Home Archive by category ಕ್ರೈಮ್ (Page 18)

ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ: ಆರೋಪಿಗಳ ಬಂಧನಕ್ಕೆ ಐದು ವಿಶೇಷ ತಂಡ ರಚನೆ.

ಪುತ್ತೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆಗೆ ಐದು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ದಕ್ಷಿಣಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಬೈಕ್ ನಲ್ಲಿ ಬಂದ ಮೂವರ ತಂಡ ಈ ಕೃತ್ಯ ನಡೆಸಿರುವ ಬಗ್ಗೆ ಮಾಹಿತಿ

ಬಿಜೆಪಿ ಯುವ ನಾಯಕ ಬೆಳ್ಳಾರೆಯ ಪ್ರವೀಣ್ ಮೃತ ದೇಹದ ಮೆರವಣಿಗೆ ಹಿನ್ನಲೆ – ಪುತ್ತೂರಿನಲ್ಲಿ ಬಿಗಿ ಬಂದೋಬಸ್ತ್.

ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಅವರ ಮೃತ ದೇಹದ ಅಂತಿಮ ಯಾತ್ರೆಗೆ ಸಂಬಂಧಿಸಿ ಪುತ್ತೂರಿನಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಒದಗಿಸಿದ್ದಾರೆ. ಪ್ರವೀಣ್ ನೆಟ್ಟಾರು ಅವರ ಮೃತ ದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಗಾರದಿಂದಲೇ ಮೆರವಣಿಗೆ ಮೂಲಕ ದರ್ಬೆ ವೃತ್ತಕ್ಕೆ ಕೊಂಡು ಹೋಗಿ ಅಲ್ಲಿಂದ ಬೆಳ್ಳಾರೆ ಪ್ರವೀಣ್ ಅವರ ಮನೆಗೆ ಕೊಂಡೊಯ್ಯಲಾಗುವುದು. ಮೆರವಣಿಗೆ ಸಂದರ್ಭ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಮುಖಂಡನ ಕಗ್ಗೊಲೆ : ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು..!

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡನ ಕಗ್ಗೊಲೆಯಾಗಿದೆ. ಬೆಳ್ಳಾರೆಯ ನೆಟ್ಟಾರು ನಿವಾಸಿ 32 ವರ್ಷದ ಪ್ರವೀಣ್ ನೆಟ್ಟಾರು ಎಂಬಾತನನ್ನು ದುಷ್ಕರ್ಮಿಗಳು ತಲ್ವಾರ್ ನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ಇಟ್ಟುಕೊಂಡಿದ್ದ ಪ್ರವೀಣ್ ತನ್ನ ಅಂಗಡಿಯನ್ನು ಬಂದ್ ಮಾಡುವ ವೇಳೆಗೆ ಒಂದೇ ಬೈಕ್ ನಲ್ಲಿ ಆಗಮಿಸಿದ ಮೂವರು ತಲ್ವಾರ್ ನಿಂದ ಹಲ್ಲೆ ಮಾಡಿ ಹೋಗಿದ್ದಾರೆ. ತಕ್ಷಣ ಸ್ಥಳೀಯರು ಪ್ರವೀಣ್

ಮಂಗಳೂರಲ್ಲಿ ಪಬ್ ಭಜರಂಗದಳ ದಾಳಿ ವಿಚಾರ ಯಾವುದೇ ದೈಹಿಕ ಹಲ್ಲೆ ನಡೆದಿಲ್ಲ ಪೊಲೀಸ್ ಕಮೀಷನರ್ ಶಶಿಕುಮಾರ್ ಹೇಳಿಕೆ

ಪಬ್ ಮೇಲೆ ಬಜರಂಗದಳ ದಾಳಿ ಘಟನೆ ಸಂಬಂಧಿಸಿ ಹೇಳಿಕೆ ನೀಡಿರುವ ಪೆÇಲೀಸ್ ಕಮಿಷನರ್ ಶಶಿಕುಮಾರ್, ನಗರದಲ್ಲಿ ಯಾವುದೇ ಪಬ್ ಅಟ್ಯಾಕ್ ಆಗಿಲ್ಲ. ಅಪ್ರಾಪ್ತ ಯುವಕ- ಯುವತಿಯರು ಇದ್ದರೆಂದು ಆಕ್ಷೇಪ ಎತ್ತಿದ್ದರು ಅಷ್ಟೇ ಎಂದು ಸಮಜಾಯಿಷಿ ನೀಡಿದ್ದಾರೆ.ಇಂದು ಬೆಳಗ್ಗೆ ಬಲ್ಮಠದ ಪಬ್ ಆವರಣಕ್ಕೆ ಬಂದು ಪರಿಶೀಲನೆ ನಡೆಸಿದ ಕಮಿಷನರ್‍ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ನಿನ್ನೆ ರಾತ್ರಿ ಹತ್ತು- ಹನ್ನೆರೆಡು ಮಂದಿ ಪಬ್ ಮುಂಭಾಗದಲ್ಲಿ ಜಮಾಯಿಸಿದ್ದರು. ಪಬ್

