Home ಕರಾವಳಿ Archive by category ಬಂಟ್ವಾಳ (Page 26)

ಮಾ.4 ರಂದು ಮೂಡೂರು ಪಡೂರು ಕಂಬಳ

ಬಂಟ್ವಾಳ: ತಾಲೂಕಿನ ನಾವೂರ ಗ್ರಾಮದ ಕೂಡಿಬೈಲು ಎಂಬಲ್ಲಿ 12 ನೇ ವರ್ಷದ ಮೂಡೂರು-ಪಡೂರು “ಬಂಟ್ವಾಳ ಕಂಬಳ” ವು ಮಾ.4 ರಂದು ವೈಭವಯುತವಾಗಿ ನಡೆಯಲಿದೆ ಎಂದು ಮಾಜಿ ಸಚಿವ, ಕಂಬಳ ಸಮಿತಿಯ ಗೌರವಾಧ್ಯಕ್ಷ ಬಿ.ರಮಾನಾಥ ರೈ ತಿಳಿಸಿದ್ದಾರೆ. ಬಿ.ಸಿ.ರೋಡಿನ ಹೊಟೇಲ್ ರಂಗೋಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಂಬಳದ ಯಶಸ್ವಿಗೆ ಸಕಲ ಸಿದ್ದತೆಗಳು

ಬಂಟ್ವಾಳ ಪುರಸಭೆಯ ಸಾಮಾನ್ಯ ಸಭೆಯನ್ನು ಬಹಿಷ್ಕರಿಸಿದ ವಿಪಕ್ಷ ಸದಸ್ಯರು

ಬಂಟ್ವಾಳ: ಪುರಸಭೆ ವ್ಯಾಪ್ತಿಯಲ್ಲಿ ಅಳವಡಿಸಲಾಗಿರುವ ಸಿಸಿ ಕ್ಯಾಮರಗಳ ಅಸಮರ್ಪಕ ಕಾರ್ಯ ನಿರ್ವಾಹಣೆ ಹಾಗೂ ಅಸಮರ್ಪಕ ಅನುಷ್ಠಾನದ ಬಗ್ಗೆ ಕಳೆದ ಅನೇಕ ಸಾಮಾನ್ಯ ಸಭೆಯಲ್ಲಿ ಚರ್ಚೆಯಾಗುತ್ತಿದ್ದುಗುರುವಾರ ನಡೆದ ಸಾಮಾನ್ಯ ಸಭೆಯಲ್ಲೂ ಸಿಸಿ ಕ್ಯಾಮರ ನಿರ್ವಹಣೆಯ ಬಗ್ಗೆ ಹಿಂದಿನ ಸಭೆಯ ನಿರ್ಣಯ ಕಾರ್ಯಗತವಾಗದಿರುವ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದ ವಿರೋಧ ಪಕ್ಷದ ಸದಸ್ಯರು ಸಾಮಾನ್ಯ ಸಭೆಯನ್ನು ಬಹಿಷ್ಕರಿಸಿ ಅಧ್ಯಕ್ಷರ ಪೀಠದ ಮುಂದೆ ಧರಣಿ ಸತ್ಯಾಗ್ರಹ ನಡೆಸಿದರು.

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದನೂತನ ಶಾಖೆ ಶುಭಾರಂಭ

ಬಂಟ್ವಾಳ: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ 10 ನೇ ಕಾವಳಮುಡೂರು – ಎನ್. ಸಿ.ರೋಡು ಶಾಖೆ ಕಾವಳಮೂಡೂರು ಗ್ರಾಮದ ಎನ್.ಸಿ. ರೋಡಿನಲ್ಲಿರುವ ತೌಹೀದ್ ಕಾಂಪ್ಲೆಕ್ಸ್‍ನಲ್ಲಿ ಶುಭಾರಂಭಗೊಂಡಿತು.ನೂತನ ಶಾಖೆಯನ್ನು ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ ಉದ್ಘಾಟಿಸಿದರು. ಅವರು ಮಾತನಾಡಿ ಗ್ರಾಮೀಣ ಭಾಗದಲ್ಲಿ ಜನರಿಗೆ ಆರ್ಥಿಕ ವ್ಯವಹಾರವನ್ನು ಒದಗಿಸುವ ಕಾರ್ಯವನ್ನು ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಮಾಡಿಕೊಂಡು

ಬಂಟ್ವಾಳ : ಸರ್ಕಾರಿ ನೌಕರರಿಗೆ ಮಾಹಿತಿ ಕಾರ್ಯಗಾರ: ವಿಶ್ರಾಂತ ಸರಕಾರಿ ನೌಕರರಿಗೆ, ಸಾಧಕರಿಗೆ ಅಭಿನಂದನೆ

