀಡಿಯೋ ಮಾಡಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನ

ಲೈವ್ ವಿಡಿಯೋ ಮಾಡಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು ಗಂಭೀರ ಸ್ಥಿತಿಯಲ್ಲಿ ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರಿನ ಕಟ್ಟತ್ತಾರು ನಿವಾಸಿ ಅಬ್ದುಲ್ ನಾಸಿರ್ ಆತ್ಮಹತ್ಯೆಗೆ ಯತ್ನಿಸಿದ ಯುವಕ. ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತ್ಮಹತ್ಯೆಗೆ ಯತ್ನಿಸುವ ಮುನ್ನ ಯುವಕ ಬ್ಯಾರಿ ಭಾಷೆಯಲ್ಲಿ ವಿಡಿಯೋ ಮಾಡಿದ್ದು ಕೃತ್ಯಕ್ಕೆ ಕಾರಣ ಹೇಳಿ ನೇಣಿಗೆ ಶರಣಾಗುವುದಾಗಿ

ಪುತ್ತೂರು: ಹಿಂಜಾವೇ ಮುಖಂಡ ಸತೀಶ್ ದಾವಣಗೆರೆ ಬಂಧನಕ್ಕೆ ಖಂಡನೆ

ಪುತ್ತೂರು: ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮದಲ್ಲಿ ಕೋಮು ದ್ವೇಷ ಭಾಷಣ ಮಾಡಿದ ಹಿಂದೂ ಜಾಗರಣ ವೇದಿಕೆಯ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ್ ಸತೀಶ್ ದಾವಣೆಗೆರೆಯವರನ್ನು ಗೌರಿಬಿದನೂರು ಪೊಲೀಸರು ಬಂಧಿಸಿದನ್ನು ಖಂಡಿಸಿ ಪುತ್ತೂರಿನಲ್ಲಿ ಹಿಂದು ಜಾಗರಣ ವೇದಿಕೆಯ ನೇತೃತ್ವದಲ್ಲಿ ದೊಂದಿ ಹಿಡಿದು ಪ್ರತಿಭಟನೆ ನಡೆಸಿದರು. ಹಿಂದು ಜಾಗರಣ ವೇದಿಕೆ ಪ್ರಾಂತ ಸಂಪರ್ಕ ಪ್ರಮುಖ್ ಹರೀಶ್ ಶಕ್ತಿನಗರ ಅವರು ಮಾತನಾಡಿ ಹಿಂ.ಜಾ.ವೇ. ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ್

ಕಡಬ: ರಿಯಾದ್‌ನಲ್ಲಿ ಹ್ಯಾಕರ್‌ ಗಳ ಕುಕೃತ್ಯದಿಂದ ಜೈಲುಪಾಲಾದ ಕಡಬದ ಚಂದ್ರಶೇಖರ್‌

ಹ್ಯಾಕರ್ ಗಳ ಕೈಗೆ ಸಿಲುಕಿ ವಿದೇಶದ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರೋ ಮಂಗಳೂರಿನ ವ್ಯಕ್ತಿಯನ್ನ ಕೇಂದ್ರ ಮತ್ತು ರಾಜ್ಯ ಸರ್ಕಾರ ಬಿಡುಗಡೆಗೊಳಿಸುವಂತೆ ದ‌.ಕ ಜಿಲ್ಲೆಯ ಸಾಮಾಜಿಕ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ದ.ಕ ಜಿಲ್ಲೆಯ ಕಡಬ ತಾಲೂಕು ಐತ್ತೂರು ಗ್ರಾಮದ ಮೂಜೂರು ದಿ.ಕೆಂಚಪ್ಪ ಗೌಡ ಮತ್ತು ಹೇಮಾವತಿ ದಂಪತಿ ಪುತ್ರ ಚಂದ್ರಶೇಖರ ಎಮ್.ಕೆ ರಿಯಾದ್ ನಲ್ಲಿರುವ ಅಲ್ಮಾನರ್ ಸೆರಾಮಿಕ್ಸ್ ಎಂಬ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಆದರೆ ಯಾವುದೋ ಹ್ಯಾಕರ್ ಗಳ

