Home ಕರಾವಳಿ Archive by category ಮಂಗಳೂರು

ಶಿಬರೂರು ಕೊಡಮಣಿತ್ತಾಯ ದೈವಸ್ಥಾನಕ್ಕೆ ಚಿನ್ನದ ಪಲ್ಲಕ್ಕಿ ಸಮರ್ಪಣೆ

ಶಿಬರೂರು  ಕೊಡಮಣಿತ್ತಾಯ ದೈವಸ್ಥಾನಕ್ಕೆ ಸುಮಾರು ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿತ ಚಿನ್ನದ ಪಲ್ಲಕ್ಕಿಯನ್ನು ಕಟೀಲಿನಿಂದ ವೈಭವದ ಮೆರವಣಿಗೆಯಲ್ಲಿ ಕೊಂಡೊಯ್ದು ಶಿಬರೂರು ದೈವಸ್ಥಾನದಲ್ಲಿ ಸಮರ್ಪಿಸಲಾಯಿತು. ಜೀರ್ಣೋದ್ಧಾರಗೊಂಡ ದೈವಸ್ಥಾನದಲ್ಲಿ ಬ್ರಹ್ಮಕಲಶಾಭಿಷೇಕ ನಡೆಯಲಿದ್ದು, ನೂತನ ಚಿನ್ನ ಪಲ್ಲಕ್ಕಿಯನ್ನು ಭಕ್ತಾದಿಗಳ ಸಹಕಾರದಿಂದ

ಮಂಗಳೂರು: ರಾಜಸ್ಥಾನಿ ಬೃಹತ್ ಪ್ರದರ್ಶನ ಹಾಗೂ ಮಾರಾಟ ಮೇಳ ಆರಂಭ

ಮಂಗಳೂರು : ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್ ರವರ ಸಂಯೋಜನೆಯಲ್ಲಿ ರಾಜಸ್ಥಾನ ಆರ್ಟ್ ಹಾಗೂ ಕ್ರಾಫ್ಟ್ ವಿವಿಧ ಕರಕುಶಲ ವಸ್ತುಗಳ ಹಾಗೂ ಕೈಮಗ್ಗ ಸೀರೆಗಳ ಹಾಗೂ ಅಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳ “ರಾಜಸ್ಥಾನಿ ಬೃಹತ್ ಮಾರಾಟ ಮೇಳ” ನಗರದ ಬಂಟ್ಸ್ ಹಾಸ್ಟೇಲ್ ರಸ್ತೆಯ ಹೋಟೇಲ್ ವುಡ್‌ಲ್ಯಾಂಡ್ಸ್ ನಲ್ಲಿ ಶುಭಾರಂಭಗೊಂಡಿತು. ಖ್ಯಾತ ನಟ, ನಿರ್ದೇಶಕ, ನಿರ್ಮಾಪಕ, ತೆಲಿಕೆದ ಬೊಳ್ಳಿ ಡಾ| ದೇವದಾಸ್ ಕಾಪಿಕಾಡ್ ಅವರು ದೀಪ

ಮಂಗಳೂರು: ಬೈಕ್ ಢಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದ ಪಾದಚಾರಿಯ ಮೇಲೆ ಟ್ಯಾಂಕರ್ ಹರಿದು ಮೃತ್ಯು

ಬೈಕ್ ಢಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದ ಪಾದಚಾರಿಯೊಬ್ಬನ ಮೇಲೆ ಟ್ಯಾಂಕರ್ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರ ಹೊರವಲಯದ ಕೂಳೂರು ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್( 29 ) ಎಂದು ಗುರುತಿಸಲಾಗಿದೆ. ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕೊಂದು ಢಿಕ್ಕಿಯಾಗಿ ಬಿದ್ದಿದ್ದ ಈತನ ಮೇಲೆ ಅತಿವೇಗದಿಂದ ಬರುತ್ತಿದ್ದ ಟ್ಯಾಂಕರ್ ಹರಿದಿದೆ ಎನ್ನಲಾಗಿದೆ.

ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಯಲ್ಲಿ ರಕ್ತದಾನ ಶಿಬಿರ

ಮಂಗಳೂರಿನ ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ವತಿಯಿಂದ ರಕ್ತದಾನ ಶಿಬಿರವನ್ನು ಆಯೋಜಿಸಿದ್ದರು. ಫಾದರ್ ಮುಲ್ಲರ್ ಸಂಸ್ಥೆಯ ಇಮ್ಯುನೊ-ಹೆಮಟಾಲಜಿ ಮತ್ತು ರಕ್ತ ವರ್ಗಾವಣೆ ವಿಭಾಗ, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ರೆಡ್ ಕ್ರಾಸ್ ಘಟಕದ ಸಹಯೋಗದೊಂದಿಗೆ ಮುಲ್ಲರ್ ಮಿನಿ ಹಾಲ್‌ನ ಕನ್ವೆನ್ಷನ್ ಸೆಂಟರ್‌ನಲ್ಲಿ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು. ಇದೇ ವೇಳೆ ಫಾದರ್ ಮುಲ್ಲರ್

ಮಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೊ: ಪೊಲೀಸ್ ಇಲಾಖೆ ಹೈ ಅಲರ್ಟ್

ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸಲಿದ್ದು, ಮಂಗಳೂರು ಪೊಲೀಸ್ ಇಲಾಖೆ ಹೈ ಅಲರ್ಟ್ ಆಗಿದ್ದು, ಏರ್​ಪೋರ್ಟ್​​​ನಿಂದ ರೋಡ್ ಶೋ ಮುಕ್ತಾಯವಾಗುವ ಪ್ರದೇಶದವರೆಗೂ ಬಿಗಿ ಭದ್ರತೆ ಇರಲಿದ್ದು, ಸುಮಾರು 2500 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಈ ಕುರಿತಾಗಿ ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್​ ಪ್ರತಿಕ್ರಿಯಿಸಿದ್ದು, ವಿಮಾನ ನಿಲ್ದಾಣದಿಂದ ಲೇಡಿಹಿಲ್​​ವರೆಗೂ ವಿಶೇಷ ಭದ್ರತೆ ಒದಗಿಸಲಾಗಿದ್ದು, ಸುಮಾರು 2500 ಸಾವಿರ ಪೊಲೀಸ್

ಮಂಗಳೂರು: ಕಾಂಕ್ರೀಟು ಕಡಿದು ತೋಡಿದ ಗುಂಡಿ : ಅವೈಜ್ಞಾನಿಕತೆಗೆ ಬೇಕಿದೆ ಒಂದು ಕೊನೆ

ನಗರ ನಿವಾಸಿಗಳ ನಿರೀಕ್ಷೆಗಳು ಹುಸಿಯಾಗಿವೆ. ನಗರ ಸಂಪರ್ಕದ ಕಾಂಕ್ರೀಟ್ ರಸ್ತೆಗಳು ಮಾನ್ಸೂನ್‌ನಲ್ಲಿ ಬಾಳಿಕೆ ಬರುವಲ್ಲಿ ವಿಫಲವಾಗಿವೆ. ವಾಹನ ಮಾಲೀಕರಿಗೆ ಮತ್ತು ಪಾದಚಾರಿಗಳಿಗೆ ದುಃಸ್ವಪ್ನವಾಗಿ ಪರಿಣಮಿಸಿದ್ದು, ಮಂಗಳೂರು ಮಹಾನಗರಪಾಲಿಕೆ ವಿರುದ್ದ ವಾಹನ ಸವಾರರು ಹಿಡಿಶಾಪ ಹಾಕುತ್ತಿದ್ದಾರೆ. ಕಾಂಕ್ರೀಟ್ ರಸ್ತೆ ಯೋಜನೆಗಳು ಅವೈಜ್ಞಾನಿಕವಾಗಿದ್ದು ವಿವಿಧ ಸಿವಿಲ್ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ನೆಪದಲ್ಲಿ ವಿವಿಧೆಡೆ ರಸ್ತೆ ಅಗೆಯುತ್ತಿರುವುದು ಮಾತ್ರ

ಮಂಗಳೂರಿಗೆ ಮೋದಿ: ತರಾತುರಿಯಲ್ಲಿ ರಸ್ತೆಗೆ ತೇಪೆ ಕಾರ್ಯ

2024 ಲೋಕಸಭಾ ಚುನಾವಣೆ ನಿಮ್ಮಿತ್ತ ಬಿ.ಜೆ.ಪಿ ಪಕ್ಷದ ಅಭ್ಯರ್ಥಿ ಬ್ರಿಜೇಶ್ ಚೌಟ ಪರ ಮತಯಾಚನೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ ೧೪ರಂದು ಮಂಗಳೂರಿಗೆ ಆಗಮಿಸಲ್ಲಿದ್ದು, ಮಂಗಳೂರು ನಗರವನ್ನು ಸ್ವಚ್ಚ ಹಾಗೂ ಸುಂದರಗೊಳಿಸುವ ಕೆಲಸಗಳು ತರಾತುರಿಯಲ್ಲಿ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರಕ್ಕೆ ಏಪ್ರಿಲ್ 14ರಂದು ನಗರಕ್ಕೆ ಆಗಮಿಸಲಿದ್ದು ಮಂಗಳೂರು ನಗರದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ರೋಡ್ ಶೋ

