Home Archive by category ಕರಾವಳಿ (Page 311)

ನಗರದ ಬೊಂದೆಲ್ ನಲ್ಲಿ ಸರ್ವಜ್ಞ ವೃತ್ತ ನಿರ್ಮಾಣ – ಶಾಸಕ ಡಾ. ವೈ ಭರತ್ ಶೆಟ್ಟಿ ಅವರಿಂದ ಉದ್ಘಾಟನೆ

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅನುದಾನದಲ್ಲಿ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರ ಮುತುವರ್ಜಿಯಿಂದ ಬೊಂದೆಲ್ ಬಳಿ ನಿರ್ಮಾಣವಾದ ಸರ್ವಜ್ಞ ವೃತ್ತವನ್ನು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಮುಡಾ ವತಿಯಿಂದ ಮಂಗಳೂರು ಉತ್ತರ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಆಗಿದೆ. ರವಿಶಂಕರ್ ಮಿಜಾರ್ ನೇತೃತ್ವದಲ್ಲಿ ಕೆಲಸ

ಚುನಾವಣೆ ಹಿನ್ನೆಲೆ; ರಾ.ಹೆದ್ದಾರಿಗಳಲ್ಲಿ ಸಾಗುತ್ತಿರುವ ವಾಹನಗಳ ತಪಾಸಣೆ

ವಿಧಾನಸಭೆ ಚುನಾವಣೆ ಪೂರ್ವ ತಯಾರಿಯಾಗಿ ಅಂಗವಾಗಿ ತಪಾಸಣೆ ಹಾಗೂ ಸಾಗರ ಕವಚ ಅಣಕು ಕಾರ್ಯಾಚರಣೆ ಬೈಂದೂರು ತಾಲೂಕಿನ ಅರೆಹೊಳೆ ಬೈಪಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆಯಿತು. ಹೆದ್ದಾರಿಯಲ್ಲಿ ಸಾಗುತ್ತಿದ್ದ ವಾಹನಗಳನ್ನು ಪೊಲೀಸ್ ಅಧಿಕಾರಿಗಳು ತಪಾಸಣೆಯನ್ನು ನಡೆಸಿದರು.ಈ ಸಂದರ್ಭದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಕಾಯ್ಕಿಣಿ ಬೈಂದೂರು ಪಿಎಸ್‍ಐ ನಿರಂಜನ್ ಗೌಡ ಗಂಗೊಳ್ಳಿ ಪಿ ಎಸ ಐ ವಿನಯ್ ,ಕೊಲ್ಲೂರ್ ಪಿಎಸ್‍ಐ ಈರಣ್ಣ ಸಿರಗುಪ್ಪಿ

ರಸ್ತೆ ಸಮತಟ್ಟುಗೊಳಿಸುವ ಯಂತ್ರ ಕೂಲಿ ಕಾರ್ಮಿಕನಿಗೆ ಢಿಕ್ಕಿ, ಸ್ಥಳದಲ್ಲೇ ಮೃತ್ಯು

ಮೂಡುಬಿದಿರೆ ಸಮೀಪದ ಬೆಳುವಾಯಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದ ವೇಳೆ ರಸ್ತೆ ಸಮತಟ್ಟುಗೊಳಿಸುವ ಯಂತ್ರ ಕೂಲಿ ಕಾರ್ಮಿಕರೊಬ್ಬರಿಗೆ ಡಿಕ್ಕಿ ಹೊಡೆದು ಆತ ಸ್ಥಳದಲ್ಲೆ ಮೃತಪಟ್ಟ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಮಧ್ಯಪ್ರದೇಶದ ವಿವೇಕ್(35)ಎಂದು ಗುರುತಿಸಲಾಗಿದೆ. ಮೂಡುಬಿದಿರೆ-ಕಾರ್ಕಳ ಮಧ್ಯೆ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು ಸೋಮವಾರ ರಸ್ತೆ ಸಮತಟ್ಟುಗೊಳಿಸುವ ಯಂತ್ರ ಹಿಮ್ಮುಖವಾಗಿ ಚಲಿಸುವಾಗ

