Home ಕರಾವಳಿ Archive by category ಮಂಗಳೂರು (Page 266)

ಅಡ್ಯಾರ್: ನೆನೆಗುದಿಗೆ ಬಿದ್ದಿದ್ದ ಸಮಸ್ಯೆಗೆ ಪರಿಹಾರ ಒದಗಿಸಿದ ಶಾಸಕ ಡಾ.ಭರತ್ ಶೆಟ್ಟಿ

ಅಡ್ಯಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಯಾರ್ ದೋಟ ಎಂಬಲ್ಲಿ ಹಲವಾರು ವರ್ಷಗಳಿಂದ ಮಳೆ ನೀರು ಹಲವಾರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಯಾಗುತ್ತಿತ್ತು. ಇತ್ತೀಚೆಗೆ ಸುರಿದ ಭಾರಿ ಮಳೆಗೆ ಹಲವಾರು ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಸಾರ್ವಜನಿಕರಿಗೆ ತೊಂದರೆ ಉಂಟಾಗಿರುವುದನ್ನು ಮನಗಂಡು ಸ್ಥಳಕ್ಕೆ ಭೇಟಿ ನೀಡಿ ತಕ್ಷಣ ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದ ಸಹಾಯಕ

ಮಂಗಳೂರಲ್ಲಿ ಅಕ್ರಮವಾಗಿ ನುಸುಳಿದ್ದ ಶ್ರೀಲಂಕಾ ಪ್ರಜೆಗಳ ಬಂಧನ

ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 38 ತಮಿಳುನಾಡಿಗೆ ಬಂದಿದ್ದಾರೆ. ಇವರಲ್ಲಿ ಬಹುತೇಕ ಮಂದಿ ಶ್ರೀಲಂಕಾದ ಉತ್ತರ ಭಾಗದವರು. ಶ್ರೀಲಂಕಾದಿಂದ ತಮಿಳುನಾಡಿನ ತೂತುಕುಡಿಗೆ ಬಂದು ಅಲ್ಲಿಂದ ಕೆನಡಾಗೆ ಹೋಗುವವರಿದ್ದರು. ಆದರೆ ತಮಿಳುನಾಡು ಚುನಾವಣೆ ಹಿನ್ನೆಲೆ ಅವರನ್ನ ಮಂಗಳೂರಿಗೆ ತಂದು ಬಿಡಲಾಗಿತ್ತು. ಅಲ್ಲಿ ಚುನಾವಣೆ ಹಿನ್ನೆಲೆ ತಪಾಸಣೆ ಕಾರ್ಯ ಚುರುಕಾಗಿದ್ದ ಹಿನ್ನೆಲೆ ಇವರು ಮಂಗಳೂರಿಗೆ ಆಗಮಿಸಿದ್ದಾರೆ. ಇನ್ನು ಮಂಗಳೂರಿಗೆ ಬಂದು ಎರಡು ಲಾಡ್ಜ್ ಮತ್ತು ಎರಡು

ಪಾರ್ಟಿಗಳಿಗೆ ಮಾದಕ ವಸ್ತು ಎಲ್‌ ಎಸ್‌ ಡಿ ಪೂರೈಸುತ್ತಿದ್ದ ಆರೋಪಿಯ ಬಂಧನ

ಪಾರ್ಟಿಗಳಿಗೆ ಮಾದಕ ವಸ್ತು ಎಲ್‌ಎಸ್‌ಡಿ ಡ್ರಗ್ ಸ್ಟ್ರಿಪ್ಸ್‌ಗಳನ್ನು ಮಾರಾಟ ಮಾಡುತ್ತಿದ್ದ ಓರ್ವನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯಿಂದ 16 ಲಕ್ಷ ಮೌಲ್ಯ 840 ಎಲ್‌ಎಸ್ ಡಿ ಸ್ಟ್ರಿಪ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಹೇಳಿದ್ದಾರೆ. ಈ ಕುರಿತು ಮಂಗಳೂರಿನ ಕಮೀಷನರ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಧಿತ ಆರೋಪಿಯನ್ನು ಕೇರಳ ಕ್ಯಾಲಿಕಟ್ ನ ಮೊಹಮ್ಮದ್ ಅಜಿನಾಸ್

