Home ಕರಾವಳಿ Archive by category ಸುರತ್ಕಲ್

ರಾಜ್ಯವನ್ನು ಚೋರ ಗುರು ಶಿಷ್ಯರು ಆಳುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಸುರತ್ಕಲ್: “ರಾಜ್ಯದಲ್ಲಿ ಬಿಜೆಪಿ ಸರಕಾರ ಮೈ ಭಿ ಖಾವೂಂಗಾ ತುಮ್ಕೋ ಭಿ ಖಿಲಾವೂಂಗಾ ಎಂಬ ಸ್ಲೋಗನ್ ಅಡಿಯಲ್ಲಿ ಕಾರ್ಯಾಚರಿಸುತ್ತಿದೆ. ಕಂಟ್ರಾಕ್ಟರ್ ಅಸೋಷಿಯೇಷನ್ ಶಾಸಕರು 40% ಕಮಿಷನ್ ತಗೊಳ್ಳೋದನ್ನು ಒಪ್ಪಿಕೊಂಡಿದೆ. ಇವರದ್ದು ಬರೀ ಸುಳ್ಳುಗಳ ಸರಕಾರ, ಚೋರ ಗುರು ಚಾಂಡಾಲ ಶಿಷ್ಯರು ಕೇಂದ್ರ ಮತ್ತು ರಾಜ್ಯ ಸರಕಾರವನ್ನು ಆಳ್ತಾ ಇದ್ದಾರೆ. ನರೇಂದ್ರ ಮೋದಿ

ಪೇಪರ್ ಸ್ಟೂಡೆಂಟ್ಸ್ ತುಳು ಚಿತ್ರ ಸುರತ್ಕಲ್ ಗ್ಯಾಲಕ್ಸಿ ಥೇಟರ್ ನಲ್ಲಿ ಬಿಡುಗಡೆ

ವಾದಿರಾಜ್ ಉಪ್ಪೂರ್ ನಿರ್ದೇಶನದ ಪೇಪರ್ ಸ್ಟೂಡೆಂಟ್ಸ್ ತುಳು ಚಿತ್ರ ಸುರತ್ಕಲ್ ಗ್ಯಾಲಕ್ಸಿ ಥೇಟರ್ ನಲ್ಲಿ ಕಳೆದ ಶುಕ್ರವಾರ ಬಿಡುಗಡೆ ಗೊಂಡಿತು. ಹಿರಿಯ ನಿರ್ದೇಶಕ ಕೃಷ್ಣಪ್ಪ ಉಪ್ಪೂರು , ಸಾಹಿತಿ ಯಶವಂತ್ ಬೋಳೂರು , ಯೋಗೀಶ್ ಕಾಂಚನ್ , ಚಿತ್ರದ ನಾಯಕ , ನಾಯಕಿ , ಮುಂತಾದವರು ಪಾಲ್ಗೊಂಡಿದ್ದರು.

“ಸ್ಮಾರ್ಟ್ & ಡಿಜಿಟಲ್ ಸುರತ್ಕಲ್”ಗೆ ಶಾಸಕ ಡಾ.ವೈ. ಭರತ್ ಶೆಟ್ಟಿ ಅವರಿಂದ ಚಾಲನೆ

ಸುರತ್ಕಲ್: ರಾಜ್ಯದಲ್ಲೇ ಪ್ರಥಮ ಹೈಟೆಕ್ ಬಸ್ ನಿಲ್ದಾಣವನ್ನು ಇಲ್ಲಿನ ಗೋವಿಂದ ದಾಸ್ ಕಾಲೇಜ್ ಮುಂಭಾಗ ಸೋಮವಾರ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ವೈ. ಭರತ್ ಶೆಟ್ಟಿ ಉದ್ಘಾಟಿಸಿದರು.ಈ ವೇಳೆ ಮಾತಾಡಿದ ಶಾಸಕರು, “ಸ್ಮಾರ್ಟ್ ಆಂಡ್ ಡಿಜಿಟಲ್ ಸುರತ್ಕಲ್” ಯೋಜನೆಯಡಿಯಲ್ಲಿ ಸುರತ್ಕಲ್ ಗೋವಿಂದ ದಾಸ್ ಕಾಲೇಜ್ ಮುಂಭಾಗ ರಾಜ್ಯದಲ್ಲೇ ಪ್ರಥಮವಾಗಿ ಸರ್ವ ರೀತಿಯಲ್ಲೂ ಸುಸಜ್ಜಿತವಾದ ಹೈಟೆಕ್ ಬಸ್ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಲಾಗಿದೆ. ಶುದ್ಧ ಕುಡಿಯುವ

ಸುರತ್ಕಲ್-ನಂತೂರು ಟೋಲ್ ಮುಕ್ತ ರಸ್ತೆಯಾಗಿ ಘೋಷಿಸಲು ಒತ್ತಾಯ : ಬನ್ನಂಜೆಯಲ್ಲಿ ಸಾಮೂಹಿಕ ಜನಾಗ್ರಹ ಧರಣಿ

