ಶ್ರೀ ಶಾರದಾಂಬ ಸಮೂಹ ಸಮಿತಿಯ ಪದಾಧಿಕಾರಿಗಳ ಉಪಸ್ಥಿತಿಸುಳ್ಯದ ನಾಡಹಬ್ಬ 53ನೇ ವರ್ಷದ ಶ್ರೀ ಶಾರದಾಂಬ ದಸರಾ – 2024ರ ಆಮಂತ್ರಣ ಪತ್ರಿಕೆಯನ್ನು ದಸರಾ ಉತ್ಸವ ಸಮಿತಿಯ ಅಧ್ಯಕ್ಷರು ಹಾಗೂ ಶಾಸಕರಾದ ಭಾಗೀರಥಿ ಮುರುಳ್ಯ ಅವರು ಶ್ರೀ ಚೆನ್ನಕೇಶವ ದೇವಾಲಯದ ವಠಾರದಲ್ಲಿ ಬಿಡುಗಡೆಗೊಳಿಸಿದರು. ಸುಳ್ಯ ದಸರಾ ಉತ್ಸವವು ಅ.9ರಿಂದ ಅ.17ರ ತನಕ ಸುಳ್ಯದ ಶ್ರೀ ಚೆನ್ನಕೇಶವ
ಶಿಕ್ಷಕ ವೃತ್ತಿಯು ಅತ್ಯಂತ ಗೌರವಯುತವಾದುದು. ಹಿಂದೆ ಸಮಾಜದಲ್ಲಿ ಪ್ರತಿ ಸಭೆ ಸಮಾರಂಭಗಳಲ್ಲಿ ಶಿಕ್ಷಕರ ಉಪಸ್ಥಿತಿ ಅತ್ಯಂತ ಅಗತ್ಯವಾಗಿತ್ತು ಹಾಗೂ ಅವರೇ ಯಾವುದೇ ಕಾರ್ಯಕ್ರಮಗಳನ್ನು ನಿರ್ವಹಿಸುತ್ತಿದ್ದರು. ಅಂತೆಯೇ ಹೆಚ್ಚಿನ ಸ್ಥಾನಮಾನಗಳನ್ನು ಪಡೆದುಕೊಳ್ಳುತ್ತಿದ್ದರು. ಹೆತ್ತ ತಾಯಿ, ಹೊತ್ತ ಭೂಮಿ, ವಿದ್ಯೆ ಕಲಿಸಿದ ಗುರುಗಳನ್ನು ಗೌರವದಿಂದ ಕಂಡರೆ ಬದುಕಿನಲ್ಲಿ ಯಶಸ್ಸು ಖಂಡಿತ ಎಂದು ತಾಲೂಕು ಕನ್ನಡ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಕಾಲೇಜಿನ ಆಡಳಿತ ಅಧಿಕಾರಿ
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು,ಶಿಕ್ಷಣಾಧಿಕಾರಿ ಹಾಗೂ ಪದನಿಮಿತ್ತ ತಾಲೂಕು ಯೋಜನಾಧಿಕಾರಿ ಕಚೇರಿ ಸುಳ್ಯ. ಸುಳ್ಯ ತಾಲೂಕು ಮಟ್ಟದ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನೋತ್ಸವ “ಶಿಕ್ಷಕರ ದಿನಾಚರಣೆ 2024” ರ ಈ ಸಮಾರಂಭದಲ್ಲಿ 2023-24 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದ ತೆಕ್ಕಿಲ್ ಪ್ರೌಢಶಾಲೆ ಗೂನಡ್ಕ ಬೀಜದಕಟ್ಟೆ, ಸಂಸ್ಥೆಗೆ ಅಭಿನಂದನಾ ಸ್ಮರಣಕ್ಕೆ
ಸುಳ್ಯ ಪೊಲೀಸ್ ಠಾಣೆಗೆ ನೂತನ ಉಪನಿರೀಕ್ಷಕರಾಗಿ ಸಂತೋಷ್ ರವರು ಸೆ. 5ರಂದು ಅಧಿಕಾರ ಸ್ವೀಕರಿಸಿದರು. ಸುಳ್ಯ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಈರಯ್ಯ ದೂಂತುರು ರವರು ಬೆಳ್ಳಾರೆ ಠಾಣೆಗೆ ವರ್ಗಾವಣೆಗೊಂಡಿದ್ದು ಬೆಳ್ಳಾರೆ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್ ರವರು ಸುಳ್ಯಕ್ಕೆ ವರ್ಗಾವಣೆಗೊಂಡಿದ್ದರು.
