Home ಕರಾವಳಿ Archive by category ಸುಳ್ಯ (Page 13)

ಹರಿವು ನಿಲ್ಲಿಸಿದ ಸುಳ್ಯದ ಜೀವನದಿ ಪಯಸ್ವಿನಿ

ಸುಳ್ಯ: ಸುಳ್ಯದ ಜೀವನದಿ ಪಯಸ್ವಿನಿಯು ಹರಿವು ನಿಲ್ಲಿಸಿದ್ದು ಇದೀಗ ಕಾಂತಮಂಗಲ, ದೊಡ್ಡೆರಿ ಹಾಗೂ ಬಸವನಪಾದೆಯ ಸುಮಾರು 125 ಮನೆಗಳಿಗೆ ಕಳೆದ ಕೆಲ ದಿನಗಳಿಂದ ನೀರು ವ್ಯತ್ಯಯವಾಗಿತ್ತು. ಇದನ್ನು ಸರಿ ಪಡಿಸಲು ಹಲವಾರು ವಿಧಗಳಲ್ಲಿ ಪ್ರಯತ್ನಿಸಿದ್ದರು ಅಷ್ಟರಲ್ಲಾಗಲೇ ಚುನಾವಣೆ ಘೋಷಣೆ ಆದ ಹಿನ್ನಲೆಯಲ್ಲಿ ಟ್ಯಾಂಕರ್ ಹಾಗೂ ಪಂಚಾಯತ್ ವಾಹನದಲ್ಲಿ ಕೆಲ ಮನೆಗಳಿಗೆ ನೀರು

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಸುಂದರ ಮೇರ ನಾಮಪತ್ರ ಸಲ್ಲಿಕೆ

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಸುಂದರ ಮೇರ ಏ.20ರಂದು ನಾಮಪತ್ರ ಸಲ್ಲಿಸಿದರು. ಮಿನಿ ವಿಧಾನಸೌಧದ ಚುನಾವಣಾ ಕಚೇರಿಯಲ್ಲಿನ ಚುನಾವಣಾಧಿಕಾರಿಕಚೇರಿಯಲ್ಲಿ ಕ್ಷೇತ್ರದ ಚುನಾವಣಾಧಿಕಾರಿ ಅರುಣ್‌ಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು. ಸಹಾಯಕ ಚುನಾವಣಾಧಿಕಾರಿಗಳಾದ ಜಿ.ಮಂಜುನಾಥ್, ರಮೇಶ್ ಬಾಬು ಸಹಕರಿಸಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಅಶೋಕ್ ಕೊಂಚಾಡಿ, ಜಯಪ್ರಕಾಶ್ ಕನ್ಯಾಡಿ,ಕರುಣಾಕರ ಪಳ್ಳತ್ತಡ್ಕ,

ಸುಳ್ಯ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ನಾಮಪತ್ರ ಸಲ್ಲಿಕೆ

ಸುಳ್ಯ: ಸುಳ್ಯ ಮೀಸಲು ಕ್ಷೇತ್ರದಿಂದ ಭಾಗೀರಥಿ ಮುರುಳ್ಯ ಮೊದಲ ಬಾರಿಗೆ ಇಂದು ಬಿಜೆಪಿ ಅಭ್ಯರ್ಥಿಯಾಗಿ ನಾಮ ಪತ್ರ ಸಲ್ಲಿಸಲಿದರು. ಇಂದು ಬೆಳಗ್ಗೆ 11:35 ರ ವೇಳೆಗೆ ಪಕ್ಷದ ಹಿರಿಯ ನಾಯಕರ ಜೊತೆ ಆಗಮಿಸಿ ಭಾಗೀರಥಿ ಮುರುಳ್ಯ ನಾಮಪತ್ರ ಸಲ್ಲಿಸಲಿದ್ದರು. ನಾಮಪತ್ರ ಸಲ್ಲಿಕೆಯ ಮೊದಲು ನಗರದಲ್ಲಿ ಬಿಜೆಪಿ ಕಾರ್ಯಕರ್ತರ ಅದ್ದೂರಿ ಮೆರವಣಿಗೆ ನಡೆಯಿತು. ಶ್ರೀರಾಮಪೇಟೆಯ ಶ್ರೀರಾಮ ಭಜನಾ ಮಂದಿರದ ಬಳಿಯಿಂದ ಮೆರವಣಿಗೆ ನಗರದ ಬೀದಿಯಲ್ಲಿ ಸಾಗಿ ಬಂದಿತು. ಶ್ರೀರಾಮ ಪೇಟೆಯಿಂದ

