Home Archive by category ಕರಾವಳಿ (Page 30)

ಪುತ್ತೂರು: ಮಾ.7ರಂದು ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರೈತ ಸಂಘದಿಂದ ಪ್ರತಿಭಟನೆ

ಪುತ್ತೂರು: ರೈತರ ಫಲವತ್ತಾದ ಭೂಮಿಯನ್ನು ಹಾಳು ಮಾಡುವ ಕಾರ್ಯವನ್ನು ಮಾಡಲಾಗುತ್ತಿದೆ. ಅಧಿಕಾರಿಗಳಿಗೆ ರೈತರ ಬಗ್ಗೆ ಕಳಕಳಿ ಇರುತ್ತಿದ್ದರೆ, ಇಂತಹ ದುಸ್ಥಿತಿ ಬರುತ್ತಿರಲಿಲ್ಲ. ಹೊಸ ಸರ್ಕಾರ ಅಸ್ಥಿತ್ವಕ್ಕೆ ಬಂದು 6 ತಿಂಗಳು ಕಳೆದರೂ, ಜಿಲ್ಲಾಧಿಕಾರಿಯವರು ರೈತರ ಸಭೆ ನಡೆಸಿಲ್ಲ. ವಿವಿಧ ಬೇಡಿಕೆಯನ್ನು ಇಟ್ಟುಕೊಂಡು ಮಾ.7ರಂದು ಮಧ್ಯಾಹ್ನ 2ರಿಂದ ಬಿಸಿರೋಡಿನಿಂದ

      ಪುತ್ತೂರು: ಉತ್ಕೃಷ್ಟ ಸಂಸ್ಕೃತಿಯ ಪ್ರತೀಕ ತುಳು ಭಾಷೆ: ವಾಮನ ಪೈ

ಪುತ್ತೂರು: ಭಾಷೆ ಮಾತ್ರವಾಗಿರದೆ ಉತ್ಕೃಷ್ಟ ಸಂಸ್ಕೃತಿಯ ಪ್ರತೀಕವಾಗಿರುವ ತುಳುವಿಗೆ ಅಪಾರ ಶಕ್ತಿಯಿದೆ. ಪ್ರಪಂಚದಲ್ಲೇ ಅತ್ಯಂತ ಹಳೆಯ ಭಾಷೆಯಾಗಿರುವ ತುಳುವಿಗೆ ಹಾಗೂ ತುಳು ಭಾಷಿಗರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಗ್ಗಳಿಕೆಯೊಂದಿಗೆ ವಿಶೇಷ ಗೌರವವಿದೆ ಎಂದು ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ವಾಮನ ಪೈ ಹೇಳಿದರು. ತುಳುಕೂಟೊ ಪುತ್ತೂರು ತಾಲೂಕು ಸಮಿತಿ ಆಶ್ರಯದಲ್ಲಿ ಮಂಜಲ್ಪಡ್ಪು ಸುದಾನ ವಸತಿಯುತ ಶಾಲೆಯ ಆವರಣದಲ್ಲಿ ಆಯೋಜಿಸಲಾಗಿರುವ ಎರಡು

ಖೇಲೋ ಇಂಡಿಯಾ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದ ಉಡುಪಿಯ ಅಭಿನ್ ಬಿ. ದೇವಾಡಿಗ

ಅಸ್ಸಾಮಿನ ಗುವಾಹಟಿಯಲ್ಲಿ ನಡೆದ ಖೇಲೋ ಇಂಡಿಯಾ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಉಡುಪಿಯ ಅಭಿನ್ ಬಿ. ದೇವಾಡಿಗ ಚಿನ್ನ ಗೆದ್ದಿದ್ದಾರೆ. 200 ಮೀಟರ್ ಓಟದ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ಅಭಿನ್, 21 ಸೆಕೆಂಡ್ ನಲ್ಲಿ ಗುರಿ ಮುಟ್ಟಿದ್ದಾರೆ. ಜೈನ್ ಯುನಿವರ್ಸಿಟಿ ಬೆಂಗಳೂರಿನಲ್ಲಿ ಓದುತ್ತಿರುವ ಅವರು, ಉಡುಪಿ ಅಜ್ಜರಕಾರು ಕ್ರೀಡಾಂಗಣದ ಟ್ರ್ಯಾಕ್ ಆಂಡ್ ಫೀಲ್ಡ್ ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಉಡುಪಿಯ ಜಹೀರ್ ಅಬ್ಬಾಸ್ ಗರಡಿಯಲ್ಲಿ 2017

ಬಂಟ್ವಾಳ: ರಾಜ್ಯ ಸರ್ಕಾದ ವಿರುದ್ಧ ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿಯ ವತಿಯಿಂದ ಪ್ರತಿಭಟನೆ

