ಬಂಟ್ವಾಳದಲ್ಲಿ ಹೊಸ ನ್ಯಾಯಾಲಯ ಸಂಕೀರ್ಣ ಮತ್ತು ವಕೀಲರ ಭವನದ ಸ್ಥಳ ಪರಿಶೀಲನೆಗಾಗಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಬಿ. ಎಂ. ಶ್ಯಾಮ್ ಪ್ರಸಾದ್ ಅವರು ಬಂಟ್ವಾಳ ನ್ಯಾಯಾಲಯಕ್ಕೆ ಭೇಟಿ ನೀಡಿದರು. ಈ ಸಂದರ್ಭ ಮಾತನಾಡಿದ ಅವರು ಅತೀ ಶೀಘ್ರದಲ್ಲಿ ವಕೀಲರ ಭವನದ ಜೊತೆಗೆ ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡ ಕಾಮಗಾರಿ ಪ್ರಾರಂಭ ಮಾಡುವ ಪ್ರಾಮಾಣಿಕ ಪ್ರಯತ್ನ
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಟೆಂಪೋವೊಂದು ರಸ್ತೆಗೆ ಉರುಳಿ ಬಿದ್ದ ಘಟನೆ ಬಿ.ಸಿ.ರೋಡಿನ ತಲಪಾಡಿ ಬಳಿ ನಡೆದಿದೆ. ಬೆಳಗ್ಗೆ ಸುರಿದ ಭಾರಿ ಮಳೆಯಿಂದಾಗಿ ಈ ಘಟನೆ ನಡೆದಿರುವುದಾಗಿ ತಿಳಿದು ಬಂದಿದೆ. ಚಾಲಕನಿಗೆ ತರಚಿದ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದಾಗಿ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಹೊತ್ತು ಟ್ರಾಫಿಕ್ ಜಾಂ ಸಮಸ್ಯೆ ಉಂಟಾಗಿತ್ತು.
ಇನ್ನೂ ಮಳೆಗಾಲ ಮುಗಿದಿಲ್ಲ. ಅದಾಗಲೇ ತುಂಬೆ ವೆಂಟೆಡ್ ಡ್ಯಾಂನಲ್ಲಿ ಗೇಟ್‍ಗಳನ್ನು ಮುಚ್ಚಿ ನೀರು ಸಂಗ್ರಹಣೆ ಆರಂಭಿಸಲಾಗಿದೆ. ಪ್ರತೀ ವರ್ಷ ಅಕ್ಟೋಬರ್, ನವೆಂಬರ್ ತಿಂಗಳಿನಲ್ಲಿ ಡ್ಯಾಂಲ್ಲಿ ನೀರು ಸಂಗ್ರಹಣ ಆರಂಭವಾಗುತ್ತಿದ್ದರೆ ಈ ಬಾರಿ ಅವಧಿಗಿಂತ ಮೊದಲೇ ನೀರು ಸಂಗ್ರಹಣೆ ಆರಂಭಗೊಂಡಿದೆ. ಈ ಬಾರಿ ಮಳೆಯಿಲ್ಲದೆ ಮಳೆಗಾಲದಲ್ಲಿಯೇ ನದಿ ಬರಡಾಗಿ ಮುಂದಿನ ದಿನಗಳಲ್ಲಿ ಕಾಡಬಹುದಾದ ಬರದ ಛಾಯೆ ಈಗಲೇ ಗೋಚರಿಸಿದೆ. ಜಿಲ್ಲೆಯ ಜೀವನದಿ ನೇತ್ರಾವತಿ ನದಿಯಲ್ಲೂ
ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಆಶ್ರಯದಲ್ಲಿ 22ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ ಬಂಟ್ವಾಳ : ತಾಲೂಕು ಕುಲಾಲ ಸುಧಾರಕ ಸಂಘ ಬಂಟ್ವಾಳ ಇದರ ಆಶ್ರಯದಲ್ಲಿ ಸಂಘದ ಮಹಿಳಾ ಘಟಕ ಹಾಗೂ ಸೇವಾದಳದ ಸಹಕಾರದೊಂದಿಗೆ 22ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರೀ ದೇವಿ ದೇವಸ್ಥಾನದಲ್ಲಿ ಶುಕ್ರವಾರ ಸಂಜೆ ನಡೆಯಿತು. ಈ ಸಂದರ್ಭ ಶ್ರೀ ರಕ್ತೇಶ್ವರೀ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ವಿಶ್ವನಾಥ