ಸುಳ್ಯ : ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ ನಾಮಪತ್ರ ಸಲ್ಲಿಕೆ

ವಿಧಾನಸಭಾ ಚುನಾವಣೆಯ ಸುಳ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪರವರು ಇಂದು ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿ ಅರುಣಕುಮಾರ ಸಂಗಾವಿ ಅವರಿಗೆ ನಾಮಪತ್ರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸುಳ್ಯ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ಎನ್.ಜಯಪ್ರಕಾಶ್ ರೈ, ಕೆ.ಪಿ.ಸಿ.ಸಿ. ವಕ್ತಾರ ಟಿ.ಎಂ. ಶಹೀದ್ ಮೊದಲಾದ ಕಾಂಗ್ರೆಸ್ ಮುಖಂಡರು ಹಾಜರಿದ್ದರು.

ಸುಳ್ಯ ಕಾಂಗ್ರೆಸ್ ಬಿ ಫಾರಂ ಪೆಂಡಿಂಗ್ : ರಮಾನಾಥ ರೈ ಯವರಿಂದ ವರದಿ ಪಡೆಯಲು ಕೆಪಿಸಿಸಿ ಅಧ್ಯಕ್ಷರ ನಿರ್ಧಾರ

ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಚಾರ ವಾಗಿ ಎದ್ದಿರುವ ಗೊಂದಲ ನಿವಾರಣೆಗೆ ಇಂದು ನಂದಕುಮಾರ್ ಅಭಿಮಾನಿ ಬಳಗ ಮತ್ತು ಸುಳ್ಯ ಮತ್ತು ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿಯವರನ್ನು ಮತ್ತು ನಂದಕುಮಾರ್ ಹಾಗೂ ಕೃಷ್ಣಪ್ಪರನ್ನು ಮಾತುಕತೆಗೆ ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈಗಾಗಲೇ ಕೃಷ್ಣಪ್ಪರಿಗೆ ಘೋಷಣೆ ಮಾಡಿರುವ ಬಿ ಫಾರಂ ನ್ನು ಎರಡು ದಿನ ಕಾಯ್ದಿರಿಸಿದ್ದು, ಕೆಪಿಸಿಸಿ ತಂಡದಿಂದ ಮರು ಸರ್ವೇ ನಡೆಸಿ ವರದಿ ಪಡೆಯುವುದು ಮತ್ತು ಮಾಜಿ

ಸುಳ್ಯದ ಸಂಪಾಜೆಯಲ್ಲಿ ಕಾರು ಹಾಗೂ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ

ಕಾರು ಹಾಗೂ ಸರ್ಕಾರಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿರುವ ಘಟನೆ ಸಂಪಾಜೆಯಲ್ಲಿ ನಡೆದಿದೆ.ಮಡಿಕೇರಿಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರು ಹಾಗೂ ಮಂಗಳೂರು ಕಡೆಯಿಂದ ಮಡಿಕೇರಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಕಾರು ಸಂಪೂರ್ಣ ಜಖಂಗೊಂಡಿದೆ ಎನ್ನಲಾಗಿದೆ. ಕಾರಿನಲ್ಲಿ ಮಂಡ್ಯ ಜಿಲ್ಲೆಯ 8 ಮಂದಿ ಪ್ರಯಾಣಿಸುತ್ತಿದ್ದು, ಕಾರಿನಲ್ಲಿದ್ದ 3 ಮಕ್ಕಳು, ಎರಡು ಮಹಿಳೆಯರು ಹಾಗು ಒಬ್ಬರು ಪುರುಷ

ಮುಖ್ಯಮಂತ್ರಿ ಆಶೀರ್ವಾದ ಪಡೆದ ಭಾಗೀರಥಿ ಮುರುಳ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಸುಳ್ಯ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರು ಮುಖ್ಯಮಂತ್ರಿ ಅವರಿಗೆ ಹೂ ನೀಡಿ, ಆಶೀರ್ವಾದ ಪಡೆದರು.ಶುಭವಾಗಲಿ ಎಂದು ಸಿಎಂ ಆಶೀರ್ವದಿಸಿದರು. ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಭಾಗೀರಥಿ ಮುರುಳ್ಯ ಅವರು, ಸಾಮಾನ್ಯ ಕಾರ್ಯಕರ್ತೆ ಆಗಿರುವ ನನಗೆ ಚುನಾವಣೆ ಸ್ಪರ್ಧಿಸಲು ಬಿಜೆಪಿ ಅವಕಾಶ ನೀಡಿದೆ. ಪಕ್ಷದ ಹಿರಿಯ ಮಾರ್ಗದರ್ಶನದಲ್ಲಿ ಕೆಲಸ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಚಿವ ಸುನಿಲ್ ಕುಮಾರ್ ಭೇಟಿ