ಸುರತ್ಕಲ್ ಅಕ್ರಮ ಟೋಲ್ ಸುಂಕ ಹೆಜಮಾಡಿ ಟೋಲ್‍ಗೇಟ್‍ನಲ್ಲಿ ಸಂಗ್ರಹಿಸುವ ಹೆದ್ದಾರಿ ಪ್ರಾಧಿಕಾರದ ವಿಲೀನ ಆದ್ಯಾದೇಶ ಶಾಶ್ವತವಾಗಿ ಹಿಂಪಡೆಯಲು ಆಗ್ರಹಿಸಿ ಸುರತ್ಕಲ್ ನಂತೂರು ಹೆದ್ದಾರಿಯನ್ನು ಟೋಲ್ ಮುಕ್ತ ರಸ್ತೆಯಾಗಿ ಘೋಷಿಸಲು ಒತ್ತಾಯಿಸಿ ಸಾಮೂಹಿಕ ಜನಾಗ್ರಹ ಧರಣಿ ಬನ್ನಂಜೆಯಲ್ಲಿ ನಡೆಯಿತು. ಟೋಲ್‍ಗೇಟ್ ವಿರೋಧಿ ಹೋರಾಟ ಸಮಿತಿ ಮತ್ತು ಸಮಾನ ಮನಸ್ಕ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ

ಕಾಟಿಪಳ್ಳದ ಜಲೀಲ್ ಹತ್ಯೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ

ಕಾಟಿಪಳ್ಳ ಜಲೀಲ್ ಹತ್ಯೆ ಪ್ರಕರಣದಲ್ಲಿ ಪೆÇಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಕಾಟಿಪಳ್ಳ ನಾಲ್ಕನೇ ಬ್ಲಾಕ್ ಕೃಷ್ಣಾಪುರ ನಿವಾಸಿ ಲಕ್ಷ್ಮೀಶ ದೇವಾಡಿಗ(28) ಬಂಧಿತ. ಈಗಾಗಲೇ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಶೈಲೇಶ್ ಪೂಜಾರಿ, ಸವಿನ್ ಕಾಂಚನ್ ಮತ್ತು ಪವನ್ ಎಂಬವರನ್ನು ಬಂಧಿಸಲಾಗಿತ್ತು. ಇದೀಗ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಲಕ್ಷ್ಮೀಶ ಮತ್ತು ಶೈಲೇಶ್ ಸೇರಿಕೊಂಡು ಜಲೀಲ್ ಕೊಲೆಗೆ ಸಂಚು ಹೆಣೆದಿದ್ದರು ಎನ್ನಲಾಗಿದೆ.

ಅಬ್ದುಲ್ ಜಲೀಲ್ ಹತ್ಯೆ ಪ್ರಕರಣ :3 ಪ್ರಮುಖ ಆರೋಪಿಗಳ ಬಂಧನ

ಕೃಷ್ಣಾಪುರದಲ್ಲಿ ನಡೆದ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಮಾಧ್ಯಮದವರಿಗೆ ಈ ಕುರಿತು ಮಾಹಿತಿ ನೀಡಿದ ಪೊಲೀಸ್ ಆಯುಕ್ತರು, ಬಂಧಿತರ ಪೈಕಿ ಇಬ್ಬರು ಕೃತ್ಯದಲ್ಲಿ ನೇರವಾಗಿ ಭಾಗಿಯಾದ ಆರೋಪಿಗಳಾಗಿದ್ದರೆ, ಇನ್ನೋರ್ವ ಆರೋಪಿಗಳಿಗೆ ಬೈಕಿನಲ್ಲಿ ಪರಾರಿಯಾಗಲು ನೆರವಾದವನು ಎಂದು ಮಾಹಿತಿ ನೀಡಿದ್ದಾರೆ. ಆರೋಪಿಗಳನ್ನು ರವಿವಾರ ರಾತ್ರಿ

ಮುಲ್ಕಿ: ಪಾವಂಜೆಯಲ್ಲಿ ಸರಣಿ ಅಪಘಾತ: ಆಟೋದಲ್ಲಿದ್ದ ಮಹಿಳೆಗೆ ಗಾಯ

ಮೂಲ್ಕಿ ರಾಷ್ಟ್ರೀಯ ಹೆದ್ದಾರಿ 66 ರ ಹಳೆಯಂಗಡಿ ಸಮೀಪದ ಪಾವಂಜೆ ಸೇತುವೆಯಲ್ಲಿ ಆಟೋ ಮತ್ತು ಬಸ್ ಹಾಗೂ ಲಾರಿಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು ಆಟೋದಲ್ಲಿದ್ದ ಮಹಿಳೆ ಗಂಭೀರ ಗಾಯಗೊಂಡಿದ್ದ, ಮಹಿಳೆಯನ್ನು ಸ್ಧಳೀಯ ಆಸ್ಪತ್ರಗೆ ದಾಖಲಿಸಿದ್ದಾರೆ. ಗಾಯಗೊಂಡ ಮಹಿಳೆಯನ್ನು ಮಂಗಳೂರು ನಿವಾಸಿ ಸರಸ್ವತಿ ಎಂದು ಗುರುತಿಸಲಾಗಿದೆ. ಆಟೋ ಮಂಗಳೂರಿನಿಂದ ಮೂಲ್ಕಿ ಕಡೆಗೆ ಹೋಗುತ್ತಿದ್ದು ಆಟೋಗೆ ಪಾವಂಜೆ ಸೇತುವೆ ಬಳಿ ಮುಂಬೈ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಈ

ಶಿಬರೂರು ಕೊಡಮಣಿತ್ತಾಯ ದೈವಸ್ಥಾನದ ವರ್ಷಾವಧಿ ಜಾತ್ರೋತ್ಸವ ಸಂಭ್ರಮ

ತುಳು ನಾಡು ದೈವ ದೇವರುಗಳ ನೆಲೆಬೀಡು. ತುಳು ನಾಡಿನಲ್ಲಿ ಹೆಜ್ಜೆಗೊಂದರಂತೆ ದೈವಸ್ಥಾನ, ದೇವಸ್ಥಾನಗಳು ಕಾಣಸಿಗುತ್ತವೆ. ಅದರಂತೆ ಸುರತ್ಕಲ್ ಸಮೀಪದ ಅತ್ಯಂತ ಪ್ರಸಿದ್ಧ ಶಿಬರೂರು ಕೊಡಮಣಿತ್ತಾಯ ದೈವಸ್ಥಾನದ ವರ್ಷಾವಧಿ ಒಂದು ವಾರಗಳ ಕಾಲ ನಡೆಯಲಿದ್ದು ಇಂದು ಪ್ರಾರಂಭವಾಯಿತು.  ಅತ್ಯಂತ ಕಾರಣಿಕ ಕ್ಷೇತ್ರ ಎಂದು ಪ್ರಸಿದ್ಧಿಯನ್ನು ಪಡೆದ ಈ ಕ್ಷೇತ್ರಕ್ಕೆ ಲಕ್ಷಾಂತರ ಭಕ್ತರು ಭೇಟಿ ನೀಡುವುದು ವಿಶೇಷ. ಮಂಗಳೂರಿನ ಸುರತ್ಕಲ್ ಸಮೀಪದ ಶಿಬರೂರು ಕೊಡಮಣಿತ್ತಾಯ

ಕಿನ್ನಿಗೋಳಿ – ಹಳೆಯಂಗಡಿ ನಡುವೆ ಬಸ್ ಟಿಕೆಟ್ ದರ 2 ರೂ ಇಳಿಕೆ

ಸುರತ್ಕಲ್ ಟೋಲ್ ಗೇಟ್ ತೆರವಾಗಿರುವ ಹಿನ್ನಲೆಯಲ್ಲಿ ಕಿನ್ನಿಗೋಳಿ ಹಳೆಯಂಗಡಿ ನಡುವೆ ಸಂಚರಿಸುವ ಎಲ್ಲಾ ಬಸ್ಗಳ ಟಿಕೆಟ್ ದರದಲ್ಲಿ ಡಿ.20 ರಿಂದ 2ರೂ ಕಡಿತ ಮಾಡಲಾಗುವುದು, ಕಿನ್ನಿಗೋಳಿಯಿಂದ ಮುಕ್ಕ ತನಕ ಹಿಂದಿನ ದರವೇ ಇರಲಿದೆ ಎಂದು ಕಿನ್ನಿಗೋಳಿ ವಲಯ ಬಸ್ ಮಾಲಕರ ಸಂಘದ ಅಧ್ಯಕ್ಷ ದುರ್ಗಾಪ್ರಸಾದ್ ಹೆಗ್ಡೆ ತಿಳಿಸಿದ್ದಾರೆ

ಆಸ್ಪತ್ರೆಯಲ್ಲಿ ಮಹಿಳೆಯರು ಉಡುಪು ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ : ನರ್ಸಿಂಗ್‌ ವಿದ್ಯಾರ್ಥಿ ಬಂಧನ

ಮಂಗಳೂರು : ಸುರತ್ಕಲ್‌ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಹಿಳೆಯರು ಉಡುಪು ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ ಇರಿಸಿ ದೃಶ್ಯಗಳನ್ನು ಸೆರೆ ಹಿಡಿದ ಆರೋಪದಲ್ಲಿ 21 ವರ್ಷದ ನರ್ಸಿಂಗ್‌ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸಿಂಗ್‌ವಿದ್ಯಾರ್ಥಿ ಪವನ್‌ ಈ ಕೃತ್ಯವೆಸಗಿದ ಆರೋಪಿ. ಮೂಲತಃ ಕಲಬುರಗಿಯವನಾದ ಪವನ್‌ ಬಜಪೆಯಲ್ಲಿ ವಾಸವಿದ್ದ.ಆಸ್ಪತ್ರೆಗೆ ತಪಾಸಣೆಗೆ ಬಂದವರು ಸ್ಕ್ಯಾನಿಂಗ್‌ಗೆ ಒಳಗಾಗುವ ಮುನ್ನ ಬಟ್ಟೆ