ಮಂಗಳೂರು: ರಾಯಿ ಗ್ರಾಮ ಪಂಚಾಯತ್‍ನಲ್ಲಿ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ನಡೆದು ಒಂದು ವಾರದಲ್ಲೇ ಬಿಜೆಪಿ ಭಿನ್ನಮತ ಸ್ಪೋಟಗೊಂಡಿದೆ. ಈ ಗ್ರಾ.ಪಂ.ವ್ಯಾಪ್ತಿಯ ಕೊಯಿಲ ಒಂದನೇ ವಾರ್ಡ್ ಬಿಜೆಪಿ ಬೆಂಬಲಿತ ಸದಸ್ಯೆ ಪುಷ್ಪಾವತಿ ಪೂಜಾರಿ ಗುರುವಾರ ಪಂಚಾಯತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ನಾನು ಕೊಯಿಲ ಒಂದನೇ ವಾರ್ಡಿನ ಬೂತ್ ಸಂಖ್ಯೆ 27ರಲ್ಲಿ ಬಿಜೆಪಿ ಬೆಂಬಲಿತ ಚುನಾಯಿತ ಸದಸ್ಯೆಯಾಗಿದ್ದು, ನನ್ನ ವಾರ್ಡಿನಲ್ಲಿ ಗ್ರಾ.ಪಂ.ಅಧ್ಯಕ್ಷರು ಮತ್ತು
ಮಂಗಳೂರು: ಧರ್ಮಸ್ಥಳದ ಸೌಜನ್ಯ, ಬಂಟ್ವಾಳದ ಸಿದ್ಧಕಟ್ಟೆಯ ಭಾರತಿ ಮತ್ತು ದಲಿತ ಮುಖಂಡ ಬಾಂಬಿಲ ಶಿವಪ್ಪ ಬಂಗೇರ ಕೊಲೆ ಪ್ರಕರಣದ ಮರು ತನಿಖೆ ನಡೆಸಬೇಕೆಂದು ಆಗ್ರಹಿಸಿ ಜಿ.ಪಂ. ಮಾಜಿ ಉಪಾಧ್ಯಕ್ಷರಾದ ಎಂ. ತುಂಗಪ್ಪ ಬಂಗೇರ ನೇತೃತ್ವದಲ್ಲಿ ಬಂಟ್ವಾಳ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಪಿಲಾತಬೆಟ್ಟು ಗ್ರಾ. ಪಂ. ಅಧ್ಯಕ್ಷರಾದ ಶಾರದ, ಅಮ್ಟಾಡಿ ಗ್ರಾ.ಪಂ.ಅಧ್ಯಕ್ಷರಾದ ವಿಜಯ ಕುಮಾರ್, ಪ್ರಮುಖರಾದ ಸುರೇಶ್ ಕುಲಾಲ್, ಲಕ್ಷ್ಮೀನಾರಾಯಣ ಹೆಗ್ಡೆ,
ಬಂಟ್ವಾಳ: ಕಲ್ಲಡ್ಕದಲ್ಲಿ ಸಂಪೂರ್ಣ ಹದಗೆಟ್ಟ ರಸ್ತೆ ಮತ್ತು ಧೂಳಿನಿಂದ ಸಮಸ್ಯೆಯಿಂದ ರೋಸಿಹೋದ ವರ್ತಕರು ಹಾಗೂ ಸಾರ್ವಜನಿಕರು ಗುತ್ತಿಗೆ ಕಂಪನಿ ವಾಹನಗಳನ್ನು ತಡೆಗಟ್ಟಿ ಪ್ರತಿಭಟನೆ ನಡೆಸಿದರು. ಈ ಸಂದರ್ಭ ಸ್ಥಳಕ್ಕೆ ಆಗಮಿಸಿದ ಗುತ್ತಿಗೆ ಕಂಪನಿ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದ್ದು, ಮುಂದಿನ ಬುಧವಾರದೊಳಗೆ ಕೆಲಸ ಆರಂಭಿಸುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.
