Home ಕರಾವಳಿ Archive by category ಮಂಗಳೂರು (Page 15)

ಮಂಗಳೂರು: ಹೊಸ ವರ್ಷಾಚರಣೆಗೆ ಬಿಗು ಬಂದೋಬಸ್ತ್

ಮಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಬಿಗು ಬಂದೋಬಸ್ತ್‌ನ್ನು ಏರ್ಪಡಿಸಲಾಗಿದೆ. ಬೀಚ್, ಪಾರ್ಕ್ ಸಹಿತ ಹೊರಾಂಗಣಗಳಲ್ಲಿ ರಾತ್ರಿ 10 ಗಂಟೆಯವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ವರ್ಷಾಚರಣೆಗೆ ಹೊಟೇಲ್, ಚರ್ಚ್, ರೆಸಾರ್ಟ್ ಮೊದಲಾದ ಒಳಾಂಗಣಗಳಲ್ಲಿ

*ಮಂಗಳೂರು: ಮಂಗಳೂರು-ಮಡಗಾಂವ್ ನಡುವೆ ವಂದೇ ಭಾರತ್ ರೈಲಿಗೆ ಚಾಲನೆ

ಮಂಗಳೂರು- ಮಡಗಾಂವ್ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ವೀಡಿಯೊ ಕಾನ್ಫರೆನ್ಸ್  ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಚಾಲನೆ ಮಾಡಿದರು. ಪ್ರಧಾನ ನಗರಗಳನ್ನು ಜೋಡಿಸುವ ಸೆಮಿ ಹೈ ಸ್ಪೀಡ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಮಡಗಾಂವ್‌ಗೆ ಶನಿವಾರ 12.13 ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಪ್ರಥಮ ಪ್ರಯಾಣ ಆರಂಭಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರು – ಮಡಗಾಂವ್ ಸೇರಿ 6 ವಂದೇ ಭಾರತ್ ಹಾಗೂ 2

ಮಂಗಳೂರು: ಕೊಟ್ಟಾರದಲ್ಲಿ ಭೀಕರ ಅಪಘಾತ: ಸ್ಕೂಟರ್ ಸವಾರ ಮೃತ್ಯು

ಮಂಗಳೂರಿನ ಕೊಟ್ಟಾರದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸ್ಕೂಟರ್‌ಗೆ ಲಾರಿಯೊಂದು ಢಿಕ್ಕಿಯಾಗಿದ್ದು, ರಸ್ತೆಗೆ ಎಸೆಯಲ್ಪಟ್ಟ ಸ್ಕೂಟರ್ ಸವಾರನ ಮೇಲೆ ಲಾರಿ ಹರಿದು ಈ ದುರ್ಘಟನೆ ಸಂಭವಿಸಿದೆ.  

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲಿನದು : ಪಣಂಬೂರು ಬೀಚಿನಲ್ಲಿ ತೇಲು ಸೇತುವೆ

ಪಣಂಬೂರು ಬೀಚಿಗೆ ಹೊಸ ಆಕರ್ಷಣೆ ಆಗಿರುವ ತೇಲುವ ಸೇತುವೆಯನ್ನು ವಿಧಾನಸಭಾಧ್ಯಕ್ಷರಾದ ಯು. ಟಿ. ಖಾದರ್ ಅವರು ಸಾರ್ವಜನಿಕರಿಗೆ ತೆರೆದಿಟ್ಟರು.ಬೀಚ್ ಪ್ರವಾಸೋದ್ಯಮವನ್ನು ಮತ್ತಷ್ಟು ಬಲಪಡಿಸಲು ಪ್ರವಾಸೋದ್ಯಮ ಸಚಿವರ ಜೊತೆಗೆ ಮಾತನಾಡುವುದಾಗಿ ಈ ಸಂದರ್ಭದಲ್ಲಿ ಖಾದರ್ ಹೇಳಿದರು. 150 ಮೀಟರ್ ಉದ್ದ ಇರುವ ಈ ತೇಲು ಸೇತುವೆಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲನೆಯದಾಗಿದೆ. ಇದರ ಮೇಲೆ ನಿಂತು ಸೂರ್ಯ ಮುಳುಗುವುದನ್ನು ನೋಡಬಹುದು. ಸದಾ 12 ಮಂದಿ ಜೀವ ರಕ್ಷಕರು ಅಲ್ಲಿ