“ಭಾರತದಲ್ಲಿ ಹುಟ್ಟಿರುವ ಎಲ್ಲರೂ ಹಿಂದೂಗಳೇ..!” : ಶಾಸಕ ಡಾ.ಭರತ್ ಶೆಟ್ಟಿ

ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುಂಜತ್ತಬೈಲ್ ವಾರ್ಡ್ ನಂ.15ರ ಸಮಗ್ರ ಅಭಿವೃದ್ಧಿಗಾಗಿ 19.5 ಕೋಟಿ ಅನುದಾನ ಒದಗಿಸಿದ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ ಸೋಮವಾರ ಸಂಜೆ ಕಾವೂರಿನ ಸಹಕಾರಿ ಸೌಧ ಮುಂಭಾಗದಲ್ಲಿ ಜರುಗಿತು. ಪ್ರಾಸ್ತಾವಿಕ ಮಾತನ್ನಾಡಿದ ಸುಮಂಗಲ ರಾವ್ ಅವರು, “ಶಾಸಕ ಭರತ್ ಶೆಟ್ಟಿ ಅವರ ಅವಧಿಯಲ್ಲಿ ಕುಂಜತ್ತಬೈಲ್ ದಕ್ಷಿಣ ವಾರ್ಡ್ ಸಂಪೂರ್ಣ

ರತ್ನಮಾನಸ: ಗುರುವಂದನೆ ಕಾರ್ಯಕ್ರಮ

ಪ್ರೌಢಶಾಲಾ ಅಧ್ಯಯನದೊಟ್ಟಿಗೆ ಹಾಗೂ ಸಂಸ್ಕಾರಯುತ ಶಿಕ್ಷಣಾಧಾರಿತ ಜೀವನ ಶಿಕ್ಷಣಕ್ಕೆ ಪ್ರಸಿದ್ದಿಯಾಗಿರುವ ಉಜಿರೆಯ ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ ಇತ್ತೀಚಿಗೆ ಗುರವಂದನಾ ಮತ್ತು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪರೀಕ‍್ಷೆಗೆ ಶುಭಹಾರೈಸುವ ಕಾರ್ಯಕ್ರಮ ವಿಶಿ‍ಷ್ಟವಾಗಿ ಜರಗಿತು . ಆರಂಭದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಹಾಗೂ ಅವರ ಹೆತ್ತವರ ನಡುವಿನ ಬಾಂಧವ್ಯದ ಪ್ರತಿಕವಾಗಿ ಸಾಮೂಹಿಕ ಗೌರವಸಮರ್ಪಣೆ ಕಾರ್ಯಕ್ರಮ ನಡೆಯಿತು. 

 ಬೀಡಿ ಕಾರ್ಮಿಕರ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನಾ ಪ್ರದರ್ಶನ

ಬೀಡಿ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ದೇಶಾದ್ಯಂತ ಪ್ರತಿಭಟನೆಯ ಭಾಗವಾಗಿ ಇಂದು (27-03-2023) ಬಿಸಿ ರೋಡ್ ನಲ್ಲಿರುವ ಬಂಟ್ವಾಳ ತಾಲೂಕು ಕಚೇರಿಯೆದುರು ಬೀಡಿ ಕಾರ್ಮಿಕರು CITU ನೇತೃತ್ವದಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಿದರು. ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಆಕ್ರೋಶಭರಿತ ಘೋಷಣೆಗಳನ್ನು ಕೂಗಿದರು. ಬಳಿಕ ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿದ ಬೀಡಿ ಕಾರ್ಮಿಕರ ಸಂಘಟನೆಯ ರಾಜ್ಯಾಧ್ಯಕ್ಷರಾದ ಜೆ ಬಾಲಕೃಷ್ಣ

ಅಡ್ಯಾರ್ : ಐಸ್ ಕ್ರೀಮ್ ದಾಸ್ತಾನು ಕೇಂದ್ರದಲ್ಲಿ ಬೆಂಕಿ ಅವಘಡ

ಅಡ್ಯಾರ್ ನಲ್ಲಿರುವ ಐಸ್ ಕ್ರೀಮ್ ದಾಸ್ತಾನು ಕೇಂದ್ರವೊಂದರಲ್ಲಿ ಸೋಮವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಅಪಾರ ನಾಶನಷ್ಟ ಸಂಭವಿಸಿರುವುದಾಗಿ ವರದಿಯಾಗಿದೆ. ಅಡ್ಯಾರ್ ನಲ್ಲಿರುವ ಪೋಲಾರ್ ಐಸ್ ಕ್ರೀಂ ಸ್ವಾಕಿಸ್ಟ್ ಎಂಬ ನಂದಿನಿ ಐಸ್ ಕ್ರೀಂ ದಾಸ್ತಾನು ಕೇಂದ್ರದಲ್ಲಿ ಸೋಮವಾರ ತಡರಾತ್ರಿ 2 ಗಂಟೆ ಸುಮಾರಿಗೆ ಬೆಂಕಿ ಈ ಅವಘಡ ಸಂಭವಿಸಿದೆ. ಈ ವೇಳೆ ದಾಸ್ತಾನು ಕೇಂದ್ರದ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಲಾರಿ ಸಹಿತ ಎರಡು ವಾಹನಗಳು ‌ಬೆಂಕಿಗೆ ಆಹುತಿಯಾಗಿವೆ ಎಂದು

ಬಂಟ್ವಾಳ : ಮಹಿಳೆ ಆತ್ಮಹತ್ಯೆಗೆ ಪ್ರೇರಣೆ ನೀಡಿದ ವ್ಯಕ್ತಿಯ ವಿರುದ್ದ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಪತಿ ಮನವಿ

ಬಂಟ್ವಾಳ: ಸಜೀಪಪಡು ಗ್ರಾಮದ ಸೇನರಬೆಟ್ಟು ನಿವಾಸಿ ವಿವಾಹಿ ಮಹಿಳೆಯೊಬ್ಬರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಳೆದ ಫೆಬ್ರವರಿ 14ರಂದು ನಡೆದಿದ್ದು ಮಹಿಳೆಯ ಸಾವಿನ ಬಗ್ಗೆ ಆಕೆಯ ಪತಿ ಸಂಶಯ ವ್ಯಕ್ತಪಡಿಸಿ, ಆತ್ಮಹತ್ಯೆಗೆ ಪ್ರೇರಣೆ ನೀಡಿದ ವ್ಯಕ್ತಿಯ ವಿರುದ್ದ ನಿಷ್ಪಕ್ಷಪಾತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿಯವರಿಗೆ ಮನವಿಯ ಮೂಲಕ ಆಗ್ರಹಿಸಿದ್ದಾರೆ. ಇಲ್ಲಿನ ನಿವಾಸಿ ಸತೀಶ್ ಪಿ. ಎಂಬವರ ಪತ್ನಿ ಬೀನಾ ಸಿ.

ನನಗೆ ಗೆಲುವಿನೊಂದಿಗೆ ವಿದಾಯ ಹೇಳಿ ಸೋಲಿನೊಂದಿಗೆ ಬೇಡ : ವಿನಯಕುಮಾರ್ ಸೊರಕೆ

ನನ್ನ ಕೊನೆಯ ಚುನಾವಣೆ ಇದಾಗಿದ್ದು, ಕ್ಷೇತ್ರದ ಜನತೆ ನನಗೆ ಗೆಲುವಿನ ವಿದಾಯ ಹೇಳಿ.. ಸೋಲಿನೊಂದಿಗೆ ಬೇಡ ಎಂಬುದಾಗಿ ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಕ್ಷೇತ್ರದ ಜನರಲ್ಲಿ ಮನವಿ ಮಾಡಿದ್ದಾರೆ. ಕಾಪುವಿನಲ್ಲಿ ಅವರು ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಚುನಾವಣೆಯೆ ನಾನು ನನ್ನ ಅಂತಿಮ ಚುನಾವಣೆ ಎಂದಿದ್ದೆ. ಆದರೆ ನಮ್ಮ ಅತೀಯಾದ ಆತ್ಮವಿಶ್ವಾಸ ನಮಗೆ ಮುಳುವಾಗಿ ನಾನು ಸೋಲು ಕಂಡಿದ್ದೆ. ಸೊಲು ಕಂಡರೂ ನಾನು ಎಲ್ಲೊ ದೂರದ

Mangalore : ಮುಷ್ಕರ ಕೈಬಿಟ್ಟು ಕೆಲಸಕ್ಕೆ ಹಾಜರಾದ ಸ್ವಚ್ಛತಾ ಕಾರ್ಮಿಕರು

ಕಳೆದ ಕೆಲವು ದಿನಗಳಿಂದ ಮುಷ್ಕರ ಹೂಡಿದ್ದ ಸ್ವಚ್ಛತಾ ಕಾರ್ಮಿಕರು ಇಂದಿನಿಂದ ಕೆಲಸಕ್ಕೆ ಹಾಜರಾಗಿದ್ದು, ಎಲ್ಲಾ ಸ್ವಚ್ಚತಾ ಕಾರ್ಮಿಕರಿಗೆ ಶಾಸಕ ವೇದವ್ಯಾಸ ಕಾಮತ್ ಅವರು ಧನ್ಯವಾದ ಸಲ್ಲಿಸಿದ್ದಾರೆ. ಸಾರ್ವಜನಿಕರಿಗೆ ಸಹಕಾರವಾಗುವಂತೆ ಶಾಸಕರ ಕಚೇರಿಯಲ್ಲಿ ವಾರ್ ರೂಂ ತೆರೆಯಲಾಗಿದ್ದು ಮುಂದಿನ 2-3 ದಿನಗಳ ಕಾಲ ವಾರ್ ರೂಂ ಕಾರ್ಯಾಚರಿಸಲಿದೆ ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.