ಬಂಟ್ವಾಳ: ತುಂಬೆ ಗ್ರಾ.ಪಂ.ನ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಜಯಂತಿ ಕೇಶವ ಹಾಗೂ ಉಪಾಧ್ಯಕ್ಷರಾಗಿ ಗಣೇಶ್ ಸಾಲ್ಯಾನ್ ತುಂಬೆ ಬುಧವಾರ ಅಧಿಕಾರ ಸ್ವೀಕರಿಸಿದರು. ಬಳಿಕ ಪಂಚಾಯತಿ ಕಚೇರಿ ಆವರಣದಲ್ಲಿ ಗಿಡ ನೆಡುವ ಮೂಲಕ ಪದಗ್ರಹಣ ಕಾರ್ಯಕ್ರಮವನ್ನು ಸ್ಮರಣೀಯವಾಗಿಸಿ ಕೊಂಡರು. ಈ ಸಂದರ್ಭ ಫಾದರ್ ಮುಲ್ಲರ್ ಆಸ್ಪತ್ರೆಯ ಆಡಳಿತಾಧಿಕಾರಿ ರೆವರೆಂಡ್ ಫಾಧರ್ ಸಿಲ್ವೆಸ್ಟರ್ ವಿನ್ಸೆಂಟ್ ಲೋಬೋ, ಬಿ.ಎ. ಗ್ರೂಫ್‍ನ ಸಲಾಂ ತುಂಬೆ, ನಿಕಟಪೂರ್ವಾಧ್ಯಕ್ಷ ಪ್ರವೀಣ್ ಬಿ.
ಧರ್ಮದೈವಗಳ ಕ್ಷೇತ್ರಕ್ಕೆ ಅಪಚಾರವಾಗುವಂತೆ ಮತ್ತು ಬಂಟ್ವಾಳ ಶಾಸಕರ ಹೆಸರನ್ನು ಕೆಡಿಸುವ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿರುವ ಇಬ್ಬರು ವ್ಯಕ್ತಿಗಳಿಗೆ ದೈವದೇವರುಗಳು ಸರಿಯಾದ ಶಿಕ್ಷೆ ನೀಡಬೇಕು ಎಂದು ಕಕ್ಯಗುತ್ತಿನ ಭಂಡಾರದ ಮನೆಯವರು ಹಾಗೂ ಊರಿನ ಪ್ರಮುಖರು ಪ್ರಾರ್ಥನೆ ಸಲ್ಲಿಸಿದ್ದಾರೆ. ನಂತರ ಇಲ್ಲಿನ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕೂಡ ದೇವರಲ್ಲಿ ಬೇಡಿಕೊಂಡಿದ್ದಾರೆ. ಬಂಟ್ವಾಳ ತಾಲೂಕಿನ ಉಳಿ ಗ್ರಾಮಪಂಚಾಯತ್
ಬಂಟ್ವಾಳ: ಬಾಳ್ತಿಲ ಗ್ರಾಮದ ನೀರಪಾದೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶಾಲೆಯಲ್ಲಿ ಸಂಭ್ರಮದಿಂದ ಆಚರಿಸಿ, ಬಳಿಕ ಸ್ಥಳೀಯ ಗದ್ದೆಯೊಂದರಲ್ಲಿ ಬತ್ತದ ನೇಜಿ ನಾಟಿ ಮಾಡಿ ಗಮನ ಸೆಳೆದಿದ್ದಾರೆ. ಶಾಲೆಯ ನಾಲ್ಕು ಗೋಡೆಯ ಮಧ್ಯೆ ಕಲಿಯುವ ವಿದ್ಯೆಯೊಂದಿಗೆ ಪ್ರಕೃತಿಯ ಮಡಿಲಲ್ಲಿ, ಕೆಸರು ಗದ್ದೆಯಲ್ಲಿ ಮೇಟಿ ವಿದ್ಯೆಯನ್ನು ಕರಗತಮಾಡಿಕೊಂಡಿದ್ದಾರೆ.ತುಳುನಾಡಿನಲ್ಲಿ ಬತ್ತದ ಬೇಸಾಯ ಕಡಿಮೆಯಾಗುತ್ತಿದೆ, ಯುವಕರು ಉದ್ಯೋಗ




























