Home ಕರಾವಳಿ Archive by category ಪುತ್ತೂರು (Page 22)

ಪುತ್ತೂರು ಬ್ಯಾನರ್ ಪ್ರಕರಣ : ಗಾಯಾಳುಗಳ ಆರೋಗ್ಯ ವಿಚಾರಿಸಿದ ನಟಿ ಹರ್ಷಿಕಾ ಪೂನಚ್ಚ | Harshika Poonacha

ಪುತ್ತೂರಿನಲ್ಲಿ ಪೋಲಿಸ್ ದೌರ್ಜನ್ಯದಿಂದ ಗಾಯಗೊಂಡಿರುವ ಹಿಂದೂ ಕಾರ್ಯಕರ್ತರನ್ನು ನಟಿ ಹರ್ಷಿಕಾ ಪೂನಚ್ಚ ಭೇಟಿ ಮಾಡಿದರು.ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಕಾರ್ಯಕರ್ತರನ್ನು ಭೇಟಿಯಾದ ನಟಿ ಹರ್ಷಿಕಾ ಪೂನಚ್ಚ ಗಾಯಾಳುಗಳ ಆರೋಗ್ಯ ವಿಚಾರಿಸಿ ಘಟನೆ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದರು.ಗಾಯಾಳು ಯುವಕರಿಗೆ ಸಾಂತ್ವನ ಹೇಳಿದ ನಟಿ

ನಳಿನ್ ಕುಮಾರ್ ಕಟೀಲ್ ವಿರುದ್ಧ ಹಿಂದೂ ಮಹಾಸಭಾ ಕಿಡಿ

ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವಿರುದ್ಧ ಹಿಂದೂ ಮಹಾಸಭಾ ಕಿಡಿಕಾರಿದೆ. ನಳಿನ್ ಕುಮಾರ್ ಕಟೀಲ್ ಅವರು ತಾಕತ್ತಿದ್ದರೆ ಪಕ್ಷೇತರರಾಗಿ ಸ್ಪರ್ಧಿಸಲಿ, ಅರುಣ್ ಕುಮಾರ್ ಪುತ್ತಿಲ ಅವರು ಪಡೆದ ಮತಗಳ 10 ಶೇಖಡಾ ಮತಗಳನ್ನು ಪಡೆದು ತೋರಿಸಲಿ ಎಂದು ಹಿಂದೂ ಮಹಾಸಭಾ ಚಾಲಕ್ ಧರ್ಮೇಂದ್ರ ಅಮೀನ್ ಸವಾಲೆಸೆದಿದ್ದಾರೆ. ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಳಿನ್ ಕುಮಾರ್ ಕಟೀಲು ಅವರಿಗೆ ವೈಯಕ್ತಿಕವಾಗಿ ಚುನಾವಣೆ ಎದುರಿಸುವ

ಪುತ್ತೂರು ಪೊಲೀಸ್ ದೌರ್ಜನ್ಯ ಪ್ರಕರಣ – ಆಸ್ಪತ್ರೆಗೆ ದಿ. ಹರ್ಷನ ಸಹೋದರಿ ಅಶ್ವಿನಿ ಭೇಟಿ

ಪುತ್ತೂರಿನಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಕಾಯಕರ್ತರ ಆರೋಗ್ಯವನ್ನು ಶಿವಮೊಗ್ಗದ ದಿವಂಗತ ಹರ್ಷನ ಸಹೋದರಿ ಅಶ್ವಿನಿಯವರು ವಿಚಾರಿಸಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅಶ್ವಿನಿ ಅವರು ಕಾರ್ಯಕರ್ತರ ಸ್ಥಿತಿಯನ್ನ ನೋಡಿ ತುಂಬಾ ಬೇಸರಗೊಂಡಿದ್ದೇನೆ. ಇವತ್ತು ಅರುಣ್ ಪುತ್ತಿಲ ಇಲ್ಲದಿದ್ದರೆ ಕಾರ್ಯಕರ್ತರನ್ನ ಜೀವಂತ ನೋಡುತ್ತಿರಲಿಲ್ಲ. ಕಾರ್ಯಕರ್ತರು ಹಿಂದೂ ಸಮಾಜ ಗಟ್ಟಿಗೊಳಿಸಲು ಹೋರಾಡ್ತಾ ಇದ್ದಾರೆ.