ಸುಳ್ಯ ಮಂಡಲ ಮಹಿಳಾ ಮೋರ್ಚಾ ವತಿಯಿಂದ ನಡೆದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಲೀಲಾವತಿ ರಾಘವ ಗೌಡ ಮತ್ತು ಜಾನಕಿ ವೆಂಕಪ್ಪ ಗೌಡ ಇವರುಗಳನ್ನು ಅವರ ನಿವಾಸದಲ್ಲಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಈ ಸಂದರ್ಭ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಹಿಳಾ ಮೋರ್ಚಾ ಅಧ್ಯಕ್ಷೆ ಇಂದಿರಾ. ಬಿ. ಕೆ. ಮಾಜಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯೆ ಪುಷ್ಪಾವತಿ ಬಾಳಿಲ,ಮುರುಳ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ವನಿತಾ ಸುವರ್ಣ, ಮಹಿಳಾ ಮೋರ್ಚಾ ಸದಸ್ಯೆ ಮತ್ತು ಮುರುಳ್ಯ ಗ್ರಾಮ
ಹಾಸನ ಜಿಲ್ಲೆ ಅರಕಲಗೂಡು ವಿಧಾನ ಸಭಾ ಕ್ಷೇತ್ರದ ಕೆ.ಪಿ.,ಸಿ.ಸಿ ಉಸ್ತುವಾರಿಯಾಗಿ ಕಾಂಗ್ರೆಸ್ ಮುಖಂಡ ಹಾಗೂ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್‌ರವರನ್ನು ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ನೇಮಕಗೊಳಿಸಿರುತ್ತಾರೆ. ಕ್ಷೆತ್ರದ ಉಸ್ತುವಾರಿ ಜವಾಬ್ದಾರಿ ವಹಿಸಿಕೊಂಡು ವಿಧಾನ ಸಭೆ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ ಸಂಬಂಧಿಸಿದಂತೆ ಪಕ್ಷ ಬಲವರ್ಧನೆಗೆ ಕಾರ್ಯಚಟುವಟಿಕೆಗಳನ್ನು ಡಿ.ಸಿ.ಸಿ/ಬಿ.ಸಿ.ಸಿ ಹಾಗೂ ಸ್ಥಳೀಯ ಮುಖಂಡರುಗಳ
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸೆಪ್ಟೆಂಬರ್ 2 ರಂದು ನಡೆಯಲಿರುವ ರಾಷ್ಟ್ರೀಯ ವಿಚಾರ ಸಂಕಿರಣದ ಆಮಂತ್ರಣ ಪತ್ರ ಹಾಗೂ ಕರಪತ್ರದ ಅನಾವರಣ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ ಎಂ ಹಾಗೂ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ಆಮಂತ್ರಣ ಪತ್ರ ಹಾಗೂ ಕರಪತ್ರವನ್ನು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಬಂಟಮಲೆ ಅಕಾಡೆಮಿಯ ಅಧ್ಯಕ್ಷ ಹಿಮಕರ ಎ ಕೆ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀಮತಿ
ಅಟಲ್ ಜಿ ಚಾರಿಟೇಬಲ್ ಟ್ರಸ್ಟ್ ಸುಳ್ಯ ಇದರ ವತಿಯಿಂದ ಸುಳ್ಯದ ನರೇಂದ್ರ ವಿಹಾರದಲ್ಲಿ ಮಾಜಿ ಪ್ರಧಾನಿ, ಅಜಾತಶತ್ರು ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯ ದಿನವನ್ನು ಆಚರಿಸಲಾಯಿತು. ಈ ಸಭೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಪ್ರಮುಖರು ಹಾಗೂ ಟ್ರಸ್ಟಿನ ಕೋಶಾಧಿಕಾರಿಗಳಾದ ಎ ವಿ ತೀರ್ಥರಾಮ, ಮಾನ್ಯ ಶಾಸಕರು ಹಾಗೂ ಟ್ರಸ್ಟಿಗಳಾದ ಕು. ಭಾಗೀರಥಿ ಮುರುಳ್ಯ ಮತ್ತು ಭಾರತೀಯ ಜನತಾ ಪಾರ್ಟಿಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಟ್ರಸ್ಟಿಗಳಾದ ವಿನಯ್ ಕುಮಾರ್ ಕಂದಡ್ಕರವರು
ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ, ಪುತ್ತೂರು ಇಲ್ಲಿನ ಭಾರತ್ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ದಳದ ವತಿಯಿಂದ ವನ ಮಹೋತ್ಸವ ವನ್ನು ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆ ವಹಿಸಿ ಮಾತನಾಡಿ ವನ ಮಹೋತ್ಸವದ ಅಗತ್ಯತೆ, ಪ್ರಕೃತಿಯ ಆಂತರ್ಯದ ಸತ್ವವನ್ನು ನಾವು ತಿಳಿದು ಕೊಳ್ಳುವ ಅನಿವಾರ್ಯತೆಯ ಕುರಿತು ಬೆಳಕು ಚೆಲ್ಲಿದರು. ವೇದಿಕೆಯಲ್ಲಿ ಸ್ಕೌಟ್ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್, ಗೈಡ್ ಶಿಕ್ಷಕಿಯರಾದ
ಸುಳ್ಯ: ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ನಡೆಯಿತು. ನೂತನ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ, ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ, ಕೋಶಾಧಿಕಾರಿ ಪುಷ್ಪರಾಜ ಶೆಟ್ಟಿ ನೇತೃತ್ವದ ತಂಡ ಅಧಿಕಾರ ವಹಿಸಿಕೊಂಡರು. ನಿರ್ಗಮನ ಅಧ್ಯಕ್ಷ ದಯಾನಂದ ಕಲ್ನಾರ್, ಕಾರ್ಯದರ್ಶಿ ತೇಜೇಶ್ವರ ಕುಂದಲ್ಪಾಡಿ ಅಧಿಕಾರ ಹಸ್ತಾಂತರಿಸಿದರು. ದ.ಕ.ಜಿಲ್ಲಾಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