Home ಕರಾವಳಿ Archive by category ಪುತ್ತೂರು (Page 70)

ಮಾನಸಿಕ ಅಸ್ವಸ್ಥೆ ನಾಪತ್ತೆ -ಪುತ್ತೂರು ಮಹಿಳಾ ಠಾಣೆಗೆ ದೂರು

ಪುತ್ತೂರು: ಮನೆಯಿಂದ ಹೊರಗಡೆ ಹೋಗಿದ್ದ ಮಾನಸಿಕ ಅಸ್ವಸ್ಥೆ ಯುವತಿಯೊಬ್ಬರು ನಾಪತ್ತೆಯಾದ ಘಟನೆ ನರಿಮೊಗರು ಗ್ರಾಮದ ಕರ್ಗಲ್ಲು ಎಂಬಲ್ಲಿ ನಡೆದ ಬಗ್ಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ ನರಿಮೊಗರು ಗ್ರಾಮದ ಕರ್ಗಲ್ಲು ನಿವಾಸಿ ಅಣ್ಣುಪೂಜಾರಿ ಅವರ ಪುತ್ರಿ ವಿಜೇತ(23)ರವರು ನಾಪತ್ತೆಯಾದವರು. ವಿಜೇತ ಅವರು ಮಾನಸಿಕವಾಗಿ ಹುಷಾರಿಲ್ಲದೇ

ಜಿಲ್ಲೆಯಲ್ಲಿ ಭತ್ತ ಕೃಷಿಗೆ ಆದ್ಯತೆ ನೀಡಲು ಚಿಂತನೆ: ಪುತ್ತೂರಿನಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಪುತ್ತೂರು: ಜಿಲ್ಲೆಯಲ್ಲಿ ಭತ್ತ ಕೃಷಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 5 ಸಾವಿರ ಎಕ್ರೆ ಹಡೀಲು ಭೂಮಿಯಲ್ಲಿ ಭತ್ತದ ಕೃಷಿ ಮಾಡುವ ಬಗ್ಗೆ ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಅವರು ಪುತ್ತೂರು ವಿಧಾಸಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ಪುತ್ತೂರು ತಾಲೂಕು ಪಂಚಾಯತ್‍ನ ಕಿರು ಸಭಾಂಗಣದಲ್ಲಿ ಶುಕ್ರವಾರ ಕೃಷಿ ಸಂಬಂಧಿತ ಇಲಾಖೆಗಳ ತಾಲೂಕು ಮಟ್ಟದ

ಮಿಶ್ರಬೆಳೆಗಳಿಗೆ ಆದ್ಯತೆ ನೀಡಿ-ಶಾಸಕ ಸಂಜೀವ ಮಠಂದೂರು

  ಪುತ್ತೂರು: ಕೊರೋನಾ ಸಂಕಷ್ಟದಲ್ಲಿ ವ್ಯಾಪಾರ ಕೈಗಾರಿಕೆಗಳು ಕುಂಠಿತವಾಗಿದೆ. ಇಂತಹ ಸಂದರ್ಭದಲ್ಲಿ ಜನರು ಕೃಷಿಕೆ ಒಲವು ತೋರಿಸಿದ್ದಾರೆ. ಅವರಿಗೆ ಸಮರ್ಪಕ ಮಾಹಿತಿ ನೀಡುವ ಮೂಲಕ ಕೃಷಿ ಮತ್ತು ತೋಟಗಾರಿಕೆಯಲ್ಲಿ ಮಿಶ್ರ ಬೆಳೆಗಳಿಗೆ ಆದ್ಯತೆ ನೀಡಿ ಎಂದು ಶಾಸಕ ಸಂಜೀವ ಮಠಂದೂರು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.  ಕೃಷಿ, ತೋಟಗಾರಿಕಾ ಬೆಳೆಗಳಿಗೆ ಹೆಚ್ಚಿನ ಪೆÇ್ರೀತ್ಸಾಹ ನೀಡುವ ನಿಟ್ಟಿನಲ್ಲಿ ತಾ.ಪಂ ಕಿರು ಸಭಾಂಗಣದಲ್ಲಿ ನಡೆದ ಕೃಷಿ, ತೋಟಗಾರಿಕೆ,

ವಿದೇಶಿ ಹಣ್ಣಿನ ಮೊರೆ ಹೋದ ಕರಾವಳಿಯ ಕೃಷಿಕರು

ಕರಾವಳಿ ಭಾಗದ ಕೃಷಿಕರ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆಯ ಭವಿಷ್ಯದ ಬಗ್ಗೆ ಚರ್ಚೆಗಳು ಆರಂಭಗೊಂಡಿದೆ. ಮುಂದಿನ ದಿನಗಳಲ್ಲಿ ಅಡಿಕೆಗೆ ಮಾರುಕಟ್ಟೆ ಇರುವ ಸಂಶಯವೂ ಕೆಲವು ಕೃಷಿಕರಲ್ಲಿ ಮೂಡಲಾರಂಭಿಸಿದೆ. ಈ ಕಾರಣಕ್ಕಾಗಿ ಅಡಿಕೆಗೆ ಪರ್ಯಾಯ ಬೆಳೆಯ ಹುಡುಕಾಟದಲ್ಲಿ ಕರಾವಳಿಯ ಕೆಲ ಕೃಷಿಕರಿದ್ದು, ಇಂಥ ಕೃಷಿಕರು ಇದೀಗ ವಿದೇಶೀ ಹಣ್ಣಿನ ಮೊರೆ ಹೋಗಿದ್ದಾರೆ. ಈಗಾಗಲೇ ಈ ಹಣ್ಣಿನ ಬೆಳೆಯನ್ನೂ ಆರಂಭಿಸಿರುವ ಈ ಕೃಷಿಕರಿಗೆ ಭರ್ಜರಿ ಇಳುವರಿಯ ಜೊತೆಗೆ ಉತ್ತಮ ಆದಾಯವೂ ಬಂದಿದೆ.

ಸಾಮಾಜಿಕ ಜಾಲತಾಣದಲ್ಲಿ ಹಿಂದೂ ನಾಯಕರ ತೇಜೋವಧೆ : ಸೂಕ್ತ ಕ್ರಮ ಕೈ ಗೊಳ್ಳುವಂತೆ ಮನವಿ

ಕೋವಿಡ್ ಸಂದರ್ಭದಲ್ಲಿ ಬಜರಂಗಳ, ವಿಶ್ವ ಹಿಂದೂ ಪರಿಷತ್ ಸೇರಿದಂತೆ ಹಿಂದೂ ಸಂಘಟನೆಗಳು ಸೇವಾ ಭಾರತಿ ಅಶ್ರಯದಲ್ಲಿ ನಾನಾ ರೀತಿಯ ಸೇವಾ ಕಾರ್ಯಗಳಲ್ಲಿ ತೊಡಗಿವೆ. ಹೀಗಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಕೆಲವರು ಹಿಂದೂ ಸಂಘಟನೆಗಳ ನಾಯಕರ ತೇಜೋವಧೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಇದು ಖಂಡನೀಯ ಎಂದು ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಯೋಜಕರೂ, ದ.ಕ. ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರೂ ಆದ ಮುರಳಿಕೃಷ್ಣ ಹಸಂತಡ್ಕ ಎಚ್ಚರಿಸಿದ್ದಾರೆ. ಪುತ್ತೂರಿನಲ್ಲಿ