ಪುತ್ತಿಲ ಪರಿವಾರ ಸಂಘಟನೆಯ ಲಾಂಛನ ಬಿಡುಗಡೆ : 5ಸಾವಿರಕ್ಕೂ ಅಧಿಕ ಮಂದಿ ಪುತ್ತಿಲರೊಂದಿಗೆ ಹೆಜ್ಜೆ

ಪುತ್ತೂರು: ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ಬೆಂಬಲಿಗರಿಂದ ನಮ್ಮ ನಡಿಗೆ ಶ್ರೀ ಮಹಾಲಿಂಗೇಶ್ವರನ ನಡೆಗೆ” ಎಂಬ ಬೃಹತ್ ಪಾದಯಾತ್ರೆ ಹಾಗೂಸೇವಾ ಸಮರ್ಪಣಾ ಕಾರ್ಯಕ್ರಮ” ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಾಲಯದ ದೇವರ ಮಾರುಗದ್ದೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ `ಪುತ್ತಿಲ ಪರಿವಾರ’ ಸಂಘಟನೆಯ ಲಾಂಚನ ಬಿಡುಡೆಗೊಳಿಸಲಾಯಿತು. ದರ್ಬೆಯಲ್ಲಿ ಚಾಲನೆ ಪಡೆದುಕೊಂಡ ಕಾಲ್ನಡಿಗೆ ಜಾಥಾ, ಮುಖ್ಯರಸ್ತೆಯಾಗಿ ಸಾಗಿ ದೇವಸ್ಥಾನದ ದೇವರಮಾರು ಗದ್ದೆಗೆ

ಅರುಣ್ ಕುಮಾರ್ ಪುತ್ತಿಲ-ಡಾ. ಪ್ರಭಾಕರ್ ಭಟ್ ಪರಸ್ಪರ ಮುಖಾಮುಖಿ

ಪುತ್ತೂರು: ಮದುವೆ ಕಾರ್ಯಕ್ರಮವೊಂದರಲ್ಲಿ ಪುತ್ತೂರು ಕ್ಷೇತ್ರದ ಪರಾಜಿತ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಮತ್ತು ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಪರಸ್ಪರ ಮುಖಾಮುಖಿಯಾದ ಪ್ರಸಂಗ ನಡೆದಿದೆ. ಪೆರಾಜೆಯ ಮಾಣಿ ಶ್ರೀರಾಮಚಂದ್ರಾಪುರ ಮಠದಲ್ಲಿ ನಡೆದ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದ ಅರುಣ್ ಕುಮಾರ್ ಪುತ್ತಿಲ ಮತ್ತು ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಮುಖಾಮುಖಿಯಾಗಿದ್ದಾರೆ. ಈ ವೇಳೆ ಕೈ ಮುಗಿದು ನಮಸ್ಕರಿಸಿದ ಪುತ್ತಿಲ ಪ್ರಭಾಕರ್ ಭಟ್ ಅವರ

ವಿಟ್ಲ : ಅಕ್ರಮ ಗೋವು ಸಾಗಾಟ, ರಕ್ಷಣೆ

ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನವನ್ನು ಪೊಲೀಸರಿಗೊಪ್ಪಿಸಿ ಎರಡು ಜಾನುವಾರುಗಳನ್ನು ರಕ್ಷಣೆ ಮಾಡಿದ ಘಟನೆ ವಿಟ್ಲ ಸಮೀಪದ ಸಾಲೆತ್ತೂರು ಎಂಬಲ್ಲಿ ನಡೆದಿದೆ. ಈ ಬಗ್ಗೆ ತಿಳಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪಿಕಪ್ ವಾಹನವನ್ನು ತಡೆದು ಪೊಲೀಸರಿಗೊಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.

