Home ಕರಾವಳಿ Archive by category ಬಂಟ್ವಾಳ (Page 45)

ತೈಲ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ವತಿಯಿಂದ 100 ನಾಟೌಟ್ ಪ್ರತಿಭಟನೆ

ವಿಟ್ಲ: ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ಮತ್ತು ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆ ವಿರುದ್ಧ 1೦೦ ನಾಟೌಟ್ ಪ್ರತಿಭಟನೆ ವಿಟ್ಲದ ಬೊಬ್ಬೆಕೇರಿ ಪೆಟ್ರೋಲ್ ಪಂಪ್ ಮುಂಭಾಗ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಸದಸ್ಯ ಎಂ ಎಸ್ ಮಹಮ್ಮದ್ ಮಾತನಾಡಿ ಅವರು ಕೊರೊನಾ ಮಹಾಮಾರಿಯಿಂದ

ಬಿಜೆಪಿ ಕ್ಷೇಮ ನಿಧಿ ಯೋಜನೆಗೆ ಬಂಟ್ವಾಳದಲ್ಲಿ ಚಾಲನೆ

ಬಂಟ್ವಾಳ: ಇಬ್ಬರು ಪುಟ್ಟ ಹೆಣ್ಣುಮಕ್ಕಳು ಒಬ್ಬಳು 2 ವರ್ಷದ ಅಂಶಿಕ, ಇನ್ನೊಬ್ಬಳು 3 ತಿಂಗಳ ಮಗು ಪೂರ್ವಿಕ.. ಈ ಮಕ್ಕಳಿಬ್ಬರ ತಾಯಿ ಮೂರು ತಿಂಗಳ ಹಿಂದೆ ಸಾವನ್ನಪ್ಪಿದ್ದಾರೆ.ತಾಯಿಯಿಲ್ಲದೆ ತಬ್ಬಲಿಯಾಗಿ ಸದ್ಯ ದೊಡ್ಡಮ್ಮನ ಮಡಿಲಲ್ಲಿ ಬೆಳೆಯುತ್ತಿರುವ ಈ ಪುಟ್ಟ ಕಂದಮ್ಮಗಳ ಮುಂದಿನ ಭವಿಷ್ಯಕ್ಕಾಗಿ ಈಗ ಆಸರೆ ಯಾಗಿದ್ದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ಪರಿಕಲ್ಪನೆಯಲ್ಲಿ ರಾಜ್ಯದಲ್ಲೇ ಪ್ರಥಮವಾಗಿ ಸ್ಥಾಪಿಸಲಾದ “ಬಂಟ್ವಾಳ ಬಿಜೆಪಿ ಕ್ಷೇಮ ನಿಧಿ” 

ಬಿ.ಸಿ. ರೋಡ್: ಇಂಧನ ಸಾಗಾಟದ ಟ್ಯಾಂಕರ್ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ

ಬಂಟ್ವಾಳ: ಬಂಟ್ವಾಳ ಪುರಸಭೆ ವ್ಯಾಪ್ತಿಯ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ವೃತ್ತ ಮುಂಭಾಗದಲ್ಲಿ ನಡೆದ ಘಟನೆಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಇಂಧನ ಸಾಗಿಸಿಕೊಂಡು ಹೋಗುವ ಟ್ಯಾಂಕರ್‌ನ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಯಿತು. ಕೂಡಲೇ ಅಗ್ನಿಶಾಮಕದಳಕ್ಕೆ ಕರೆ ಮಾಡಲಾಗಿದ್ದು, ಸಮೀಪದಲ್ಲೇ ಇದ್ದ ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಕೂಡಲೇ ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಸಫಲರಾದರು. ಬೈಕಂಪಾಡಿಯಿಂದ ಬೆಂಗಳೂರಿಗೆ

ಸರ್ಕಾರವನ್ನು ವಿಪಕ್ಷ ಎಚ್ಚರಿಸುವ ಕೆಲಸ ಮಾಡುತ್ತಿದೆ: ಮಾಜಿ ಸಚಿವ ರಮಾನಾಥ ರೈ

ಬಂಟ್ವಾಳ : ಕರೋನಾ ಮಹಾಮಾರಿ ಯಿಂದ ಜನರಿಗೆ ಸಾಕಷ್ಟು ತೊಂದರೆಯಾಗಿದ್ದು, ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ಜನರಿಗೆ ಅಗತ್ಯ ನೆರವು ನೀಡುವುದರ ಜೊತೆಯಲ್ಲಿ ಕಾಲಕಾಲಕ್ಕೆ ಸರ್ಕಾರವನ್ನು ಎಚ್ಚರಿಸುವ ಕೆಲಸವನ್ನು ನಡೆಸುತ್ತಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಬಿ.ಸಿ.ರೋಡಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಮಾರಿಯನ್ನು ಸಮರ್ಥವಾಗಿ ಎದುರಿಸಲು ಯೋಜನೆ ರೂಪಿಸಬೇಕು ಎಂದರು.ರೆಡಿಸೀವರ್ ಹಾಗೂ ಬ್ಲಾಕ್ ಫಂಗಸ್‌ನ ಔಷಧಿಗಳು

