ಕುಂದಾಪುರ: ಸೈಕಲ್ ನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ವೇಳೆ ಕಾರೊಂದು ಢಿಕ್ಕಿಯಾದ ಪರಿಣಾಮ ವ್ಯಕ್ತಿಯೋರ್ವ ಗಂಭೀರ ಗಾಯಗೊಂಡು ಸಾವನ್ನಪ್ಪಿದ ದಾರುಣ ಘಟನೆ ಇಲ್ಲಿನ ಹೆಮ್ಮಾಡಿ ಸಮೀಪದ ಜಾಲಾಡಿಯಲ್ಲಿ ನಡೆದಿದೆ. ಹೆಮ್ಮಾಡಿಯ ಸಂತೋಷನಗರ ನಿವಾಸಿ ರಾಮ ಕುಲಾಲ್(60) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ದುರ್ದೈವಿ.ರಾಮ ಕುಲಾಲ್ ಅವರು ಹೆಮ್ಮಾಡಿಯಿಂದ ತಮ್ಮ
ಪೊಲೀಸ್ ತಪಸಾಣೆ ವೇಳೆ ತಪ್ಪಿಸಿಕೊಳ್ಳಲು ಹೋಗಿ ರಿಕ್ಷಾವೊಂದು ಪಲ್ಟಿಯಾಗಿದ್ದು, ವಿಚಾರಣೆ ನಡೆಸಿದಾಗ ರಿಕ್ಷಾದಲ್ಲಿದ್ದ ಗಾಂಜಾ ಜೊತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಸಜಿಪಮೂಡ ಗ್ರಾಮದ ಸುಭಾಶ್ ನಗರ ನಿವಾಸಿ ಅಸೀಫ್ ಯಾನೆ ಅಚಿ (28) ಸವಣೂರು ಗ್ರಾಮದ ಚಾಪಳ್ಳ ನಿವಾಸಿ ಫರಾಝ್ (23) ಎಂದು ಗುರುತಿಸಲಾಗಿದೆ. ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಕಾಶಿಮಠ ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿರುವಾಗ ಉಕ್ಕುಡ ಕಡೆಯಿಂದ ವಿಟ್ಲ
ಮಂಗಳೂರು ನಗರ ಹೊರವಲಯದ ಪಣಂಬೂರು ಕುಳಾಯಿ ಬೀಚ್‍ನಲ್ಲಿ ಯುವಕರು ಗಾಂಜಾ ಸೇವನೆ ಮಾಡುತ್ತಿರುವ ದೃಶ್ಯ ಕ್ಯಾಮರದಲ್ಲಿ ಸೆರೆಯಾಗಿದೆ. ವೀಕೆಂಡ್ ಸಮಯದಲ್ಲಿ ಯುವಕರು ಗಾಂಜಾ ಸೇವನೆ ಮಾಡುತ್ತಾ ಮೋಜು ಮಸ್ತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಇದರಿಂದ ಸಾರ್ವಜನಿಕರು ಭಯಭೀತರಾಗಿದ್ದಾರೆ. ಬೀಚ್‍ನಲ್ಲಿ ಯುವಕರ ಉಪಟಳದಿಂದ ಜನರ ಆತಂಕಕ್ಕೆ ಕಾರಣವಾಗಿದೆ. ಗಾಂಜಾ ಸೇವನೆ ಮಾಡಿದ ಬಳಿಕ ಯುವಕರು ಬೀಚ್‍ನಲ್ಲಿ ಮೋಜು ಮಸ್ತಿಯಲ್ಲಿ ತೊಡಗಿಕೊಂಡಿರುವುದೇ ಕಾರಣ. ಈ ಬಗ್ಗೆ ಪೆÇಲೀಸರು