ದ.ಕ ಜಿಲ್ಲೆಯ ಎಲ್ಲಾ ಕೇಂದ್ರಗಳಲ್ಲಿ NRI ಗಳಿಗೆ ಲಸಿಕೆ ನೀಡಲು ಡಿ.ಸಿ ಆದೇಶ: ಅನಿವಾಸಿ ಕನ್ನಡಿಗರಿಂದ ಸ್ವಾಗತ

ಮೇ 30ರಂದು ದ.ಕ ಜಿಲ್ಲಾ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ಆಯೋಜಿಸಲ್ಪಟ್ಟ ಜಿಲ್ಲಾಧಿಕಾರಿಗಳೊಂದಿಗೆ ಅನಿವಾಸಿ ಕನ್ನಡಿಗರ ವೀಡಿಯೋ ಸಂವಾದ ಕಾರ್ಯಕ್ರಮದಲ್ಲಿ ವಿಶ್ವದಾದ್ಯಂತ ಹಲವು ಅನಿವಾಸಿ ಕನ್ನಡಿಗರು, ಸಂಘಟನೆಗಳು ಪಾಲ್ಗೊಂಡು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರರವರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಕ್ತ ಸ್ಥಿತಿಗತಿ ಹಾಗೂ ಅನಿವಾಸಿಗಳ ಸಮಸ್ಯೆ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಿದ್ದವು. ವೀಡಿಯೊ ಸಂವಾದದಲ್ಲಿ ಬಹುಮುಖ್ಯವಾಗಿ ಚರ್ಚೆಯಾದ

ಇಂಧನ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ 100 ನಾಟೌಟ್ ಪ್ರತಿಭಟನೆಯು ನಗರದ ಕೆಪಿಟಿ ಪೆಟ್ರೋಲ್ ಬಂಕ್ ಎದುರು ನಡೆಯಿತು. ‘ 100 ನಾಟೌಟ್’ ಎಂಬ ಹೆಸರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಜಾಗಟೆ ಬಾರಿಸುವ ಮೂಲಕ ಇಂಧನ ತೈಲ ಬೆಲೆ ಏರಿಕೆಯನ್ನು ಖಂಡಿಸಲಾಯಿತು. ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಬ್ಯಾರೆಲ್ ಗೆ

ಪುಟ್ಟ ಮಗುವಿನೊಂದಿಗೆ ಬೀದಿ ಪಾಲಾಗಿದ್ದ ಸಂಸಾರಕ್ಕೆ ನೆರವಾದ ಟೀಂ- ಬಿ ಹ್ಯೂಮನ್ ಮತ್ತು ಟೀಂ ಐ.ವೈ.ಸಿ

ಇದೊಂದು ಹೃದಯ ಕಲಕುವ ಘಟನೆ, ಲಾಕ್ ಡೌನ್ ಮತ್ತು ಕೊರೊನಾದಿಂದ ತತ್ತರಿಸಿದ ಜನರ ಬದುಕಿನ ಭೀಕರತೆ ಈ ಘಟನೆ ಸಾಕ್ಷಿ. ತುಮಕೂರಿನ ಸುಬ್ರಹ್ಮಣ್ಯ ಅವರು ಲಾಕ್ ಡೌನ್ ಕಾರಣಕ್ಕೆ ಕೆಲಸ ಕಳೆದುಕೊಂಡಿದ್ದರು. ಪತ್ನಿಗೆ ಮೂರನೇ ಹೆರಿಗೆ ದಿನ ಹತ್ತಿರವಾಗಿತ್ತು. ಇಬ್ಬರು ಮಕ್ಕಳು ಮನೆಯಲ್ಲಿದ್ದರು . ಸಂಕಷ್ಟದ ನಡುವೆ ಹೆರಿಗೆಗಾಗಿ, ಸುಬ್ರಹ್ಮಣ್ಯ ತನ್ನ ಪತ್ನಿಯನ್ನು ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಗೆ ಕರೆ ತರುತ್ತಾರೆ. ಪತ್ನಿಯ ಆರೋಗ್ಯಕರವಾಗಿ ಹೆರಿಗೆ ಆಗುತ್ತದೆ. ಹೆರಿಗೆ