ವಾಮದಪದವು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಕ್ಸಿಜನ್ ಘಟಕ ಉದ್ಘಾಟನೆ

ಬಂಟ್ವಾಳ : ದಕ್ಷಿಣಕನ್ನಡ ಜಿಲ್ಲೆಯ ಪ್ರಥಮ ಆಕ್ಸಿಜನ್ ಉತ್ಪಾದನಾ ಘಟಕ ವಾಮದಪದವು ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಉದ್ಘಾಟನೆ ಗೊಂಡಿತು. ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಘಟಕವನ್ನು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕರೋನಾ ನಿಗ್ರಹಕ್ಕೆ ಪೂರಕವಾಗಿ ಆಕ್ಸಿಜನ್ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಸ್ಥಾಪನೆಯಾದ ಪ್ರಥಮ ಆಕ್ಸಿಜನ್ ಘಟಕ ಇದಾಗಿದೆ ಎಂದರು. ಬಂಟ್ವಾಳದಲ್ಲಿ ಕರೋನಾ ವಿರುದ್ಧ ಹೋರಾಟ

ವಿಶ್ವ ಪರಿಸರ ದಿನಾಚರಣೆ ಬಂಟ್ವಾಳದಲ್ಲಿ ಜೆಸಿಐ ವತಿಯಿಂದ ವನಮಹೋತ್ಸವ

ಬಂಟ್ವಾಳ: ವಿಶ್ವ ಪರಿಸರ ದಿನದ ಅಂಗವಾಗಿ ಜೆಸಿಐ ಬಂಟ್ವಾಳದ ವತಿಯಿಂದ ಮಾರ್ನಬೈಲಿನಲ್ಲಿರುವ ಆರೋಗ್ಯ ಉಪಕೇಂದ್ರದಲ್ಲಿ ವನಮಹೋತ್ಸವವನ್ನು ಆಚರಿಸಲಾಯಿತು.  ತಾಲೂಕು ಪಂಚಾಯತಿ ಸದಸ್ಯ ಸಂಜೀವ ಪೂಜಾರಿ ಬೊಳ್ಳಾಯಿ ಹಾಗೂ ಉದ್ಯಮಿ ಡಾ. ಎಸ್. ಎಂ. ಗೋಪಾಲಕೃಷ್ಣ ಆಚಾರ್ಯ ಗಿಡ ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಜೆಸಿಐ ಬಂಟ್ವಾಳದ ಅಧ್ಯಕ್ಷ ಉಮೇಶ್ ಆರ್. ಮೂಲ್ಯ ಮಾತನಾಡಿ ಜೆಸಿ ಸಂಸ್ಥೆಯ ಮೂಲಕ ವಿಶ್ವದಾದ್ಯಂತ ವನ ಮಹೋತ್ಸವ ಕಾರ್ಯಕ್ರಮವನ್ನು ನಡೆಸಿ

ಮುಜರಾಯಿ ಇಲಾಖೆಯ ಸಿ ಗ್ರೇಡ್ ದೇವಸ್ಥಾನಗಳ ಅರ್ಚಕರು, ಸಿಬ್ಬಂದಿಗೆ ಆಹಾರ ಸಾಮಾಗ್ರಿ ಕಿಟ್ ವಿತರಣೆ

ಬಂಟ್ವಾಳ: ಮುಜರಾಯಿ ಇಲಾಖೆಯ ಸಿ ಗ್ರೇಡ್ ದೇವಸ್ಥಾನಗಳ ಅರ್ಚಕರು, ಸಿಬ್ಬಂದಿಗೆ ಆಹಾರ ಸಾಮಾಗ್ರಿ ಕಿಟ್ ವಿತರಿಸಲಾಗಿದ್ದು, ಇಲಾಖೆ ವ್ಯಾಪ್ತಿಗೆ ಬರದೆ ಸಂಕಷ್ಟದಲ್ಲಿರುವ ಕ್ಷೇತ್ರಗಳ ಸಿಬ್ಬಂದಿಗೂ ಕಿಟ್ ಕೊಡುವುದಕ್ಕೆ ಚಿಂತನೆ ನಡೆಸಲಾಗುವುದು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ಹೇಳಿದರು.  ಮುಜರಾಯಿ ಇಲಾಖೆಯ ಎ ಗ್ರೇಡ್ ಕ್ಷೇತ್ರವಾದ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಿಂದ ತಾಲೂಕಿನ 26 ದೇವಸ್ಥಾನಗಳ ಅರ್ಚಕರು ಹಾಗೂ ಸಿಬ್ಬಂದಿಗಳಿಗೆ