Home Archive by category ಕರಾವಳಿ (Page 19)

ಮಂಜೇಶ್ವರ: ವಿದ್ಯುತ್ ಶಾಕ್ ತಗುಲಿ ಯುವಕನ ದಾರುಣ ಅಂತ್ಯ

ಮಂಜೇಶ್ವರ: ವಿದ್ಯುತ್ ಶಾಕ್ ತಗುಲಿ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ. ಹೊಸಂಗಡಿ ಸಮೀಪದ ಅಂಗಡಿಪದವು ನಿವಾಸಿ ದಿವಂಗತ ಅಶೋಕ್ – ಕಲಾವತಿ ದಂಪತಿಯ ಪುತ್ರ ಪ್ರಜ್ವಲ್ (19) ಸಾವನ್ನಪ್ಪಿದ ದುರ್ದೈವಿ. ಅಂಗಡಿಪದವಿನ ಅಂಗಡಿಯೊಂದರ ಮುಂಭಾಗದಲ್ಲಿ ವಿದ್ಯುತ್ ಹರಿಯುತ್ತಿದ್ದ ಕಬ್ಬಿಣದ ಗೇಟ್ ನ್ನು ತಿಳಿಯದೆ ಸ್ಪರ್ಶಿಸಿದಾಗ ವಿದ್ಯುತ್ ಶಾಕ್ ತಗುಲಿದ್ದು,

ಬಂಟ್ವಾಳ: ಎಂಜಿನಿಯರಿಂಗ್ ವಿದ್ಯಾರ್ಥಿಯ ಯಕ್ಷ ಪಯಣ..!

ಬಂಟ್ವಾಳ: ಇತ್ತೀಚಿನ ದಿನಗಳಲ್ಲಿ ಯಕ್ಷಗಾನದತ್ತ ಯುವ ಸಮುದಾಯ ಆಕರ್ಷಿತಗೊಳ್ಳುತ್ತಿದೆ. ಆದರೆ ಇಂತಹ ಶ್ರೇಷ್ಠ ಎಲ್ಲರಿಗೂ ಒಲಿಯವುದಿಲ್ಲ. ನಿರಂತರ ಅಭ್ಯಾಸ, ಅಧ್ಯಯನ ಶೀಲತೆ, ಕಲೆಯ ಮೇಲಿನ ಒಲುಮೆ, ಪ್ರೀತಿ, ಅಭಿಮಾನ ಆ ಕ್ಷೇತ್ರದಲ್ಲಿ ಸಾಧನೆ ಮಾಡುವಂತೆ ಮಾಡುತ್ತದೆ. ಬಂಟ್ವಾಳದ ಎಂಜಿನಿಯರ್ ವಿದ್ಯಾರ್ಥಿಯೋರ್ವನಿಗೆ ಯಕ್ಷಗಾನ ಕಲೆ ಒಲಿದಿದೆ. ಬಾಲ್ಯದಿಂದಲೂ ಯಜ್ಷಗಾನದ ಮೇಲಿನ ಆಸಕ್ತಿ ಇಂದು ಈ ಕಲಾವಿದನನ್ನು ಯಕ್ಷ ಲೋಕದಲ್ಲಿ ಸಾಧನೆ ಮಾಡುವಂತೆ ಮಾಡಿದೆ. ಯಕ್ಷಗಾನದ

ಮಂಗಳೂರು: ಸೌಹಾರ್ದ ಇಫ್ತಾರ್ ಕೂಟ – 2024

ಸಂತ ಮದರ್ ತೆರೇಸಾ ವಿಚಾರ ವೇದಿಕೆ ಹಾಗೂ ದ.ಕ.ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವ್ರದ್ದಿ ಸಂಘ ಇವುಗಳ ಜಂಟಿ ಆಶ್ರಯದಲ್ಲಿ ಪ್ರೀತಿ ಹರಡಲಿ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ, ಸರ್ವ ಧರ್ಮಗಳ ಹಬ್ಬಗಳು ಸರ್ವ ಜನತೆಯ ಹಬ್ಬವಾಗಲಿ ಎಂಬ ಆಶಯದೊಂದಿಗೆ ನಗರದ ಪುರಭವನದಲ್ಲಿ ಜರುಗಿದ ಸೌಹಾರ್ದ ಇಫ್ತಾರ್ ಕೂಟ ನಡೆಯಿತು. SYS ಜಿಲ್ಲಾ ಉಪಾಧ್ಯಕ್ಷರಾದ ಬಹುಮಾನ್ಯ ಬಶೀರ್ ಮದನಿ, CSI ಕರ್ನಾಟಕ ದಕ್ಷಿಣ ಪ್ರಾಂತದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಹೇಮಚಂದ್ರ ಕುಮಾರ್,

