ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿದ್ದು ನದಿ ತೀರದ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ಪಾಣೆಮಂಗಳೂರು ಸಮೀಪದ ಆಲಡ್ಕ ಪರಿಸರದಲ್ಲಿ ಮನೆಗೆ ನೀರು ನುಗ್ಗಿದ್ದು ಮನೆ ಮಂದಿ ಹಾಗೂ ಸೊತ್ತುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗುತ್ತಿದೆ. ಪೊಲೀಸರು ಈ ಮನೆಗಳಿಗೆ ತೆರಳಿ ಸ್ಥಳಾಂತರಗೊಳ್ಳುವಂತೆ ಸೂಚಿಸಿದರು. ನದಿಯಲ್ಲಿ ನೀರಿನ ಮಟ್ಟ
ಬಂಟ್ವಾಳ: ನರಹರಿ ಸದಾಶಿವ ದೇವಾಲಯದಲ್ಲಿ ಇಂದು ಆಟಿ ಅಮವಾಸ್ಯೆ, ತೀರ್ಥ ಸ್ನಾನ ನಡೆಯಿತು. ಪ್ರತಿ ವರ್ಷವೂ ಆಟಿ ತಿಂಗಳಲ್ಲಿ ಬರುವ ಅಮವಾಸ್ಯೆ ದಿನದಂದು ಇಲ್ಲಿನ ತೀರ್ಥ ಸ್ನಾನ ನಡೆಯುತ್ತದೆ. ತೀರ್ಥ ಬಾವಿಯಲ್ಲಿ ತೀರ್ಥ ಸ್ನಾನ ಮಾಡಿದರೆ ಸಕಲ ಇಷ್ಟಾರ್ಥಗಳು ನೆರವೇರುವುದು ಎಂಬ ಪ್ರತೀತಿ ಇದೆ. ಇಂದು ಮುಂಜಾನೆಯಿಂದಲೇ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು.
ಬಂಟ್ವಾಳ: ಜಿಲ್ಲೆಯ ಹವಾಗುಣಕ್ಕೆ ಬೆಳೆ ಹೊಂದಿಕೆಯಾಗುವುದಿಲ್ಲ, ನೀರಾವರಿ ಸಮಸ್ಯೆ, ಅತಿವೃಷಿ, ಅನಾವೃಷಿಯಿಂದಾಗಿ ಉತ್ತಮ ಇಳುವರಿ ಪಡೆಯಲು ಸಾಧ್ಯವಿಲ್ಲ ಎನ್ನುವ ಕಾರಣಕ್ಕೆ ಸಾಕಷ್ಟು ಜಮೀನಿದ್ದರೂ ಕೂಡ ದೊಡ್ಡ ಮಟ್ಟದಲ್ಲಿ ವಿದೇಶಿ ಹಣ್ಣುಗಳನ್ನು ಬೆಳೆಯಲು ಜಿಲ್ಲೆಯ ರೈತರು ನಿರಾಸಕ್ತಿ ತೋರುತ್ತಾರೆ. ಆದರೆ ಬಂಟ್ವಾಳದ ಹೊಟೇಲ್ ಉದ್ಯಮಿಯೊಬ್ಬರು ಸುಮಾರು 2 ಎಕರೆ ಭೂ ಪ್ರದೇಶದಲ್ಲಿ ಡ್ರ್ಯಾಗನ್ ಪ್ರೂಟ್ ಬೆಳೆದು ಯಶಸ್ವಿಯಾಗುವುದರ ಜೊತೆಗೆ ಉತ್ತಮ ಆದಾಯವನ್ನು
ಬಂಟ್ವಾಳ: ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿರುವ ಪುರಸಭೆಯ ವಾಣಿಜ್ಯ ಸಂಕೀರ್ಣದ ಮುಂಭಾಗ ಖಾಸಗಿ ಬಸ್ಸುಗಳು ತಂಗುತ್ತವೆ. ಪ್ರಯಾಣಿಕರು ವಾಣಿಜ್ಯ ಕೇಂದ್ರದ ಅಂಗಡಿಗಳ ಮುಂಭಾಗದ ಪ್ಯಾಸೇಜ್ ನಲ್ಲಿ ನಿಲ್ಲುತ್ತಾರೆ. ಖಾಲಿ ಬಿಟ್ಟ ಕೋಣೆಯಲ್ಲಿ ಸೊಳ್ಳೆಗಳ ಸಾಮ್ರಾಜ್ಯ. ಅದು ಒಂದು ಭಾಗವಾದರೆ, ಇನ್ನೊಂದು ಸಮಸ್ಯೆ ಈ ಸಂಕೀರ್ಣದ ಹಿಂದೆ ಮತ್ತೊಂದು ವಾಣಿಜ್ಯ ಸಂಕೀರ್ಣವಿದೆ. ಇವೆರಡರ ಮಧ್ಯೆ ರಸ್ತೆಯೂ ಇದೆ. ಇಲ್ಲಿನ ಮಳಿಗೆಗಳಿಗೆ ನೂರಾರು ಮಂದಿ ನಿತ್ಯ ಓಡಾಡುತ್ತಾರೆ. ಆದರೆ