ಭಾರತೀಯ ಫುಟ್ಬಾಲ್ ತಂಡದ ಮಾಜಿ ನಾಯಕ ಶೇಖರ್ ಬಂಗೇರ ನಿಧನ

ಭಾರತೀಯ ಫುಟ್ಬಾಲ್ ತಂಡದ ಮಾಜಿ ನಾಯಕ, ಉಡುಪಿ ಮೂಲದ ಶೇಖರ್ ಬಂಗೇರ (74) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಶೇಖರ್ ಬಂಗೇರ ಅವರು ಬ್ರಹ್ಮಾವರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಗುರುವಾರ ಬೆಳಗ್ಗೆ ಅವರು ಕೊನೆಯುಸಿರೆಳೆದಿದ್ದಾರೆ. ಉಡುಪಿಯ ಬಡಾನಿಡಿಯೂರು ಮೂಲದ ಶೇಖರ್ ಬಂಗೇರ ಅವರು ಭಾರತೀಯ ಫುಟ್ಬಾಲ್ ತಂಡದ ಗೋಲ್ ಕೀಪರ್ ಆಗಿದ್ದರು. ಇದೇವೇಳೆ ಅವರು ತಂಡದ ನಾಯಕರೂ ಆಗಿದ್ದರು. ಬಹುಕಾಲ

ದ.ಕ ಜಿಲ್ಲೆಯಲ್ಲಿ ಜೂ.21ರವರಗೆ ಲಾಕ್‌ಡೌನ್ ಮುಂದುವರಿಕೆ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ದ.ಕ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್‌ಡೌನ್ ಮುಂದುವರಿಸಲು ನಿರ್ಧಾರ ಮಾಡಲಾಗಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಈ ಕುರಿತು ಮಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ 8 ಜಿಲ್ಲೆಗಳ ಪರಿಸ್ಥಿತಿಯನ್ನು ಅವಲೋಕಿಸುವ ನಿಟ್ಟಿನಲ್ಲಿ ವಿಡಿಯೋ ಕಾನ್ಫರೇನ್ ಮೂಲಕ ಗುರುವಾರ ಸಭೆ ನಡೆಯಿತು. ಈ ಸಭೆಯಲ್ಲಿ ಜಿಲ್ಲೆಗೆ ಹೆಚ್ಚುವರಿ

ಹಿಂದೂ ದೇವಾಲಯಗಳ ಹಣ ಅನ್ಯ ಧಾರ್ಮಿಕ ಕೇಂದ್ರಗಳಿಗೆ ತಡೆಗೆ ಸಚಿವ ಕೋಟ ಆದೇಶ

ಇತ್ತೀಚೆಗೆ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವಂತೆ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯಲ್ಲಿನ ಅನುದಾನ ಇತರ ಧರ್ಮದ ಪ್ರಾರ್ಥನಾ ಮಂದಿರಗಳಿಗೆ ತಸ್ತೀಕ್ ರೂಪದಲ್ಲಿ ತಲುಪಿದ್ದು, ಈ ಬಗ್ಗೆ ಹಿಂದೂ ಧಾರ್ಮಿಕ ಮುಖಂಡರಿಂದ ಬಂದ ತೀವ್ರ ಆಕ್ಷೇಪದ ಹಿನ್ನೆಲೆಯಲ್ಲಿ, ರಾಜ್ಯ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ಮಾಧ್ಯಮದ ಮೂಲಕ ಹೇಳಿಕೆಯೊಂದನ್ನು ನೀಡಿದ್ದು,