ಮಂಗಳೂರು : ಮತದಾರರ ಜಾಗೃತಿ ಅಭಿಯಾನಕ್ಕೆ ಚಾಲನೆ

ಮಂಗಳೂರು: ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ಹಾಗೂ ವಿಶ್ವವಿದ್ಯಾನಿಲಯ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ನಗರದ ವಿಶ್ವವಿದ್ಯಾನಿಲಯ ಕಾಲೇಜು ಆವರಣದ ರವೀಂದ್ರ ಕಲಾಭನವನದಲ್ಲಿ ಸ್ವೀಪ್ ಸಮಿತಿಯಿಂದ ಹಮ್ಮಿಕೊಳ್ಳಲಾಗಿದ್ದ ಮತದಾನ ಜಾಗೃತಿ ಅಭಿಯಾನವನ್ನು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಡಾ. ಆನಂದ್ ಕೆ.,

ಮೂಡುಬಿದಿರೆ ತಾ.ಪಂಗೆ ಅಧಿಕೃತ EO ಯಾರು?

ಮೂಡುಬಿದಿರೆ : ಇಲ್ಲಿನ ತಾಲೂಕು ಪಂಚಾಯತ್ ನಲ್ಲಿ ಇದೀಗ ಇಬ್ಬರು ಕಾರ್ಯನಿರ್ವಾಹಕ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದು ಅಧಿಕೃತ ಕಾರ್ಯನಿರ್ವಾಹಕ ಅಧಿಕಾರಿ ಯಾರೆಂಬುದು ಸಾರ್ವಜನಿಕರಲ್ಲಿ ಗೊಂದಲ ಮೂಡಿದೆ.ಶಿಕ್ಷಣ ಇಲಾಖೆಯಿಂದ ಕಳೆದ ಏಳು ತಿಂಗಳ ಹಿಂದೆ ಮೂಡುಬಿದಿರೆ ತಾ.ಪಂ.ಗೆ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕರ್ತವ್ಯಕ್ಕೆ ಹಾಜರಾಗಿದ್ದ ಲೊಕೇಶ್ ಸಿ.ಅವರನ್ನು ಚುನಾವಣಾ ಆದೇಶದ ಹಿನ್ನಲೆಯಲ್ಲಿ ವರ್ಗಾವಣೆ ಮಾಡಲಾಗಿದೆ. ಇಲ್ಲಿಗೆ ಕೋಲಾರದ ವೆಂಕಟಾಚಲಪತಿ ರಾಜ್

ಕೊಂಡೆವೂರು ಮಠದಲ್ಲಿ ನವಗ್ರಹ ಪ್ರತಿಷ್ಠೆ ಮತ್ತು ಅಷ್ಟೋತ್ತರ ಸಹಸ್ರ ನವಗ್ರಹ ಯಾಗ

ಶ್ರೀ ನಿತ್ಯಾನಂದ ಯೋಗಾಶ್ರಮ, ಕೊಂಡೆವೂರು ಮಠದಲ್ಲಿ ದಿ. 24.03.2024 ನೇ ರವಿವಾರ ಪರಮಪೂಜ್ಯ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಗಳವರ ನೇತೃತ್ವದಲ್ಲಿ, ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ ಪ್ರಧಾನ ಅರ್ಚಕರಾದ ಬ್ರಹ್ಮ ಶ್ರೀ ಅನಂತಪದ್ಮನಾಭ ಆಸ್ರಣ್ಣರ ನಿರ್ದೇಶನದೊಂದಿಗೆ ಮತ್ತು ಬ್ರಹ್ಮ ಶ್ರೀ ಕಮಲಾದೇವೀ ಪ್ರಸಾದ ಆಸ್ರಣ್ಣರವರ ಆಚಾರ್ಯತ್ವದಲ್ಲಿ ನವಗ್ರಹ ಪ್ರತಿಷ್ಠೆ ಮತ್ತು ಲೋಕ ಕಲ್ಯಾಣಾರ್ಥವಾಗಿ ‘‘ಅಷ್ಟೋತ್ತರ ಸಹಸ್ರ ನವಗ್ರಹ ಯಾಗ’’ ವು ಜರಗಲಿರುವುದು.

ಡೌನ್ ಸಿಂಡ್ರೋಮ್

ಡೌನ್ ಸಿಂಡ್ರೋಮ್ ಎನ್ನುವುದು ಜನ್ಮಜಾತವಾಗಿ ಕಂಡುಬರುವ ಖಾಯಿಲೆಯಾಗಿದ್ದು, ವಾರ್ಷಿಕವಾಗಿ ಭಾರತ ದೇಶವೊಂದರಲ್ಲಿಯೇ ಸುಮಾರು 1 ಮಿಲಿಯನ್ ಮಕ್ಕಳು ಈ ರೋಗಕ್ಕೆ ತುತ್ತಾಗುತ್ತಾರೆ. 21ನೇ ಕ್ರೋಮೋಸೋಮ್‍ನಲ್ಲಿ ಕಂಡು ಬರುವ ವ್ಯತ್ಯಯದಿಂದ ಈ ರೋಗ ಬರುತ್ತದೆ. ಇಲ್ಲಿ ಒಂದು ಜೋಡಿ ಕ್ರೋಮೋಸೋಮ್‍ಗಳ ಜೊತೆ ಒಂದು ಹೆಚ್ಚಿನ ಕ್ರೋಮೋಸೋಮ್ ಇರುತ್ತದೆ. ಈ ಕಾರಣಕ್ಕಾಗಿಯೇ ಮಾರ್ಚ್ 21 ರಂದು ವಿಶ್ವ ಡೌನ್ ಸಿಂಡ್ರೋಮ್ ತಿಳುವಳಿಕಾ ದಿನ ಎಂದು ಜಾಗತಿಕವಾಗಿ ಆಚರಿಸಿ, ಜನರಲ್ಲಿ ಈ

