ಬಂಟ್ವಾಳ: ಇತಿಹಾಸ ಪ್ರಸಿದ್ದ ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬ ದೇವಸ್ಥಾನದ ಅಷ್ಡಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅದ್ದೂರಿ ಹೊರೆಕಾಣಿಕೆ ಮೆರವಣಿಗೆಗೆ ಮಾರ್ನಬೈಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಚಾಲನೆ
ಸುಬ್ರಹ್ಮಣ್ಯ : ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಇಂದು ಇತಿಹಾಸ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಶಾಸಕ ರಾಜೇಶ್ ನಾಯಕ್ ಅವರ ನೇತೃತ್ವ ದಲ್ಲಿ ನಡೆಯಲಿರುವ ಗ್ರಾಮ ವಿಕಾಸಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಜಿಲ್ಲೆಗೆ ಆಗಿಮಿಸಿರುವ ಅಣ್ಣಾಮಲೈ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೂ ಭೇಟಿ ನೀಡಿದರು. ದೇವಳದ ಆಡಳಿತಮಂಡಳಿ
ಬಂಟ್ವಾಳ: ರೈಡ್ ಫಾರ್ ರೋಟರಿ ಕಾರ್ಯಕ್ರಮದಂಗವಾಗಿ 13 ದೇಶಗಳ 41 ಮಂದಿ ರೋಟರಿ ಸದಸ್ಯರು ಬಂಟ್ವಾಳ ರೋಟರಿ ಕ್ಲಬ್ಗೆ ಭೇಟಿ ನೀಡಿದರು.ಬೈಕ್ ನಲ್ಲಿ ಆಗಮಿಸಿದ ರೋಟರಿ ಸದಸ್ಯರನ್ನು ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷ ಪುಷ್ಪರಾಜ ಹೆಗ್ಡೆ ಮತ್ತವರ ತಂಡ ಬಿ.ಸಿ.ರೋಡಿನ ರೋಟರಿ ಸಭಾಂಗಣದ ಬಳಿ ಬರಮಾಡಿಕೊಂಡರು. ಬಳಿಕ ನಡೆದ ಜಂಟಿ ಸಭೆಯಲ್ಲಿ ರೋಟರಿ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಅವರು ರೋಟರಿ ಕ್ಲಬ್ ಬಂಟ್ವಾಳದ ಕಾರ್ಯಚಟುವಟಿಕೆಯ ಬಗ್ಗೆ ಮಾಹಿತಿ ನೀಡಿದರು.ಈ
ಬಂಟ್ವಾಳ: ಧಾರ್ಮಿಕ, ಸಾಮಾಜಿಕ ಧುರೀಣ, ಕೊಡುಗೈ ದಾನಿಯಾಗಿರುವ ಬಂಟ್ವಾಳ ತಾಲೂಕಿನ ಕೆ.ಸೇಸಪ್ಪ ಕೋಟ್ಯಾನ್(75)ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಅಲ್ಪಕಾಲದ ಅನಾರೋಗ್ಯದಿಂದ ಮೃತಪಟ್ಟಿದ್ದು, ಇವರ ಮೃತದೇಹವನ್ನು ಇಂದು (ಜ. 27) ಬೆಳಗ್ಗೆ 9ರಿಂದ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಮೃತರ ಸ್ವಗೃಹ ಪಚ್ಚಿನಡ್ಕದ ಶುಭ ನಿಲಯದಲ್ಲಿ ಇಡಲಾಗುತ್ತಿದ್ದು, ಮಧ್ಯಾಹ್ನ 12.30ಕ್ಕೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೃತರ ಕುಟುಂಬಸ್ಥರು ತಿಳಿಸಿದ್ದಾರೆ.
ಉಜಿರೆ, ಜ 26: ಉಜಿರೆಯ ಎಸ್.ಡಿ.ಎಂ ಕಾಲೇಜಿನ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆದ ಧ್ವಜಾರೋಹಣವು ದೇಶದ ವೈವಿಧ್ಯತೆ, ಶಿಸ್ತುಬದ್ಧತೆ ಮತ್ತು ಸಾಂಸ್ಕøತಿಕ ಶ್ರೇಷ್ಠತೆಯನ್ನು ಪ್ರತಿಬಿಂಬಿಸಿತು. ಗಣರಾಜ್ಯೋತ್ಸವ ದಿನದ ಅಂಗವಾಗಿ ಕಾಲೇಜಿನ ಎನ್.ಸಿ.ಸಿ ವಿಭಾಗದ ಎಲ್ಲಾ ಕೆಡೆಟ್ಗಳ ಶಿಸ್ತುಬದ್ಧ ಪಾಲ್ಗೊಳ್ಳುವಿಕೆ ಮುಖ್ಯ ಆಕರ್ಷಣೆಯಾಗಿತ್ತು. ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ಧ್ವಜಾರೋಹಣವನ್ನು ನೆರವೇರಿಸಿದರು.
