Home ಕರಾವಳಿ Archive by category ಪುತ್ತೂರು (Page 41)

ಪುತ್ತೂರು : ಅ.27 ರಂದು ಚೆನ್ನಾವರ ಮುಹಿಯುದ್ದಿನ್ ಜುಮಾ ಮಸೀದಿಯ ಖಿದ್ಮತುಲ್ ಇಸ್ಮಾಂ ಜಮಾಅತ್ ಕಮಿಟಿಗೊಳಪಟ್ಟ ಸಿರಾಜುಲ್ ಉಲೂಂ ಮದ್ರಸದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

ಪುತ್ತೂರು: ಸುಮಾರು ರೂ. 30ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಚೆನ್ನಾವರ ಮುಹಿಯುದ್ದಿನ್ ಜುಮಾ ಮಸೀದಿಯ ಖಿದ್ಮತುಲ್ ಇಸ್ಮಾಂ ಜಮಾಅತ್ ಕಮಿಟಿಗೊಳಪಟ್ಟ ಸಿರಾಜುಲ್ ಉಲೂಂ ಮದ್ರಸದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಅ. 27ರಂದು ನಡೆಯಲಿದೆ ಎಂದು ಮಸೀದಿ ಕಮಿಟಿ ಅಧ್ಯಕ್ಷ ಶಾಫಿ ಚೆನ್ನಾರ್ ತಿಳಿಸಿದ್ದಾರೆ. ಅವರು ಮಂಗಳವಾರ ಪುತ್ತೂರು ಪ್ರೆಸ್‌ಕ್ಲಬ್‌ನಲ್ಲಿ

ಪ್ರತಿಭಾ ಕುಳಾಯಿಯವರ ವಿರುದ್ಧದ ಮಾನಹಾನಿ ಪ್ರಕರಣದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಮನವಿ

ಪುತ್ತೂರು : ಸುರತ್ಕಲ್ ಟೋಲ್‌ಗೇಟ್ ತೆರವು ಹೊರಾಟದಲ್ಲಿ ಮುಂಚೂಣಿಯಲ್ಲಿದ್ದ ಸುರತ್ಕಲ್‌ನ ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಕುಳಾಯಿರವರನ್ನು ಪೊಲೀಸರು ವಶಕ್ಕೆ ಪಡೆಯುವ ಸಂದರ್ಭದ ವೀಡಿಯೋ, ಫೋಟೋಗಳ ಮಾಧ್ಯಮ ತುಣುಕುಗಳನ್ನು ಪೇಸ್‌ಬುಕ್‌ನಲ್ಲಿ ಶ್ಯಾಮ ಸುದರ್ಶನ ಭಟ್ ಎಂಬವರು ಲೈಂಗಿಕ ಸಂಜೆಗಳ ಭಾಷೆಯನ್ನು ಬಳಸಿ ಪ್ರತಿಭಾ ಕುಳಾಯಿಯವರನ್ನು ನಿಂದಿಸಿದ್ದಾರೆ. ಲೈಂಗಿಕ ಕಿರುಕುಳಕ್ಕೆ ಸಮಾನವಾಗಿರುವ ಈ ರೀತಿಯ ಬಹಿರಂಗ ದಾಳಿ ಮಹಿಳಾ ಸಮುದಾಯಕ್ಕೆ ಮಾಡಿದ

ಪುತ್ತೂರು: ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು

ಪುತ್ತೂರು: ಮುರ ಸಮೀಪ ರೈಲಿನಡಿಗೆ ವ್ಯಕ್ತಿಯೊಬ್ವರು ಬಿದ್ದು ಮೃತಪಟ್ಟ ಘಟನೆ ಅ.೨೩ ರಂದು ನಡೆದಿದೆ. ಮೂಲತಃ ಕಲ್ಲೇಗ ನಿವಾಸಿಯಾಗಿದ್ದು ಬಲ್ನಾಡಿನಲ್ಲಿ ವಾಸ್ತವ್ಯ ಇರುವ ವಿಜಯ ಗೌಡ(52) ಮೃತಪಟ್ಟವರು. ಅವರು ಮುರ ಗೌಡ ಸಮುದಾಯ ಭವನದಲ್ಲಿ ಉತ್ತರಕ್ರಿಯೆ ಕಾರ್ಯಕ್ರಮಕ್ಕೆ ಬಂದವರು ಮುರ ರೈಲು ಹಳಿಯಲ್ಲಿ ಬರುತ್ತಿದ್ದ ರೈಲಿನಡಿಗೆ ಆಕಸ್ಮಿಕವಾಗಿ ಬಿದ್ದಿದ್ದಾರೆನ್ನಲಾಗಿದೆ.