ಮಂಗಳೂರು: ಮಹಾಶಕ್ತಿ ಕೇಂದ್ರದ ಬಿಜೆಪಿಯ ಪ್ರಮುಖರ ಸಭೆ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಪಶ್ಚಿಮ ಮಹಾಶಕ್ತಿ ಕೇಂದ್ರದ ಬಿಜೆಪಿಯ ಪ್ರಮುಖರ ಪೂರ್ವಭಾವಿ ಸಭೆಯು ಮಂಗಳಾದೇವಿ ದೇವಸ್ಥಾನದ ಬಳಿಯ ಶ್ರೀದೇವಿ ನಿಲಯದಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ಅವರು, ದೇಶ ಮೊದಲು ಎನ್ನುವ ಸಿದ್ಧಾಂತಕ್ಕೆ ತಕ್ಕಂತೆ ಸೈನ್ಯದಲ್ಲಿ ಸೇವೆ ಸಲ್ಲಿಸಿ, ಇದೀಗ ಜನಸೇವೆಗೆ ಬಂದಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ನಮ್ಮ ಜಿಲ್ಲೆಯಿಂದ ನರೇಂದ್ರ ಮೋದಿಯಂತಹ ವಿಶ್ವ

ಬಂಟ್ವಾಳ: V4 ನ್ಯೂಸ್‌ನ ವರದಿಗಾರ ಸಂದೀಪ್ ಸಾಲ್ಯಾನ್‌ಗೆ ಸ್ವಸ್ತಿಕ್ ಸಂಭ್ರಮ ಪುರಸ್ಕಾರ

ಬಂಟ್ವಾಳ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 40ನೇ ಸಂಭ್ರಮಾಚರಣೆ ಪ್ರಯುಕ್ತ ಮಾ.24ರಂದು ಬಂಗ್ಲೆ ಮೈದಾನದಲ್ಲಿ ಜರುಗಲಿರುವ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಮತ್ತು ಸ್ವಸ್ತಿಕ್ ಸಂಭ್ರಮ ಪುರಸ್ಕಾರ ಪ್ರದಾನ ನಡೆಯಲಿದೆ. V4 ನ್ಯೂಸ್ ಬಂಟ್ವಾಳ ವರದಿಗಾರ ಸಂದೀಪ್ ಸಾಲ್ಯಾನ್ ಮಾಧ್ಯಮ ಕ್ಷೇತ್ರದ ಸಾಧನೆಗೆ ಸ್ವಸ್ತಿಕ್ ಸಂಭ್ರಮ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಉದ್ಯಮಿ ಅಬ್ದುಲ್ ಕುಂಞ, ಮಾಜಿ ಸಚಿವ

“ ಮಾತು ನಿಲ್ಲಿಸಿದ ತುಳುವಿನ ವಿ. ಜಿ. ಪಾಲ್ ”

ತುಳುವಿನ ಹಿರಿಯ ರಂಗಕರ್ಮಿ ವಿ. ಜಿ. ಪಾಲ್ ನಿಧನ ರಾದರು. ಅವರ ಮೂಲ ಹೆಸರು ವೇಣುಗೋಪಾಲ ಟಿ. ಕೋಟ್ಯಾನ್ ಎಂದರೆ ಯಾರಿಗೂ ಈಗ ಗೊತ್ತಾಗಲಿಕ್ಕಿಲ್ಲ. ಸಾವಿರಾರು ತುಳು ರಂಗ ಲೋಕದವರಲ್ಲಿ ಪಾಲ್ ಹೆಸರು ಕೂಡ ಮುಖ್ಯವೇ ಆಗಿದೆ. ತೊಂಬತ್ತು ವರುಷಗಳ ತುಳು ರಂಗಭೂಮಿ ಚರಿತ್ರೆಯಲ್ಲಿ ಅರ್ಧ ಶತಮಾನ ವಿ. ಜಿ. ಪಾಲ್ ಅವರದೂ ಆಗಿತ್ತು. ನಾಟಕ ಎಂದ ಕೂಡಲೆ ಗ್ರೀಸ್ ದೇಶ ನೆನಪಾಗುತ್ತದೆ. ಅಧಿಕೃತವಾಗಿ ನಾಟಕ ಬರೆದು ಆಡಿ ತೋರಿಸಿದವರು ಅವರು. ತೆರೆದ ರಂಗ ಮಂದಿರ, ಮುಚ್ಚಿದ […]