ಗೃಹರಕ್ಷಕ ದಳದ ಪಸ್ಚಿಮ ವಲಯ ಮಟ್ಟದ ಕ್ರೀಡಾಕೂಟ

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟದ ಸಮಾರೋಪ ಸಮಾರಂಭವು ಪಾಂಡೇಶ್ವರದ ಡಿಎಆರ್ ಪೆರೇಡ್ ಮೈದಾನ ಜರುಗಿತು.ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮುಖ್ಯ ಅಗ್ನಿಶಾಮಕ ಅಧಿಕಾರಿಗಳಾದ ತಿರುಮಲೇಶ್ ಬಿ.ಎಂ., ಕ್ರೀಡಾಪಟುಗಳು ಬಹಳ ಆಸಕ್ತಿಯಿಂದ ಭಾಗವಹಿಸಿರುತ್ತಾರೆ. ಕ್ರೀಡೆಯಿಂದ ದೇಹ ಮತ್ತು ಮನಸ್ಸಿನ ನೆಮ್ಮದಿ ಮತ್ತು ಆರೋಗ್ಯಕ್ಕೆ ಒಳಿತು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ

ಮಂಗಳೂರು: ಬೀದಿ ಬೇಲಿಯ ಸುಂದರ ಹೂವುಗಳು: ನೆಟ್ಟವುಗಳಿಗೆ ಸವಾಲೆಸೆಯುವ ಕುಸುರಿಗಳು

ವಿಜ್ಞಾನಿಗಳು ಜಗತ್ತಿನಲ್ಲಿ 3,90,900 ಹೂಬಿಡುವ ಸಸ್ಯಗಳನ್ನು ಗುರುತಿಸಿದ್ದಾರೆ. ಭಾರತದಲ್ಲಿ ಬೊಟಾನಿಕಲ್ ಸರ್ವೇ ಆಫ್ ಇಂಡಿಯಾ 46,000 ಹೂಬಿಡುವ ಸಸ್ಯಗಳನ್ನು ಗುರುತಿಸಿದೆ. ಸಸ್ಯಗಳಲ್ಲಿ ಸಾಮಾನ್ಯ ಮತ್ತು ಕ್ಷಣಿಕ ಅವಧಿಯವು ಎಂದು ಎರಡು ವಿಧ. ನಾವು ಕಾಡು ಗುಡ್ಡಗಳಲ್ಲಿ ಗುರುತೇ ಇಲ್ಲದ ಎಷ್ಟೋ ಹೂ ಗಿಡ ಕಾಯಿಗಳನ್ನು ಕಂಡಿದ್ದೇವೆ. ಮಂಗಳೂರಿನ ಯೆಯ್ಯಾಡಿ ಬಾರೆಬಯ್ಲು ರಸ್ತೆ ಬದಿ ಅರ್ಧ ಕಿಲೋಮೀಟರ್‍ನಲ್ಲಿ ಕಂಡ ಕೆಲವು ಹೆಸರು ತಿಳಿಯದ ಹೂವುಗಳು ಇವು.

ಮೂಲ್ಕಿ: ನಗರೋತ್ಥಾನ ಯೋಜನೆಯಡಿ ಕಚೇರಿ ಕಟ್ಟಡ ಶಂಕುಸ್ಥಾಪನೆ

ಮುಲ್ಕಿ ನಗರೋತ್ಧಾನ ಯೋಜನೆಯಡಿ ಸುಮಾರು 50 ಲಕ್ಷ ವೆಚ್ಚದ ವಿಶೇಷ ಅನುದಾನದಲ್ಲಿ ಮುಲ್ಕಿ ನಗರ ಪಂಚಾಯತ್ ನೂತನ  ಕಛೇರಿ ಕಟ್ಟಡದ ಶಂಕುಸ್ದಾಪನೆ ಕಾರ್ಯಕ್ರಮವನ್ನು ರಾಜ್ಯ ಆರೋಗ್ಯ. ಸಚಿವ ಹಾಗೂ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೆರವೇರಿಸಿದರು. ಈ ಸಂದರ್ಭ ಮಾತನಾಡಿ, ಸರಕಾರವು ರಾಜ್ಯದಲ್ಲಿ ಶಿಸ್ತು ಬದ್ದ ಹಾಗೂ ಪಾರದರ್ಶಕ ಆಡಳಿತದೊಂದಿಗೆ ಅಭಿವೃದ್ಧಿ ಕಾರ್ಯಗಳಿಗೆ ಅನೇಕ ಯೋಜನೆಗಳನ್ನು ತಯಾರಿಸಿದ್ದು ಅಭಿವೃದ್ಧಿ ನಿರಂತರವಾಗಿ ನಡೆಯಲಿದೆ ಎಂದರು. ಈ ಸಂದರ್ಭ