ವಿಟ್ಲ: ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ

ವಿಟ್ಲ: ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಪಾರಾಗಿದ್ದಾರೆ. ದೇರಳಕಟ್ಟೆ ಮೂಲದ ಕುಟುಂಬ ಮಾಣಿ ಕಡೆಗೆ ಬರುತ್ತಿದ್ದಾಗ ಓಮ್ನಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಗಮನಿಸಿದ ಚಾಲಕ ಮತ್ತು ಪ್ರಯಾಣಿಕರು ವಾಹನ ನಿಲ್ಲಿಸಿ ಹೊರಗಡೆ ಬಂದಿದ್ದಾರೆ. ತಕ್ಷಣವೇ ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದರು. ಬಳಿಕ ವಿನಯ ಎಂಬವರ ಸರ್ವೀಸ್ ಸ್ಟೇಷನ್ ನಿಂದ ನೀರು ಹರಿಸಲಾಯಿತು. ಘಟನೆಯಲ್ಲಿ ವಾಹನ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ.

ಪುತ್ತೂರು: ಅ.23ರಂದು ದೀಪಾವಳಿ ಸಂಭ್ರಮಾಚರಣೆ ಮತ್ತು ಗೌರವಾರ್ಪಣೆ ಕಾರ್ಯಕ್ರಮ

ಪುತ್ತೂರು: ಬಿಜೆಪಿ ಪಕ್ಷವನ್ನು ರಾಷ್ಟ್ರ ಮಟ್ಟದಲ್ಲಿ ಬೆಳೆಸಿ, ರಾಜ್ಯ ಮತ್ತು ರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬರಲು ಕಾರಣಕರ್ತರಾದ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಿರಿಯ ಬಿಜೆಪಿ ಕಾರ್ಯಕರ್ತರನ್ನು ಒಟ್ಟು ಸೇರಿಸಿ ಬೆಳಕಿನ ಹಬ್ಬದ ಸಂಭ್ರಮಾಚರಣೆ ಹಾಗೂ ಎಲ್ಲರಿಗೂ ಗೌರವಾರ್ಪಣೆ ಮಾಡುವ ಕಾರ್ಯಕ್ರಮ ಅ.23ರಂದು ಪುತ್ತೂರಿನ ಕೊಟೇಚಾ ಸಭಾಭವನದಲ್ಲಿ ನಡೆಯಲಿದೆ ಎಂದು ಶಾಸಕ ಸಂಜೀವ ಮಠಂದೂರು ಅವರು ತಿಳಿಸಿದರು. ಶುಕ್ರವಾರ ಪುತ್ತೂರಿನ ಬಿಜೆಪಿ

ಅಡಕೆ ಆಮದು ವಿಚಾರದಲ್ಲಿ ಸರ್ಕಾರ ವಿಮರ್ಶೆ ಮಾಡಬೇಕಾದ ಅಗತ್ಯವಿದೆ

ಪುತ್ತೂರು:ನಮ್ಮ ದೇಶದಲ್ಲಿ ಸುಮಾರು 18 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ದೇಶಕ್ಕೆ ಬೇಕಾಗುವಷ್ಟು ಅಡಕೆ ಬೆಳೆಯಲಾಗುತ್ತಿದ್ದರೂ ಇದೀಗ ಭೂತಾನ್‍ನಿಂದ ಅಡಕೆ ಆಮದು ಮಾಡಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ದೇಶದ ಅಡಕೆ ಬೆಳೆಗಾರರ ಪರಿಸ್ಥಿತಿ ಏನಾಗಬಹುದು ಎಂಬುದನ್ನು ಕೇಂದ್ರ ಸರಕಾರ ವಿಮರ್ಶೆ ಮಾಡಬೇಕಾದ ಅಗತ್ಯವಿದೆ ಎಂದು ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಸರಕಾರವನ್ನು ಆಗ್ರಹಿಸಿದ್ದಾರೆ. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ,

ಪುತ್ತೂರಿನಲ್ಲಿ ಆಮ್ ಆದ್ಮಿ ಪಾರ್ಟಿ ಕಚೇರಿ ಉದ್ಘಾಟನೆ

ಆಮ್ ಆದ್ಮಿ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾರ್ಯಾಲಯ ಉದ್ಘಾಟನೆ ಮತ್ತು ಕಾರ್ಯಕರ್ತರ ಸಭೆ ಎಪಿಎಂಸಿ ರಸ್ತೆಯ ಕ್ರಿಸ್ಟೋಫರ್ ಕಾಂಪ್ಲೆಕ್ಸ್‍ನಲ್ಲಿ ನಡೆಯಿತು. ಆಮ್ ಆದ್ಮಿ ಪಾರ್ಟಿ ದ.ಕ.ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿ, ಮುಂದಿನ ದಿನಗಳಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷ ವೇಗವಾಗಿ ಬಲವರ್ಧನೆಗೊಳ್ಳಲಿದೆ ಎಂದು ಅವರು ಹೇಳಿದರು.ಎಎಪಿ ರಾಷ್ಟ್ರೀಯ ಸಮಿತಿ ಸದಸ್ಯ ಅಶೋಕ್ ಎಡಮಲೆ ,

