Home ಕರಾವಳಿ Archive by category ಬೆಳ್ತಂಗಡಿ (Page 14)

ಜು.6: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಹೊಸ ತಲೆಮಾರಿಗೆ ಕುವೆಂಪು ಸಾಹಿತ್ಯ ದರ್ಶನ’ ರಾಜ್ಯಮಟ್ಟದ ವಿಚಾರ ಸಂಕಿರಣ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕನ್ನಡ ವಿಭಾಗ ಹಾಗೂ ಕುಪ್ಪಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸಹಯೋಗದಲ್ಲಿ ‘ಹೊಸ ತಲೆಮಾರಿಗೆ ಕುವೆಂಪು ಸಾಹಿತ್ಯ ದರ್ಶನ’ ರಾಜ್ಯಮಟ್ಟದ ವಿಚಾರ ಸಂಕಿರಣವು ಜು.6ರಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ‘ಸಮ್ಯಗ್ದರ್ಶನ’ ಸೆಮಿನಾರ್ ಹಾಲ್ ನಲ್ಲಿ ನಡೆಯಲಿದೆ. ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸಮಕಾರ್ಯದರ್ಶಿ

ಕರಾವಳಿ : ಮುಂದಿನ ಕೆಲವು ಗಂಟೆಗಳ ಕಾಲ ಧಾರಕಾರ ಮಳೆ – ರೆಡ್ ಅಲರ್ಟ್ ಘೋಷಣೆ

ಕರಾವಳಿ ಭಾಗದಲ್ಲಿ ಮುಂದಿನ ಕೆಲವು ಗಂಟೆಗಳ ಕಾಲ ಧಾರಕಾರವಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜು.4 ರ ಇಂದು ಮಧ್ಯಾಹ್ನದಿಂದ ಜು.5 ರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.4ರ ಮಧ್ಯಾಹ್ನ ಬಳಿಕ ಮುಂದಿನ ಕೆಲವು ಗಂಟೆಗಳ ಕಾಲ ಬಲವಾದ ಮೇಲ್ಮೈ ಮಾರುತಗಳು ಬೀಸಲಿದ್ದು, ಗುಡುಗು ಮತ್ತು ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿರುವುದರಿಂದ ರೆಡ್ ಅಲರ್ಟ್

ಉಜಿರೆ ಎಸ್ ಡಿ ಎಂ ಕಾಲೇಜು ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥ ಡಾ. ಭಾಸ್ಕರ ಹೆಗಡೆ ಅವರ ಪತ್ನಿ ಸುವರ್ಣ(49) ನಿಧನ

ಉಜಿರೆ ಎಸ್ ಡಿ ಎಂ ಕಾಲೇಜು ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥ ಡಾ. ಭಾಸ್ಕರ ಹೆಗಡೆ ಅವರ ಪತ್ನಿ ಸುವರ್ಣ(49) ನಿಧನರಾಗಿದ್ದಾರೆ.ಸುವರ್ಣ ಅವರಿಗೆ ಮನೆಯಲ್ಲಿ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ. ಸುವರ್ಣ ಅವರು ಪತಿ ಭಾಸ್ಕರ್ ಹೆಗಡೆ, ಪುತ್ರ ಶಶಾಂಕ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ

ಎಸ್.ಡಿ.ಎಂ ಕಾಲೇಜಿನ ಸಾಧಕರಿಗೆ ಸನ್ಮಾನದ ಗರಿ

ಎಸ್.ಡಿ.ಎಮ್ ಪದವಿ ಮತ್ತು ಸ್ನಾತಕೋತ್ತರ ಕೇಂದ್ರದ ನಿವೃತ್ತ ಸಿಬ್ಬಂದಿ ಸಾಧಕ ಭೋಧಕರು ಮತ್ತು ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರು, ಧರ್ಮಸ್ಥಳದ ಧರ್ಮಧಿಕಾರಿಗಳೂ ಆದ ಡಾ. ಡಿ. ವೀರೆಂದ್ರ ಹೆಗಡೆ ಸನ್ಮಾನಿಸಿದರು. ಇತ್ತೀಚೆಗೆ ನಿವೃತ್ತರಾದ ವಿಶ್ರಾಂತ ಪ್ರಾಂಶುಪಾಲರಾಧ ಡಾ. ಸತೀಶ್ಚಂದ್ರ ಎಸ್, ಡಾ. ಉದಯ ಚಂದ್ರ ಪಿ, ಡಾ. ಜಯಕುಮಾರ್ ಶೆಟ್ಟಿ, ನಿವೃತ್ತ ಪ್ರಾಧ್ಯಾಪಕರಾದ ಡಾ. ಕೆ.ವಿ. ನಾಗರಾಜಪ್ಪ, ಪ್ರೊ. ಅಜಯ್ ಕೊಂಬ್ರಬೈಲು, ಡಾ. ಶಂಕರ್ ನಾರಾಯಣ, ಡಾ. ಬಿ.ಪಿ

