Home Archive by category ಕರಾವಳಿ (Page 104)

ಮೂಡುಬಿದಿರೆ: ಸಹಕಾರಿ ಸಂಘಗಳಲ್ಲಿ ಸಾಮಾಜಿಕ ಕಳಕಳಿ ಇದೆ- ಡಾ. ಎಂ.ಎನ್ ರಾಜೇಂದ್ರ ಕುಮಾರ್

ಮೂಡುಬಿದಿರೆ: ವಾಣಿಜ್ಯ ಬ್ಯಾಂಕ್‍ಗಳ ಲಾಭದ ಪಾಲು ಗ್ರಾಹಕರಿಗೆ ಸಿಗುವುದು ಕಡಿಮೆ. ಆದರೆ ಸಾಮಾಜಿಕ ಕಳಕಳಿ ಹೊಂದಿರುವ ಸಹಕಾರಿ ಬ್ಯಾಂಕ್‍ಗಳು ತಮ್ಮ ಲಾಭದಲ್ಲಿ ಹೆಚ್ಚಿನ ಪಾಲನ್ನು ಸದಸ್ಯರ ಹಿತಕ್ಕೋಸ್ಕರ ವಿನಿಯೋಗಿಸುತ್ತಿವೆ ಎಂದು ಎಸ್‍ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್ ರಾಜೇಂದ್ರ ಕುಮಾರ್ ಹೇಳಿದರು. ಅವರು ಎಂಸಿಎಸ್ ಸೊಸೈಟಿಯಲ್ಲಿ

ಗಂಗೊಳ್ಳಿ ಬೋಟ್ ದುರಂತ ಪ್ರಕರಣ ; ಮ್ಯಾಂಗನೀಸ್ ವಾರ್ಫ್ ನಿವಾಸಿಗಳಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಮನವಿ

ಗಂಗೊಳ್ಳಿಯಲ್ಲಿ ಕಳೆದ ಸೋಮವಾರ ನಡೆದಿದ್ದ ಬೋಟು ಅಗ್ನಿ ದುರಂತ ಪ್ರದೇಶದಲ್ಲಿ ವಾಸವಾಗಿರುವ ಮಹಿಳೆಯರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಮನವಿಯನ್ನು ಸಲ್ಲಿಸಿದರು. ಈ ಪ್ರದೇಶದಲ್ಲಿ ಯಾವುದೇ ರಾಸಾಯನಿಕ ವಸ್ತುಗಳನ್ನು ಬಳಸಿ ಯಾಂತ್ರಿಕ ದೋಣಿಯ ನಿರ್ಮಾಣಕ್ಕೆ ಅವಕಾಶ ನೀಡದಂತೆ ಒತ್ತಾಯಿಸಿದರು. ಕಳೆದ ತುಂಬಾ ಸಮಯದಿಂದ ಕೊಳಚೆ ತ್ಯಾಜ್ಯವನ್ನು ವಿಲೇವಾರಿ ಮಾಡದೇ ಸ್ಥಳೀಯ ನಾಗರಿಕರಿಗೆ ತುಂಬಾ ತೊಂದರೆಯಾಗಿದೆ. ಅಲ್ಲದೇ ಇಲ್ಲಿ ರಾಸಾಯನಿಕ ಮಿಶ್ರಿತ ಯಾಂತ್ರೀಕೃತ

ಉಡುಪಿ : ಹತ್ಯೆ ಪ್ರಕರಣ – ಕೊಲೆಗೆ ಬಳಸಿದ ಚೂರಿ ಪತ್ತೆಗೆ ಪೊಲೀಸರಿಂದ ತೀವ್ರ ಶೋಧ

ನೇಜಾರು ತಾಯಿ ಮತ್ತು ಮೂವರು ಮಕ್ಕಳನ್ನು ಭೀಕರವಾಗಿ ಕೊಲೆಗೈದ ಆರೋಪಿ ಮಂಗಳೂರು ಏರ್ ಇಂಡಿಯಾ ಎಕ್ಸ್ ಪ್ರೆಸ್ ಉದ್ಯೋಗಿ ಪ್ರವೀಣ್ ಅರುಣ್ ಚೌಗುಲೆ(39) ಬಹಳ ಯೋಜಿತವಾಗಿ ಈ ಕೃತ್ಯ ಎಸಗಿರುವುದು ಪೊಲೀಸ್ ತನಿಖೆಯಿಂದ ಬಯಲಾಗಿದೆ. ಯಾವುದೇ ಸಾಕ್ಷ್ಯಾಧಾರ ಮತ್ತು ತನ್ನ ಮುಖ ಪರಿಚಯ ಸಿಗಬಾರದೆಂಬ ಉದ್ದೇಶದಿಂದ ಪ್ರವೀಣ್ ಚೌಗುಲೆ ಈ ಪೂರ್ವ ಯೋಜಿತ ಕೊಲೆಗಾಗಿ ತನ್ನ ಕಾರು, ಮಾಸ್ಕ್, ಹಲವು ರಿಕ್ಷಾ, ಬೈಕ್, ಬಸ್‍ಗಳನ್ನು ಬಳಸಿದ್ದನು. ಅದೇ ರೀತಿ ಬ್ಯಾಗ್ ಮತ್ತು