ಶಾಸಕ ಹರೀಶ್ ಪೂಂಜಾ ಮೇಲೆ ತಲವಾರು ದಾಳಿ ತಾವೇ ಹೆಣೆದ ಕಟ್ಟುಕಥೆ : ಕಾಂಗ್ರೆಸ್ ರಾಜ್ಯ ವಕ್ತಾರ ಅಮಲ ರಾಮಚಂದ್ರ ಆರೋಪ

ಪುತ್ತೂರು:ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಮಂಗಳೂರಿನಲ್ಲಿ ತನ್ನ ಮೇಲೆ ತಲವಾರು ದಾಳಿ ಆಗಿದೆ ಎಂದು ಹೇಳಿರುವುದು ಸ್ವತಃ ಶಾಸಕರ ಕಟ್ಟುಕಥೆಯಾಗಿದೆ. ಇದು ಜನರಲ್ಲಿ ಗೊಂದಲ, ಆಘಾತ ಉಂಟುಮಾಡುವ ಹುಚ್ಚಾಟವಾಗಿದ್ದು, ಈ ಘಟನೆಯನ್ನು ಪುತ್ತೂರು ಬ್ಲಾಕ್ ಕಾಂಗ್ರೆಸ್ ತೀವೃವಾಗಿ ಖಂಡಿಸುತ್ತದೆ ಎಂದು ಕಾಂಗ್ರೆಸ್ ರಾಜ್ಯ ವಕ್ತಾರ ಅಮಲ ರಾಮಚಂದ್ರ ಹೇಳಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿ ಈ

ಅಪಘಾತಕ್ಕೀಡಾಗಿದ್ದ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಿದ ಪಿ.ಎಸ್.ಐ. ಸೇಸಮ್ಮ

ಪುತ್ತೂರು : ಆಟೋ ರಿಕ್ಷಾವೊಂದು ಡಿವೈಡರ್ ಗೆ ಡಿಕ್ಜಿಯಾಗಿ ಪಲ್ಟಿಯಾದ ಘಟನೆ ಪುತ್ತೂರು ಉಪ್ಪಿನಂಗಡಿಯ ಪಡೀಲ್ ನಲ್ಲಿ ನಡೆದಿದ್ದು, ಘಟನೆಯಲ್ಲಿ ಗಾಯಗೊಂಡ ಮಹಿಳೆ ಮತ್ತು ಚಾಲಕನನ್ನು ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪಿ.ಎಸ್.ಐ ಸೇಸಮ್ಮ ಮತ್ತು ಎ.ಎಸ್.ಐ ರಾಧಾಕೃಷ್ಣ ಅವರು ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಚಾಲಕ ಅಬ್ದುಲ್ ಎಂಬವರ ಆಟೋ ಡಿವೈಡರ್‍ಗೆ ಬಡಿದ ಹಿನ್ನಲೆಯಲ್ಲಿ ಮಹಿಳೆ ಕುಸುಮಾವತಿಯವರಿಗೆ ಗಾಯವಾಗಿತ್ತು. ಈ ವೇಳೆ ಜನರು

“ಕೋಟಿ-ಚೆನ್ನಯ” ಹೆಸರಿನಲ್ಲಿ ಬಸ್ ನಿಲ್ದಾಣ

ಪುತ್ತೂರು: ಇನ್ಮುಂದೆ ಪುತ್ತೂರು ಕೆಎಸ್‌ಆರ್‌ಟಿಸಿಗೆ ಬಸ್‌ ನಿಲ್ದಾಣಕ್ಕೆ ತುಳುನಾಡಿನ ಅವಳಿ ವೀರಪುತ್ರರ ಹೆಸರಿನಲ್ಲಿ “ಕೋಟಿ-ಚೆನ್ನಯ” ಬಸ್ ನಿಲ್ದಾಣ ಎಂಬುದಾಗಿ ನಾಮಕರಣ ಮಾಡಲು ಸರ್ಕಾರದ ಅನುಮೋದನೆ ನೀಡಿದೆ. ಈ ಹಿಂದೆ ಪಡುಮಲೆ ಕೋಟಿ ಚೆನ್ನಯ್ಯ ಸಂಚಲನ ಟ್ರಸ್ಟ್‌ ನಿಯೋಗದಿಂದ ಶಾಸಕ ಸಂಜೀವ ಮಠಂದೂರು ಅವರಿಗೆ ಈ ಬಗ್ಗೆ ಮನವಿ ನೀಡಲಾಗಿತ್ತು.ಈ ಪ್ರಸ್ತಾವನೆಯನ್ನು ಪರಿಶೀಲಿಸಿ, ದಕ್ಷಿಣ ಕನ್ನಡ ಜಿಲ್ಲೆ, ಪುತ್ತೂರು ನಗರದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