Home ಕರಾವಳಿ Archive by category ಪುತ್ತೂರು (Page 68)

ಕಡಬದಲ್ಲಿ ಕಾಡಾನೆ ಹಾವಳಿ: ಕೃಷಿ ತೋಟಗಳಿಗೆ ಹಾನಿ

ಕಡಬ: ಕೊಂಬಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿರಿಬಾಗಿಲು ಗ್ರಾಮದ ಕಾಡಂಚಿನ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಕಾಡಾನೆಗಳು ಕೃಷಿ ತೋಟಗಳಿಗೆ ದಾಳಿಮಾಡಿ ಹಾನಿಯುಂಟು ಮಾಡುತ್ತಿವೆ. ಕೃಷಿ ತೋಟಗಳಲ್ಲಿ ಕಾಡಾನೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿತು. ಪಿಲಿಕಜೆ ಎಂಬಲ್ಲಿ ಪಿ.ಸಿ.ಸುಂದರ ಗೌಡ ಎಂಬುವರ ತೋಟಕ್ಕೆ ಲಗ್ಗೆಯಿಟ್ಟ ಆನೆ ಅಡಕೆ, ತೆಂಗು, ಕೊಕ್ಕೋ, ಬಾಳೆ ಮೊದಲಾದ

ಡಿಸಿಎಂ ಅಶ್ವತ್ಥ್ ನಾರಾಯಣ್‌ ರಿಂದ ಪುತ್ತೂರಿನ ಶಾಸಕರ ವಾರ್ ರೂಂಗೆ ಆಕ್ಸಿಜನ್ ಕಾನ್ಸನ್‌ ಟ್ರೇಟರ್

ಪುತ್ತೂರು: ಕೋವಿಡ್ ಸೋಂಕಿನ ನಿಯಂತ್ರಣದಲ್ಲಿ ಪುತ್ತೂರು ಶಾಸಕರ ವಾರ್‌ರೂಮ್ ಮೂಲಕ ನಡೆಯುವ ಉತ್ತಮ ಕಾರ್ಯವೈಖರಿಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್‌ರವರು ಪುತ್ತೂರು ಶಾಸಕರ ವಾರ್‌ರೂಮ್‌ಗೆ ಕೋವಿಡ್ ಸೋಂಕಿತ ರೋಗಿಗಳ ಆರೈಕೆಗಾಗಿ 5 ಕೃತಕ ಆಕ್ಸಿಜನ್ ಕಾನ್ಸನ್‌ಟ್ರೇಟರ್ ಯಂತ್ರವನ್ನು ಹಸ್ತಾಂತರಿಸಿದರು. ಶಾಸಕ ಸಂಜೀವ ಮಠಂದೂರುರವರು ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಅವರೊಂದಿಗೆ ಕೋವಿಡ್ ನಿರ್ವಹಣೆ ಕುರಿತು ಮಾತುಕತೆ

ಬೈಕ್ ಮತ್ತು ಒಮ್ನಿ ನಡುವೆ ಅಪಘಾತ:ಬೈಕ್ ಸವಾರ ಗಂಭೀರ

ಬೈಕ್ ಮತ್ತು ಒಮ್ನಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರಿನ ಹೊರವಲಯ ಬನ್ನೂರಿನಲ್ಲಿ ನಡೆದಿದೆ. ಬೆಳ್ಳಿಪ್ಪಾಡಿ ನಿವಾಸಿ ಮೋನಪ್ಪ ಗೌಡ ಎಂಬವರ ಪುತ್ರ ಧನಂಜಯ ಗೌಡ ಗಾಯಗೊಂಡ ಬೈಕ್ ಸವಾರ. ಅಪಘಾತವೂ ಬನ್ನೂರಿನ ಆಯೋಧ್ಯಾನಗರದ ಶಿವಪಾರ್ವತಿ ಮಂದಿರ ಬಳಿ ಸಂಭವಿಸಿದೆ.ಗಾಯಾಳುವನ್ನು ಸ್ಥಳೀಯರಾದ ಹಂಝ ಮತ್ತು ರಫೀಕ್ ಬಾಂಬೆ ಎಂಬವರು ಆಸ್ಪತ್ರೆಗೆ ಕರೆದೊಯ್ಯುವಲ್ಲಿ ಸಹಕರಿಸಿದ್ದಾರೆ. ವಿವೇಕಾನಂದ ಕಾಲೇಜು – ಪಡೀಲ್ ರಸ್ತೆಯಲ್ಲಿ