ಕಡಬ : ನಾಳೆ ಒಕ್ಕಲಿಗ ಗೌಡ ಸಂಘದ ಪೂರ್ವಭಾವಿ ಸಭೆ

ಕಡಬ :ಒಕ್ಕಲಿಗ ಗೌಡ ಸೇವಾ ಸಂಘ (ರಿ.) ಕಡಬ ತಾಲೂಕು ಇದರ ಪದಗ್ರಹಣ ಕಾರ್ಯಕ್ರಮ, ಸುಸಜ್ಜಿತ ನೂತನ ಸಮುದಾಯ ಭವನದ ಶಿಲಾನ್ಯಾಸ ಕಾರ್ಯಕ್ರಮ ಹಾಗೂ ಸ್ಪಂದನ ಸಮುದಾಯ ಸಹಕಾರ ಸಂಘ (ರಿ.) ಕಡಬ ಇದರ ಉದ್ಘಾಟನಾ ಕಾರ್ಯಕ್ರಮವನ್ನು 2023ರ ಡಿಸೆಂಬರ್ 26ರಂದು ಕಡಬದಲ್ಲಿ ಹಮ್ಮಿಕೊಳ್ಳಲಾಗಿದೆ. ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಡಾ. ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ದಿವ್ಯ ಉಪಸ್ಥಿತಿಯೊಂದಿಗೆ ಸಮಾರಂಭ ನಡೆಯಲಿದೆ. ಈ ಸಮಾರಂಭದ ಬಗ್ಗೆ

ಬೈಂದೂರು: ಕಿರಿಮಂಜೇಶ್ವರದಲ್ಲಿ ಹಾಲು ಸಂಗ್ರಹಣಾ ವಾಹನದ ಉದ್ಘಾಟನೆ

ಬೈಂದೂರಿನ ಕಿರಿಮಂಜೇಶ್ವರ ಹಾಲು ಉತ್ಪಾದಕರ ಸಹಕಾರಿ ಸಂಘದ ಹಾಲು ಸಂಗ್ರಹಣಾ ವಾಹನದ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ಒಡೆಯರ ಮಠ ಗೋಪಾಲಕೃಷ್ಣ ಕಲಾಮಂದಿರದಲ್ಲಿ ನಡೆಯಿತು. ಭವ್ಯ ಮೆರವಣಿಗೆ ಮೂಲಕ ಅತಿಥಿಗಳನ್ನು ಬರಮಾಡಿಕೊಳ್ಳಲಾಯಿತು.ಕೊಂಬು ಕಹಳೆ ವಾದನ ಮೆರವಣಿಗೆಯ ಸೊಬಗನ್ನು ಹೆಚ್ಚಿಸಿತು. ಮಹಿಳೆಯರು ಸಮವಸ್ತ್ರ ಧರಿಸಿದ್ದರು. ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ ಅವರು ಹಾಲು ಸಂಗ್ರಹಣಾ ಸಂಚಾರಿ ವಾಹನವನ್ನು

ಮಂಗಳೂರು: ನ.21ರಂದು ಪುರಭವನದಲ್ಲಿ ಪತ್ರಕರ್ತರ 4ನೇ ಜಿಲ್ಲಾ ಸಮ್ಮೇಳನ

ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರ 4ನೇ ಜಿಲ್ಲಾ ಸಮ್ಮೇಳನ ನ.21ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ನಾಯಕ್ ಇಂದಾಜೆ ತಿಳಿಸಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಸಮ್ಮೇಳನವನ್ನು ನ.21ರಂದು ಬೆಳಿಗ್ಗೆ 10ಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ದ.ಕ ಜಿಲ್ಲಾ

ಪಡುಬಿದ್ರಿ: ಚಾಲಕನ ನಿಯಂತ್ರಣ ಕಳೆದುಕೊಂಡು ಢಿಕ್ಕಿಯಾದ ಕಾರು: ನಜ್ಜುಗುಜ್ಜಾದ ಕಾರು, ಪ್ರಯಾಣಿಕರು ಅಪಾಯದಿಂದ ಪಾರು