ಬಜ್ಪೆ: ಮಾದಕ ವಸ್ತು ಮಾರಾಟ, ಮೂವರ ಬಂಧನ

ಬೈಕ್‌ನಲ್ಲಿ ಮಾದಕವಸ್ತು ಸಾಗಾಟ ಮಾಡುತ್ತಿದ್ದ ಮೂವರನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್‌ನ ಹೊಸಬೆಟ್ಟು ಈಶ್ವರನಗರ ನಿವಾಸಿ ಅಣ್ಣಪ್ಪಸ್ವಾಮಿ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ  ಬಡಜೇ  ನಿವಾಸಿ ಮೊಹಮ್ಮದ್ ಜುನೈದ್  ಹಾಗೂ ಹೊಸಬೆಟ್ಟು ವಿನ ಪಡ್ಡಾಯಿ ನಿವಾಸಿ ಎಂ.ಕೆ ಆಕಾಶ ಬಂಧಿತರು. ಬಜಪೆ ಪೊಲೀಸ್ ಠಾಣೆಯ ಪಿಎಸ್ ಐ ಗುರಪ್ಪ ಕಾಂತಿ ರವರು ಸಿಬ್ಬಂದಿಯವರ ಜೊತೆ ಬಜಪೆಯ ಶಾಂತಿಗುಡ್ಡೆ ಚೆಕ್ ಪಾಯಿಂಟ್ ಬಳಿ ಬಜಪೆಯಿಂದ ಕಳವಾರು

ಮಂಗಳೂರು:  ಡಿ.23ರಂದು ಕಣಚೂರು ಸಂಸ್ಥೆಯ ವತಿಯಿಂದ ಕಿಮ್ಸ್ ಪಿ.ಜಿ. ಮೆಡಿಕ್ವಿಜ್-2023

ಮಂಗಳೂರಿನ ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ವೈದ್ಯಕೀಯ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ಸ್ನಾತಕೋತ್ತರ ವೈದ್ಯಕೀಯ ಶಾಸ್ತ್ರ ಶಿಕ್ಷಣ ವಿದ್ಯಾರ್ಥಿಗಳಿಗಾಗಿ ೩ನೇ ವಾರ್ಷಿಕ ರಾಜ್ಯ ಮಟ್ಟದ ಅಂತರ ವೈದ್ಯಕೀಯ ಕಾಲೇಜು ರಸಪ್ರಶ್ನೆ ಕಿಮ್ಸ್ ಪಿ.ಜಿ. ಮೆಡಿಕ್ವಿಜ್-2023 ಸ್ಪರ್ಧಾಕೂಟವು ಡಿ.23ರಂದು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದಾರೆ. ರಾಜ್ಯದಲ್ಲಿ ಕಾರ್ಯಾಚರಿಸುತ್ತಿರುವ ವೈದ್ಯಕೀಯ ಶಿಕ್ಷಣ ಮಹಾ ವಿದ್ಯಾಲಯದ ಪ್ರಾಂಶುಪಾಲರು ತಮ್ಮ ಕಾಲೇಜಿನ ವೈದ್ಯಕೀಯ

ಅಗ್ರಾರ್ ದರ್ಬೆಯಲ್ಲೊಂದು ಅಪರೂಪದ  ದೈವೀ ತಾಣ

ಮಂಗಳೂರು: ತುಳುನಾಡು ಸತ್ಯ, ಧರ್ಮ, ನ್ಯಾಯ, ನೀತಿಗಳ ನೆಲೆಬೀಡು. ಈ ನಾಡೇ ಆರಾಧನಾಲಯಗಳ ತವರೂರು. ಅದೆಷ್ಟೋ ದೈವಸ್ಥಾನಗಳು, ದೇವಸ್ಥಾನಗಳು, ಮಠ, ಮಂದಿರ, ಗುಡಿ, ಗರಡಿಗಳು, ಮಾಡಗಳು, ಬನಗಳು ತನ್ನ ಕಲೆ ಕಾರ್ಣಿಕ ಮೆರೆಯುತ್ತಾ ತುಳುನಾಡಿನ ಧಾರ್ಮಿಕ ಪರಂಪರೆಗೆ ಕೀರ್ತಿ ತಂದಿದೆ. ಇಂತಹ ಧಾರ್ಮಿಕ ಶ್ರದ್ಧಾಕೇಂದ್ರಗಳ ಪೈಕಿ ತುಳುನಾಡಿನಲ್ಲಿ ಪುರಾಣ ಕಾಲಘಟ್ಟದಲ್ಲಿ ಮತ್ತು ಇತಿಹಾಸದಲ್ಲಿ  ವೈಭವದಿಂದ ಮೆರೆದ ಸಾನಿಧ್ಯವೊಂದು ಬಂಟ್ವಾಳ ತಾಲೂಕಿನ ಅಗ್ರಾರ್ ಸಮೀಪ ದ