ಬಂಟ್ವಾಳ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬಂಟ್ವಾಳ ತಾಲೂಕು ಶಾಖೆಯ ಆಶ್ರಯದಲ್ಲಿ ಸರ್ಕಾರಿ ನೌಕರರಿಗೆ ಮಾಹಿತಿ ಕಾರ್ಯಗಾರ ಮತ್ತು ವಿಶ್ರಾಂತ ಸರಕಾರಿ ನೌಕರರಿಗೆ  ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಮತ್ತು 2021-22 ನೇ ಸಾಲಿನ ವಾರ್ಷಿಕ ಮಹಾಸಭೆ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಎಂ.ಪಿ. ಕಾರ್ಯಕ್ರಮ ಉದ್ಘಾಟಿಸಿದರು. ಅವರು ಮಾತನಾಡಿ  ಬಾಲ್ಯ, ಯೌವನ ನಮ್ಮ ಸಂಪತ್ತು ಅದನ್ನು

ಸರಪಾಡಿ ರಥಬೀದಿ ಬಳಿ ಧರೆಗುರುಳಿದ ಅಶ್ವತ್ಥ ಮರ : ಪಾವಡದ ರೀತಿ ತಪ್ಪಿದ ಅನಾಹುತ

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ರಥಬೀದಿಯಲ್ಲಿದ್ದ ಬೃಹತ್ ಗಾತ್ರದ ಅರಳಿ ಮರ(ಅಶ್ವತ್ಥ)ವೊಂದು ಗುರುವಾರ ಬೆಳೆಗ್ಗೆ ಧರೆಗುರುಳಿದ್ದು, ಮರ ವಿದ್ಯುತ್ ತಂತಿಯ ಮೇಲೆ ಬಿದ್ದು 5-6 ವಿದ್ಯುತ್ ಕಂಬಗಳು ಧರೆಗುರುಳಿರುವ ಜತೆಗೆ ರಸ್ತೆಗೆ ಬಿದ್ದ ಪರಿಣಾಮ ಕೆಲವೊತ್ತು ಸಂಚಾರ ವ್ಯತ್ಯಯ ಉಂಟಾಯಿತು. ಬೆಳ್ಳಗ್ಗಿನ ಹೊತ್ತು ಜನಸಂಚಾರ ಹಾಗೂ ವಾಹನ ಸಂಚಾರ ಹೆಚ್ಚಿರುವ ಸಮಯವಾದರೂ, ದೇವರ ಪವಾಡದ ರೀತಿಯಲ್ಲಿ ಯಾವುದೇ ಜೀವಹಾನಿ ಉಂಟಾಗಿಲ್ಲ. ಕಳೆದೆರಡು ದಿನಗಳಲ್ಲಿ

ಕನ್ನಡ ಸಾಹಿತ್ಯ ಸಮ್ಮೇಳನ : ಬಹಿರಂಗ ಅಧಿವೇಶನ; ನಿರ್ಣಯ (ಠರಾವು) ಮಂಡನೆ

ಉಜಿರೆ, ಫೆ.5: ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ಮೂರು ದಿನಗಳ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಕೊನೆಯ ದಿನವಾದ ರವಿವಾರ ಬಹಿರಂಗ ಅಧಿವೇಶನ ನಡೆಯಿತು.  ದಕ್ಷಿಣ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ ಹಾಗೂ ಗೌರವ ಕೋಶಾಧ್ಯಕ್ಷ ಬಿ. ಐತಪ್ಪನಾಯ್ಕ ಹತ್ತು ನಿರ್ಣಯಗಳನ್ನು ಮಂಡಿಸಿದರು: ಜಿಲ್ಲೆಯಲ್ಲಿ ಮಂಜೂರಾದ ಕನ್ನಡ ಭವನಗಳ

