Home ಕರಾವಳಿ Archive by category ಮಂಗಳೂರು (Page 97)

ಮಾರುತಿ ಟ್ರೋಫಿ – ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿದ ಪ್ರಕೃತಿ ನ್ಯಾಶ್ ಬೆಂಗಳೂರು

ಮಂಗಳೂರು-ದ.ಕ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಸಮಾಜ ಸೇವಾ ನಿರತ ಸಂಸ್ಥೆ “ಮಾರುತಿ ಯುವಕ ಮಂಡಲ(ರಿ) ಮತ್ತು ಮಾರುತಿ ಕ್ರಿಕೆಟರ್ಸ್(ರಿ) ಮೊಗವೀರ ಪಟ್ಣ ಉಳ್ಳಾಲ ಇವರ ಆಶ್ರಯದಲ್ಲಿ,ಅಗಲಿದ ಮಿತ್ರರ ಸ್ಮರಣಾರ್ಥ ಮತ್ತು 35 ನೇ ವಾರ್ಷಿಕೋತ್ಸವ ಪ್ರಯುಕ್ತ ಆಯೋಜಿಸಲಾದ ಅಖಿಲ ಭಾರತ ಮಟ್ಟದ ಹೊನಲು ಬೆಳಕಿನ “ಮಾರುತಿ ಟ್ರೋಫಿ-2023” ಪ್ರಶಸ್ತಿ

ಫೆ.24 : ತಲಪಾಡಿಯಲ್ಲಿ ನಿರ್ಮಿಸಲಾದ ಸಮಗ್ರ ಚೆಕ್‍ಪೋಸ್ಟ್ ಉದ್ಘಾಟನೆ

ಮಂಜೇಶ್ವರ: ಅರಣ್ಯ ಮತ್ತು ವನ್ಯಜೀವಿ ಇಲಾಖೆಯ ಕಾಸರಗೋಡು ವಿಭಾಗದ ತಲಪ್ಪಾಡಿಯಲ್ಲಿ ಜಿಲ್ಲಾ ಗಡಿಯಲ್ಲಿ ನಿರ್ಮಿಸಲಾದ ಸಮಗ್ರ ಚೆಕ್ ಪೋಸ್ಟ್ ಕಟ್ಟಡವನ್ನು ಫೆಬ್ರವರಿ 24 ರಂದು ಬೆಳಿಗ್ಗೆ 10 ಗಂಟೆಗೆ ಅರಣ್ಯ ಮತ್ತು ವನ್ಯಜೀವಿ ಇಲಾಖೆ ಸಚಿವ ಎ.ಕೆ.ಸಶೀಂದ್ರನ್ ಉದ್ಘಾಟಿಸಲಿದ್ದಾರೆ. ರಾಜ್ಯ ಸರ್ಕಾರದ 100 ದಿನಗಳ ಕ್ರಿಯಾ ಚಟುವಟಿಕೆಗಳ ಕಾರ್ಯಕ್ರಮದ ಭಾಗವಾಗಿ ಕಟ್ಟಡ ಲೋಕಾರ್ಪಣೆಯಾಗುತ್ತಿದೆ. ಶಾಸಕ ಎ.ಕೆ.ಎಂ.ಅಶ್ರಫ್ ಅಧ್ಯಕ್ಷತೆ ವಹಿಸುವ ಕಾರ್ಯಕ್ರಮದಲ್ಲಿ ಸಂಸದ ರಾಜ್