ನಾವೆಲ್ಲ ಒಂದಾಗಿ ಪಕ್ಷ, ಸಂಘಟನೆ, ದೇಶವನ್ನು ಕಟ್ಟೋಣ : ಯತ್ನಾಳ್

ಪುತ್ತೂರು: ನಡೆದಿರುವ ಘಟನೆಯನ್ನು ಮರೆತು ಮತ್ತೊಮ್ಮೆ ನಾವೆಲ್ಲ ಒಂದಾಗಿ ಪಕ್ಷ, ಸಂಘಟನೆ, ದೇಶವನ್ನು ಕಟ್ಟೋಣ ಎಂದು ವಿಜಯಪುರ ನಗರ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ಬಿಜೆಪಿ ನಾಯಕರಿಗೆ, ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಂದ ಹಲ್ಲೆಗೊಳಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳ ಆರೋಗ್ಯ ವಿಚಾರಣೆಗಾಗಿ ಪುತ್ತೂರಿಗೆ ಆಗಮಿಸಿದ್ದ ಯತ್ನಾಳ್ ಸಂಘ ಕಾರ್ಯಾಲಯಕ್ಕೆ ಭೇಟಿ ನೀಡಿ ಬಳಿಕ ಬಿಜೆಪಿ

ಯತ್ನಾಳ್ ಪುತ್ತೂರು ಅಸ್ಪತ್ರೆ ಭೇಟಿ ಸಂದರ್ಭ – ಅಜಿತ್ ರೈ ಹೊಸಮನೆಯನ್ನು ಹೊರದೂಡಿದ ಹಿಂದೂ ಕಾರ್ಯಕರ್ತರು

ಪುತ್ತೂರು: ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಪುತ್ತೂರು ಅಸ್ಪತ್ರೆಗೆ ಆಗಮಿಸಿದ ಸಂದರ್ಭ ಬಿಜೆಪಿಯ ಅಜಿತ್ ರೈ ಹೊಸಮನೆಯನ್ನು ಹಿಂದೂ ಕಾರ್ಯಕರ್ತರು ಹೊರದೂಡಿದ ಘಟನೆ ನಡೆದಿದೆ. ಪೋಲೀಸ್ ದೌರ್ಜನ್ಯದಿಂದ ಗಾಯಗೊಂಡವರನ್ನು ಭೇಟಿಯಾಗಲು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಅವರು ಅರುಣ್ ಕುಮಾರ್ ಪುತ್ತಿಲ ಅವರೊಂದಿಗೆ ಅಸ್ಪತ್ರೆಯ ಒಳಹೋಗುತ್ತಿದ್ದಂತೆ, ಒಳಪ್ರವೇಶಿಸಲು ಯತ್ನಿಸಿದ ಬಿಜೆಪಿಯ ಅಜಿತ್ ರೈ ಹೊಸಮನೆಯನ್ನು ಹಿಂದೂ ಕಾರ್ಯಕರ್ತರು ಹೊರ ತಳ್ಳಿದ್ದಾರೆ. ಈ ಹಿಂದೆ

ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ – ಆಸ್ಪತ್ರೆಗೆ ಭೇಟಿ ನೀಡಿದ ಯತ್ನಾಳ್

ಪುತ್ತೂರಿನಲ್ಲಿ ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ಎಸಗಿದ್ದು, ಪುತ್ತೂರಿನ ಆಸ್ಪತ್ರೆಯಲ್ಲಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆಋಓಗ್ಯ ವಿಚಾರಿಸಿದರು.

ಪುತ್ತೂರು: ಬ್ಯಾನರ್ ಪ್ರಕರಣ – ಪಿಎಸ್‍ಐ, ಪಿಸಿ ಅಮಾನತು, ಡಿವೈಎಸ್‍ಪಿ ವಿರುದ್ಧ ಶಿಸ್ತು

ಪುತ್ತೂರು: ಬ್ಯಾನರ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಒಳಗಾದ ಯುವಕರ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿದ್ದು, ದೌರ್ಜನ್ಯಕ್ಕೊಳಗಾದ ಯುವಕ ಅವಿನಾಶ್ ತಂದೆ ವೇಣುನಾಥ ನರಿಮೊಗರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪಿಎಸ್‍ಐ, ಪಿಸಿಯನ್ನು ಅಮಾನತುಗೊಳಿಸಿದ್ದಾರೆ. ಪುತ್ತೂರು ಡಿವೈಎಸ್‍ಪಿ ಪುತ್ತೂರು ಗ್ರಾಮಾಂತರ ಠಾಣೆ ಪಿಎಸ್‍ಐ, ಪುತ್ತೂರು ಗ್ರಾಮಾಂತರ ಠಾಣೆಯ ಪಿಸಿ ಹರ್ಷಿತ್ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ವಿರುದ್ಧ ಪುತ್ತೂರು