ಕಾವಲುಗಾರನ ತಲೆಗೆ ಹೊಡೆದು ಗೋಣಿಯೊಯೊಳಗೆ ಕಟ್ಟಿ ಹಾಕಿ ಮಂಜೇಶ್ವರದ ಹೃದಯ ಭಾಗವಾದ ಹೊಸಂಗಡಿಯಲ್ಲಿ ಕಾರ್ಯಾಚರಿಸುತ್ತಿರುವ ರಾಜಧಾನಿ ಜ್ಯುವೆಲ್ಲರಿಯ ಬೀಗವನ್ನು ಮುರಿದು ಒಳನುಗ್ಗಿದ ಕಳ್ಳರು ಭಾರಿ ಮೌಲ್ಯದ ಬೆಳ್ಳಿ ಆಭರಣ ಹಾಗೂ ಲಕ್ಷಾಂತರ ರೂ. ನಗದನ್ನು ಕೊಂಡೊಯ್ದಿದ್ದಾರೆ. ಕಳೆದ ರಾತ್ರಿ ಎರಡು ಗಂಟೆಯ ಸುಮಾರಿಗೆ ಎರಡು ಕಾರಿನಲ್ಲಿ ಆಗಮಿಸಿದ ಎಂಟು ಮಂದಿಯ ತಂಡ ಈ ಕೃತ್ಯ ನಡೆಸಿದೆ. ಕಾವಲುಗಾರ ಕಡಂಬಾರ್ ನಿವಾಸಿ ಅಬ್ದುಲ್ಲ ದರೋಡೆಕೋರರ ಹಲ್ಲೆಯಿಂದ ಗಾಯಗೊಂಡು
ಸುರತ್ಕಲ್ನ ಕುಳಾಯಿ ವ್ಯಾಪ್ತಿಯಲ್ಲಿ ಮನೆಗೆ ನುಗ್ಗಿ ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸುರತ್ಕಲ್ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು, ಮಹಿಳೆಯ ಕರಿಮಣಿ ಸರ ಎಳೆದು ಪರಾರಿಯಾದ ಪ್ರಕರಣ ಬಗ್ಗೆ ಸಿಸಿಟಿ ಪೂಟೇಜ್ ಹಾಗೂ ಬೇರೆ ಆಯಾಮದಲ್ಲಿ ಮಾಹಿತಿ ಕಲೆ ಹಾಕಿದ ಸಂದರ್ಭದಲ್ಲಿ ಒರ್ವ ವ್ಯಕ್ತಿಯ ಸುಳಿವು ಸಿಕ್ಕಿತ್ತು. ಆ
ಹುತಾತ್ಮ ದಿನಾಚರಣೆಯ ಅಂಗವಾಗಿ ಐತಿಹಾಸಿಕ ನರಗುಂದ ಬಂಡಾಯದ ಹೋರಾಟ ಮುಗಿಸಿ ವಾಪಸ್ ಹಾಸನಕ್ಕೆ ತೆರಳುತ್ತಿದ್ದಾಗ ಸಂಭವಿಸಿದ ಕಾರು ಅಪಘಾತದಲ್ಲಿ ಹಿರಿಯ ರೈತ ಮುಖಂಡರಾದ ಜಿ.ಟಿ ರಾಮಸ್ವಾಮಿ ಮತ್ತು ಚನ್ನಪಟ್ಟಣ ರಾಮಣ್ಣನವರು ನಿಧನರಾಗಿದ್ದಾರೆ. ಚಿಕ್ಕಮಗಳೂರು ಬಳಿ ಅಪಘಾತ ಸಂಭವಿಸಿದ್ದು ತಕ್ಷಣವೇ ಅವರನ್ನು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಯಿತಾದರೂ ಅವರು ಬದುಕುಳಿಯಲಿಲ್ಲ.ಅವರೊಡನಿದ್ದ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರಾದ ರವಿಕಿರಣ್ ಪುಣಚರವರಿಗೆ
ಮಂಗಳೂರು: ನಗರದ ನೀರುಮಾರ್ಗದ ಜಂಕ್ಷನ್ ಸಮೀಪದಲ್ಲಿರುವ ಶ್ರೀ ಸುಬ್ರಹ್ಮಣ್ಯ ಭಜನಾ ಮಂದಿರಕ್ಕೆ ನುಗ್ಗಿದ ಇಬ್ಬರು ಕಳ್ಳರು ಕಾಣಿಕೆ ಡಬ್ಬಿ ಕಳವುಗೈದಿರುವ ಘಟನೆ ಬುಧವಾರ ನಸುಕಿನ ವೇಳೆ ನಡೆದಿದೆ. ಇದರ ಸಂಪೂರ್ಣ ದೃಶ್ಯ ಭಜನಾ ಮಂದಿರದ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಭಜನಾ ಮಂದಿರದ ಮುಂಭಾಗಕ್ಕೆ ನಸುಕಿನ ವೇಳೆ 1.45ರ ಸುಮಾರಿಗೆ ಆಗಮಿಸಿರುವ ಕಳ್ಳರು ಮುಂಬಾಗಿಲಿನ ಬೀಗ ಮುರಿದು ಒಳಪ್ರವೇಶಿಸಿದ್ದಾರೆ. ಬಳಿಕ ಉತ್ತರದ ಬಾಗಿಲು ತೆರೆದು ಪ್ರಧಾನ ಗುಡಿಯ