ಸುಬ್ರಹ್ಮಣ್ಯ: ಉಡುಪಿ ಜಿಲ್ಲೆಯ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಚಿವ ವಿ.ಸುನಿಲ್ ಕುಮಾರ್ ಮಂಗಳವಾರ ರಾತ್ರಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದರು. ಬುಧವಾರ ಬೆಳಗ್ಗೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದರುಶನ ಪಡೆದು, ಪ್ರಾರ್ಥನೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು. ಬಳಿಕ ಹೊಸಳಿಗಮ್ಮನ ದರುಶನ ಪಡೆದು, ಪ್ರಸಾದ ಸ್ವೀಕರಿಸಿದರು. ಕುಕ್ಕೆಯಲ್ಲಿ ಸುನಿಲ್ ಕುಮಾರ್ ಶೇಷ ಸೇವೆ ನೆರವೇರಿಸಿದರು. ಬಳಿಕ ಆದಿ ಸುಬ್ರಹ್ಮಣ್ಯಕ್ಕೆ ತೆರಳಿ ಶ್ರೀ ದೇವರ

ರಾಜಕೀಯದಿಂದ ನಿವೃತ್ತಿ ಘೋಷಿಸಿದ ಅಂಗಾರ

ಪಕ್ಷ ಟಿಕೆಟ್ ನೀಡದ ಕುರಿತು ನನ್ನ ಅಸಮಾಧಾನವಲ್ಲ. ಆದರೆ ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಮಾಡಿದ ಸೇವೆಯನ್ನು ಗೌರವಿಸುವ ಕ್ರಮ ಇದಲ್ಲ. ಪ್ರಾಮಾಣಿಕ ರಾಜಕಾರಣಕ್ಕೆ ಇಂದು ಬೆಲೆ ಇಲ್ಲದಂತಾಗಿದೆ. ನನ್ನ ಪ್ರಾಮಾಣಿಕತೆಯೇ ನನಗೆ ಮುಳುವಾಗಿದೆ. ಲಾಬಿ ಮಾಡುವುದು ನನ್ನ ಗುಣವಾಗಿರಲಿಲ್ಲ. ಅದೇ ನನಗೆ ಹಿನ್ನಡೆಯಾಯಿತು ಎಂದು ಹೇಳಿದ ಅಂಗಾರರು, ನಾನು ಇನ್ನು ರಾಜಕಾರಣದಲ್ಲಿಲ್ಲ. ಚುನಾವಣಾ ಪ್ರಚಾರ ಕಣದಲ್ಲೂ ಇಲ್ಲ. ಹೊಸ

ಸಚಿವರಾದ ಎಸ್.ಅಂಗಾರರಿಗೆ ಟಿಕೆಟ್ ತಪ್ಪಿದ ಹಿನ್ನೆಲೆ : ವೆಂಕಟ್ ವಳಲಂಬೆ ರಾಜೀನಾಮೆ

ಕಳೆದ 30 ವರ್ಷಗಳ ಕಾಲ ಕ್ಷೇತ್ರ ಮತ್ತು ಪಕ್ಷಕ್ಕೆ ಯಾವುದೇ ಚ್ಯುತಿ ಬಾರದ ರೀತಿ ದುಡಿದ ಸಾಮಾನ್ಯ ಮನೆತನದಿಂದ ಬಂದಿರುವ ಸರಳ ಸಜ್ಜನಿಕೆಯ ಎಲ್ಲರ ಜನಮನ ಗೆದ್ದಿರುವ ಪಕ್ಷಾತೀತವಾಗಿ ಕ್ಷೇತ್ರದ ಅಭಿವೃದ್ಧಿಯನ್ನು ಮಾಡಿರುವ ಶ್ರೀ ಎಸ್.ಅಂಗಾರರಂತಹ ಪ್ರಾಮಾಣಿಕ ಕಾರ್ಯಕರ್ತನೊಂದಿಗೆ ಚರ್ಚಿಸದೆ ಏಕಪಕ್ಷೀಯವಾಗಿ ಅಭ್ಯರ್ಥಿ ಘೋಷಣೆ ಮಾಡಿರುವುದರಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿರುತ್ತದೆ. ಆದುದರಿಂದ ನನ್ನ ಪಾರ್ಟಿಯ ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ಈ ಕ್ಷಣದಿಂದಲೇ