ಸಾಧನೆಯ ಹೆಜ್ಜೆಗಳಿಂದ ಶೈಕ್ಷಣ ಕ ಪರಂಪರೆಗೆ ಅರ್ಥವಂತಿಕೆ: ಡಾ.ವೀರೇಂದ್ರ ಹೆಗ್ಗಡೆ

ಉಜಿರೆ,ಜುಲೈ 1: ಶಿಸ್ತು, ಸಂಯಮ ಮತ್ತು ಜ್ಞಾನವನ್ನು ರೂಢಿಸಿಕೊಳ್ಳುವ ನಿಟ್ಟಿನಲ್ಲಿ ಜಗತ್ತಿನ ಉಳಿದ ದೇಶಗಳಿಗಿಂತ ಭಾರತದ ವಿದ್ಯಾರ್ಥಿಗಳು ಅಗ್ರಮಾನ್ಯತೆಯನ್ನು ಪಡೆದವರು. ಇಂಥ ವಿಶೇಷ ಶೈಕ್ಷಣ ಕ ಪರಂಪರೆಯ ಅರ್ಥವಂತಿಕೆ ಹೆಚ್ಚಿಸುವ ರೀತಿಯಲ್ಲಿ ವಿದ್ಯಾರ್ಥಿಗಳು ಸಾಧನೆಯ ಹೆಜ್ಜೆಗಳನ್ನಿರಿಸಬೇಕು ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ, ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅಭಿಪ್ರಾಯಪಟ್ಟರು.ಉಜಿರೆಯ ಎಸ್.ಡಿ.ಎಂ ಕಾಲೇಜಿನ ವಾರ್ಷಿಕೋತ್ಸವ

ಬೆಳ್ತಂಗಡಿ : ವಿದ್ಯುತ್ ಸಂಪರ್ಕಕ್ಕೆ ಅನುಮತಿ ನೀಡುವಂತೆ ಮನವಿ

ಬೆಳ್ತಂಗಡಿ. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಬರುವ ಬೆಳ್ತಂಗಡಿ ತಾಲೂಕಿನ ಸುಲ್ಕೇರಿಮೊಗ್ರು, ಗ್ರಾಮದ ಬಲ್ಯ ಮಾಳಿಗೆಬೈಲು ಸೇರಿದಂತೆ ಬೆಳ್ತಂಗಡಿ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್ ಸಂಪರ್ಕಕ್ಕೆ ಅನುಮತಿ ನೀಡುವಂತೆ ಅರಣ್ಯ ಜೈವಿಕ ಪರಿಸರ ಸಚಿವರಾದ ಈಶ್ವರ್ ಖಂಡ್ರೆ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮನವಿ ಸಲ್ಲಿಸಿದರು. ಕುದುರೆಮುಖ ರಾಷ್ಟ್ರೀಯ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕ್ರಿಕೆಟಿಗ ಕೆ.ಎಲ್ ರಾಹುಲ್ ಭೇಟಿ

ಭಾರತ ತಂಡದ ಕ್ರಿಕೆಟಿಗ ಕೆ.ಎಲ್.ರಾಹುಲ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದು, ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ನಂತರ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ರಾಹುಲ್‌ಗೆ ಹೆಗ್ಗಡೆಯವರು ಶಾಲು ಹೊದಿಸಿ ಬೆಳ್ಳಿಯ ನಾಣ್ಯ, ಗೋವಿನ ಕಂಚಿನ ಪ್ರತಿಮೆಯನ್ನು ನೀಡಿ ಗೌರವಿಸಿದರು. ಈ ವೇಳೆ ಹೆಗ್ಗಡೆ ಕುಟುಂಬದವರು ಜತೆಯಲ್ಲಿದ್ದರು. ಐಪಿಎಲ್ ವೇಳೆ ಗಾಯಗೊಂಡಿದ್ದ ಕೆಎಲ್ ರಾಹುಲ್ ಬಳಿಕ ಲಂಡನ್ ನಲ್ಲಿ

‘ಸಾಧನೆಗೆ ಕಲಿಕೆಯ ಜೊತೆಗೆ ಕೌಶಲ್ಯವು ಮುಖ್ಯ’