ಗಂಗೊಳ್ಳಿ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಗೋಸಾಗಾಟ ನಡೆಯುತ್ತಿದ್ದು, ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಈಸುಬು ಬ್ಯಾರಿ, ಮಹಮ್ಮದ್ ಮಸೂದ್, ಅಬ್ದುಲ್ ಸಮದ್ ಮತ್ತು ಭದ್ರ ಪೂಜಾರಿ ಬಂಧಿತರು. ಮೋವಾಡಿ ಕಡೆಯಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಾಗುತ್ತಿದ್ದಾಗ ಗಂಗೊಳ್ಳಿ ಠಾಣಾ ಪಿ. ಎಸ್. ಐ ನಂಜಾನಾಯ್ಕ ತಂಡ ಕಾರ್ಯಾಚರಣೆ ನಡೆಸಿ
ಸುರತ್ಕಲ್ನ ಕುಳಾಯಿ ವ್ಯಾಪ್ತಿಯಲ್ಲಿ ಮನೆಗೆ ನುಗ್ಗಿ ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದು ಪರಾರಿಯಾಗಿರುವ ಘಟನೆ ನಡೆದಿದೆ. ಕೃತ್ಯ ಎಸಗಿ ಕಳ್ಳ ಓಡುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಕುಳಾಯಿ ನಿವಾಸಿ ಬಾಲಕೃಷ್ಣ ಪುರೋಹಿತ್ ಅವರ ಮನೆಗೆ ಕಳ್ಳನೋರ್ವ ನುಗ್ಗಿ ಅವರ ಪತ್ನಿ ಸುಮತಿ ಬಾಲಕೃಷ್ಣ ಆಚಾರ್ಯ ಅವರ ಕುತ್ತಿಗೆಯಿಂದ ನಾಲ್ಕು ಪವನ್ ಚಿನ್ನದ ಕರಿಮಣಿಯನ್ನು ಸೆಳೆದು ಪರಾರಿಯಾದ ಘಟನೆ ನಡೆದಿದೆ.ಇಬ್ಬರು ಯುವಕರು ಮಧ್ಯಾಹ್ನ ಮನೆಗೆ ಆಗಮಿಸಿ
ದೇವಲಾಪುರ ಸಮೀಪ ಇರುವ ದೇವರಹಳ್ಳಿ ಗ್ರಾಮದ ರಸ್ತೆ ಕಾಮಗಾರಿ ನಡೆಯುತ್ತಿದ್ದು ಟಿಪ್ಪರ್ ಹರಿದು ಸ್ಥಳದಲ್ಲೇ ಓರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ. ನಾಗಮಂಗಲ ತಾಲ್ಲೂಕಿನ ದೇವಲಾಪುರ ಹೋಬಳಿಯ ದೇವರಹಳ್ಳಿ ಗ್ರಾಮದ ಬಳಿ ಕಲ್ಲು ತುಂಬಿದ ಟಿಪ್ಪರ್ ಹರಿದಿರುವ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.ಸಾವನಪ್ಪಿರುವ ದುರ್ದೈವಿ ಬಳಪದಬಂಡಿಕೊಪ್ಪಲು ಗ್ರಾಮದ ಶಶಾಂಕ್ ಎಂದು ತಿಳಿದುಬಂದಿದೆ ಸ್ಥಳಕ್ಕೆ ಆಗಮಿಸಿದ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