Home Archive by category ಕ್ರೈಮ್ (Page 25)

ಗಂಗೊಳ್ಳಿ : ಅಕ್ರಮ ಗೋಸಾಗಾಟ ಓಮ್ನಿ ಸಹಿತ ನಾಲ್ವರ ಬಂಧನ

ಗಂಗೊಳ್ಳಿ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಗೋಸಾಗಾಟ ನಡೆಯುತ್ತಿದ್ದು, ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಈಸುಬು ಬ್ಯಾರಿ, ಮಹಮ್ಮದ್ ಮಸೂದ್, ಅಬ್ದುಲ್ ಸಮದ್ ಮತ್ತು ಭದ್ರ ಪೂಜಾರಿ ಬಂಧಿತರು. ಮೋವಾಡಿ ಕಡೆಯಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ

ಕುಳಾಯಿ : ಸರ ಕಸಿದು ಕಳ್ಳ ಪರಾರಿ : ಸಿಸಿ ಟಿವಿಯಲ್ಲಿ ಸೆರೆ

ಸುರತ್ಕಲ್‍ನ ಕುಳಾಯಿ ವ್ಯಾಪ್ತಿಯಲ್ಲಿ ಮನೆಗೆ ನುಗ್ಗಿ ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದು ಪರಾರಿಯಾಗಿರುವ ಘಟನೆ ನಡೆದಿದೆ. ಕೃತ್ಯ ಎಸಗಿ ಕಳ್ಳ ಓಡುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಕುಳಾಯಿ ನಿವಾಸಿ ಬಾಲಕೃಷ್ಣ ಪುರೋಹಿತ್ ಅವರ ಮನೆಗೆ ಕಳ್ಳನೋರ್ವ ನುಗ್ಗಿ ಅವರ ಪತ್ನಿ ಸುಮತಿ ಬಾಲಕೃಷ್ಣ ಆಚಾರ್ಯ ಅವರ ಕುತ್ತಿಗೆಯಿಂದ ನಾಲ್ಕು ಪವನ್ ಚಿನ್ನದ ಕರಿಮಣಿಯನ್ನು ಸೆಳೆದು ಪರಾರಿಯಾದ ಘಟನೆ ನಡೆದಿದೆ.ಇಬ್ಬರು ಯುವಕರು ಮಧ್ಯಾಹ್ನ ಮನೆಗೆ ಆಗಮಿಸಿ

ನಾಗಮಂಗಲ : ಟಿಪ್ಪರ್ ಹರಿದು ಓರ್ವ ಸ್ಥಳದಲ್ಲೇ ಸಾವು

ದೇವಲಾಪುರ ಸಮೀಪ ಇರುವ ದೇವರಹಳ್ಳಿ ಗ್ರಾಮದ ರಸ್ತೆ ಕಾಮಗಾರಿ ನಡೆಯುತ್ತಿದ್ದು ಟಿಪ್ಪರ್ ಹರಿದು ಸ್ಥಳದಲ್ಲೇ ಓರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ. ನಾಗಮಂಗಲ ತಾಲ್ಲೂಕಿನ ದೇವಲಾಪುರ ಹೋಬಳಿಯ ದೇವರಹಳ್ಳಿ ಗ್ರಾಮದ ಬಳಿ ಕಲ್ಲು ತುಂಬಿದ ಟಿಪ್ಪರ್ ಹರಿದಿರುವ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.ಸಾವನಪ್ಪಿರುವ ದುರ್ದೈವಿ ಬಳಪದಬಂಡಿಕೊಪ್ಪಲು ಗ್ರಾಮದ ಶಶಾಂಕ್ ಎಂದು ತಿಳಿದುಬಂದಿದೆ ಸ್ಥಳಕ್ಕೆ ಆಗಮಿಸಿದ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆ

ರಾಷ್ಟ್ರಪಕ್ಷಿಗೆ ಸ್ಕೂಟರ್ ಢಿಕ್ಕಿ: ದ್ವಿಚಕ್ರ ಸವಾರ ಮೃತ್ಯು

ತೆಂಕ ಎರ್ಮಾಳು ಗರೋಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನವಿಲೊಂದಕ್ಕೆ ಡಿಕ್ಕಿಯಾಗಿ ನಿಯಂತ್ರಣ ಕಳೆದುಕೊಂಡ ಸ್ಕೂಟರ್ ಸವಾರ ರಸ್ತೆಯಂಚಿನ ಬಾಂಡ್ ಕಲ್ಲೊಂದಕ್ಕೆ ಡಿಕ್ಕಿಯಾಗಿ ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಮೃತ ಯುವಕ ಬೆಳಪು ನಿವಾಸಿ ಪಡುಬಿದ್ರಿ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ. ಅಬ್ದುಲ್ (25) ಎಂದು ಗುರುತಿಸಲಾಗಿದೆ. ಪಡುಬಿದ್ರಿ ಕಡೆಯಿಂದ ತನ್ನ ಸ್ಕೂಟರಲ್ಲಿ ಬರುತ್ತಿದ್ದ ಯುವಕನಿಗೆ ನವಿಲೊಂದು ಹಾರಿಕೊಂಡು ಬಂದು ಡಿಕ್ಕಿಯಾಗಿದೆ.