ಪುತ್ತೂರು ಬಿಜೆಪಿ ವತಿಯಿಂದ ತಿರಂಗ ಯಾತ್ರೆ || Triranga Yaatre

ಪೆಟ್ರೋಲ್, ಡ್ರಗ್, ವೆಫನ್ ಸೇರಿ ಮೂರು ಮಾಫಿಯಾಗಳು ಜಗತ್ತಿನ್ನು ಆಳುತ್ತಿದ್ದು, ಇದನ್ನು ಮೋದಿ ನೇತೃತ್ವದ ಸರ್ಕಾರ ದಿಟ್ಟತನದಿಂದ ಎದುರಿಸಿ ನಿಂತಿದೆ. ಜನರಲ್ಲಿ ರಾಷ್ಟ್ರ ಭಕ್ತಿಯ ಉದ್ದೀಪನದ ದೃಷ್ಟಿಯಿಂದ ತಿರಂಗ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿ.ಜೆ.ಪಿ. ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದರೆ ಹೇಳಿದರು. ಅವರು ಪುತ್ತೂರು ಟೌನ್ ಬ್ಯಾಂಕ್ ನಲ್ಲಿ ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ನಡೆದ ತಿರಂಗ ಯಾತ್ರೆಯ ಸಭಾ

ಅಡ್ಯನಡ್ಕ : ಪ್ರಿಂಟಿಂಗ್ ಪ್ರೆಸ್ ಮಾಲಕ ಬಾವಿಗೆ ಬಿದ್ದುಆತ್ಮಹತ್ಯೆ

ಪುತ್ತೂರು:ಅಡ್ಯನಡ್ಕದಲ್ಲಿ ಪ್ರಿಂಟಿಂಗ್ ಪ್ರೆಸ್ ಹೊಂದಿ ವ್ಯವಹಾರ ನಿರ್ವಹಿಸುತ್ತಿದ್ದ ಪುತ್ತೂರು ಪೋಳ್ಯ ನಿವಾಸಿಯೊಬ್ಬರು ಮನೆ ಸಮೀಪದ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.16ರಂದು ಬೆಳಕಿಗೆ ಬಂದಿದೆ. ಅಡ್ಯನಡ್ಕದಲ್ಲಿ ಅನುಗ್ರಹ ಪ್ರಿಂಟಿಂಗ್ ಪ್ರೆಸ್ ಹೊಂದಿರುವ ಪೋಳ್ಯ ನಿವಾಸಿ ಪದ್ಮಯ್ಯ ಗೌಡ(50ವ)ರವರು ಮೃತಪಟ್ಟವರು.ಪೋಳ್ಯ ದಿ.ಲಿಂಗಪ್ಪ ಗೌಡ ಅವರ ಪುತ್ರ ಪದ್ಮಯ್ಯ ಗೌಡ ಅವರು ಆರಂಭದಲ್ಲಿ ಪುತ್ತೂರಿನಲ್ಲಿ ಹುಸೈನ್ ಅವರ ಮಾಲಕತ್ವದ ಕೆನರಾ

ಶಿಥಿಲಾವಸ್ಥೆಯಲ್ಲಿ ಕರ್ನಾಟಕ-ಕೇರಳ ಸಂಪರ್ಕದ ಕೊಂಡಿ

ಪುತ್ತೂರು; ಎರಡು ಪ್ರಬಲ ರಾಜ್ಯಗಳ ಸಂಪರ್ಕದ ಕೊಂಡಿಯಾಗಿರುವ ಕಿರುಸೇತುವೆಯೊಂದು ಯಾರೂ ಕೇಳುವವರಿಲ್ಲದೆ ಅನಾಥಪ್ರಜ್ಞೆಯಿಂದ ಶಿಥಿಲಗೊಂಡು ಬಳಲುತ್ತಿದೆ. ಆರ್ಥಿಕ ಮತ್ತು ಶೈಕ್ಷಣಿಕವಾಗಿ ಬಲಾಡ್ಯವಾಗಿರುವ ಈ ರಾಜ್ಯಗಳ ನಡುವೆ ಈ ಕಿರುಸೇತುವೆಗೆ ಕಾಯಕಲ್ಪವಾಗದೆ ಇಲ್ಲಿ ಸಂಚರಿಸುವ ವಾಹನಗಳಿಗೆ ಮಾರಕ ಪ್ರದೇಶವಾಗಿ ಮಾರ್ಪಟ್ಟಿದೆ. ಸುಮಾರು 42 ವರ್ಷಗಳ ಹಿಂದೆ ನಿರ್ಮಿತವಾಗಿರುವ ಕಿರುಸೇತುವೆಯ ಅನಾಥ ಸ್ಥಿತಿ ಎರಡೂ ರಾಜ್ಯಗಳಿಗೆ ಅರ್ಥವಾಗಿಲ್ಲ. ಎರಡೂ ರಾಜ್ಯಗಳಿಗೆ ಆದಾಯ

