Home ಕರಾವಳಿ Archive by category ಪುತ್ತೂರು (Page 3)

ಪುತ್ತೂರು: ಕರ್ನಾಟಕ ಪೊಲೀಸ್ ರನ್: ಮಾದಕ ದ್ರವ್ಯಗಳ ದುಷ್ಪರಿಣಾಮದ ಜಾಗೃತಿ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಸುವರ್ಣ ಮಹೋತ್ಸವದ ಅಂಗವಾಗಿ ಕರ್ನಾಟಕ ಪೊಲೀಸ್ ರನ್ – 2024 ಕಾರ್ಯಕ್ರಮಕ್ಕೆ ಪುತ್ತೂರಿನಲ್ಲಿ ದರ್ಬೆ ಬೈಪಾಸ್ ವೃತ್ತದಿಂದ ನಗರ ಪೊಲೀಸ್ ಠಾಣೆಯ ತನಕದ ಪೊಲೀಸ್ ರನ್ ಗೆ ದ.ಕ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿ ಬಿ ರಿಷ್ಯಂತ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ

ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿಯಿಂದ ಪ್ರತಿಭಟನೆ-ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

ಪುತ್ತೂರು: ರಾಜ್ಯಾದ್ಯಂತ ನಡೆದ ಹಿಂದೂ ವಿರೋಧಿ ಕೃತ್ಯವನ್ನು ವಿರೋಧಿಸಿ ಪುತ್ತೂರಿನಲ್ಲಿ ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಯಿತು. ದರ್ಬೆ ವೃತ್ತದ ಬಳಿ ಜಮಾವಣೆಗೊಂಡ ಸಮಿತಿ ಕಾರ್ಯಕರ್ತರು ದರ್ಬೆ ವೃತ್ತದ ಬಳಿ ಕುಳಿತು ಪ್ರತಿಭಟನೆ ನಡೆಸಿದರು. ಪ್ರತಭಟನಾಕಾರರನ್ನು ಅಲ್ಲಿಂದ ತೆರವುಗೊಳಿಸಲು ಪೊಲೀಸರು ಮುಂದಾದಾಗ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ

ಅಪಘಾತಗೊಂಡ ಯುವಕ ಚಿಕಿತ್ಸೆ ಫಲಿಸದೆ ಸಾವು

ಪುತ್ತೂರು: ಕಳೆದ ಒಂದು ವಾರಗಳ ಹಿಂದೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ನಗರದ ಬೈಪಾಸ್‌ನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಬೀರ್ಮಕಜೆ ಎಂಬಲ್ಲಿನ ನಿವಾಸಿ ಪ್ರಸಾದ್(27) ಮೃತಪಟ್ಟ ಯುವಕ. ನಗರದ ಬೈಪಾಸ್‌ನಲ್ಲಿರುವ ಗ್ಯಾರೇಜ್‌ನಲ್ಲಿ ಮೆಕಾನಿಕ್ ಆಗಿರುವ

ಪುತ್ತೂರು: ಬಿಜೆಪಿಯಿಂದ ಗ್ರಾಮ ಚಲೋ ಕಾರ್ಯಾಗಾರ

ಪುತ್ತೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಭಾರಿ ದೊಡ್ಡ ಪ್ರಮಾಣದಲ್ಲಿ ಮುನ್ನಡೆ ಒದಗಿಸಿಕೊಡುವ ಭರವಸೆಯನ್ನು ಪುತ್ತೂರು ಕ್ಷೇತ್ರದ ಎಲ್ಲಾ ಕಾರ್ಯಕರ್ತರು ನೀಡಿದ್ದಾರೆ. ಈ ಕಾರಣದಿಂದ ಜಿಲ್ಲೆಯಲ್ಲಿ 3 ಲಕ್ಷಕ್ಕೂ ಅಧಿಕ ಮತಗಳಿಂದ ಗೆದ್ದೆ ಗೆಲ್ಲುತ್ತೇವೆ. ಮರಳಿ ಪ್ರಧಾನಿ ನರೇಂದ್ರ ಮೋದಿ ದೇಶದ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತ್ತು ಪ್ರಧಾನಿ

