Home ಕರಾವಳಿ Archive by category ಮಂಗಳೂರು (Page 2)

ಮಂಗಳೂರು ಮಹಾನಗರ ಪಾಲಿಕೆ ಸಾಮಾನ್ಯ ಸಭೆ – ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಗಂಭೀರ ಚರ್ಚೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಗಂಭೀರ ಚರ್ಚೆ ಮಂಗಳೂರು ಮಹಾನಗರ ಪಾಲಿತೆ ಸಾಮಾನ್ಯ ಸಭೆಯಲ್ಲಿ ನಡೆಯಿತು. ಸಭೆ ಆರಂಭವಾಗುತ್ತಿದ್ದಂತೆ ವಿಷಯ ಪ್ರಸ್ತಾಪಿಸಿದ ವಿಪಕ್ಷ ನಾಯಕ ನವೀನ್ ಡಿಸೋಜ ನಗರದ ಬಹುತೇಕ ವಾರ್ಡ್‍ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಎತ್ತರದ ಪ್ರದೇಶಗಳಿಗೆ ನೀರು

ಮೇ 28ರಂದು ಯಕ್ಷಧ್ರುವ ಪಟ್ಲ ಸಂಭ್ರಮ-2023

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ಆಶ್ರಯದಲ್ಲಿ ಮೇ 27ರಂದು ಹೈಸ್ಕೂಲ್ ಮತ್ತು ಕಾಲೇಜು ವಿದ್ಯಾರ್ಥಿಗಳ ಯಕ್ಷಗಾನ ಸ್ಪರ್ಧೆ ಮೇ 28ರಂದು ಯಕ್ಷಧ್ರುವ ಪಟ್ಲ ಸಂಭ್ರಮವು ಅಡ್ಯಾರ್ ಗಾರ್ಡ್‍ನಲ್ಲಿ ನಡೆಯಲಿದೆ ಎಂದು ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಪಟ್ಲ ಫೌಂಡೇಶನ್ ವತಿಯಿಂದ ವಿನೂತನ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಈ

ಕರಾವಳಿಯಾದ್ಯಂತ ಪಿರ್ಕಿಲು ಸಿನಿಮಾ ಮೇ 26ರಂದು ಬಿಡುಗಡೆ

ಕರಾವಳಿ ಸಿನಿಮಾಸ್ ಲಾಂಛನದಲ್ಲಿ ಎಚ್.ಡಿ .ಆರ್ಯ ನಿರ್ದೇಶನದಲ್ಲಿ ತಯಾರಾದ `ಪಿರ್ಕಿಲು’ ತುಳು ಸಿನಿಮಾ ಮೇ 26 ರಂದು ಕರಾವಳಿಯಾದ್ಯಂತ ಬಿಡುಗಡೆಯಾಗಲಿದೆ. ಸಿನಿಮಾದ ಪ್ರೀಮಿಯರ್ ಶೋ ನಗರದ ಭಾರತ್ ಸಿನಿಮಾಸ್‍ನಲ್ಲಿ ನಡೆಯಿತು. ಸತೀಶ್ ಪೆರ್ನೆ ಹಾಗೂ ಶಿವಪ್ರಸಾದ್ ಇಜ್ಜಾವು ನಿರ್ಮಾಣದಲ್ಲಿ ತಯಾರಾದ ಈ ಸಿನಿಮಾ ಹಾಸ್ಯಭರಿತ ಕೌಟುಂಬಿಕ ಕತೆಯ ಎಳೆಯನ್ನು ಹೊಂದಿದೆ. ಊರಿನ ಜನರಿಂದ ಪಿರ್ಕಿಲು ಕರೆಸಿಕೊಳ್ಳುವ ಹುಡುಗರು ಏನೆಲ್ಲ ಅವಾಂತರ ಸೃಷ್ಟಿಸುತ್ತಾರೆ

ಮಂಗಳೂರು ; ಟೇಕಾಫ್ ಗೆ ಸಿದ್ದವಾಗಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ

ಮಂಗಳೂರು : ಟೇಕಾಫ್ ಗೆ ಸಿದ್ದವಾಗಿದ್ದ ವಿಮಾನಕ್ಕೆ ಹಕ್ಕಿಯೊಂದು ಢಿಕ್ಕಿ ಹೊಡೆದಿರುವ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.ಇಂಡಿಗೋ ವಿಮಾನವು ಮಂಗಳೂರಿನಿಂದ ದುಬೈಗೆ ಹೊರಟಿತ್ತು. ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಸಾಗುತ್ತಿದ್ದ ವೇಳೆ ರನ್ ವೇನಲ್ಲಿ ವಿಮಾನದ ರೆಕ್ಕೆಗೆ ಹಕ್ಕಿ ಢಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.  ತಕ್ಷಣ ಅಪಾಯದ ಸೂಚನೆ ಅರಿತು ಎಟಿಸಿಗೆ ಮಾಹಿತಿ ನೀಡಿದ ಪೈಲಟ್, ಟೇಕಾಫ್ ಕ್ಯಾನ್ಸಲ್ ಮಾಡಿ ರನ್ ವೇನಿಂದಲೇ

ಬೋಂದೆಲ್‍ ; ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜು – ಪ್ರವೇಶಾತಿ ಆರಂಭ

ಮಂಗಳೂರಿನ ಬೋಂದೆಲ್‍ನಲ್ಲಿರುವ ಕರ್ನಾಟಕ ಸರ್ಕಾರ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಮಹಿಳಾ ಪಾಲಿಟೆಕ್ನಿಕ್‍ನಲ್ಲಿ 2023-24ನೇ ಪ್ರವೇಶಾತಿ ಆರಂಭಗೊಂಡಿದೆ.ಕಾಲೇಜಿನಲ್ಲಿ ಇಂಜಿನಿಯರಿಂಗ್ ಕೋರ್ಸ್‍ಗಳು, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ನಾನ್ ಇಂಜಿನಿಯರಿಂಗ್, ಕಮರ್ಶಿಯಲ್ ಪ್ರಾಕ್ಟೀಸ್, ಆಂಗ್ಲ ಮತ್ತು ಕನ್ನಡ ಭಾಷೆಗಳಲ್ಲಿ ಬೋಧನೆಯನ್ನು ಮಾಡುತ್ತಿದ್ದಾರೆ.

ಹೋರಾಟ ಮಾಡಿ ಉತ್ತರ ಕೊಡುವ ಶಕ್ತಿ ಬಿಜೆಪಿಗಿದೆ : ನಳಿನ್ ಕುಮಾರ್ ಕಟೀಲ್

ಪ್ರತೀ ನಾಗರಿಕನಿಗೂ ಅವನ ಧರ್ಮದ ಅನುಷ್ಠಾನದ ಹಕ್ಕಿದೆ. ಹತ್ತಾರು ವರ್ಷಗಳಿಂದ ಎಲ್ಲಾ ಇಲಾಖೆಗಳಲ್ಲೂ ಧಾರ್ಮಿಕ ಆಧಾರದಲ್ಲಿ ಪೂಜೆಗಳು ನಡೆಯುತ್ತಿದೆ. ಆಯುಧ ಪೂಜೆ, ಶಿಲಾನ್ಯಾಸಗಳ ಸಮಯದಲ್ಲಿ ಸಂಪ್ರದಾಯಬದ್ದವಾಗಿ ನಡೆದಿದೆ. ಇವತ್ತು ಇದನ್ನ ತಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದರು. ಅವರು ಮಂಗಳೂರಿನಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದರು. ಕಾಂಗ್ರೆಸ್‍ನ ಹೀನಾ ರಾಜಕಾರಣ ಮತ್ತು

40% ಕಮಿಷನ್ ತನಿಖೆಗೆ ಮುಕ್ತ ಸ್ವಾಗತ : ಕೋಟಾ ಶ್ರೀನಿವಾಸ ಪೂಜಾರಿ

ಡಿಸಿಎಂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಪೊಲೀಸ್ರ ಮೇಲೆ ಕೇಸರಿ ಶಾಲಿನ ಆರೋಪ ಮಾಡಿದ್ದಾರೆ. ಅಧಿಕಾರಿಗಳ ಮೇಲೆ ಹರಿಹಾಯ್ದು ಎಚ್ಚರಿಕೆ ಕೊಟ್ಟಿರೋದು ಕಂಡು ಬಂದಿದೆ. ಕೇಸರಿ ಶಾಲು ಈ ರಾಜ್ಯದಲ್ಲಿ ನಿಷೇಧ ಇಲ್ಲ, ಕರ್ತವ್ಯದಲ್ಲಿ ಇದ್ದಾಗ ಯಾರೂ ಕೇಸರಿ ಪ್ರಯೋಗ ಮಾಡಿಲ್ಲ. ಅವರ ಖಾಸಗಿ ಜೀವನದ ಉಡುಪುಗಳ ಬಗ್ಗೆ ಪ್ರಶ್ನೆ ಮಾಡಿ ಡಿ.ಕೆ ಶಿವಕುಮಾರ್ ದ್ವೇಷ ತೀರಿಸಿಕೊಂಡಿದ್ದಾರೆ. ಇದು ಸರಿಯಲ್ಲ, ಅವರು ತಮ್ಮ ಮಾತನ್ನು ಪುನರ್ ಪರಿಶೀಲನೆ ಮಾಡಬೇಕು ಎಂದು ಮಾಜಿ ಸಚಿವ ಕೋಟ