ತಲಪಾಡಿ : ನೀರು ಪೂರೈಕೆಗೆ ಒತ್ತಾಯಿಸಿ ಕಾಂಗ್ರೆಸ್ ಮನವಿ

ತಲಪಾಡಿ : ನೀರಿಲ್ಲದೇ ಸಂಕಷ್ಟ ಅನುಭವಿಸುತ್ತಿರುವ ತಲಪಾಡಿ ಗ್ರಾಮಕ್ಕೆ ಕೂಡಲೇ ಕುಡಿಯುವ ನೀರು ಪೂರೈಕೆ ಆರಂಭಿಸುವಂತೆ ಒತ್ತಾಯಿಸಿ ತಲಪಾಡಿ ವಲಯ ಕಾಂಗ್ರೆಸ್ ಸಮಿತಿಯ ವತಿಯಿಂದ ಇಂದು ಉಳ್ಳಾಲ ತಹಶೀಲ್ದಾರ್ ಮತ್ತು ತಲಪಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಗ್ರಾಮದ ಕೆಲವೆಡೆಗೆ ಬಟ್ಟಪಾಡಿ ಪ್ರದೇಶದಿಂದ ನೀರಿನ ಪೈಪ್ ಲೈನ್ ಇದ್ದರೂ ನೀರು ಸರಬರಾಜು ಆಗುತ್ತಿಲ್ಲ. ಪೈಪ್ ಲೈನ್ ಇಲ್ಲದಿರುವ ಕೆಸಿ ರೋಡ್, ಪಳ್ಳ, ಪೂಮಣ್ಣು, ಕೆಸಿ ನಗರ, ಶಾಂತಿ

ಕಡಬ : ಕಾಡಾನೆ ದಾಳಿ, ಮೃತರ ಮನೆಗೆ ಭೇಟಿ ನೀಡಿದ ಸಚಿವ ಎಸ್. ಅಂಗಾರ

ಆನೆ ದಾಳಿಯಂದ ಮತಪಟ್ಟ ರೆಂಜಲಾಡಿ ಗ್ರಾಮದ ನೈಲ ರಂಜಿತಾ ಹಾಗೂ ರಮೇಶ್ ರೈ ಅವರ ಮನೆಗೆ ಬಂದರು ಮೀನುಗರಿಕೆ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಭೇಟಿ ನೀಡಿ ಸಾಂತ್ವನ ಹೇಳಿದರು. ಸಚಿವರ ಆಗಮನವಾಗುತ್ತಿದ್ದಂತೆ ಮನೆಯವರು ತೀವ ಅಸಮಾಧಾನ ವ್ಯಕ್ತಪಡಿಸಿದರು. ಇಲ್ಲಿ ಕಳೆದ ಕೆಲವು ತಿಂಗಳಿಂದ ಆನೆಗಳ ಹಾವಳಿಯ ಬಗ್ಗೆ ಎಲ್ಲರಿಗೂ ಗೊತ್ತಿತ್ತು. ಆದರೆ ಯಾರೂ ಸರಿಯಾದ ಕ್ರಮ ಕೈಗೊಂಡಿಲ್ಲ. ನೀವು ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳುತ್ತಿದ್ದರೆ ನನ್ನ ಮಗಳ ಪ್ರಾಣ

ಹರಿದಾಸ- ಜಿನದಾಸ, ಯಕ್ಷಗಾನ ಕಲಾವಿದ ಅಂಬಾತನಯ ಮುದ್ರಾಡಿ ವಿಧಿವಶ

ಅತ್ಯಂತ ವಿನೀತ, ಮೃದು ಭಾಷಿ,ಸಾತ್ವಿಕ ಮನೋಭಾವದ ಸಹೃದಯಿ ವಿದ್ವಾಂಸ ಹರಿದಾಸ ಅಂಬಾತನಯ ಮುದ್ರಾಡಿ (88) ಇಂದು ಮುಂಜಾನೆ ನಮ್ಮನ್ನಗಲಿದ್ದಾರೆ. ಶಿಕ್ಷಕ, ಹರಿದಾಸ,ತಾಳಮದ್ದಲೆ ಅರ್ಥಧಾರಿ, ವೇಷಧಾರಿ, ಪ್ರವಚನಕಾರ, ಸಾಹಿತಿ ಹೀಗೆ ಎಲ್ಲಾ ವಿಭಾಗದಲ್ಲಿ ವೈಶಿಷ್ಟ ಪೂರ್ಣವಾದ ಸಾಧನೆಯನ್ನು ಮಾಡಿದ,ಸಮಾಜದ ಎಲ್ಲ ಮಂದಿಗೆ ಮನೆಯ ಸದಸ್ಯನಂತೆ ಇದ್ದು ಮಾರ್ಗದರ್ಶನ ಮಾಡಿ ಸಾರ್ಥಕವಾಗಿ ಬದುಕನ್ನು ಪೂರೈಸಿದ ಅಂಬಾತನಯರದ್ದು ಆದರ್ಶ ಜೀವನ. ಕಳೆದ ವಾರ ಉಡುಪಿಯಲ್ಲಿ ಜರಗಿದ ಪ್ರಥಮ

ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ 15 ನೆಯ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ಮಹಾ ಶಿವರಾತ್ರಿ ಕಾರ್ಯಕ್ರಮ

ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ 15 ನೆಯ ಪ್ರತಿಷ್ಠಾ ವರ್ಧಂತ್ಯುತ್ಸವ ಕಾರ್ಯಕ್ರಮ ಹಾಗೂ ಮಹಾ ಶಿವರಾತ್ರಿ ಕಾರ್ಯಕ್ರಮ ಶ್ರದ್ಧಾ ಭಕ್ತಿಯಿಂದ ಜರುಗಿತು. ಸ್ವಾಮಿನಿ ಮಂಗಳಾಮೃತ ಪ್ರಾಣರವರು ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಶಿಕಾರಿಪುರ ಕೃಷ್ಣಮೂರ್ತಿ, ಉದಯ ಕುಮಾರ್, ರಘುರಾಮ ರಾವ್ ಮತ್ತು ತಂಡದವರಿಂದ ರುದ್ರ ಪಠನ, ಉರ್ವ ಶ್ರೀ ಮಾರಿಯಮ್ಮ ಕ್ಷೇತ್ರ ಪಾರಾಯಣ ಬಳಗದವರಿಂದ ಸಾಮೂಹಿಕ ಕುಂಕುಮಾರ್ಚನೆ, ಶ್ರೀ ಲಲಿತಾ ಸಹಸ್ರನಾಮಾರ್ಚನೆ ಜರುಗಿತು. ಸ್ವಾಮಿನಿ

ರಾಜ್ಯದ ಅಭಿವೃದ್ಧಿಗಳಿಗೆ ಕರ್ನಾಟಕ ಜನತಾ ಪಕ್ಷ ಬೆಂಬಲಿಸಿ : ಪಕ್ಷದ ಸಂಸ್ಥಾಪಕ ಪದ್ಮನಾಭ ಪ್ರಸನ್ನ ಕುಮಾರ್

ರಾಜ್ಯದ ಜನತೆಯು ರಾಜ್ಯದ ಅಭಿವೃದ್ಧಿಗಳಿಗೆ ಕರ್ನಾಟಕ ಜನತಾ ಪಕ್ಷವನ್ನು ಬೆಂಬಲಿಸಿ ಸುವರ್ಣ ನಾಡನ್ನು ಕಟ್ಟಲು ಕೈ ಜೋಡಿಸಬೇಕೆಂದು ಪಕ್ಷದ ಸಂಸ್ಥಾಪಕ ಅಧ್ಯಕ್ಷರಾದ ಪದ್ಮನಾಭ ಪ್ರಸನ್ನ ಕುಮಾರ್ ಹೇಳಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.ರಾಜ್ಯದಲ್ಲಿ ಚುನಾವಣಾ ಕಾವು ರಂಗೇರುತ್ತಿದೆ. ರಾಜ್ಯದ ಜನ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ದುರಾಡಳಿತದಿಂದ ಬೇಸತ್ತು ಹೋಗಿದ್ದಾರೆ. ರಾಜ್ಯದ ಸರ್ವತೋಮುಖ