ಬೆಂಕಿ ಅವಘಡ : ಎಸೆಸೆಲ್ಸಿ ವಿದ್ಯಾರ್ಥಿಗಳು ಸ್ಥಳಾಂತರ

ಎಸೆಸೆಲ್ಸಿ ಪರೀಕ್ಷೆ ನಡೆಯುತ್ತಿದ್ದ ಕೊಠಡಿಯ ಸಮೀಪವೆ ಇದ್ದ ಲ್ಯಾಬ್‍ನಲ್ಲಿ ಬೆಂಕಿ ಅವಘಡ ಸಂಭವಿಸಿ ಇಡೀ ಲ್ಯಾಬ್ ಹೊತ್ತಿ ಉರಿದ ಘಟನೆ ಬಬ್ಬುಕಟ್ಟೆಯ ಖಾಸಗಿ ಮಹಿಳಾ ಕಾಲೇಜಿನಲ್ಲಿ ನಡೆದಿದೆ. ಬೆಂಕಿ ಅವಘಡ ಸಂಭವಿಸಿದ ಲ್ಯಾಬ್ ಇದ್ದ ಕಟ್ಟಡದಲ್ಲಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಸೆಸೆಲ್ಸಿ ಪರೀಕ್ಷೆ ಬರೆಯುತ್ತಿದ್ದು, ಅವರನ್ನೆಲ್ಲಾ ಡ್ಯುಟಿಯಲ್ಲಿದ್ದ ಶಿಕ್ಷಕರು ಮತ್ತು ಸಿಬ್ಬಂದಿಗಳು ಸುರಕ್ಷಿತವಾಗಿ ಮತ್ತೊಂದು ಕಟ್ಟಡಕ್ಕೆ ಸ್ಥಳಾಂತರಿಸಿದ್ದಾರೆ. ಸರ್ವಿಸ್

ಉರ್ವ ಪೊಲೀಸ್ ಠಾಣೆ ಸಿಬ್ಬಂದಿ ಮೇಲೆ ಹಲ್ಲೆ..! : ಪ್ರಕರಣ ದಾಖಲು

ಮಂಗಳೂರು : ಉರ್ವ ಪೊಲೀಸ್ ಠಾಣೆಗೆ ಬಂದ ಮೂವರು ಅಲ್ಲಿನ ಸಿಬ್ಬಂದಿಯ ಜೊತೆಗೆ ಅನುಚಿತವಾಗಿ ವರ್ತಿಸಿದ್ದು, ಹಲ್ಲೆಗೆ ಯತ್ನಿಸಿದ್ದಾರೆ. ಈ ಪ್ರಕರಣದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಮಂಗಳೂರಿನ ಉರ್ವ ಠಾಣೆ ವ್ಯಾಪ್ತಿಯ ಅಪಾರ್ಟ್‍ಮೆಂಟ್‍ನಲ್ಲಿ ನಿರ್ವಹಣೆ ಶುಲ್ಕ ಕೊಡುವುದು ಹಾಗೂ ನೀರಿನ ಸಂಪರ್ಕ ಒದಗಿಸುವ ಕುರಿತು ಗಲಾಟೆ ನಡೆದಿತ್ತು. ಈ ಬಗ್ಗೆ ಮೇ ತಿಂಗಳಲ್ಲಿ ಎರಡು ಪ್ರತ್ಯೇಕ ಪ್ರಕರಣ

ಉಡುಪಿಯಲ್ಲಿ ಮಗು ಅಪಹರಣ ಪ್ರಕರಣ: ಆರೋಪಿಯ ಬಂಧನ

ಉಡುಪಿಯ ಕರಾವಳಿ ಬೈಪಾಸ್ ಬಳಿ ಶಿವರಾಜ್ ಎನ್ನುವ ಎರಡುವರೆ ವರುಷದ ಮಗುವೊಂದನ್ನ ಅಪಹರಣ ಮಾಡಲಾಗಿತ್ತು.ಕಾರವಳಿ ಬೈಪಾಸ್ ಬಳಿಯ ಭಾರತಿ ಮತ್ತು ಅರುಣ್ ಎನ್ನುವವರ ಮಗುವನ್ನು ಪರಿಚಯದ ವ್ಯಕ್ತಿಯೇ ಅಪಹರಿಸಿದ್ದ. ಮಗುವಿಗೆ ಚಾಹಾ ಕುಡಿಸ್ತೇನೆ ಎಂದು ಕರೆದುಕೊಂಡು ಹೋಗಿದ್ದ ಬಾಗಲಕೋಟೆ ಮೂಲದ ಪರುಶರಾಮ ಎನ್ನುವ ವ್ಯಕ್ತಿ ವಾಪಸ್ಸು ಬಾರದೇ ಇದ್ದಾಗ ಗಾಬರಿಗೊಂಡ ಪೋಷಕರು ಉಡುಪಿ ನಗರ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿ ಕೊಂಡ ನಗರ ಠಾಣಾ ಪೊಲೀಸರು ಕಾರ್ಯ