ಒಬ್ಬಂಟಿ ವೃದ್ಧೆಯ ಕೊಲೆ ದರೋಡೆ ಪ್ರಕರಣದ ಆರೋಪಿ ವೃದ್ಧೆಯ ಸಂಬಂಧಿಕ ಅಶೋಕ್ ಬಂಧನ

ಬೆಳ್ತಂಗಡಿ : ಮನೆಯಲ್ಲಿ ಒಬ್ಬಂಟಿಯಾಗಿದ್ದ ಅಜ್ಜಿಯನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಚಿನ್ನಾಭರಣ ಹಾಗೂ ಹಣ ದರೋಡೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆರೆಕೋಡಿ ಮನೆಯಲ್ಲಿ ನಡೆದಿದೆ. ಕಡಿರುದ್ಯಾವರ ಗ್ರಾಮದ ಕಾನರ್ಪ ಕುಮೇರು ನಿವಾಸಿ ಅಶೋಕ್ (28) ವೃದ್ಧೆಯನ್ನು ಕೊಲೆಗೈದ ಆರೋಪಿ. ಅಶೋಕ್ ಕೊಲೆಯಾದ ಅಕ್ಕು ಅವರ ಪುತ್ರ ಡೀಕಯ್ಯ ಅವರ ಪತ್ನಿಯ ಸಹೋದರಿಯ ಪುತ್ರನಾಗಿದ್ದ. ಈತ ಐಸ್ ಕ್ರೀಂ ವಾಹನದಲ್ಲಿ ಕೆಲಸ ಮಾಡುತ್ತಿದ್ದ.

ಬ್ಯಾಂಕಿನಿಂದ 27 ಲಕ್ಷ ರೂ. ಎಗರಿಸಿದ ಆರೋಪಿಗೆ ಜೈಲು ಶಿಕ್ಷೆ

2017ರ ಡಿಸೆಂಬರ್ ತಿಂಗಳ 29ರಂದು ಮಂಗಳೂರಿನ ದೇರಳಕಟ್ಟೆಯಲ್ಲಿ ಇರುವ (ಆಗಿನ) ವಿಜಯ ಬ್ಯಾಂಕ್‍ನಲ್ಲಿ ಕ್ಯಾಶಿಯರ್ ಅಗಿದ್ದ ವಿಕಾಸ್ ಶೆಟ್ಟಿ ರೂ. 27,29,875/- ಎಗರಿಸಿದ್ದರು. ಆ ಶಾಖೆಯ ಮ್ಯಾನೇಜರ್ 2017ರ ಡಿಸೆಂಬರ್ 28ರಿಂದ 30ರ ವರೆಗೆ ರಜೆಯಲ್ಲಿದ್ದರು. ಪ್ರಭಾರ ಮ್ಯಾನೇಜರ್ ಅವರ ಟ್ಯಾಲಿ ಸಾಫ್ಟ್‍ವೇರ್‍ನಲ್ಲಿ ಅಂತಿಮ ನಗದು ಪರೀಕ್ಷಿಸುವಾಗ ಈ ಮೊತ್ತ ಕಡಿಮೆ ಇದ್ದದ್ದು ಗೊತ್ತಾಗಿತ್ತು.ಆರೋಪಿ ವಿಕಾಸ್ ಶೆಟ್ಟಿಯವರನ್ನು ವಿಚಾರಿಸಿದಾಗ

ವಿಟ್ಲಕಾರಿನಲ್ಲಿಅಕ್ರಮ ಗೋ ಸಾಗಾಟ ಪತ್ತೆ

ವಿಟ್ಲ: ಕೇಪು ಕಲ್ಲಂಗಳದಿಂದ ತೋರಣಕಟ್ಟೆ ಸಂಪರ್ಕ ರಸ್ತೆಯ ಒಳ ರಸ್ತೆಯೊಂದರಲ್ಲಿ ಕಾರಿನಲ್ಲಿ ದನ ಸಾಗಾಟ ಮಾಡುತ್ತಿದ್ದು ಪತ್ತೆಯಾಗಿದೆ.ಕಾರಿನ ಹಿಂಭಾಗದಲ್ಲಿ ಎರಡು ಗೋವಿದ್ದು, ಕಾರಿದ ಹಿಂಭಾಗ ಹಾಗೂ ಮುಂಭಾಗದ ಗಾಜು ಒಡೆದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿಟ್ಲ ಪೋಲೀಸರು ತೆರಳಿದ್ದು, ಕಾರಿನಲ್ಲಿದ್ದವರು ಪರಾರಿಯಾಗಿದ್ದಾರೆ. ಈ ರಸ್ತೆ ಸಾರಡ್ಕ ಚೆಕ್ ಪೋಸ್ಟ್ ಸಂಪರ್ಕಹೊಂದಿದ್ದು, ಚೆಕ್ ಪೋಸ್ಟ್ ಮೂಲಕವೇ ಗೋವು ಸಾಗಾಟ ಮಾಡಲಾಗುತ್ತಿತ್ತಾ ಎಂಬ ಅನುಮಾನ ಮೂಡುತ್ತಿದೆ.