ಫೆ.21ರಂದು ‘ನೀನೊಲಿದ ಬದುಕು’ ಕೃತಿ ಲೋಕಾರ್ಪಣೆ

ಕಲ್ಕೂರ ಪ್ರತಿಷ್ಠಾನ ಮಂಗಳೂರು, ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ಮತ್ತು ಸ್ನಾತಕೋತ್ತ ತುಳು ಅಧ್ಯಯನ ವಿಭಾಗ, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ನಿವೃತ್ತ ಹಿರಿಯ ಐಎಎಸ್ ಅಧಿಕಾರಿ, ಸಾಹಿತಿ ಡಾ. ಸಿ. ಸೋಮಶೇಖರ್ ಅವರು ಬರೆದಿರುವ ಆತ್ಮಕಥನ ಕೃತಿ ನೀನೊಲಿದ ಬದುಕು ಅನಾವರಣ ಸಮಾರಂಭವು ಫೆ.21ರಂದು ನಡೆಯಲಿದೆ. ಈ ಬಗ್ಗೆ ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ…. ಎ. ಆರ್ ಸುಬ್ಬೆ

ಹಿಂದೂ ಸಮಾಜಕ್ಕೆ ಛತ್ರಪತಿ ಶಿವಾಜಿ ಮಹಾರಾಜರ ಕೊಡುಗೆ ಅತ್ಯಮೂಲ್ಯ: ಶಾಸಕ ವೇದವ್ಯಾಸ ಕಾಮತ್

ಭಾರತ ದೇಶ ಹಾಗೂ ಹಿಂದೂ ಸಮಾಜಕ್ಕೆ ಛತ್ರಪತಿ ಶಿವಾಜಿ ಮಹಾರಾಜರು ನೀಡಿದ ಕೊಡುಗೆ ಅತ್ಯಮೂಲ್ಯವಾದದ್ದು ಎಂದು ಶಾಸಕರಾದ ಡಿ. ವೇದವ್ಯಾಸ ಕಾಮತ್ ಅವರು ಬಣ್ಣಿಸಿದರು.ಅವರು ಫೆ. 19ರ ಭಾನುವಾರ ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ದಕ್ಷಿಣ ಕನ್ನಡ ಹಾಗೂ ಜಿಲ್ಲೆಯ ಆರ್ಯ ಯಾನೆ ಮರಾಠ ಸಮಾಜ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಛತ್ರಪತಿ ಶಿವಾಜಿಯವರ 396ನೇ

ಕಲಾಪೋಷಕರಿಂದ ಯಕ್ಷಗಾನ ಉಳಿವು: ಅನಂತ ಆಸ್ರಣ್ಣ

ಮಂಗಳೂರು: ‘ಯಕ್ಷಗಾನವನ್ನು ನಿರಂತರವಾಗಿ ಉಳಿಸಿ, ಬೆಳೆಸಲು ಕಲಾಪೋಷಕರ ಪಾತ್ರ ಹಿರಿದು, ಬೊಂಡಾಲದಲ್ಲಿ ದೀರ್ಘಕಾಲ ಯಕ್ಷಗಾನವನ್ನು ಸೇವಾರೂಪದಲ್ಲಿ ಆಡಿಸುವುದಲ್ಲದೆ, ಕಲಾವಿದರನ್ನು ಸನ್ಮಾನಿಸುವ ಮೂಲಕ ಕಲಾಮಾತೆಯ ಸೇವೆಯನ್ನೂ ನಡೆಸಿಕೊಂಡು ಬರುತ್ತಿರುವುದು ಸ್ತುತ್ಯರ್ಹ’ ಎಂದು ಕಟೀಲು ಕ್ಷೇತ್ರದ ಆನುವಂಶಿಕ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ಹೇಳಿದ್ದಾರೆ. ಹಳೆ ತಲೆಮಾರಿನ ಅರ್ಥಧಾರಿ, ಶಿಕ್ಷಕ ಮತ್ತು ಶಂಭೂರು ಗ್ರಾಮದ ಪಟೇಲ ದಿ.ಬೊಂಡಾಲ ಜನಾರ್ಧನ