ಅಕ್ರಮ ಗಾಂಜಾ ಸಾಗಾಟ ಪ್ರಕರಣ: ಇಬ್ಬರ ಬಂಧನ

ಮಂಗಳೂರು: ಆಂಧ್ರಪ್ರದೇಶದಿಂದ ಕಾಸರಗೋಡಿಗೆ ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಉರ್ವ ಪೊಲೀಸ್  ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿ ಚೆಕ್ ಪೊಲೀಸ್  ಬಳಿ ಖಚಿತ ಮಾಹಿತಿ ಮೇರೆಗೆ ವಾಹನ ತಪಾಸಣೆ ನಡೆಸಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್  ಡಿಸಿಪಿ ಹರಿರಾಂ ಶಂಕರ್ ಹೇಳಿದರು. ಅವರು ಮಂಗಳೂರಿನ ಕಮಿಷನರ್ ಕಚೇರಿಯಲ್ಲಿ ಮಾಧ್ಯಮಗೊಷ್ಟಿ ನಡೆಸಿ ಮಾತನಾಡಿ, ಉರ್ವ ಪೊಲೀಸ್  ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿ ಚೆಕ್ ಪೊಲೀಸ್  ಬಳಿ ಖಚಿತ ಮಾಹಿತಿ

ಮಂಗಳೂರು : ಗುಂಡು ಹಾರಿಸಿ ನಾಯಿ ಹತ್ಯೆ

ಮಂಗಳೂರು ನಗರದ ಶಿವಭಾಗ್‍ನ ಆಭರಣ ಜ್ಯುವೆಲ್ಲರ್ಸ್ ಮಳಿಗೆಯ ಹಿಂಭಾಗದ ರಸ್ತೆಯಲ್ಲಿ ಗುರುವಾರ ರಾತ್ರಿ ವೇಳೆ ಬೀದಿ ನಾಯಿಯೊಂದನ್ನು ಗುಂಡು ಹೊಡೆದು ಸಾಯಿಸಲಾಗಿದೆ. ಸ್ಥಳೀಯ ವ್ಯಕ್ತಿಯೊಬ್ಬ ಈ ಕೃತ್ಯವೆಸಗಿರುವ ಬಗ್ಗೆ ಶಂಕೆ ಇದ್ದು, ಕದ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ. ಶಿವಭಾಗ್ ರಸ್ತೆಯಲ್ಲಿ ಪ್ರತಿನಿತ್ಯ ಓಡಾಡುತ್ತಿದ್ದ ಬೀದಿ ನಾಯಿಗೆ ವ್ಯಕ್ತಿಯೊಬ್ಬ ಗುಂಡುಹಾರಿಸಿ ಹತ್ಯೆ ಮಾಡಿದ ಈ ಪ್ರಕರಣ ಸ್ಥಳೀಯರಲ್ಲಿ ಆತಂಕವನ್ನು ಉಂಟು ಮಾಡಿದೆ. ಈ ಘಟನೆ ಪ್ರಾಣಿ

ಉಡುಪಿ ಜಿಲ್ಲಾ ಎಸ್ಪಿ ನೇತೃತ್ವದಲ್ಲಿ ಮಾದಕ ವಸ್ತುಗಳ ನಾಶ

ಪಡುಬಿದ್ರಿ: ಅಂತರಾಷ್ಟ್ರೀಯ ಮಾದಕವಸ್ತು ಮತ್ತು ಅಕ್ರಮ ಕಳ್ಳಸಾಗಣೆ ವಿರೋಧಿ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಜಪ್ಪಿ ಮಾಡಿದ ಒಂದು ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತುಗಳನ್ನು ನ್ಯಾಯಾಲಯದ ಅನುಮತಿ ಪಡೆದು ಉಡುಪಿ ಜಿಲ್ಲೆಯ ನಂದಿಕೂರು ಕೈಗಾರಿಕಾ ಪ್ರದೇಶದಲ್ಲಿರುವ ಆಯುಷ್ಯ್ ಎನ್ವಯರ್ ಮೆಂಟ್ ಪ್ರೈವೇಟ್ ಲಿಮಿಟೆಡ್ ಘಟಕದಲ್ಲಿ ನಾಶಪಡಿಸಲಾಯಿತು.  ಈ ಸಂದರ್ಭದಲ್ಲಿ ಎಸ್ಪಿ ವಿಷ್ಣುವರ್ಧನ್, ಎ ಎಸ್ಪಿ ಕುಮಾರ ಚಂದ್ರ, ಡಿವೈಎಸ್ಪಿ ಪ್ರಮೋದ್