ಬಿ.ಸಿ.ರೋಡಿನ ಪ್ರಿಯಾ ಎಲೆಕ್ಟ್ರಾನಿಕ್ಸ್‍ನಲ್ಲಿ ಅಗ್ನಿ ಅವಘಡ

ಬಂಟ್ವಾಳ: ಬಿ.ಸಿ.ರೋಡ್ ನ ಹೃದಯಭಾಗದಲ್ಲಿರುವ ಪ್ರಿಯಾ ಎಲೆಕ್ಟ್ರಾನಿಕ್ಸ್ ಫರ್ನಿಚರ್ಸ್ ಮತ್ತು ಕೊಮಾಕಿ ಎಲೆಕ್ಟ್ರಿಕ್ ವೈಕಲ್ ಡಿವಿಜನ್ ನ ಮಳಿಗೆಯ ಮಾಳಿಗೆಯಲ್ಲಿ ದಟ್ಟವಾದ ಹೊಗೆಯೊಂದಿಗೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕದಳ ಬೆಂಕಿಯನ್ನು ನಂದಿಸುವಲ್ಲಿ ಹರಸಾಹಸ ಮಾಡುತ್ತಿದ್ದಾರೆ. ಎಲೆಕ್ಟ್ರಿಕ್ ವಾಹನಗಳು ಇರುವ ಜಾಗದಲ್ಲಿ ಬೆಂಕಿ ದಟ್ಟವಾಗಿದ್ದು, ವ್ಯಾಪಕವಾಗಿ ಹರಡುತ್ತಿರುವುದು ಕಂಡುಬಂದಿದ್ದು, ಸ್ಥಳದಲ್ಲಿ ಹಲವಾರು ಜನ ಜಮಾವಣೆಗೊಂಡಿದ್ದು, ನಂದಿಸುವ

ನಂದಾವರ ಅಷ್ಟಬಂಧ ಬ್ರಹ್ಮಕಲಶೋತ್ಸವ :ಅದ್ಧೂರಿಯಾಗಿ ಹಸಿರು ಹೊರೆಕಾಣಿಕೆ ಮೆರವಣಿಗೆ

ಬಂಟ್ವಾಳ: ಇತಿಹಾಸ ಪ್ರಸಿದ್ದ ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬ ದೇವಸ್ಥಾನದ ಅಷ್ಡಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅದ್ದೂರಿ ಹೊರೆಕಾಣಿಕೆ ಮೆರವಣಿಗೆಗೆ ಮಾರ್ನಬೈಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಚಾಲನೆ ನೀಡಿದರು. ಮಾರ್ನಬೈಲು ಮುಖ್ಯ ರಸ್ತೆಯ ಮೂಲಕ ದೇವಸ್ಥಾನಕ್ಕೆ ಸಾಗಿ ಬಂದ ಮೆರವಣಿಗೆಗೆ ಗೊಂಬೆ ಕುಣಿತ,

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ

ಸುಬ್ರಹ್ಮಣ್ಯ : ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಇಂದು ಇತಿಹಾಸ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಶಾಸಕ ರಾಜೇಶ್ ನಾಯಕ್ ಅವರ ನೇತೃತ್ವ ದಲ್ಲಿ ನಡೆಯಲಿರುವ ಗ್ರಾಮ ವಿಕಾಸಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಜಿಲ್ಲೆಗೆ ಆಗಿಮಿಸಿರುವ ಅಣ್ಣಾಮಲೈ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೂ ಭೇಟಿ ನೀಡಿದರು. ದೇವಳದ ಆಡಳಿತಮಂಡಳಿ

ಬಂಟ್ವಾಳಕ್ಕೆ ಭೇಟಿ ನೀಡಿದ 13 ದೇಶಗಳ ರೋಟರಿ ಸದಸ್ಯರು

ಬಂಟ್ವಾಳ: ರೈಡ್ ಫಾರ್ ರೋಟರಿ ಕಾರ್ಯಕ್ರಮದಂಗವಾಗಿ 13 ದೇಶಗಳ 41 ಮಂದಿ ರೋಟರಿ ಸದಸ್ಯರು ಬಂಟ್ವಾಳ ರೋಟರಿ ಕ್ಲಬ್‍ಗೆ ಭೇಟಿ ನೀಡಿದರು.ಬೈಕ್ ನಲ್ಲಿ ಆಗಮಿಸಿದ ರೋಟರಿ ಸದಸ್ಯರನ್ನು ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷ ಪುಷ್ಪರಾಜ ಹೆಗ್ಡೆ ಮತ್ತವರ ತಂಡ ಬಿ.ಸಿ.ರೋಡಿನ ರೋಟರಿ ಸಭಾಂಗಣದ ಬಳಿ ಬರಮಾಡಿಕೊಂಡರು. ಬಳಿಕ ನಡೆದ ಜಂಟಿ ಸಭೆಯಲ್ಲಿ ರೋಟರಿ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಅವರು ರೋಟರಿ ಕ್ಲಬ್ ಬಂಟ್ವಾಳದ ಕಾರ್ಯಚಟುವಟಿಕೆಯ ಬಗ್ಗೆ ಮಾಹಿತಿ ನೀಡಿದರು.ಈ