Home Archive by category ಕರಾವಳಿ (Page 86)

ಬೆಂಗಳೂರು: ಸ್ಪೀಕರ್ ಯು.ಟಿ ಖಾದರ್ ಫರೀದ್ ಅವರಿಗೆ ತೆಕ್ಕಿಲ್ ಎಕ್ಸಲೆನ್ಸ್ ಅವಾರ್ಡ್ ಪ್ರದಾನ

ತೆಕ್ಕಿಲ್ ಗ್ರಾಮೀಣಭಿವೃದ್ಧಿ ಪ್ರತಿಷ್ಠಾನ(ರಿ) ಅರಂತೋಡು ಸುಳ್ಯ ಸಂಸ್ಥೆಯ ವತಿಯಿಂದ ಬೆಂಗಳೂರಿನಲ್ಲಿ ವಿವಿಧ ಕ್ಷೇತ್ರದಲ್ಲಿ ದುಡಿಯುತ್ತಿರುವರಿಗೆ ಸಮಾಜ ಸುಧಾರಕ ಜಾತ್ಯತೀತ ತತ್ವದ ಪ್ರತಿಪಾದಕ ದಿವಂಗತ ತೆಕ್ಕಿಲ್ ಮೊಹಮದ್ ಹಾಜಿ ಸ್ಮಾರಕವಾಗಿ ನೀಡುವ “ತೆಕ್ಕಿಲ್ ಎಕ್ಸಲೆನ್ಸ್ ಅವಾರ್ಡ್ 2021” ನ್ನು ಕರ್ನಾಟಕ ಸರಕಾರದ ವಿಧಾನಸಭಾ ಅಧ್ಯಕ್ಷರಾದ ಯು ಟಿ

ಕುಂದಾಪುರ: ತಹಶೀಲ್ದಾರ್  ಶೋಭಾ ಲಕ್ಷ್ಮೀ,  ರಾಜ್ಯಸ್ವ ಅಧಿಕಾರಿ ರಾಘವೇಂದ್ರ, ವಿಎ ಚಂದ್ರಶೇಖರ್ ಮೂರ್ತಿ ವಿರುದ್ಧ ಲೋಕಾಯುಕ್ತಕ್ಕೆ ದೂರು

ಕುಂದಾಪುರದ ಸಿದ್ದಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಲಾಬಿ ಶೆಡ್ತಿ ಮತ್ತು ಅವರ ಪತಿ ಶ್ರೀಧರ್ ಶೆಟ್ಟಿ ಮದ್ರೋಳಿ ಮಂಗನಸಾಲು ಎಂಬವರಿಗೆ ಸಿದ್ದಾಪುರ ಗ್ರಾಮದ ಸರ್ಕಾರಿ ಸ್ಥಳದ ಸರ್ವೇ ನಂಬ್ರ 250/1ರಲ್ಲಿ ಅಕ್ರಮ ಕಟ್ಟಡ ಕಟ್ಟುತ್ತಿರುವ ಬಗ್ಗೆ ಈಗಾಗಲೇ ಎರಡು ಬಾರಿ ನೋಟಿಸು ನೀಡಿದ್ದರೂ ತಮಗೆ ಸಂಬAಧವೇ ಇಲ್ಲವೆಂದು ಅಕ್ರಮ ಕಟ್ಟಡವನ್ನು ನಿರ್ಮಿಸುತ್ತಿರುತ್ತಾರೆ. ಮೊದಲೇ ನೋಟಿಸ್ ದಿನಾಂಕ 24.08.2020ರಲ್ಲಿ ಶ್ರೀಧರ್ ಶೆಟ್ಟಿಯವರ ಪತ್ನಿ ಗುಲಾಬಿ ಶೆಡ್ತಿಯವರಿಗೆ

ಪುತ್ತೂರು: ಬಿಜೆಪಿ ವತಿಯಿಂದ ನಿಕಟಪೂರ್ವ ರಾಜ್ಯಾಧ್ಯಕ್ಷರಿಗೆ ಸನ್ಮಾನ ಕಾರ್ಯಕ್ರಮ

ಪುತ್ತೂರು: ರಾಷ್ಟ್ರೀಯ ವಿಚಾರಧಾರೆಯಲ್ಲಿ ಬೆಳೆದ ತಾನು ಕೊಟ್ಟಿರುವ ಜವಾಬ್ದಾರಿಯಲ್ಲಿ ಮಹಾನ್ ಸಾಧನೆ ಮಾಡಿದ್ದೇನೆ ಎಂದು ಹೇಳುವುದಿಲ್ಲ, ಬದಲಾಗಿ ಆದರ್ಶವಾಗಿ, ಯಾವುದೇ ಚ್ಯುತಿ ಬಾರದಂತೆ, ಪ್ರಾಮಾಣಿಕ ರಾಜಕಾರಣ ಮಾಡಿದ್ದೇನೆ ಎಂದು ಬಿಜೆಪಿ ನಿಕಪಟೂರ್ವ ರಾಜ್ಯಾಧ್ಯಕ್ಷ, ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಪುತ್ತೂರಿನ ರೋಟರಿ ಸಭಾಭವನದಲ್ಲಿ ನಡೆದ ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರ ನಗರ ಮತ್ತು ಗ್ರಾಮಾಂತರ ಮಂಡಲ ಕಾರ್ಯನಿರ್ವಹಣಾ ತಂಡದ ಸಭೆಯಲ್ಲಿ

ಪಡುಬಿದ್ರಿ: ಮದ್ಯ ಸೇವಿಸಿ ಪೊಲೀಸರ ಅತಿಥಿಯಾದ ವಾಹನ ಚಾಲಕ

ರಾತ್ರಿ ಹೊತ್ತು ಗ್ಯಾಸ್ ಸಾಗಾಟ ವಾಹನವೊಂದನ್ನು ಅಪಾಯಕಾರಿ ಸ್ಥಿತಿಯಲ್ಲಿ ಹೆದ್ದಾರಿಯಲ್ಲೇ ನಿಲ್ಲಿಸಿ ಮದ್ಯ ಸೇವಿಸಲು ಹೋದ ಚಾಲಕ ಪೊಲೀಸರ ಅತಿಥಿಯಾಗಿದ್ದಾನೆ. ಮೂಡಬಿದರೆಯದ್ದು ಎನ್ನಲಾದ ಎಚ್‌ಪಿ ಅನಿಲ ಸಾಗಾಟ ವಾಹನವನ್ನು ಅದರ ಚಾಲಕ ಕಟಪಾಡಿ ಪೇಟೆಬಳಿ ಹೆದ್ದಾರಿಯಲ್ಲೇ ನಿಲ್ಲಿಸಿ ತೆರಳಿದ್ದು, ಸ್ಥಳಕ್ಕೆ ಬಂದ ಕಟಪಾಡಿಯ ಉಪ ಠಾಣಾ ಪೊಲೀಸ್ ಒರ್ವರು ಸುಮಾರು ಅರ್ಧ ಗಂಟೆ ಕಾದು ಆ ಚಾಲಕನನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾದರು. ಕಂಠಪೂರ್ತಿ ಕುಡಿದು ಬಂದ ಚಾಲಕ ತಾನು

ಮಂಗಳೂರು: ‘ಸುರತ್ಕಲ್ ವೃತ್ತ, ಗಣೇಶಪುರ ರಸ್ತೆಗೆ ಕ್ಯಾ | ಪ್ರಾಂಜಲ್ ನಾಮಕರಣಕ್ಕೆ ಸತ್ಯಜಿತ್ ಸುರತ್ಕಲ್ ಆಗ್ರಹ

ಉಗ್ರರೊಂದಿಗೆ ನಡೆದ ಕಾಳಗದಲ್ಲಿ ಹುತಾತ್ಮರಾದ ಕ್ಯಾ | ಪ್ರಾಂಜಲ್ ಹೆಸರು ಚಿರಸ್ಥಾಯಿಯಾಗಲು ಸುರತ್ಕಲ್ ವೃತ್ತ ಹಾಗೂ ಗಣೇಶಪುರ – ಸುರತ್ಕಲ್ ರಸ್ತೆಗೆ ಅವರ ಹೆಸರಿಡಬೇಕು ಮತ್ತು ಅವರ ಪುತ್ತಳಿ ಸ್ಥಾಪಿಸಬೇಕು ಎಂದು ರಾಷ್ಟ್ರಭಕ್ತ ನಾಗರಿಕ ವೇದಿಕೆಯ ಸತ್ಯಜಿತ್ ಸುರತ್ಕಲ್ ಸರಕಾರವನ್ನು ಆಗ್ರಹಿಸಿದರು. ಕಾಶ್ಮೀರದ ರಜರಿಯಲ್ಲಿ ಸೇನಾಪಡೆಗಳು ಉಗ್ರರ ವಿರುದ್ಧ ಕಾರ್ಯ ಚರಣೆಯಲ್ಲಿ ಹುತಾತ್ಮರಾದ ಐವರು ಯೋಧರಿಗೆ ಸುರತ್ಕಲ್ ಜಂಕ್ಷನ್‍ನಲ್ಲಿ ಆಯೋಜಿಸಲಾದ

ಕಾರ್ಕಳ: ಕೌಡೂರು ವ್ಯಾಪ್ತಿಯಲ್ಲಿ 4 ಜನರ ಮೇಲೆ ಚಿರತೆ ದಾಳಿ

ಹೊಂಚು ಹಾಕಿ ಸಂಚು ಮಾಡಿ ಸಾಕು ಪ್ರಾಣಿಗಳನ್ನ ಬೇಟೆಯಾಡುತ್ತಿದ್ದ ಬೇಟೆಗಾರ ಪ್ರಾಣಿ ಇದು. ಇತ್ತೀಚಿನ ದಿನಗಳಲ್ಲಿ ಬೇಟೆಯ ಬದಲಿಗೆ ಸ್ಥಳೀಯರ ಮೇಲೆ ದಾಳಿ ಮಾಡುವ ಮೂಲಕ ಭಯ ಹುಟ್ಟಿಸಿದೆ. ಎರಡು ಮೂರು ದಿನಗಳ ಅಂತರದಲ್ಲಿ ನಾಲ್ಕು ಜನರಿಗೆ ದಾಳಿ ಮಾಡಿ ಪರಾರಿಯಾಗಿರುವ ಈ ಚಿರತೆ, ಸೆರೆ ಹಿಡಿಯಲು ಅರಣ್ಯ ಇಲಾಖೆ ಕಣ್ಣಿಗೆ ಎಣ್ಣೆ ಬಿಟ್ಟು ಕಾಯುತ್ತಿದೆ… ಹೌದು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಕೌಡೂರು ಗ್ರಾಮ ಪಂಚಾಯಿತಿ ಬಹುತೇಕ ಕಿರು ಅರಣ್ಯ ವೇ ತುಂಬಿರುವ ಪ್ರದೇಶ. ಈ

ಡಿ.17ರಂದು ಬೆಂಗ್ರೆಯಲ್ಲಿ ಬೃಹತ್ ಸ್ವಚ್ಛತಾ ಕಾರ್ಯಕ್ರಮ

ಬೆಂಗ್ರೆ ವಿದ್ಯಾರ್ಥಿ ಸಂಘ ಯುವಕ ಮಂಡಲದ ಅಮೃತ ಮಹೋತ್ಸವದ ಅಂಗವಾಗಿ ಬೆಂಗ್ರೆ ಪರಿಸದಲ್ಲಿ ಬೃಹತ್ ಸ್ವಚ್ಛತಾ ಕಾರ್ಯಕ್ರಮವನ್ನು ಡಿಸೆಂಬರ್ 17ರಂದು ಹಮ್ಮಿಕೊಳ್ಳಲಾಗಿದೆ ಎಂದು ಮಹಾಜನ ಸಂಘ ಬೆಂಗ್ರೆಯ ಅಧ್ಯಕ್ಷರು ಮತ್ತು ಬೆಂಗ್ರೆ ವಿದ್ಯಾರ್ಥಿ ಸಂಘ ಯುವಕ ಮಂಡಲದ ಅಧ್ಯಕ್ಷರಾದ ಚೇತನ್ ಬೆಂಗ್ರೆ ತಿಳಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡ ಬಳಿಕ ವಿ4 ನ್ಯೂಸ್‍ಗೆ ಮಾಹಿತಿ ನೀಡಿದರು. ಇತ್ತೀಚಿನ ದಿನಗಳಲ್ಲಿ ನದಿಗಳಿಗೆ ಕಸ

ಮೂಡುಬಿದಿರೆ: ಆಳ್ವಾಸ್ ಶಾಲೆಯಲ್ಲಿ ಇಂಡಿಯನ್ ಸೈನ್ಸ್ ಸೊಸೈಟಿ ಸ್ಪರ್ಧೆ: 5 ಮಾದರಿಗಳು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ

ಮೂಡುಬಿದಿರೆ:‘ಆವಿಷ್ಕಾರದ ಫಲ ಸಮುದಾಯಕ್ಕೆ ತಲುಪಿದಾಗ ಸಾರ್ಥಕ’ಎಂದು ಅಮೆರಿಕ ಫ್ಲಾರಿಡಾದ ಹೂಡಿಕೆ ಬ್ಯಾಂಕರ್ ಎಮಿಲಿ ಆಳ್ವ ಹೇಳಿದರು. ಭಾರತೀಯ ವಿಜ್ಞಾನ ಸಮಾಜ(ಇಂಡಿಯನ್ ಸೈನ್ಸ್ ಸೊಸೈಟಿ) ಸಹಯೋಗದಲ್ಲಿ ಆಳ್ವಾಸ್ ಕೇಂದ್ರೀಯ ಶಾಲೆ (ಸಿಬಿಎಸ್‌ಸಿ)ಯಲ್ಲಿ ಶನಿವಾರ ನಡೆದ ‘ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿAಗ್ ಮೇಳ (ಇನ್‌ಸೆಫ್)’ದ ಪ್ರಾದೇಶಿಕ ಮೇಳ ಮತ್ತು ವಿಜ್ಞಾನ ವಿಸ್ತರಣಾ ಕಾರ್ಯಕ್ರಮ’ದಲ್ಲಿ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು. ‘ಕುತೂಹಲ ಹಾಗೂ

ಮೂಡುಬಿದಿರೆ: ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಧಾನ್ ಎಂ. ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಮೂಡುಬಿದಿರೆ: ಪದವಿ ಪೂರ್ವ ಶಿಕ್ಷಣ ಇಲಾಖಾ ವತಿಯಿಂದ ಬೀದರ್ ನ ಗುರುನಾನಕ್ ಪದವಿ ಪೂರ್ವ ಕಾಲೇಜ್ ನಲ್ಲಿ ನಡೆದ ರಾಜ್ಯ ಮಟ್ಟದ ಟೆಬಲ್ ಟೆನ್ನಿಸ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು , ಇದರಲ್ಲಿ ಮೂಡುಬಿದಿರೆಯ ಕಲ್ಲಬೆಟ್ಟು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯಾದ ಪ್ರಧಾನ್ ಎಂ. (ಪ್ರಥಮ ಪಿ.ಯು.ಸಿ) ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಯ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ

ಕ್ಯಾಪ್ಟನ್ ಪ್ರಾಂಜಲ್ ಬಲಿದಾನ ವ್ಯರ್ಥ ವಾಗದಿರಲಿ….ಡಾ ಚೂಂತಾರು

ದೇಶದ ರಕ್ಷಣೆಗಾಗಿ ತನ್ನ ಜೀವವನ್ನೇ ಪಣಕ್ಕಿಟ್ಟು ಹೋರಾಡಿ ಹುತಾತ್ಮರಾದ ಶ್ರೀ ಕ್ಯಾಪ್ಟನ್ ಪ್ರಾಂಜಲ್ ಅವರು ನಮ್ಮ ಯುವ ಪೀಳಿಗೆಗೆ ಮಾದರಿ. ಅವರ ತ್ಯಾಗ ಮತ್ತು ಬಲಿದಾನ ವ್ಯರ್ಥ ವಾಗದಿರಲಿ. ಭಯೋತ್ಪಾದನೆ ಮತ್ತು ಹಿಂಸಾಚಾರ ವನ್ನು ಬೇರು ಸಮೇತ ಕಿತ್ತು ಹಾಕಿ ಅಗಲಿದ ಕ್ಯಾಪ್ಟನ್ ಪ್ರಾಂಜಲ್ ಅವರ ಆತ್ಮಕ್ಕೆ ಶಾಂತಿ ಸಿಗುವಂತೆ ಮಾಡುವ ಗುರುತರ ಜವಾಬ್ದಾರಿ ನಮ್ಮ ಮೇಲಿದೆ. ನಾವೆಲ್ಲಾ ನಮ್ಮ ಜಾತಿ ಮತ ಧರ್ಮ ಎಂದು ಕಚ್ಚಾಡದೆ, ದೇಶದ ಆಂತರಿಕ ಭದ್ರತೆ ಮತ್ತು ಶಾಂತಿ ಹಾಗೂ