ಕಲ್ಪವೃಕ್ಷ ಯೋಜನೆಯ ನೀಲನಕಾಶೆ, ಷೇರು ಬಾಂಡ್ ಬಿಡುಗಡೆ

ಮಂಗಳೂರು: ತೆಂಗಿನಿಂದ ಸಿಗುವ ಸೀಯಾಳದಿಂದ ಹಿಡಿದು ಗೆರಟೆ, ಚಿಪ್ಪಿನ ವರೆಗೂ ಅನೇಕ ಬಗೆಯ ಕಚ್ಚಾ ವಸ್ತುಗಳನ್ನು ವಿವಿಧ ಮಾದರಿಯ ಮೌಲ್ಯವರ್ಧಿತ ಉತ್ಪನ್ನಗಳನ್ನಾಗಿಸಿ ಹೊಸ ಮಾರುಕಟ್ಟೆ ಸಾಧ್ಯತೆಗಳನ್ನು ತೆರೆದಿಟ್ಟಿರುವ ಸಂಸ್ಥೆ ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪನಿ. ಸಂಸ್ಥೆಯ ಬಹುನಿರೀಕ್ಷಿತ ಕಲ್ಪವೃಕ್ಷ ಯೋಜನೆಯ ಉತ್ಪಾದನಾ ಘಟಕಗಳ ನೀಲನಕಾಶೆ ಹಾಗೂ ಕಲ್ಪವೃಕ್ಷ ಷೇರು ಪ್ರಮಾಣ ಪತ್ರವನ್ನು ತುಮಕೂರಿನ ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ

ಮಂಗಳೂರು: ಪ್ರಧಾನಿ ಮೋದಿ ರೋಡ್ ಶೋ ಹಿನ್ನೆಲೆ : ಪೂರ್ವಭಾವಿ ಸಭೆ

ಮಂಗಳೂರು: ವಿಶ್ವ ನಾಯಕ, ದೇಶದ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದೀಯವರು ಲೋಕಸಭಾ ಚುನಾವಣಾ ಪ್ರಚಾರದ ಭಾಗವಾಗಿ ಇದೇ ಏಪ್ರಿಲ್ 14 ರಂದು ಮಂಗಳೂರಿಗೆ ಆಗಮಿಸಿ ಬೃಹತ್ ರೋಡ್ ಶೋ ನಲ್ಲಿ ಭಾಗವಹಿಸಲಿರುವ ಹಿನ್ನಲೆಯಲ್ಲಿ ಪೂರ್ವಭಾವಿ ಸಭೆಯನ್ನು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ಇಡೀ ದೇಶವೇ ಈಗ ಲೋಕಸಭಾ ಚುನಾವಣೆಗೆ ಸಜ್ಜಾಗಿದ್ದು ನಮ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಪಕ್ಷ ಚಟುವಟಿಕೆಗಳು ಭರದಿಂದ

ಪಿಯುಸಿ ಫಲಿತಾಂಶ: ದ.ಕ. ಪ್ರಥಮ, ಉಡುಪಿ ದ್ವಿತೀಯ

ಕರ್ನಾಟಕ 2023-24ರ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಯುಥಾಪ್ರಕಾರ ಹೆಣ್ಣುಮಕ್ಕಳು ಮೇಲುಗಯ್ ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯು ಫಲಿತಾಂಶದಲ್ಲಿ ಮೊದಲ ಸ್ಥಾನ ಪಡೆದಿದೆ.ಗದಗ ಜಿಲ್ಲೆಯು ಫಲಿತಾಂಶದಲ್ಲಿ ಕೊನೆಯ ಸ್ಥಾನದಲ್ಲಿದೆ. ಬೆಂಗಳೂರಿನ ಮೇಧಾ ಡಿ. ಅವರು ಕಲಾ ವಿಭಾಗದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ; ಅಲ್ಲದೆ ವಿಜಯಪುರದ ವೇದಾಂತ್ ಮತ್ತು ಕವಿತಾ ಕೂಡ ಟಾಪರ್‌ಗಳಲ್ಲಿ ಇದ್ದಾರೆ. ವಿಜ್ಞಾನ ವಿಭಾಗದಲ್ಲಿ 598 ಅಂಕ ಪಡೆದ ವಿದ್ಯಾಲಕ್ಷ್ಮಿ ಮೊದಲ