ಪಡುಬಿದ್ರಿ: ಚಾಲಕನ ನಿಯಂತ್ರಣ ಕಳೆದುಕೊಂಡು ಢಿಕ್ಕಿಯಾದ ಕಾರು: ನಜ್ಜುಗುಜ್ಜಾದ ಕಾರು, ಪ್ರಯಾಣಿಕರು ಅಪಾಯದಿಂದ ಪಾರು ಅತೀ ವೇಗದ ಚಾಲನೆಯಿಂದಾಗಿ ನಿಯಂತ್ರಣ ಕಳೆದುಕೊಂಡ ಕಾರೊಂದು ಸರಣಿ ಢಿಕ್ಕಿಯಾಗಿದ್ದು, ಕಾರು ಸಂಪೂರ್ಣ ಜಖಂಗೊಂಡ ಘಟನೆ ಪಡುಬಿದ್ರಿ ಸೇತುವೆ ಬಳಿ ನಡೆದಿದೆ. ಕಾರು ಚಾಲಕನ ಅಜಾಗರೂಕತೆಯ ಚಾಲನೆಯಿಂದಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ, ವಾಯುವೇಗದಲ್ಲಿ ಮುಂದೆ ಸಾಗಿ ತೆಂಗಿನ ಮರಕ್ಕೆ ಡಿಕ್ಕಿಯಾಗಿ ಅಲ್ಲಿಂದ ಹಿಮ್ಮುಖವಾಗಿ ಚಲಿಸಿ ಮತ್ತೊಂದು

ಉಡುಪಿ: ಹತ್ಯೆ ಪ್ರಕರಣ: ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯ ನಡೆದ ಮನೆಗೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿ ನೂರ್ ಮೊಹಮ್ಮದ್ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಇದೇ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್, ಈ ಕೃತ್ಯ ಬೆಚ್ಚಿ ಬೀಳುವ ಘಟನೆ ಆಗಿದೆ. ಕುಟುಂಬದ ನಾಲ್ಕು ಸದಸ್ಯರನ್ನು ಅಮಾನುಷವಾಗಿ ಕೊಂದು ರಾಕ್ಷಸ ಕೃತ್ಯ ಎಸಗಿದ್ದಾನೆ. ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದೇನೆ ಎಂದರು

ಕುಂದಾಪುರ: ಹಾಸ್ಟೆಲ್ ವಿದ್ಯಾರ್ಥಿಗಳಿಂದ ದೀಪಾವಳಿ ಸಂಭ್ರಮ..!!

ಕುಂದಾಪುರ ತಾಲ್ಲೂಕಿನ ಸುಣ್ಣಾರಿಯ ಎಕ್ಸಲೆಂಟ್ ಪದವಿಪೂರ್ವ ಕಾಲೇಜು, ಲಿಟ್ಲ್ ಸ್ಟಾರ್ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ ಇದರ ಸಹಯೋಗದಲ್ಲಿ ಸುಣ್ಣಾರಿಯ ಪದವಿಪೂರ್ವ ಕಾಲೇಜಿನಲ್ಲಿ ಹಾಸ್ಟೆಲ್ ವಿದ್ಯಾರ್ಥಿಗಳೊಂದಿಗೆ ದೀಪಾವಳಿ, ಗೋಪೂಜೆ, ಬಲೀಂದ್ರ ಕೂಗುವುದು, ತುಳಸಿ ಪೂಜೆ, ಕೃಷಿ ಪರಿಕರ ಮತ್ತು ಸರಸ್ವತಿ ಪೂಜೆ ಆಚರಿಸಲಾಯಿತು. ದೀಪಾವಳಿ, ಸಂದೇಶ ನೀಡಿದ ಕುಂದಗನ್ನಡ ರಾಯಭಾರಿ ಮನು ಹಂದಾಡಿ, ವಿದ್ಯಾರ್ಥಿಗಳಲ್ಲಿ ಭಾರತೀಯ ಸಂಸ್ಕೃತಿ, ಪರಂಪರೆಯ ತಿಳಿವಳಿಕ

ಉಡುಪಿ: ಹತ್ಯೆ ಪ್ರಕರಣ: ಸ್ಥಳ ಮಹಜರು ವೇಳೆ ಲಾಠಿಚಾರ್ಜ್ ನಡೆದಿರುವುದು ವಿಷಾದನೀಯ: ಕೆ. ಉದಯಕುಮಾರ್

ನೇಜಾರಿನ ಒಂದೇ ಕುಟುಂಬದ ನಾಲ್ಕು ಮಂದಿಯನ್ನು ಕೊಂದ ಆರೋಪಿಯನ್ನು ಪೊಲಿಸರು ಸ್ಥಳ ಮಹಜರು ನಡೆಸಲು ಕರೆತಂದಾಗ ನೆರದ ಜನರ ಮೇಲೆ ಲಾಠಿ ಚಾರ್ಜ್ ನಡೆಸಿರುವುದು ವಿಷಾದನೀಯ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯಕುಮಾರ್ ಶೆಟ್ಟಿ ತಿಳಿಸಿದ್ದಾರೆ. ಕೊಲೆಗಡುಕ ಪ್ರವೀಣ್ ಅರುಣ್ ಚೌಗಲೆಯನ್ನು ಬಂಧಿಸಿರುವ ಪೊಲೀಸರು ಶ್ಲಾಘನೀಯಯರು. ಸ್ಥಳ ಮಹಜರಿಗಾಗಿ ಆತನನ್ನು ಕರೆತರುವಾಗ ಪೊಲೀಸ್ ಇಲಾಖೆ ಸಾಕಷ್ಟು ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕಿತ್ತು. ಘಟನೆಯಿಂದ ದುಃಖಿತರು