ಬಂಟ್ವಾಳ: ಜಮ್ಮು ಕಾಶ್ಮೀರದ ಪವಿತ್ರ ಅಮರನಾಥ ಯಾತ್ರೆ ಕೈಗೊಂಡಿದ್ದ ದ.ಕ.ಜಿಲ್ಲೆಯ ವಿವಿಧ ತಾಲೂಕಿನ ಒಟ್ಟು ೨೦ ಮಂದಿ ಯಾತ್ರಾರ್ಥಿಗಳು ಸುರಕ್ಷಿತವಾಗಿ ಸಿ.ಆರ್.ಪಿ.ಎಫ್ ನ ಕ್ಯಾಂಪ್‌ನಲ್ಲಿ ಇರುವುದಾಗಿ ತಿಳಿದು ಬಂದಿದೆ. ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಸಂತೋಷ್ ಎಂಬವರ ಜೊತೆ ಕಳೆದ ಜಿಲೈ 4 ರಂದು 20 ಮಂದಿ ಯಾತ್ರಾರ್ಥಿಗಳು ಯಾತ್ರೆ ಕೈಗೊಂಡಿದ್ದರು. ಅತಿಯಾದ ಮಳೆಗೆ ಭೂಕುಸಿತ ಉಂಟಾದ ಹಿನ್ನಲೆಯಲ್ಲಿ ಜು.7 ರಿಂದ ಯಾತ್ರೆಯನ್ನು
ಬಂಟ್ವಾಳ ತಾಲೂಕಿನ ನಂದಾವರ ಎಂಬಲ್ಲಿ ಗುಡ್ಡ ಕುಸಿತವಾಗಿದ್ದು, ಅದು ಮನೆಯೊಂದರ ಮೇಲೆ ಬಿದ್ದು ಮಹಿಳೆ ಮೃತಪಟ್ಟ ಘಟನೆ ನಡೆದಿದೆ. ಮಹಮ್ಮದ್ ಎಂಬವರ ಮನೆಯ ಮೇಲೆ ಇಂದು ಬೆಳಿಗ್ಗೆ ಗುಡ್ಡ ಕುಸಿದು ಬಿದ್ದಿದೆ. ಝರೀನಾ ಮತ್ತು ಸಫಾ ಎಂಬವರು ಸಿಲುಕಿಕೊಂಡಿದ್ದು ಸಫಾ ಅವರನ್ನು ರಕ್ಷಿಸಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಝರೀನಾ ಮನೆಯೊಳಗೆ ಅಸುನೀಗಿದ್ದಾರೆ. ಸ್ಥಳಕ್ಕೆ ಎನ್.ಡಿ.ಆರ್.ಎಫ್, ಅಗ್ನಿಶಾಮಕ ಸಿಬಂದಿ ಸ್ಥಳೀಯರೊಂದಿಗೆ ಸುರಿಯುವ ಮಳೆಯಲ್ಲೂ ರಕ್ಷಣಾ
ಕರಾವಳಿ ಭಾಗದಲ್ಲಿ ಮುಂದಿನ ಕೆಲವು ಗಂಟೆಗಳ ಕಾಲ ಧಾರಕಾರವಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜು.4 ರ ಇಂದು ಮಧ್ಯಾಹ್ನದಿಂದ ಜು.5 ರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.4ರ ಮಧ್ಯಾಹ್ನ ಬಳಿಕ ಮುಂದಿನ ಕೆಲವು ಗಂಟೆಗಳ ಕಾಲ ಬಲವಾದ ಮೇಲ್ಮೈ ಮಾರುತಗಳು ಬೀಸಲಿದ್ದು, ಗುಡುಗು ಮತ್ತು ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿರುವುದರಿಂದ ರೆಡ್ ಅಲರ್ಟ್