ಪುತ್ತೂರು : ಬೈಕ್ ಹಾಗೂ ಮಿನಿ ಗೂಡ್ಸ್ ವಾಹನ ಡಿಕ್ಕಿ : ಬೈಕ್ ಸವಾರ ಸಾವು

ರಾಮಕುಂಜ: ಬೈಕ್ ಹಾಗೂ ಮಿನಿ ಗೂಡ್ಸ್ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ಮಾ.4ರಂದು ರಾತ್ರಿ ನಡೆದಿದೆ. ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಅಂತಿಮ ಬಿ.ಎ.ವಿದ್ಯಾರ್ಥಿ, ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜೀರ ನಿವಾಸಿ ಗುರುವಪ್ಪ ಅವರ ಪುತ್ರ ಶ್ರೀಜಿಸ್(20ವ.)ಮೃತಪಟ್ಟ ದುರ್ದೈವಿಯಾಗಿದ್ದಾರೆ. ಶ್ರೀಜಿಸ್‌ರವರು ರಾಮಕುಂಜ

ಕಡಬ: ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ

ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಸರಕಾರೀ ಪ್ರಥಮ ದರ್ಜೆ ಕಾಲೇಜು ಬಳಿ ಮಾಸ್ಕ್ ಮತ್ತು ಹ್ಯಾಟ್ ದರಿಸಿದ್ದ ದಾಳಿಕೋರನೊಬ್ಬನು ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾನೆ. ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಕಾಲೇಜು ಆವರಣದಲ್ಲಿ ನಿಂತಿದ್ದಾಗ ಆಮ್ಲ ದಾಳಿ ಆಗಿದೆ. ಮುಖಕ್ಕೆ ಗಂಭಿರ ಗಾಯಗಳಾಗಿರುವುದಾಗಿ ಹೇಳಲಾಗಿದೆ. ಸಂತ್ರಸ್ತ ಯುವತಿಯರನ್ನು ಕಡಬ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರಂಭಿಕ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ಕರೆ

ಪುತ್ತೂರು: ಮಾ.7ರಂದು ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರೈತ ಸಂಘದಿಂದ ಪ್ರತಿಭಟನೆ

ಪುತ್ತೂರು: ರೈತರ ಫಲವತ್ತಾದ ಭೂಮಿಯನ್ನು ಹಾಳು ಮಾಡುವ ಕಾರ್ಯವನ್ನು ಮಾಡಲಾಗುತ್ತಿದೆ. ಅಧಿಕಾರಿಗಳಿಗೆ ರೈತರ ಬಗ್ಗೆ ಕಳಕಳಿ ಇರುತ್ತಿದ್ದರೆ, ಇಂತಹ ದುಸ್ಥಿತಿ ಬರುತ್ತಿರಲಿಲ್ಲ. ಹೊಸ ಸರ್ಕಾರ ಅಸ್ಥಿತ್ವಕ್ಕೆ ಬಂದು 6 ತಿಂಗಳು ಕಳೆದರೂ, ಜಿಲ್ಲಾಧಿಕಾರಿಯವರು ರೈತರ ಸಭೆ ನಡೆಸಿಲ್ಲ. ವಿವಿಧ ಬೇಡಿಕೆಯನ್ನು ಇಟ್ಟುಕೊಂಡು ಮಾ.7ರಂದು ಮಧ್ಯಾಹ್ನ 2ರಿಂದ ಬಿಸಿರೋಡಿನಿಂದ ಟ್ರ್ಯಾಕ್ಟರ್ ಹಾಗೂ ವಾಹನ ಜಾಥಾ ಮೂಲಕ ಜಿಲ್ಲಾಧಿಕಾರಿಗಳ ಕಛೇರಿ ಎದುರು ಸಾಯಂಕಾಲ 4ಕ್ಕೆ ಬೃಹತ್