ಪುತ್ತೂರು: ಗೃಹರಕ್ಷಕದಳ ಕಛೇರಿ ಕಟ್ಟಡಕ್ಕೆ ಸರಕಾರದಿಂದ ಜಾಗ ಮಂಜೂರು

  ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಪುತ್ತೂರು ಘಟಕವು ಸುಮಾರು 50 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಹೊಸ ಕಛೇರಿ ನಿರ್ಮಿಸುವ ಸಲುವಾಗಿ ಸರಕಾರದಿಂದ 10 ಸೆಂಟ್ಸ್ ಖಾಲಿ ಜಾಗ ಕೊಟೆಚಾ ಸಭಾಂಗಣದ ಸಮೀಪದ ಶಿವನಗರದಲ್ಲಿ ಮಂಜೂರಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಪುತ್ತೂರು ಘಟಕಕ್ಕೆ ಭೇಟಿ ನೀಡಿ ಹೊಸತಾಗಿ ಮಂಜೂರಾದ ಜಾಗದ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಪುತ್ತೂರು ಘಟಕದ ಘಟಕಾಧಿಕಾರಿ ಅಭಿಮನ್ಯು ರೈ,

ಕಡಬ : ತಹಸೀಲ್ದಾರ್ ರಮೇಶ್ ಬಾಬು ಅವರಿಗೆ ಬೀಳ್ಕೊಡುಗೆ

ಕಂದಾಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವವರು ಸಾರ್ವಜನಿಕರ ಅಹವಾಲುಗಳನ್ನು ತಾಳ್ಮೆಯಿಂದ ಆಲಿಸಿ ಹಸನ್ಮುಖಿ ಸೇವೆ ನೀಡಿದಾಗ ಮಾತ್ರ ನಾವು ಮಾಡುವ ಸೇವೆ ಸಾರ್ಥಕವಾಗುತ್ತದೆ ಎಂದು ಕಡಬದಿಂದ ಗುಂಡ್ಲುಪೇಟೆಗೆ ವರ್ಗಾವಣೆಗೊಂಡ ತಹಸೀಲ್ದಾರ್ ಟಿ.ರಮೇಶ್ ಬಾಬು ಹೇಳಿದರು. ಅವರು ಶನಿವಾರ ಕಡಬ ತಾಲೂಕು ಆಡಳಿತ ಸೌಧದಲ್ಲಿ ಇಲ್ಲಿ ಸಿಬ್ಬಂದಿಗಳು ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕಂದಾಯ ಇಲಾಖೆಗೆ ಸಾರ್ವಜನಿಕರು ತಮ್ಮ

ಪುತ್ತೂರು : ತುಳು ಲಿಪಿಯಲ್ಲಿ ಭಗವದ್ಗೀತೆ ಬರೆದ ಪುತ್ತೂರಿನ ಮಹಿಳೆ

ಪುತ್ತೂರು : ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕು ಎನ್ನುವ ಒತ್ತಾಯಗಳು ಊರ್ಜಿತದಲ್ಲಿರುವ ಸಮಯದಲ್ಲಿ ತುಳು ಭಾಷೆ, ಲಿಪಿಯಲ್ಲಿ ಹಲವಾರು ಕೃತಿಗಳು ಬರಲಾರಂಭಿಸಿದೆ. ನೇಪತ್ಯಕ್ಕೆ ಸರಿದಿದ್ದ ತುಳು ಲಿಪಿಯನ್ನು ಮತ್ತೆ ಪರಿಚಯಿಸುವ ಕಾರ್ಯ ಈಗಾಗಲೇ ನಡೆದಿದ್ದು, ಈ ಸಾಲಿಗೆ ಇನ್ನೊಂದು ಹೊಸ ಪ್ರಯತ್ನ ಸೇರ್ಪಡೆಗೊಂಡಿದೆ. ಭಗವದ್ಧೀತೆಯ 18 ಶ್ಲೋಕ ಮತ್ತು ಸಾರವನ್ನು ತುಳು ಲಿಪಿಯಲ್ಲಿ ಮತ್ತು ಕನ್ನಡ ಲಿಪಿಯ ಮೂಲಕ ತುಳುವಿನಲ್ಲಿ ಬರೆಯಲಾಗಿದ್ದು,