ಬಂಟ್ವಾಳದ ಖ್ಯಾತ ಫೈಬರ್ ಆರ್ಟ್ ಕಲಾವಿದ ಮನೋಜ್ ಕನಪಾಡಿ ಅವರ ಕೈ ಚಳಕದಲ್ಲಿ ಕುರುಕ್ಷೇತ್ರ ಯುದ್ಧದಲ್ಲಿ ಶಸ್ತ್ರ ತ್ಯಾಗ ಮಾಡಿದ ಅರ್ಜುನನಿಗೆ ಗೀತೆಯನ್ನು ಭೋಧಿಸುವ ಶ್ರೀ ಕೃಷ್ಣನ ಬೃಹತ್ ಕಲಾಕೃತಿಯೊಂದು ರಚನೆಗೊಂಡಿದೆ. ಈ ಕಲಾಕೃತಿಯನ್ನು ಮಂಗಳೂರು ಹೊರ ವಲಯದ ಕಿನ್ನಿಗೋಳಿಯ ಎಳತ್ತೂರಿನಲ್ಲಿರುವ ಶ್ರೀ ಶಕ್ತಿ ದರ್ಶನ ಯೋಗಾಶ್ರಮದ ನೂತನ ಮುರಳೀವನದಲ್ಲಿ ಸ್ಥಾಪಿಸಲಾಗಿದೆ. 10 ಅಡಿ ಎತ್ತರದ ನಿಂತ ಭಂಗಿಯಲ್ಲಿರುವ ಶ್ರೀ ಕೃಷ್ಣನ ವಿಗ್ರಹ, 6 ಅಡಿ ಎತ್ತರದ
ಬಂಟ್ವಾಳ: ಹಲವು ವರ್ಷಗಳಿಂದ ಸ್ವಂತ ಸೂರಿಲ್ಲದೆ ಗುಡಿಸಲಿನಲ್ಲಿ ವಾಸವಾಗಿದ್ದ ಪರಿಶಿಷ್ಠ ಜಾತಿ ಸಮುದಾಯದ ಬಡ ಕುಟುಂಬಕ್ಕೆ ಸಜೀಪಮೂಡ ವಲಯ ಕಾಂಗ್ರೆಸ್ ನೇತೃತ್ವದಲ್ಲಿ ಸುಜ್ಜಿತವಾದ ಮನೆಯೊಂದು ನಿರ್ಮಾಣಗೊಳ್ಳುತ್ತಿದೆ. ಸ್ಥಳೀಯ ಯುವ ಸಿವಿಲ್ ಇಂಜಿನಿಯರ್ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ ಮಾನವೀಯ ನೆಲೆಯಲ್ಲಿ ಮನೆ ನಿರ್ಮಿಸಿ ಕೊಡುತ್ತಿದ್ದಾರೆ. ಸಜೀಪಮೂಡ ಗ್ರಾಮದ ಕುಚ್ಚಿಗುಡ್ಡೆ ಎಂಬಲ್ಲಿ ಪರಿಶಿಷ್ಠ ಜಾತಿ ಸಮುದಾಯಕ್ಕೆ ಸೇರಿದ ಬಾಡ ಹಾಗೂ ನೊಕ್ಕೆ ದಂಪತಿ ಕುಟುಂಬ
ಸಜೀಪಮೂಡ ಗ್ರಾಮದ ಬೊಳ್ಳಾಯಿ ಜಂಕ್ಷನ್ ಹಾಗೂ ಸುಭಾಶ್‍ನಗರದ ಬ್ರಹ್ಮಶ್ರೀ ನಾರಾಯಣ ಗುರು ಸಭಾಂಗಣದ ಆವರಣದಲ್ಲಿ ಸಜೀಪಮೂಡ ವಲಯ ಕಾಂಗ್ರೆಸ್ ವತಿಯಿಂದ ನಿರ್ವಹಿಸಲ್ಪಡುವ ಇಂದಿರಾ ಸೇವಾ ಕೇಂದ್ರವನ್ನು ಮಾಜಿ ಸಚಿವ ಬಿ. ರಮಾನಾಥ ರೈ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಸರ್ಕಾರದ ಎಲ್ಲಾ ಸೌಲಭ್ಯಗಳು ಜನರಿಗೆ ಸುಲಭವಾಗಿ ದೊರಕುವಂತಾಗಲೂ ಪಕ್ಷದ ವತಿಯಿಂದ ಇಂದಿರಾ ಸೇವಾ ಕೇಂದ್ರಗಳನ್ನು ಆರಂಭಿಸಲಾಗಿದ್ದು ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳುವಂತೆ




