ಮಂಗಳೂರು: ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಂದ್ರ ಭಾರತೀ ಮಹಾಸ್ವಾಮೀಜಿಯವರಿಂದ ಪ್ರತಿಷ್ಠಾಪಿಸಲ್ಪಟ್ಟು, ಮಂಗಳೂರು ಪ್ರಾಂತ್ಯದ ಹವ್ಯಕ ಸಮುದಾಯ ಮತ್ತು ಸಮಸ್ತ ಸಮಾಜದ ಶ್ರದ್ಧಾಕೇಂದ್ರವಾಗಿ ಐದು ದಶಕಗಳಿಂದ ಮನೆ ಮಾತಾಗಿರುವ ಮಾಣಿಯ ಪೆರಾಜೆ ಶ್ರೀರಾಮಚಂದ್ರಾಪುರ ಮಠದ ಆರಾಧ್ಯ ದೈವ ಸಪರಿವಾರ ಶ್ರೀರಾಮದೇವರ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ ದಿವ್ಯ ಉಪಸ್ಥಿತಿ
ಬಂಟ್ವಾಳ: ಅಧಿಕಾರ ಶಾಶ್ವತವಲ್ಲ. ಆದರೆ ಶಾಸಕನಾಗಿ ಅಧಿಕಾರದಲ್ಲಿರುವ ವರೆಗೆ ಪ್ರಾಮಾಣಿಕವಾಗಿ ಜನರ ಸೇವೆ ಮಾಡುತ್ತೇನೆ. ನಾನು ಸಿದ್ದಾಂತ ರಾಜಕೀಯ ಮಾಡುತ್ತೇನೆಯೇ ವಿನಃ ದ್ವೇಷದ ರಾಜಕಾರಣ ನನ್ನಲ್ಲಿಲ್ಲ. ಎಂದು ಶಾಸಕ ರಾಜೇಶ್ ನಾಯ್ಕ್ ಹೇಳಿದರು. ಪೆರಾಜೆ ಗ್ರಾಮದ ಗುಡ್ಡ ಚಾಮುಂಡೇಶ್ವರೀ ದೈವಸ್ಥಾನದ ವಠಾರದಲ್ಲಿ ನಡೆದ ಗ್ರಾಮ ವಿಕಾಸ ಪಾದಯಾತ್ರೆಯ 4 ನೇ ದಿನದ ಸಾರ್ವಜನಿಕ ಸಭೆಯಲ್ಲಿ ಅವರು ಪರಿಚಯವೇ ಇಲ್ಲದ ಕ್ಷೇತ್ರದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತ
ಬಂಟ್ವಾಳ: ಜ.14 ರಿಂದ ಜ. 26ರವರೆಗೆ ಬಂಟ್ವಾಳ ಬಿಜೆಪಿ ವತಿಯಿಂದ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಅವರ ನೇತ್ರತ್ವದಲ್ಲಿ ನಡೆಯಲಿರುವ ಗ್ರಾಮ ವಿಕಾಸ ಯಾತ್ರೆ, ಗ್ರಾಮದೆಡೆಗೆ ಶಾಸಕರ ನಡಿಗೆ ಪಾದಯಾತ್ರೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಆವರಣದಲ್ಲಿ ಶನಿವಾರ ಸಂಜೆ ಚಾಲನೆ ನೀಡಲಾಯಿತು. ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ, ಶಾಸಕ ರಾಜೇಶ್ ನಾಕ್ ಉಳಿಪಾಡಿಗುತ್ತು
ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ಯುವಕನೋರ್ವ ಮೃತದೇಹ ಗುರುವಾರ ಬೆಳಗ್ಗೆ ಪತ್ತೆಯಾಗಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಸಜಿಪ ನಿವಾಸಿ ರಾಜೇಶ್ ಪೂಜಾರಿ ಸ್ಥಾನಮನೆ(36) ಎಂದು ಗುರುತಿಸಲಾಗಿದೆ. ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಇಂದು ಬೆಳಗ್ಗೆ ದ್ವಿಚಕ್ರ ವಾಹನವೊಂದು ಅನಾಥ ಸ್ಥಿತಿಯಲ್ಲಿ ಬಿದ್ದುಕೊಂಡಿತು. ಈ ಬಗ್ಗೆ ಸಂಶಯಗೊಂಡ ಸಾರ್ವಜನಿಕರು ಯಾರೋ ಬಂಟ್ವಾಳ ನಗರ ಪೆÇೀಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಅದರಂತೆ ಸ್ಥಳಕ್ಕೆ ಆಗಮಿಸಿದ
ಬಂಟ್ವಾಳ: ಇತಿಹಾಸ ಪ್ರಸಿದ್ಧ ಕಾರಿಂಜೇಶ್ವರ ದೇವಾಲಯವನ್ನು ಸೂಕ್ಷ್ಮ ವಲಯವನ್ನಾಗಿ ಘೋಷಣೆ ಮಾಡುವ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಜೊತೆ ಮಾತುಕತೆ ನಡೆಸಿದ್ದು, ಜಿಲ್ಲಾಧಿಕಾರಿ ವರದಿ ಬಳಿಕ ಸರಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಉಸ್ತವಾರಿ ಸಚಿವ ಸುನಿಲ್ ಕುಮಾರ್ ಕಾರ್ಕಳ ತಿಳಿಸಿದರು. ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಜೊತೆಗೆ ಕಾರಿಂಜೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿದ ಬಳಿಕ ಪತ್ರ ಕರ್ತರ ಜೊತೆ ಮಾತನಾಡಿದರು. ಅಕ್ರಮ ಕಲ್ಲು ಗಣಿಗಾರಿಕೆಯಿಂದ