ಕಂಕನಾಡಿ ನಗರ ಠಾಣೆ : ಇಬ್ಬರು ರೌಡಿಗಳ ಮೇಲೆ ಗೂಂಡಾ ಕಾಯ್ದೆ

ಕಂಕನಾಡಿ ನಗರ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದು ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಜೈಲಿನಲ್ಲಿರುವ ಇಬ್ಬರು ರೌಡಿಗಳ ಮೇಲೆ ಗೂಂಡಾ ಕಾಯ್ದೆ ಹಾಕಲಾಗಿದೆ.ಪಡೀಲ್ ಜಲ್ಲಿಗುಡ್ಡೆ ನಿವಾಸಿ ಪ್ರೀತಂ ಪೂಜಾರಿ (26) ಮತ್ತು ಪಡೀಲ್ ಅಳಪೆ ನಿವಾಸಿ ಧೀರಜ್ (27) ವಿರುದ್ಧ ಗೂಂಡಾ ಕಾಯ್ದೆ ಹೇರಲಾಗಿದೆ. ಪ್ರೀತಂ ಪೂಜಾರಿ ವಿರುದ್ಧ ಕಂಕನಾಡಿ ನಗರ, ಗ್ರಾಮಾಂತರ, ಕದ್ರಿ, ಬಂದರು ಠಾಣೆಗಳಲ್ಲಿ ಕೊಲೆ ಯತ್ನ, ಕೊಲೆ ಬೆದರಿಕೆ, ಹಲ್ಲೆ, ದರೋಡೆ, ಗಾಂಜಾ ಸೇವನೆ ಸೇರಿ 12

ಕಟಪಾಡಿ ಹೊಳೆಯಲ್ಲಿ ಅಪರಿಚಿತ ಶವ ಪತ್ತೆ

ಕಟಪಾಡಿ ಮಟ್ಟು ಹೊಳೆಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆಯಾಗಿದೆ. ಸುಮಾರು 45ರಿಂದ 50 ವರ್ಷ ವಯಸ್ಸಿನ ಗಂಡಸಿನ ಶವ ಕಟಪಾಡಿ ಮಟ್ಟು ಹೊಳೆಯಲ್ಲಿ ತೇಲಿ ಬರುತ್ತಿದ್ದನ್ನು ಗಮನಿಸಿದ ಸ್ಥಳೀಯರು, ಬಾರೀ ಸೆಳೆತ ಹೊಂದಿದ ನೆರೆಯ ನೀರಿನಲ್ಲಿ ಸಾಹಸಮಯವಾಗಿ ತಡಕ್ಕೆ ಸೇರಿಸಿ ಕಾಪು ಪೊಲೀಸರಿಗೆ ಮಾಹಿತಿ ನೀಡಿದ್ದರು, ಸ್ಥಳಕ್ಕೆ ಬಂದ ಪೊಲೀಸರು ಶವವನ್ನು ಶವಾಗಾರಕ್ಕೆ ಸಾಗಿಸಿದ್ದು, ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಸರಕಾರಿ ಕಚೇರಿಯಲ್ಲಿ ಫೋಟೋ ನಿರ್ಬಂಧ ಆದೇಶ ವಾಪಾಸು

ಸರ್ಕಾರಿ ಕಚೇರಿಗಳಲ್ಲಿ ಫೋಟೊ, ವಿಡಿಯೊ ಮಾಡದಂತೆ ಹೊರಡಿಸಿದ್ದ ಆದೇಶದ ಬಗ್ಗೆ ನನ್ನ ಗಮನಕ್ಕೆ ಬಂದಿರಲಿಲ್ಲ.ಯಾವುದೇ ರೀತಿಯ ನಿಷೇಧ ಆಗಬಾರದು, ಮೊದಲು ಇದ್ದಂತೆ ಇರಲಿ ಎಂಬ ಕಾರಣಕ್ಕೆ ಈ ಆದೇಶವನ್ನು ವಾಪಸು ಪಡೆಯುವ ತಾತ್ವಿಕ ತೀರ್ಮಾನ ತೆಗೆದುಕೊಂಡಿದ್ದೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.