ಜೂನ್ 1ರಿಂದ ಜುಲೈ 31ರ ವರೆಗೆ ಕರಾವಳಿಯಲ್ಲಿ ಮೀನುಗಾರಿಕೆ ನಿಷೇಧ

ದ.ಕ.ಜಿಲ್ಲೆಯ ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31ರವರೆಗೆ ಒಟ್ಟು 61 ದಿನ ಮೀನುಗಾರಿಕೆ ನಿಷೇಧಿಸಿ ಮೀನುಗಾರಿಕೆ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಆಳಸಮುದ್ರ ಮೀನುಗಾರಿಕೆ ಸಂಪೂರ್ಣ ನಿಷೇಧಿಸಲಾಗಿದ್ದು, 10 ಅಶ್ವಶಕ್ತಿ ಹೆಚ್ಚು ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮೀನುಗಾರಿಕಾ ಚಟುವಟಿಕೆ ಕೈಗೊಳ್ಳುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು ಅಥವಾ

ತೋಕೂರು : ಜೀವನದಲ್ಲಿ ಉತ್ತಮ ರೀತಿಯಲ್ಲಿ ಬದುಕುವುದೇ ಧರ್ಮ : ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ

ಜೀವನದಲ್ಲಿ ಉತ್ತಮವಾಗಿ ಬದುಕುವುದೇ ಧರ್ಮ. ಪ್ರತಿಯೊಂದು ಜೀವರಾಶಿಗೂ ಬದುಕುವ ಹಕ್ಕು ಇದೆ. ಧರ್ಮ ಮತ್ತು ಸಂಸ್ಕಾರವನ್ನು ಉಳಿಸಿ ಬೆಳೆಸುವ ಕಾರ್ಯ ನಮ್ಮಿಂದ ನಡೆಯಬೇಕು ಎಂದು ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಧಾನದ ಅಷ್ಟಬಂಧ ಬ್ರಹ್ಮಕುಂಭಾಭೀಷೇಕದ ಅಂಗವಾಗಿ ಸ್ಕಂದ ಮಂಟಪದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದ ಅವರು ಇಂದಿನ ಯುಗದಲ್ಲಿ ಸಂಸ್ಕಾರವನ್ನು

ಮೇ.26ರಂದು ಪಿರ್ಕಿಲು ತುಳು ಸಿನಿಮಾ ತೆರೆಗೆ

ಕರಾವಳಿ ಸಿನಿಮಾಸ್ ಲಾಂಛನದಲ್ಲಿ ಸತೀಶ್ ಪೆರ್ನೆ ಮತ್ತು ಶಿವಪ್ರಸಾದ್ ಇಜ್ಜಾವು ನಿರ್ಮಾಣದಲ್ಲಿ ತಯಾರಾದ ಪಿರ್ಕಿಲು ತುಳು ಸಿನಿಮಾ ಮೇ.26ರಂದು ಕರಾವಳಿ ಜಿಲ್ಲೆಯಾದ್ಯಂತ ತೆರಕಾಣಲಿದೆ ಎಂದು ನಿರ್ದೇಶಕ ಹೆಚ್.ಡಿ ಆರ್ಯ ಹೇಳಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಾಸ್ಯ ಮತ್ತು ಕೌಟುಂಬಿಕ ಕಥಾ ಹಂದರ ಹೊಂದಿರುವ ಚಿತ್ರ ಇದ್ದಾಗಿದ್ದು, ಪಿರ್ಕಿಲು ಎಂದು ಊರಿನ ಜನರಿಂದ ಕರೆಸಿಕೊಳ್ಳುವ ಹುಡುಗರು ಏನೆಲ್ಲ