      ಪುತ್ತೂರು: ಉತ್ಕೃಷ್ಟ ಸಂಸ್ಕೃತಿಯ ಪ್ರತೀಕ ತುಳು ಭಾಷೆ: ವಾಮನ ಪೈ

ಪುತ್ತೂರು: ಭಾಷೆ ಮಾತ್ರವಾಗಿರದೆ ಉತ್ಕೃಷ್ಟ ಸಂಸ್ಕೃತಿಯ ಪ್ರತೀಕವಾಗಿರುವ ತುಳುವಿಗೆ ಅಪಾರ ಶಕ್ತಿಯಿದೆ. ಪ್ರಪಂಚದಲ್ಲೇ ಅತ್ಯಂತ ಹಳೆಯ ಭಾಷೆಯಾಗಿರುವ ತುಳುವಿಗೆ ಹಾಗೂ ತುಳು ಭಾಷಿಗರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಗ್ಗಳಿಕೆಯೊಂದಿಗೆ ವಿಶೇಷ ಗೌರವವಿದೆ ಎಂದು ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ವಾಮನ ಪೈ ಹೇಳಿದರು. ತುಳುಕೂಟೊ ಪುತ್ತೂರು ತಾಲೂಕು ಸಮಿತಿ ಆಶ್ರಯದಲ್ಲಿ ಮಂಜಲ್ಪಡ್ಪು ಸುದಾನ ವಸತಿಯುತ ಶಾಲೆಯ ಆವರಣದಲ್ಲಿ ಆಯೋಜಿಸಲಾಗಿರುವ ಎರಡು

ಪುತ್ತೂರಿನಲ್ಲಿ ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ಮಳಿಗೆ ಶುಭಾರಂಭ

ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ಲಕ್ಷಾಂತರ ಜನರ ಅತ್ಯಂತ ವಿಶ್ವಾಸಾರ್ಹ ಆಭರಣ ಬ್ರ್ಯಾಂಡ್ ಆಗಿದ್ದು, ಇದೀಗ ಪುತ್ತೂರಿನಲ್ಲಿ ತನ್ನ 10ನೇ ಆಭರಣ ಶೋರೂಂ ಉದ್ಘಾಟನೆಗೊಂಡಿತು. ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ಶೋರೂಂನ್ನು ಖ್ಯಾತ ನಟಿ ಪ್ರಿಯಾಮಣಿ ಅವರು ಉದ್ಘಾಟಿಸಿದರು. ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಅವರು ವೈವಿಧ್ಯಮಯ ವಜ್ರಾಭರಣದ ಸಂಗ್ರಹವನ್ನು ಅನಾವರಣ ಮಾಡಿದರು. ಎಸ್‌ಡಿಪಿಐ ಅಧ್ಯಕ್ಷ ಹಾಜೀ ಇಬ್ರಾಹಿಂ

ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ

ಜಗನ್ನಿಯಾಮಕನಾದ ಭಗವಂತನಿಗೆ ನಾವು ಪ್ರತಿಷ್ಠೆ, ಬ್ರಹ್ಮಕಲಶ ಮಾಡಲು ಸಾಧ್ಯವಿಲ್ಲ. ಹಾಗಿದ್ದರೂ ದೇವಸ್ಥಾನ ಕಟ್ಟಿ ಪ್ರತಿಷ್ಠಾದಿ ಉತ್ಸವಗಳನ್ನು ಮಾಡುವುದರ ಹಿಂದೆ ಆತ್ಮ ಸಾಕ್ಷಾತ್ಕಾರದ ಒಳಮರ್ಮವಿದೆ. ಮನುಷ್ಯ ತನ್ನ ಬದುಕು ಹಸನು ಮಾಡಿಕೊಳ್ಳಲು ಧರ್ಮದ ಹಾದಿಯಲ್ಲಿ ನಡೆಯಬೇಕು. ದೇವಸ್ಥಾನಗಳಲ್ಲಿ ನಡೆಯುವ ಬ್ರಹ್ಮಕಲಶೋತ್ಸವ ಕೂಡ ಧರ್ಮಜೀವನಕ್ಕೆ ಒಂದು ಮೆಟ್ಟಿಲಾಗಿ ಫಲ ನೀಡುತ್ತದೆ ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹೇಳಿದರು. ಅವರು