ಪುತ್ತೂರು ನಗರಸಭೆಯ ವಿಶೇಷ ಸಾಮಾನ್ಯ ಸಭೆ:ಹೊರಗುತ್ತಿಗೆ ನೌಕರರ ನೇರ ನೇಮಕಾತಿಗೆ ಶಿಫಾರಸ್ಸು

ಪುತ್ತೂರು: ನಗರಸಭಾ ವ್ಯಾಪ್ತಿಯಲ್ಲಿ ಪೌರಕಾರ್ಮಿಕರು ಸೇರಿದಂತೆ ಹೊರಗುತ್ತಿಗೆ ನೌಕರರನ್ನು ನೇರ ನೇಮಕಾತಿ ಮಾಡುವ ಬಗ್ಗೆ ಶಿಫಾರಸ್ಸು ಮಾಡಲು ಪುತ್ತೂರು ನಗರಸಭಾ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಯಿತು. ನಗರಸಭಾ ವಿಶೇಷ ಸಾಮಾನ್ಯ ಸಭೆಯು ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಅಧ್ಯಕ್ಷರು ಹೊರಗುತ್ತಿಗೆ ಕಾರ್ಮಿಕರು ತಮ್ಮನ್ನು ನೇರ ನೇಮಕಾತಿ ಗೊಳಿಸುವಂತೆ ಹೋರಾಟ ನಡೆಸುತ್ತಿದ್ದಾರೆ. ಇದಕ್ಕೆ

ಪುತ್ತೂರಿನಲ್ಲಿ ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ಪರಿಶಿಷ್ಟ ಜಾತಿ ಘಟಕ ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗು ಬ್ಲಾಕ್ ಕಾಂಗ್ರೆಸ್ ಸಮಿತಿ ಪುತ್ತೂರು ವತಿಯಿಂದ ಕೇಂದ್ರ ಸರ್ಕಾರದ ಜನವಿರೋಧಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಹಾಗು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಯಂಗ್ ಬ್ರಿಗೇಡ್ ಸೇವಾದಳ ಅಧ್ಯಕ್ಷರು, ಯುವ ದಲಿತ ನಾಯಕರಾದ ಅಭಿಷೇಕ್ ಬೆಳ್ಳಿಪ್ಪಾಡಿ ಭಾರತದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಪೆಟ್ರೋಲ್ ಬೆಲೆ 100ರ ಗಡಿ ದಾಟಿ

ಸೇಡಿಯಾಪುವಿನಲ್ಲಿ ರಸ್ತೆಗೆ ಅಡ್ಡವಾಗಿ ಉರುಳಿದ ಬೃಹತ್ ಗಾತ್ರದ ಮರ

ಪುತ್ತೂರು: ಕೋಡಿಂಬಾಡಿ ಸಮೀಪದ ಸೇಡಿಯಾಪು ಬಳಿ ಬೃಹತ್ ಗಾತ್ರದ ಆಲದ ಮರವೊಂದು ರಸ್ತೆಗೆ ಅಡ್ಡವಾಗಿ ಉರುಳಿ ಬಿದ್ದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮರ ಬಿದ್ದ ಪರಿಣಾಮ ಪುತ್ತೂರು-ಉಪ್ಪಿನಂಗಡಿ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ಮರ ಉರುಳಿ ಬಿದ್ದಿದ್ದು ಸೇಡಿಯಾಪು ಫ್ರೆಂಡ್ಸ್ ಕ್ಲಬ್ ಸದಸ್ಯರು ಸಾರ್ವಜನಿಕರ ಸಹಕಾರದೊಂದಿಗೆ ಮರ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.  

ಪುತ್ತೂರಿನಲ್ಲಿ ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ

ಇಂಧನ ಬೆಲೆ ಏರಿಕೆ ವಿರುದ್ಧ ಕೆಪಿಸಿಸಿ ಹಮ್ಮಿಕೊಂಡಿರುವ 100ನೋಟ್ ಔಟ್ ಎನ್ನುವ ಪ್ರತಿಭಟನಾ ಕಾರ್ಯಕ್ರಮದ ಅಂಗವಾಗಿ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಕಾವು ಹೇಮನಾಥ್ ಶೆಟ್ಟಿ ಅವರ ನೇತೃತ್ವದಲ್ಲಿ ವಿನೂತನವಾಗಿ ನಡೆಯಿತು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕಾವು ಹೇಮನಾಥ್ ಶೆಟ್ಟಿಯವರು ಮಾತಾಡಿ ಕೇಂದ್ರ ಸರ್ಕಾರವು ಪೆಟ್ರೋಲಿಯಂ ಉತ್ಪನ್ನಗಳ ಮೂಲಕ ಜನತೆಯ ಹಣವನ್ನು ಲೂಟಿಗೈಯ್ಯುತ್ತಿದೆ, ಯುಪಿಎ ಸರ್ಕಾರದ ಅವಧಿಯಲ್ಲಿ ಕಚ್ಚಾ ತೈಲ ೧೪೦ ಡಾಲರ್ ಆಗಿದ್ದರೂ