ಉಜಿರೆ: ವಿದ್ಯಾರ್ಥಿಗಳಿಗೆ ಸಾಧನೆಯ ಹಾದಿಯಲ್ಲಿ, ಕಲಿಕೆಯ ಜೊತೆ ಕೌಶಲ್ಯವೂ ಮುಖ್ಯವಾಗಿರುತ್ತದೆ, ಯಶಸ್ಸಿಗೆ ಓದು ಮಾತ್ರವಲ್ಲದೆ, ಬೇರೆ ಚಟುವಟಿಕೆಗಳೂ ಅಗತ್ಯ. ವಿವಿಧ ಸ್ಪರ್ಧೆಗಳಲ್ಲಿ ಭಾಗವಿಸುವುಕೆಯಿಂದಾಗಿ ಕೌಶಲ್ಯ ಹೆಚ್ಚಿಸಿಕೊಳ್ಳಲು ಸಾಧ್ಯ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಐ.ಟಿ ಮತ್ತು ವಿದ್ಯಾರ್ಥಿ ನಿಲಯದ ಸಿ.ಇ.ಒ ಪೂರಣ್ ವರ್ಮ ನುಡಿದರು. ಶ್ರೀ ಧ.ಮಂ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಬಿ.ವೋಕ್ ವಿಭಾಗವು ಆಯೋಜಿಸಿದ್ದ ‘ಬಿ.ವೋಕ್

‘ಎಕೊ-ವಿಶನ್ 2023’ ಅಂತರ್ ವಿಭಾಗೀಯ ಹಾಗೂ ಅಂತರ್ ತರಗತಿ ಸ್ಪರ್ಧೆ ಉದ್ಘಾಟನೆ

ಉಜಿರೆ, ಜೂ.16: ಯಾವುದೇ ಸ್ಪರ್ಧೆಯಲ್ಲಿ ಸೋಲು- ಗೆಲುವಿಗಿಂತಲೂ ಭಾಗವಹಿಸುವಿಕೆ ಮುಖ್ಯವಾಗುತ್ತದೆ ಎಂದು ಉಜಿರೆ ಎಸ್.ಡಿ.ಎಂ. ವಸತಿ ಕಾಲೇಜಿನ ನಿಕಟಪೂರ್ವ ಪ್ರಾಂಶುಪಾಲ ಡಾ. ಟಿ. ಕೃಷ್ಣಮೂರ್ತಿ ಹೇಳಿದರು. ಇಲ್ಲಿನ ಶ್ರೀ ಧ.ಮಂ. ಕಾಲೇಜಿನಲ್ಲಿ ಜೂ.15ರಂದು ಅರ್ಥಶಾಸ್ತ್ರ ಹಾಗೂ ಗ್ರಾಮೀಣ ಅಭಿವೃದ್ಧಿ ವಿಭಾಗದ ವತಿಯಿಂದ ಆಯೋಜಿಸಲಾದ ‘ಎಕೊ-ವಿಶನ್ 2023’ ಅಂತರ್ ವಿಭಾಗೀಯ ಹಾಗೂ ಅಂತರ್ ತರಗತಿ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು. “ಎಕೊ-ವಿಶನ್ ನಂತಹ ಸ್ಪರ್ಧೆಗಳು

ಸಹಾಯಕ ಪ್ರಾಧ್ಯಾಪಕಿ ಗೀತಾ ಏ.ಜೆಗೆ ಪಿಎಚ್ ಡಿ ಪದವಿ

ಉಜಿರೆಯ ಎಸ್ ಡಿ ಎಂ ಕಾಲೇಜಿನ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಗೀತಾಏ.ಜೆ.ಇವರು ಮಂಡಿಸಿದ  “ಇನ್ಸ್ಟಿಟ್ಯೂಷನಲ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ಆ್ಯಸ್ ಎ ಪಿಆರ್ ಟೂಲ್ ಇನ್ ಹೈಯರ್ಎಜುಕೇಷನಲ್ ಇನ್ಸ್ಟಿಟ್ಯೂಷನ್ಸ್: ಎ ಸ್ಟಡಿ ಆಫ್ ದಕ್ಷಿಣ ಕನ್ನಡ ಡಿಸ್ಟ್ರಿಕ್ಟ್” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಕುವೆಂಪುವಿಶ್ವವಿದ್ಯಾಲಯ ಡಾಕ್ಟರೇಟ್ (ಪಿಎಚ್.ಡಿ.) ಪದವಿ ನೀಡಿದೆ. ಗೀತಾ ಏ.ಜೆ. ಅವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯಬಿಳಿನೆಲೆ