Home Archive by category ಕ್ರೀಡೆ (Page 2)

ಕಡಬ: ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ: ನಿಶ್ವಿತ್ ಗೆ ಚಿನ್ನ

ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ, ಮಧ್ಯ ಪ್ರದೇಶದ ದೇವಾಸ್ ನಲ್ಲಿ ನಡೆಸಿದ 17ರ ವಯೋಮಿತಿಯ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ದಕ್ಷಿಣ ಮಧ್ಯ ಕ್ಷೇತ್ರವನ್ನು ಪ್ರತಿನಿಧಿಸಿದ ಸರಸ್ವತಿ ವಿದ್ಯಾಲಯ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿ ನಿಶ್ವಿತ್ ಪಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ದೆಹಲಿಯಲ್ಲಿ ನಡೆಯುವ SGFI ಗೆ

ಮೂಡುಬಿದಿರೆ: ದ.ಕ. ಜಿಲ್ಲಾಮಟ್ಟದ ಕ್ರೀಡಾಕೂಟ, ಕಡಬದ ಚರಿಷ್ಮಾ ಕೂಟ ದಾಖಲೆ

ಮೂಡುಬಿದಿರೆಯಲ್ಲಿ ನಡೆಯುತ್ತಿರುವ ದ.ಕ. ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರೌಢಶಾಲಾ ಬಾಲಕಿಯರ ವಿಭಾಗದ 1500 ಮತ್ತು 3000 ಕಿ.ಮೀ ಓಟದಲ್ಲಿ ಪುತ್ತೂರು ತಾಲೂಕಿನ ಕಡಬ ಸ.ಪ.ಪೂ.ಕಾಲೇಜಿನ ಚರಿಷ್ಮಾ ಕೂಟ ದಾಖಲೆಯನ್ನು ನಿರ್ಮಿಸಿದ್ದಾರೆ. ಎಡಪದವು ಪ.ಪೂ.ಕಾಲೇಜಿನ ಸೌಮ್ಯ ಕೆ.ಪಿ ಅವರು 2004ರಲ್ಲಿ 5:01.70 ಸೆಕುಂಡು ನಲ್ಲಿ ಕ್ರಮಿಸಿ ಮಾಡಿರುವ ದಾಖಲೆಯನ್ನು ಚರಿಷ್ಮಾ ಅವರು 4:53.9 ಸೆಕುಂಡಿನಲ್ಲಿ ಕ್ರಮಿಸುವ ಮೂಲಕ ಹಾಗೂ 3000 ಓಟದಲ್ಲಿ 10:44.7 ಸೆಕುಂಡಿನಲ್ಲಿ

ಮಂಗಳೂರು: ಸಿಬಿಎಸ್ ಸಿ ದಕ್ಷಿಣ ವಲಯ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ ಕ್ರೀಡಾಕೂಟ : ಗೊನ್ಝಾಗ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ವಿದ್ಯಾರ್ಥಿಗಳು 2023 ರ ಅಕ್ಟೋಬರ್ 19 ರಿಂದ 22 ರವರೆಗೆ ಕರ್ನಾಟಕದ ಕಲಬುರಗಿಯಲ್ನಡೆದ ಸಿಬಿಎಸ್ ಸಿ ದಕ್ಷಿಣ ವಲಯ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿಸಿದರು. 6 ನೇ ತರಗತಿ ವಿದ್ಯಾರ್ಥಿನಿ ತಸ್ಮಯಿ ಶೆಟ್ಟಿ 1000 ಮೀ ಮತ್ತು 500 ಮೀಟರ್‌ಗಳಲ್ಲಿ 2 ಚಿನ್ನದ ಪದಕಗಳನ್ನೂ, 6ನೇ ತರಗತಿ ವಿದ್ಯಾರ್ಥಿಯುವರಾಜ್ ಡಿ ಕುಂಡರ್ 300 ಮೀ ಮತ್ತು 500 ಮೀಟರ್‌ಗಳಲ್ಲಿ 2 ಚಿನ್ನದ ಪದಕಗಳನ್ನು ಪಡೆದಿರುತ್ತಾರೆ.

ಜಿಲ್ಲಾ ಮಟ್ಟದ ಕರಾಟೆ ಕ್ರೀಡಾಕೂಟ : ರಾಜ್ಯಮಟ್ಟಕ್ಕೆ ಆಯ್ಕೆ ಆದ ನೋಬಲ್ ಆಂಗ್ಲ ಮಾಧ್ಯಮ ಫ್ರೌಢಶಾಲೆಯ ವಿದ್ಯಾರ್ಥಿಗಳು

ದೇರಳಕಟ್ಟೆಯ ವಿದ್ಯಾರತ್ನ ವಿದ್ಯಾಸಂಸ್ಥೆಯಲ್ಲಿ ನಡೆದ ದಕ್ಷಿಣ ಕನ್ನಡ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಕರಾಟೆ ಕ್ರೀಡಾಕೂಟದಲ್ಲಿ ಕುಂಜತ್ತಬೈಲಿನ ನೋಬಲ್ ಆಂಗ್ಲ ಮಾಧ್ಯಮ ಫ್ರೌಢಶಾಲೆಯ ವಿದ್ಯಾರ್ಥಿಗಳಾದ ಹರ್ಷಿಕ, ವರ್ಷಿತ ಇವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಧನ್ವಿತ್ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಇವರು ನಿತೀನ್ .ಎನ್ .ಸುವರ್ಣ, ಸಂಪತ್ ಹಾಗು ಸುಶಾಂತ್ ರವರಿಂದ ಕರಾಟೆ ತರಬೇತಿಯನ್ನು ಪಡೆಯುತ್ತಿದ್ದಾರೆ.

ಇಂಡಿಪೆಂಡೆನ್ಸ್ ಕಪ್ ಫುಟ್ಬಾಲ್ ಟೂರ್ನಮೆಂಟ್ ಸಮಾರೋಪ

ದ.ಕ. ಜಿಲ್ಲಾ ಫುಟ್ಬಾಲ್ ಅಸೋಸಿಯೇಶನ್‌ನ ಆಶ್ರಯದಲ್ಲಿ ನಡೆದ ಇಂಡಿಪೆಂಡೆನ್ಸ್ ಕಪ್ ಫುಟ್ಬಾಲ್ ಟೂರ್ನಮೆಂಟ್‌ನ ಪದವಿ ವಿಭಾಗದಲ್ಲಿ ಯೆನೆಪೋಯ ಕಾಲೇಜು ವಿದ್ಯಾರ್ಥಿಗಳ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ನೆಹರೂ ಮೈದಾನದ ಪಕ್ಕದ ಫುಟ್ಬಾಲ್ ಗ್ರೌಂಡ್‌ನಲ್ಲಿ ನಡೆದ ಫೈನಲ್‌ನಲ್ಲಿ ಯೆನಪೋಯ ಕಾಲೇಜು ತಂಡ 1-0 ಅಂತರದಲ್ಲಿ ಮಡಂತ್ಯಾರ್ ಸೇಕ್ರೆಡ್ ಹಾರ್ಟ್ ಕಾಲೇಜು ತಂಡವನ್ನು ಮಣಿಸಿ ಪ್ರಶಸ್ತಿ ಬಾಚಿಕೊಂಡಿತು. ಪಿ.ಯು.ಕಾಲೇಜು ವಿದ್ಯಾರ್ಥಿಗಳ ವಿಭಾಗದ ಫೈನಲ್‌ನಲ್ಲಿ ಸೈಂಟ್

ಬಿಡಬ್ಲ್ಯುಎಫ್ ಜೂನಿಯರ್ ವಿಶ್ವ ಚಾಂಪಿಯನ್ ಶಿಪ್‍ಗೆ ರಾಜ್ಯದ ಆಯುಷ್ ಶೆಟ್ಟಿ ಸಾರಥ್ಯ

ಅಮೆರಿಕದಲ್ಲಿ ಸೆಪ್ಟಂಬರ್ 25ರಿಂದ ಆರಂಭವಾಗಲಿರುವ ಬಿಡಬ್ಲ್ಯುಎಫ್ ಜೂನಿಯರ್ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್ 16 ಆಟಗಾರರ ಭಾರತ ತಂಡವನ್ನು ಆಯ್ಕೆ ಮಾಡಲಾಗಿದ್ದು, ಕರ್ನಾಟಕದ ಆಯುಷ್ ಶೆಟ್ಟಿ ಹಾಗೂ ಉನ್ನತಿ ಹೂಡಾ ಕ್ರಮವಾಗಿ ಬಾಲಕ ಮತ್ತು ಬಾಲಕಿಯರ ತಂಡವನ್ನು ಮುನ್ನಡೆಸಲಿದ್ದಾರೆ. ಆಟಗಾರರ ಆಯ್ಕೆಗೆ ಜುಲೈ 26ರಿಂದ 29ರ ವರೆಗೆ ಆಯ್ಕೆ ಟ್ರಯಲ್ಸ್ ನಡೆಸಲಾಗಿತ್ತು. ಎರಡು ಬಾರಿ 19 ವಯೋಮಿತಿ ಅಖಿಲ ಭಾರತ ಜ್ಯೂನಿಯರ್ ರ್ಯಾಂಕಿಂಗ್ ಚಾಂಪಿಯನ್ ಆಗಿರುವ

ಶಿಕ್ಷಣ ಇಲಾಖಾ ಕರಾಟೆ ಕ್ರೀಡಾ ಕೂಟದಲ್ಲಿ ಬಂಗಾರದ ಪದಕ ಗಳಿಸಿದ ಆದಿತ್ಯ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ , ಮಂಗಳೂರು ಉತ್ತರ ವಲಯ ದ ವತಿಯಿಂದ ತಾಲೂಕು ಮಟ್ಟದ ಪ್ರಾಥಮಿಕ / ಪ್ರೌಢ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ 2023 -2024 ಮುಲ್ಕಿಯ ಸಿ . ಯಸ್ . ಐ . ಇ ಶಾಲೆ ಕಾರ್ನಾಡು ಇಲ್ಲಿ ಆಯೋಜಿಸಲಾಗಿದ್ದು . ಇಲಾಖೆಯ ಕರಾಟೆ ಕ್ರೀಡೆಯಲ್ಲಿ ( 62-65 ) ವಿಭಾಗದಲ್ಲಿ ನಗರ ಕೆನರಾ ಉರ್ವಾ ಶಾಲೆಯ 10 ನೇ […]

3ನೇ ಬಾರಿಗೆ ತನ್ನ ದಾಖಲೆಯನ್ನು ತಾನೇ ಮುರಿದ ಸತೀಶ್ ಖಾರ್ವಿ

ಪವರ್ ಲಿಫ್ಟಿಂಗ್‍ನಲ್ಲಿ 3ನೇ ಬಾರಿಗೆ ತನ್ನ ದಾಖಲೆಯನ್ನು ತಾನೇ ಮುರಿದ ಹೆಗ್ಗಳಿಕೆ ಪಾತ್ರವಾಗಿರುವ ಅಂತರಾಷ್ಟ್ರೀಯ ಕ್ರೀಡಾಪಟು ಕುಂದಾಪುರ ಸತೀಶ್ ಖಾರ್ವಿ ನೂತನ ದಾಖಲೆ ಮಾಡಿರುವುದನ್ನು ಗುರುತಿಸಿ ಅವರಿಗೆ ಅದ್ದೂರಿ ಸ್ವಾಗತದ ಮೂಲಕ ಬೆಂಗಳೂರಿನಲ್ಲಿ ಕರ್ನಾಟಕ ಗೃಹ ಸಚಿವ ಮಾನ್ಯ ಡಾ.ಜಿ.ಪರಮೇಶ್ವರ್ ಅವರು ಗೌರವದಿಂದ ಅಭಿನಂದಿಸಿದರು. ಸತೀಶ್ ಖಾರ್ವಿ ಅವರು ಮಂಗೋಲಿಯನಲ್ಲಿ ನಡೆಯುವ ಅಂತರಾಷ್ಟ್ರೀಯ ಓಲ್ಡ್ ಪವರ್ ಲಿಫ್ಟಿಂಗ್ ಸ್ಪರ್ಧೆಗೆ ಆಯ್ಕೆಯಾಗಿದ್ದು,

ತಾಂಡವ ಪ್ರೀಮಿಯರ್ ಲೀಗ್ ಜೂನ್ 17 ಮತ್ತು 18ರಂದು ಉರ್ವ ಮೈದಾನದಲ್ಲಿ

ಟೀಮ್ ತಾಂಡವ ಪ್ರಸೆಂಟ್ಸ್ ತಾಂಡವ ಪ್ರೀಮಿಯರ್ ಲೀಗ್ ಉರ್ವ ಮೈದಾನದಲ್ಲಿ ಜೂನ್ 17 ಮತ್ತು 18ರಂದು ನಡೆಯಲಿದೆ.ಟೀಮ್ ತಾಂಡವ ವತಿಯಿಂದ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸುತ್ತಿದ್ದಾರೆ.ಟೀಮ್ ಸ್ಕೈಹಾಕ್ಸ್, ಗರುಡ ಗ್ಯಾಂಗ್, ಮೋನ್ಕ್ ಸ್ಟ್ರೈಕರ್ಸ್, ಕಿಂಗ್ಸ್, ಟೀಮ್ ಗೋಲ್ಡನ್ ಗರುಡಾಸ್, ಟೀಮ್ ಕಾಲಾಕಲ್ಕಿ ಎಂಬ 6 ತಂಡಗಳು ನಡುವೆ ಪಂದ್ಯಾಟ ನಡೆಯಲಿದೆ.ಜೂನ್ 18ರಂದು ನಡೆಯಲಿರುವ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟವು ವಿ4 ನ್ಯೂಸ್‍ನ

ಹಗ್ಗಜಗ್ಗಾಟ: ಆಳ್ವಾಸ್ ಮಹಿಳೆಯರು ಚಾಂಪಿಯನ್, ಪುರುಷರ ತಂಡ ರನ್ನರ್ ಅಪ್

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಹಾಗೂ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ನಡೆದ ಅಂತರ ಕಾಲೇಜು ಹಗ್ಗ ಜಗ್ಗಾಟದ ಮಹಿಳಾ ವಿಭಾಗದಲ್ಲಿ ಆಳ್ವಾಸ್ ಕಾಲೇಜು ಚಾಂಪಿಯನ್ ಹಾಗೂ ಪುರುಷರ ತಂಡವು ರನ್ನರ್ ಅಪ್ ಸ್ಥಾನ ಪಡೆದುಕೊಂಡಿದೆ.ಮಹಿಳೆಯರ ಫೈನಲ್‌ನಲ್ಲಿ ಆಳ್ವಾಸ್ ಕಾಲೇಜು ತಂಡವು ಅಜ್ಜರಕಾಡು ಡಾ.ಜಿ.ಶಂಕರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡವನ್ನು ಸೋಲಿಸಿದ್ದರೆ, ಸೆಮಿಫೈನಲ್‌ನಲ್ಲಿ ಉಜಿರೆ ಎಸ್‌ಡಿಎಂ ಕಾಲೇಜು ವಿರುದ್ಧ ಜಯ