ಬಂಟ್ವಾಳ: ವಿಧಾನಸೌಧದಲ್ಲಿ ಪಾಕಿಸ್ಥಾನಕ್ಕೆ ಜಿಂದಾಬಾದ್ ಹೇಳಿದ ಭಯೋತ್ಪಾದಕ ಪ್ರೇಮಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿಯ ವತಿಯಿಂದ ಪ್ರತಿಭಟನೆ ಶನಿವಾರ ಬಿ.ಸಿ.ರೋಡಿನಲ್ಲಿ ನಡೆಯಿತು.ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಯಾವುದೇ ಅಭಿವೃದ್ಧಿ ಕೆಲಸಗಳು ನಡೆದಿಲ್ಲ, ಎಂಟು ತಿಂಗಳ ಅವಧಿಯಲ್ಲಿ

ಬಂಟ್ವಾಳ: 13ನೇ ವರ್ಷದ ಮೂಡೂರು ಪಡೂರು ಜೋಡುಕರೆ ಬಯಲು ಕಂಬಳಕ್ಕೆ ಅದ್ಧೂರಿ ಚಾಲನೆ

ಬಂಟ್ವಾಳ: ಮೂಡೂರು ಪಡೂರು ಜೋಡುಕರೆ ಕಂಬಳ ಸಮಿತಿ ಬಂಟ್ವಾಳ ಇದರ ಆಶ್ರಯದಲ್ಲಿ ಬಂಟ್ವಾಳ ಕಂಬಳ ಎಂದೇ ಪಸಿದ್ದಿ ಪಡೆದಿರುವ 13ನೇ ವರ್ಷದ ಹೊನಲು ಬೆಳಕಿನ ಮೂಡೂರು ಪಡೂರು ಜೋಡುಕರೆ ಬಯಲು ಕಂಬಳಕ್ಕೆ ನಾವೂರು ಗ್ರಾಮದ ಕೂಡಿಬೈಲಿನಲ್ಲಿ ಶನಿವಾರ ಬೆಳಿಗ್ಗೆ ಚಾಲನೆ ನೀಡಲಾಯಿತು.ಅಲ್ಲಿಪಾದೆ ಸಂತ ಅಂತೋನಿ ಧರ್ಮಕೇಂದ್ರದ ಧರ್ಮಗರುಗಳಾದ ವಂದನೀಯ ಫೆಡ್ರಿಕ್ ಮೊಂತೆರೋ ಕಂಬಳ ಉದ್ಘಾಟಿಸಿದರು.ಕಂಬಳ ಸಮಿತಿಯ ಗೌರವಾಧ್ಯಕ್ಷ, ಮಾಜಿ ಸಚಿವ ಬಿ. ರಮಾನಾಥ ರೈ ಕರೆ ಉದ್ಘಾಟಿಸಿ

ಮಂಗಳೂರು: ಆಲಿಯಬ್ಬ ಜೋಕಟ್ಟೆ ಅವರ ‘ಬ್ಯಾರಿ: ನಾನು ಕಂಡಂತೆ’ ಕೃತಿ ಬಿಡುಗಡೆ

ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಬ್ಯಾರಿ ಅಧ್ಯಯನ ಪೀಠದ ವತಿಯಿಂದ ಹಿರಿಯ ಸಾಹಿತಿ ಹಾಜಿ ಟಿ.ಎ. ಆಲಿಯಬ್ಬ ಜೋಕಟ್ಟೆ ಬರೆದ ‘ಬ್ಯಾರಿ:ನಾನು ಕಂಡಂತೆ’ ಕೃತಿ ಬಿಡುಗಡೆಕಾರ್ಯಕ್ರಮ ನಗರದ ಮಂಗಳೂರು ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಿತು. ಮಂಗಳೂರು ಬ್ಯಾರಿ ಅಧ್ಯಯನ ಪೀಠದ ಸಂಯೋಜಕ ಡಾ. ಅಬೂಬಕ್ಕರ್ ಸಿದ್ದೀಕ್ಹಿರಿಯ ಸಾಹಿತಿ ಹಾಜಿ ಟಿ.ಎ. ಆಲಿಯಬ್ಬ ಜೋಕಟ್ಟೆ ಬರೆದ ‘ಬ್ಯಾರಿ:ನಾನು ಕಂಡಂತೆ’ ಕೃತಿ

ಮಲ್ಪೆಯ ಮೀನು ಬೋಟು ಭಟ್ಕಳ ಕಡಲಲ್ಲಿ ಲೂಟ : ಏಳು ಆರೋಪಿಗಳ ಬಂಧನ

ಮಲ್ಪೆ ಬಂದರಿನಿಂದ ಮೀನು ಹಿಡಿಯಲು ಹೋಗಿದ್ದ ಕೃಷ್ಣನಂದನ ಎಂಬ ಬೋಟಿನಿಂದ ಮೀನು ಮತ್ತು ಡೀಸೆಲ್ ಅಪಹರಿಸಿದ್ದಾರೆ ಎಂಬ ದೂರಿನ ಮೇಲೆ ಮಲ್ಪೆ ಪೋಲೀಸರು ಭಟ್ಕಳದಲ್ಲಿ ಏಳು ಆರೋಪಿಗಳನ್ನು ಬಂಧಿಸಿದ್ದಾರೆ. ಭಟ್ಕಳದ ೩೪ರ ಸುಬ್ರಮಣ್ಯ ಖಾರ್ವಿ, 38ರ ರಾಘವೇಂದ್ರ ಖಾರ್ವಿ, 40ರ ಹರೀಶ್ ನಾರಾಯಣ ಖಾರ್ವಿ, 42ರ ನಾಗೇಶ್ ನಾರಾಯಣ ಖಾರ್ವಿ, 38ರ ಗೋಪಾಲ ಮಾಧವ, 43ರ ಸಂತೋಷ ದೇವಯ್ಯ, 50ರ ಲಕ್ಷ್ಮಣ್ ಬಂಧಿತ ಆರೋಪಿಗಳು. 8 ಲಕ್ಷ ಮೌಲ್ಯದ ಮೀನು ಮತ್ತು ಐದೂವರೆ ಲಕ್ಷ ಮೌಲ್ಯದ

ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ

ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲ ನೂತನ ಪಧಾದಿಕಾರಿಗಳ ಪದಗ್ರಹಣ ಸಮಾರಂಭ ಕಾವೂರಿನಲ್ಲಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಬಿಜೆಪಿ ಜಿಲ್ಲಾಧ್ಯಕ್ಷ್ಷ ಸತೀಶ್ ಕುಂಪಲ ಅವರು, ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ೩ ಲಕ್ಷಕ್ಕೂ ಅಂಕ ಮತಗಳಿಂದ ಜಯ ಗಳಿಸುವುದು ನಿಶ್ಚಿತ. ಇದಕ್ಕೆ ಕಾರ್ಯಕರ್ತರ ಪರಿಶ್ರಮದಿಂದ ಸಾಧ್ಯವಾಗುತ್ತದೆ ಎಂಬ ನಂಬಿಕೆಯಿದೆ ಎಂದರು. ಬಳಿಕ ಮಾತಾಡಿದ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್. ವೈ.

ನೆಯ್ಪಿಲಿಯ ನರಳಾಟ

ಭಾರತದಲ್ಲಿ ಚಿರತೆಗಳ ಸಂಖ್ಯೆ ವಾರ್ಷಿಕ 1.08 ಶೇಕಡಾ ಏರಿಕೆ ಕಾಣುತ್ತಿದೆ. ಸದ್ಯ ಭಾರತದಲ್ಲಿ 13,874 ಚಿರತೆಗಳು ಇರುವುದಾಗಿ ಒಕ್ಕೂಟ ಸರಕಾರದ ಪರಿಸರ ಮಂತ್ರಿ ಭೂಪೇಂದ್ರ ಯಾದವ್ ಬಿಡುಗಡೆ ಮಾಡಿರುವ ಚಿರತೆ ಸ್ಥಿತಿಗತಿ ವರದಿಯಲ್ಲಿ ಇದೆ. ಈ ಚಿರತೆ ಎನ್ನುವುದು ಲೆಪರ್ಡ್. ಇದನ್ನು ತುಳುವಿನಲ್ಲಿ ಚಿಟ್ಟೆ ಪಿಲಿ, ನೆಯ್ಪಿಲಿ ಎಂದೆಲ್ಲ ಕರೆಯುತ್ತಾರೆ. ಇದಕ್ಕೆ ನೆಯ್ಪಿಲಿ ಹೆಸರು ಬಂದುದು ಅದರ ಬೇಟೆಯಿಂದ. ಲೆಪರ್ಡ್ ಚಿರತೆಯು ನಾಯಿ ಹಿಡಿಯುವುದರಲ್ಲಿ ಎಕ್ಸ್‍ಪರ್ಟ್.

ಕಾಪು: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಯೊಳಗೆ ಸಿಲುಕಿ ಸಾವು

ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಗೆ ಸಿಕ್ಕಿಕೊಂಡು ಸಾವನ್ನಪಿದ ಘಟನೆ ಕಾಪುವಿನ ಪೊಲಿಪು ಕಡಲ ಕಿನಾರೆಯಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ. ಕಾಪು ಪೊಲಿಪು‌ ನಿವಾಸಿ ಕಿಶೋರ್ (29) ಮೃತ ದುರ್ದೈವಿ. ಪ್ರತಿದಿನ ಕಯಾಕ್ ಮೂಲಕ ಏಕಾಂಗಿಯಾಗಿ ಮೀನುಗಾರಿಕೆಗೆ ತೆರಳುತ್ತಿದ್ದ ಕಿಶೋರ್ ಶುಕ್ರವಾರ ಮುಂಜಾನೆ ಕೂಡಾ ಏಕಾಂಗಿಯಾಗಿ ಮೀನುಗಾರಿಕೆಗೆ ತೆರಳಿದ್ದು ಮೀನುಗಾರಿಕಾ ಬಲೆಗೆ ಸಿಲುಕಿ ಮೃತಪಟ್ಟಿದ್ದಾರೆ. ಸಮುದ್ರದಲ್ಲಿ ತೇಲುತ್ತಿದ್ದ ಕಯಾಕ್ ಅನ್ನು ಗಮನಿಸಿದ