ಪುತ್ತೂರಿನಲ್ಲಿ ‘ಭತ್ತ ಬೆಳೆಯೋಣ ಬದುಕು ಕಟ್ಟೋಣ’ ಆಂದೋಲನ

ದಕ್ಷಿಣ ಕನ್ನಡ ಜಿಲ್ಲೆ ಹಿಂದೆ ಪೂರ್ಣ ಪ್ರಮಾಣದಲ್ಲಿ ಭತ್ತದ ಬೇಸಾಯದ ಜಿಲ್ಲೆಯಾಗಿದ್ದು, ಇತ್ತೀಚಿನ ವರ್ಷಗಳಲ್ಲಿ ಬೇಸಾಯವೇ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. ಇದೀಗ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಆಶಯದಂತೆ ಮತ್ತೆ ದ.ಕ. ಜಿಲ್ಲೆಯನ್ನು ಬೇಸಾಯ ವೈಭವದ ಜಿಲ್ಲೆ ಮಾಡುವ ಉದ್ದೇಶ ಇಟ್ಟುಕೊಂಡು ಭತ್ತ ಬೆಳೆಯೋಣ.. ಬದುಕು ಕಟ್ಟೋಣ ಎಂಬ ಆಂದೋಲನ ಆರಂಭಿಸಲಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ

ಕಾಂಗ್ರೆಸ್ ವಿರೋಧ ಮಾಡುವುದರಲ್ಲೇ ಕಾಲಹರಣ ಮಾಡುತ್ತಿದೆ: ಪುತ್ತೂರಿನಲ್ಲಿ ನಳಿನ್ ಕುಮಾರ್ 

ಕಾಂಗ್ರೆಸ್ ಪಕ್ಷಕ್ಕೆ ವಿರೋಧ ಮಾಡುವುದು ಬಿಟ್ಟು, ಬೇರೆ ವಿಷಯವೇ ತಿಳಿದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾಂಗ್ರೇಸ್ ಗೆ ತಿರುಗೇಟು ನೀಡಿದ್ದಾರೆ. ಪುತ್ತೂರಿನಲ್ಲಿ ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಣಾ ಸಮಾರಂಭದಲ್ಲಿ ಭಾಗಿಯಾಗಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪೆಟ್ರೋಲ್, ಡೀಸೇಲ್ ನ ಬೆಲೆ ಏರಿಕೆಯನ್ನು ವಿರೋಧಿಸಿ ಕಾಂಗ್ರೇಸ್ ಪಕ್ಷ ರಾಜ್ಯದಾದ್ಯಂತ ಪ್ರತಿಭಟನೆಯನ್ನು ನಡೆಸುತ್ತಿದ್ದು, ಈ ಪ್ರತಿಭಟನೆಯ ವಿರುದ್ಧ ನಳಿನ್

ಪುತ್ತೂರು ತಾಲೂಕು ಆರೋಗ್ಯಾಧಿಕಾರಿಯಾಗಿ ಡಾ. ದೀಪಕ್ ರೈ ನೇಮಕ

ಪುತ್ತೂರು: ಪುತ್ತೂರು ತಾಲೂಕು ಆರೋಗ್ಯಾಧಿಕಾರಿಯಾಗಿ ಡಾ.ದೀಪಕ್ ರೈ ಅವರನ್ನು ನೇಮಕ ಮಾಡಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಜಿಲ್ಲಾಧಿಕಾರಿಯಾಗಿರುವ ರಾಜೇಂದ್ರ ಕೆ.ವಿ ಅವರು ಆದೇಶ ನೀಡಿದ್ದಾರೆ. ಈ ಹಿಂದೆ ತಾಲೂಕು ಆರೋಗ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ಅಶೋಕ್ ಕುಮಾರ್ ರೈ ಅವರನ್ನು ಮುಂದಿನ ಅದೇಶದ ತನಕ ಪುತ್ತೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಹಿರಿಯ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುವಂತೆ ಆದೇಶದಲ್ಲಿ